Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 2:43 - ಪರಿಶುದ್ದ ಬೈಬಲ್‌

43 ಕಬ್ಬಿಣ ಮತ್ತು ಜೇಡಿಮಣ್ಣು ಬೆರೆಸಿದ್ದನ್ನು ನೀನು ನೋಡಿರುವೆ. ಆದರೆ ಕಬ್ಬಿಣ ಮತ್ತು ಜೇಡಿಮಣ್ಣು ಸಂಪೂರ್ಣವಾಗಿ ಪರಸ್ಪರ ಬೆರೆಯುವದಿಲ್ಲ. ಅದೇ ರೀತಿ ನಾಲ್ಕನೇ ರಾಜ್ಯದ ಜನರು ಪರಸ್ಪರ ಕೂಡಿದ್ದರೂ ಸಹ ಒಂದೇ ಜನರಲ್ಲಿರಬೇಕಾದ ಏಕತೆ ಅವರಲ್ಲಿರುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

43 ಕಬ್ಬಿಣವು ಜೇಡಿಮಣ್ಣಿನೊಂದಿಗೆ ಬೆರೆತಿರುವುದನ್ನು ನೀನು ನೋಡಿದ ಮೇರೆಗೆ, ಆ ರಾಜ್ಯಾಗಳ ಸಂತತಿ ಸಂಬಂಧದಿಂದ ಬೆರೆತುಕೊಳ್ಳುವವು. ಆದರೆ ಕಬ್ಬಿಣವು ಮಣ್ಣಿನೊಂದಿಗೆ ಹೇಗೆ ಕೂಡಿಕೊಳ್ಳುವುದಿಲ್ಲವೋ ಹಾಗೆ ಅವು ಒಂದಕ್ಕೊಂದು ಹೊಂದಿಕೊಳ್ಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

43 ಕಬ್ಬಿಣ ಜೇಡಿಮಣ್ಣಿನೊಂದಿಗೆ ಬೆರೆತಿರುವುದನ್ನು ನೀವು ನೋಡಿದ ಮೇರೆಗೆ ಆ ರಾಜ್ಯಾಂಶಗಳು ಮದುವೆ ಸಂಬಂಧದಿಂದ ಬೆರೆತುಕೊಳ್ಳುವುವು. ಆದರೆ ಕಬ್ಬಿಣ ಮಣ್ಣಿನೊಂದಿಗೆ ಹೇಗೆ ಕಲೆಯುವುದಿಲ್ಲವೋ ಹಾಗೆ ಅವು ಒಂದಕ್ಕೊಂದು ಅಂಟಿಕೊಳ್ಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

43 ಕಬ್ಬಿಣವು ಜೇಡಿಮಣ್ಣಿನೊಂದಿಗೆ ಬೆರೆತಿರುವದನ್ನು ನೀನು ನೋಡಿದ ಮೇರೆಗೆ ಆ ರಾಜ್ಯಾಂಶಗಳು ಸಂತತಿ ಸಂಬಂಧದಿಂದ ಬೆರೆತುಕೊಳ್ಳುವವು; ಆದರೆ ಕಬ್ಬಿಣವು ಮಣ್ಣಿನೊಂದಿಗೆ ಹೇಗೆ ಕಲೆಯುವದಿಲ್ಲವೋ ಹಾಗೆ ಅವು ಒಂದಕ್ಕೊಂದು ಅಂಟಿಕೊಳ್ಳುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

43 ನೀನು ಕಬ್ಬಿಣವು ಜೇಡಿಮಣ್ಣಿನ ಸಂಗಡ ಮಿಶ್ರವಾಗಿರುವುದನ್ನು ನೋಡಿದ ಹಾಗೆ, ಜನರು ಮಿಶ್ರವಾಗಿರುವರು ಮತ್ತು ಕಬ್ಬಿಣವು ಮಣ್ಣಿನ ಸಂಗಡ ಕೂಡಿಕೊಳ್ಳದ ಪ್ರಕಾರ, ಅವರು ಒಬ್ಬರ ಸಂಗಡ ಒಬ್ಬರು ಕೂಡಿಕೊಳ್ಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 2:43
2 ತಿಳಿವುಗಳ ಹೋಲಿಕೆ  

ಆ ಪ್ರತಿಮೆಯ ಕಾಲ್ಬೆರಳುಗಳ ಒಂದಂಶ ಕಬ್ಬಿಣ ಮತ್ತೊಂದು ಅಂಶ ಜೇಡಿಮಣ್ಣಾಗಿದ್ದಂತೆ ಆ ರಾಜ್ಯದ ಒಂದಂಶವು ಕಬ್ಬಿಣದಂತೆ ಗಟ್ಟಿ, ಇನ್ನೊಂದು ಅಂಶವು ಜೇಡಿಮಣ್ಣಿನಂತೆ ದುರ್ಬಲವಾಗಿರುತ್ತದೆ.


“ನಾಲ್ಕನೇ ರಾಜ್ಯದ ಅರಸರ ಕಾಲದಲ್ಲಿ ಪರಲೋಕದ ದೇವರು ಇನ್ನೊಂದು ಹೊಸ ಸಾಮ್ರಾಜ್ಯವನ್ನು ಸ್ಥಾಪಿಸುವನು. ಈ ಸಾಮ್ರಾಜ್ಯವು ಎಂದೆಂದಿಗೂ ಉಳಿಯುವದು. ಎಂದಿಗೂ ಅಳಿಯದು; ಬೇರೊಂದು ಜನರ ಗುಂಪಿಗೆ ಹೋಗದಂಥ ಸಾಮ್ರಾಜ್ಯವಾಗಿರುವುದು. ಈ ಸಾಮ್ರಾಜ್ಯವು ಉಳಿದೆಲ್ಲ ಸಾಮ್ರಾಜ್ಯಗಳನ್ನು ನಾಶಮಾಡಿ ಕೊನೆಗಾಣಿಸುವುದು. ಆದರೆ ಆ ಸಾಮ್ರಾಜ್ಯವು ಮಾತ್ರ ಶಾಶ್ವತವಾಗಿ ನಿಲ್ಲುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು