ದಾನಿಯೇಲ 2:47 - ಪರಿಶುದ್ದ ಬೈಬಲ್47 “ನಿನ್ನ ದೇವರು ಸರ್ವಶ್ರೇಷ್ಠನು ಮತ್ತು ಪ್ರಬಲನು ಎನ್ನುವದು ನನಗೆ ಖಚಿತವಾಯಿತು. ಆತನು ಎಲ್ಲ ಅರಸರ ಒಡೆಯನಾಗಿದ್ದಾನೆ. ಆತನು ಜನರಿಗೆ ನಿಗೂಢವಾಗಿದ್ದ ರಹಸ್ಯವನ್ನು ತಿಳಿಸುತ್ತಾನೆ. ನೀನು ನನಗೆ ಈ ರಹಸ್ಯವನ್ನು ತಿಳಿಸಲು ಸಮರ್ಥನಾದುದರಿಂದ ಇದೆಲ್ಲ ನಿಜವೆಂದು ನಾನು ನಂಬುತ್ತೇನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201947 ಅರಸನು ದಾನಿಯೇಲನಿಗೆ ಪ್ರತ್ಯುತ್ತರವಾಗಿ, “ನೀನು ಈ ರಹಸ್ಯವನ್ನು ಬಯಲಿಗೆ ತರಲು ಸಮರ್ಥನಾದ ಕಾರಣ ನಿಮ್ಮ ದೇವರು ದೇವಾಧಿದೇವನೂ, ರಾಜರ ಒಡೆಯನೂ, ರಹಸ್ಯಗಳನ್ನು ವ್ಯಕ್ತಗೊಳಿಸುವವನೂ ಆಗಿದ್ದಾನೆ ಎಂಬುದು ನಿಶ್ಚಯ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)47 ದಾನಿಯೇಲನ ವಿವರಕ್ಕೆ ಉತ್ತರವಾಗಿ, “ನೀನು ಈ ಗುಟ್ಟನ್ನು ಬಯಲಿಗೆ ತರಲು ಸಮರ್ಥನಾದ ಕಾರಣ ನಿಮ್ಮ ದೇವರು ದೇವಾಧಿದೇವರು, ರಾಜಾಧಿರಾಜರು, ಗುಟ್ಟನ್ನು ಬಟ್ಟಬಯಲಾಗಿಸುವವರು! ಇದು ಸತ್ಯ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)47 ಅವನ ಮಾತಿಗೆ ಪ್ರತ್ಯುತ್ತರವಾಗಿ - ನೀನು ಈ ರಹಸ್ಯವನ್ನು ಬೈಲಿಗೆ ತರಲು ಸಮರ್ಥನಾದ ಕಾರಣ ನಿಮ್ಮ ದೇವರು ದೇವಾಧಿದೇವನೂ ರಾಜರ ಒಡೆಯನೂ ರಹಸ್ಯಗಳನ್ನು ವ್ಯಕ್ತಗೊಳಿಸುವವನೂ ಆಗಿದ್ದಾನೆಂಬುದು ನಿಶ್ಚಯ ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ47 ಅರಸನು ದಾನಿಯೇಲನಿಗೆ ಉತ್ತರವಾಗಿ, “ನೀನು ಈ ರಹಸ್ಯವನ್ನು ಪ್ರಕಟಮಾಡಲು ಸಮರ್ಥನಾದ್ದರಿಂದ ನಿಶ್ಚಯವಾಗಿ ನಿಮ್ಮ ದೇವರು ದೇವರುಗಳಿಗೆ ದೇವರಾಗಿಯೂ, ಅರಸುಗಳ ಒಡೆಯರಾಗಿಯೂ, ರಹಸ್ಯಗಳನ್ನು ಪ್ರಕಟ ಮಾಡುವವರಾಗಿಯೂ ಇದ್ದಾರೆ,” ಎಂದನು. ಅಧ್ಯಾಯವನ್ನು ನೋಡಿ |
“ಉತ್ತರದ ರಾಜನು ತನ್ನ ಮನಸ್ಸಿಗೆ ಬಂದದ್ದನ್ನು ಮಾಡುವನು; ಬಡಾಯಿ ಕೊಚ್ಚಿಕೊಳ್ಳುವನು. ಅವನು ತನ್ನನ್ನು ತಾನು ಹೊಗಳಿಕೊಳ್ಳುವನು ಮತ್ತು ದೇವರಿಗಿಂತ ತಾನು ಹೆಚ್ಚಿನವನೆಂದು ಭಾವಿಸುವನು. ಅವನು ಯಾರೂ ಎಂದೂ ಕೇಳದ ಸಂಗತಿಗಳನ್ನು ಹೇಳುವನು. ಅವನು ಮಹೋನ್ನತನಾದ ದೇವರ ವಿರುದ್ಧವಾಗಿ ಅಂತಹ ಸಂಗತಿಗಳನ್ನು ಹೇಳುವನು. ಎಲ್ಲ ಕೆಟ್ಟ ಸಂಗತಿಗಳು ಜರಗುವವರೆಗೂ ಅವನು ಜಯ ಪಡೆಯುವನು. ಏನು ನಡೆಯಬೇಕೆಂದು ದೇವರು ನಿಶ್ಚಯ ಮಾಡಿರುವನೋ ಅದು ನಡೆಯುವದು.
ಜನರನ್ನು ಬಿಟ್ಟುಹೋಗುವಂತೆ ನಿನ್ನನ್ನು ಒತ್ತಾಯಿಸಲಾಗುವುದು. ನೀನು ಕಾಡುಪ್ರಾಣಿಗಳೊಂದಿಗೆ ವಾಸಿಸುವೆ. ಹಸುಗಳಂತೆ ಹುಲ್ಲು ತಿನ್ನುವೆ; ನೀನು ಪಾಠ ಕಲಿಯುವದಕ್ಕೆ ಏಳು ವರ್ಷ ಬೇಕಾಗುವುದು. ಆಗ ಮಹೋನ್ನತನಾದ ದೇವರು ಮಾನವನ ಸಾಮ್ರಾಜ್ಯಗಳ ಮೇಲೆ ಆಳ್ವಿಕೆ ಮಾಡುತ್ತಾನೆ ಮತ್ತು ತನಗೆ ಬೇಕಾದವರಿಗೆ ಸಾಮ್ರಾಜ್ಯವನ್ನು ಕೊಡುತ್ತಾನೆ ಎಂಬ ಸತ್ಯವನ್ನು ನೀನು ತಿಳಿದುಕೊಳ್ಳುವೆ” ಎಂದು ನುಡಿಯಿತು.
ರಾಜನಾದ ನೆಬೂಕದ್ನೆಚ್ಚರನೇ, ನಿನ್ನನ್ನು ಬಲವಂತದಿಂದ ಜನರಿಂದ ದೂರಮಾಡುವರು. ನೀನು ಕಾಡುಪ್ರಾಣಿಗಳೊಂದಿಗೆ ವಾಸಮಾಡುವೆ; ಹಸುಗಳಂತೆ ಹುಲ್ಲು ತಿನ್ನುವೆ; ಇಬ್ಬನಿಯಿಂದ ತೋಯಿಸಿಕೊಳ್ಳುವೆ. ಏಳು ವರ್ಷಗಳು ಕಳೆಯುವವು. ಆಗ ನೀನು ಮಹೋನ್ನತನಾದ ದೇವರು ಮಾನವರ ಸಾಮ್ರಾಜ್ಯದ ಮೇಲೆ ಆಳ್ವಿಕೆ ಮಾಡುತ್ತಾನೆ ಮತ್ತು ತನಗೆ ಬೇಕಾದವರಿಗೆ ರಾಜ್ಯವನ್ನು ಕೊಡುತ್ತಾನೆ ಎಂಬ ಪಾಠವನ್ನು ಕಲಿಯುವೆ.
ಈಗಲಾದರೋ ತುತ್ತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ, ವಾಲಗ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ನೀವು ಅಡ್ಡಬಿದ್ದು ಚಿನ್ನದ ವಿಗ್ರಹವನ್ನು ಪೂಜಿಸಬೇಕು. ನಾನು ಮಾಡಿಸಿದ ಈ ವಿಗ್ರಹವನ್ನು ಪೂಜಿಸಲು ನೀವು ಸಿದ್ಧರಾಗಿದ್ದರೆ ಸರಿ. ನೀವು ಅದನ್ನು ಪೂಜಿಸದಿದ್ದರೆ ತಕ್ಷಣ ನಿಮ್ಮನ್ನು ಉರಿಯುವ ಕೊಂಡದಲ್ಲಿ ಎಸೆಯಲಾಗುವುದು. ಆಗ ನನ್ನ ಕೈಯಿಂದ ನಿಮ್ಮನ್ನು ಬಿಡಿಸುವುದು ಯಾವ ದೇವರಿಗೂ ಸಾಧ್ಯವಾಗಲಾರದು” ಎಂದು ಹೇಳಿದನು.
ಆಗ ನೆಬೂಕದ್ನೆಚ್ಚರನು, “ಶದ್ರಕ್, ಮೇಶಕ್, ಅಬೇದ್‌ನೆಗೋ ಇವರುಗಳ ದೇವರಿಗೆ ಸ್ತೋತ್ರವಾಗಲಿ. ಅವರ ದೇವರು ತನ್ನ ದೂತನನ್ನು ಕಳುಹಿಸಿ ತನ್ನ ಸೇವಕರನ್ನು ಬೆಂಕಿಯಿಂದ ರಕ್ಷಿಸಿದ್ದಾನೆ. ಈ ಮೂರು ಜನರು ತಮ್ಮ ದೇವರ ಮೇಲೆ ವಿಶ್ವಾಸವಿಟ್ಟರು. ಅವರು ನನ್ನ ಆಜ್ಞೆಯನ್ನು ಪಾಲಿಸಲು ಒಪ್ಪಲಿಲ್ಲ. ಬೇರೆ ಯಾವ ದೇವರನ್ನೂ ಪೂಜಿಸುವುದಕ್ಕೆ ಅಥವಾ ಸೇವಿಸುವುದಕ್ಕೆ ಬದಲಾಗಿ ಸಾಯಲು ಅವರು ಸಿದ್ಧರಾಗಿದ್ದರು.
ಪರಿಶುದ್ಧ ದೇವರುಗಳ ಆತ್ಮವು ನೆಲೆಸಿರುವ ಒಬ್ಬನು ನಿನ್ನ ರಾಜ್ಯದಲ್ಲಿ ಇದ್ದಾನೆ. ದೇವರ ಜ್ಞಾನಕ್ಕೆ ಸಮಾನವಾದ ಜ್ಞಾನವೂ ಬುದ್ಧಿಯೂ ರಹಸ್ಯವನ್ನು ತಿಳಿದುಕೊಳ್ಳುವ ಶಕ್ತಿಯೂ ತನಗಿರುವುದಾಗಿ ಅವನು ನಿನ್ನ ತಂದೆಯ ಕಾಲದಲ್ಲಿಯೇ ತೋರಿಸಿಕೊಟ್ಟಿದ್ದಾನೆ. ನಿನ್ನ ತಂದೆಯಾದ ನೆಬೂಕದ್ನೆಚ್ಚರನು ಈ ಮನುಷ್ಯನನ್ನು ಎಲ್ಲ ವಿದ್ವಾಂಸರ ಅಧ್ಯಕ್ಷನನ್ನಾಗಿ ನೇಮಿಸಿದ್ದನು. ಎಲ್ಲ ಜೋಯಿಸರಿಗೆ, ಮಂತ್ರವಾದಿಗಳಿಗೆ, ಶಾಕುನಿಕರಿಗೆ ಮತ್ತು ಪಂಡಿತರಿಗೆ ಇವನು ಮುಖ್ಯಸ್ಥನಾಗಿದ್ದನು.