Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 2:48 - ಪರಿಶುದ್ದ ಬೈಬಲ್‌

48 ತರುವಾಯ ಅರಸನು ದಾನಿಯೇಲನಿಗೆ ತನ್ನ ರಾಜ್ಯದಲ್ಲಿ ಬಹುಮುಖ್ಯವಾದ ಉದ್ಯೋಗವನ್ನು ಕೊಟ್ಟನು. ಅಮೂಲ್ಯವಾದ ಕಾಣಿಕೆಗಳನ್ನೂ ಕೊಟ್ಟನು. ನೆಬೂಕದ್ನೆಚ್ಚರನು ದಾನಿಯೇಲನನ್ನು ಬಾಬಿಲೋನ್ ಸಂಸ್ಥಾನದ ಅಧಿಪತಿಯನ್ನಾಗಿ ಮಾಡಿದನು. ಬಾಬಿಲೋನಿನ ಎಲ್ಲಾ ವಿದ್ವಾಂಸರ ಮುಖ್ಯಸ್ಥನನ್ನಾಗಿ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

48 ಬಳಿಕ ರಾಜನು ದಾನಿಯೇಲನನ್ನು ಸನ್ಮಾನಿಸಿ, ಅವನಿಗೆ ಅಮೂಲ್ಯವಾದ ಅನೇಕ ಬಹುಮಾನಗಳನ್ನೂ ದಾನಗಳನ್ನು ಕೊಟ್ಟು, ಬಾಬೆಲ್ ಸಂಸ್ಥಾನವನ್ನೆಲ್ಲಾ ಅಧೀನಪಡಿಸಿ, ಬಾಬೆಲಿನ ವಿದ್ವಾಂಸರ ಸಕಲ ಮುಖ್ಯಸ್ಥರಿಗೂ ಅವನನ್ನು ಮುಖ್ಯಸ್ಥನನ್ನಾಗಿ ನೇಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

48 ಬಳಿಕ ರಾಜನು ದಾನಿಯೇಲನನ್ನು ದೊಡ್ಡ ಪದವಿಗೆ ಏರಿಸಿದನು. ಅಮೂಲ್ಯವಾದ ಬಹುಮಾನಗಳನ್ನು ಕೊಟ್ಟನು. ಬಾಬಿಲೋನಿನ ಸಂಸ್ಥಾನವನ್ನೆಲ್ಲ ಅವನಿಗೆ ಅಧೀನಪಡಿಸಿ ಬಾಬಿಲೋನಿನ ಎಲ್ಲಾ ವಿದ್ವಾಂಸರಿಗೂ ಅವನನ್ನು ಅಧ್ಯಕ್ಷನನ್ನಾಗಿ ನೇಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

48 ಬಳಿಕ ರಾಜನು ದಾನಿಯೇಲನನ್ನು ದೊಡ್ಡಸ್ತಿಕೆಗೆ ತಂದು ಅವನಿಗೆ ಅಮೂಲ್ಯವಾದ ಬಹುಮಾನಗಳನ್ನು ಕೊಟ್ಟು ಬಾಬೆಲ್ ಸಂಸ್ಥಾನವನ್ನೆಲ್ಲಾ ಅಧೀನಪಡಿಸಿ ಬಾಬೆಲಿನ ವಿದ್ವಾಂಸರ ಸಕಲ ಮುಖ್ಯಸ್ಥರಿಗೂ ಅವನನ್ನು ಮುಖ್ಯಸ್ಥನನ್ನಾಗಿ ನೇವಿುಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

48 ಆಗ ಅರಸನು ದಾನಿಯೇಲನನ್ನು ಉನ್ನತ ಸ್ಥಾನದಲ್ಲಿರಿಸಿ, ಅವನಿಗೆ ಅನೇಕ ದೊಡ್ಡ ಬಹುಮಾನಗಳನ್ನು ಕೊಟ್ಟನು. ಸಮಸ್ತ ಬಾಬಿಲೋನಿನ ಪ್ರಾಂತಗಳಿಗೆ ಅಧಿಕಾರಿಯನ್ನಾಗಿಯೂ, ಬಾಬಿಲೋನಿನ ಸಮಸ್ತ ಜ್ಞಾನಿಗಳಿಗೆ ಮುಖ್ಯಾಧಿಪತಿಯನ್ನಾಗಿಯೂ ನೇಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 2:48
22 ತಿಳಿವುಗಳ ಹೋಲಿಕೆ  

ಆದರೆ ನೀವು ನನಗೆ ನನ್ನ ಕನಸನ್ನೂ ಅದರ ಅರ್ಥವನ್ನೂ ಹೇಳಿದರೆ ಕಾಣಿಕೆಗಳನ್ನೂ ಬಹುಮಾನಗಳನ್ನೂ ಕೊಡುತ್ತೇನೆ ಮತ್ತು ಮಹಾಸನ್ಮಾನವನ್ನು ಮಾಡುತ್ತೇನೆ. ಆದ್ದರಿಂದ ನೀವು ನನಗೆ ಕನಸನ್ನೂ ಅದರ ಅರ್ಥವನ್ನೂ ಹೇಳಿರಿ” ಎಂದನು.


ಪರಿಶುದ್ಧ ದೇವರುಗಳ ಆತ್ಮವು ನೆಲೆಸಿರುವ ಒಬ್ಬನು ನಿನ್ನ ರಾಜ್ಯದಲ್ಲಿ ಇದ್ದಾನೆ. ದೇವರ ಜ್ಞಾನಕ್ಕೆ ಸಮಾನವಾದ ಜ್ಞಾನವೂ ಬುದ್ಧಿಯೂ ರಹಸ್ಯವನ್ನು ತಿಳಿದುಕೊಳ್ಳುವ ಶಕ್ತಿಯೂ ತನಗಿರುವುದಾಗಿ ಅವನು ನಿನ್ನ ತಂದೆಯ ಕಾಲದಲ್ಲಿಯೇ ತೋರಿಸಿಕೊಟ್ಟಿದ್ದಾನೆ. ನಿನ್ನ ತಂದೆಯಾದ ನೆಬೂಕದ್ನೆಚ್ಚರನು ಈ ಮನುಷ್ಯನನ್ನು ಎಲ್ಲ ವಿದ್ವಾಂಸರ ಅಧ್ಯಕ್ಷನನ್ನಾಗಿ ನೇಮಿಸಿದ್ದನು. ಎಲ್ಲ ಜೋಯಿಸರಿಗೆ, ಮಂತ್ರವಾದಿಗಳಿಗೆ, ಶಾಕುನಿಕರಿಗೆ ಮತ್ತು ಪಂಡಿತರಿಗೆ ಇವನು ಮುಖ್ಯಸ್ಥನಾಗಿದ್ದನು.


ನಾನು, “ಬೇಲ್ತೆಶಚ್ಚರನೇ, ಎಲ್ಲಾ ಮಂತ್ರವಾದಿಗಳಿಗಿಂತಲೂ ನೀನು ಬಹಳ ಶ್ರೇಷ್ಠನು. ಪರಿಶುದ್ಧ ದೇವರುಗಳ ಆತ್ಮವು ನಿನ್ನಲ್ಲಿ ನೆಲೆಸಿದೆ ಎಂದು ನನಗೆ ಗೊತ್ತಿದೆ. ನಿನಗೆ ತಿಳಿದುಕೊಳ್ಳಲು ಕಷ್ಟವಾದ ಯಾವ ರಹಸ್ಯವೂ ಇಲ್ಲವೆಂದು ನಾನು ಬಲ್ಲೆನು. ನಾನು ಕನಸಿನಲ್ಲಿ ಕಂಡದ್ದು ಇಂತಿದೆ. ಅದರ ಅರ್ಥವನ್ನು ನನಗೆ ಹೇಳು.


ದಾನಿಯೇಲನಿಗೆ ಬೇಲ್ಶಚ್ಚರನ ಆಜ್ಞೆಯಂತೆ ಕಂದು ಬಣ್ಣದ ವಸ್ತ್ರಗಳನ್ನು ಕೊಡಲಾಯಿತು. ಚಿನ್ನದ ಸರವನ್ನು ಅವನ ಕೊರಳಿಗೆ ಹಾಕಲಾಯಿತು; ಅವನು ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನಾದನು.


ನಾನು ನಿನ್ನ ಬಗ್ಗೆ ಕೇಳಿದ್ದೇನೆ. ನೀನು ಗೂಢಾರ್ಥವನ್ನು ತಿಳಿದುಕೊಳ್ಳಬಲ್ಲೆ ಮತ್ತು ಕಠಿಣವಾದ ಸಮಸ್ಯೆಗಳಿಗೆ ಪರಿಹಾರ ಹೇಳಬಲ್ಲೆ ಎಂದು ನಾನು ಕೇಳಿದ್ದೇನೆ. ನೀನು ಗೋಡೆಯ ಮೇಲಿನ ಈ ಬರಹವನ್ನು ಓದಿ ಅದರ ಅರ್ಥವನ್ನು ನನಗೆ ವಿವರಿಸಿದರೆ, ನಾನು ನಿನಗೆ ಕಂದುಬಣ್ಣದ ಬಟ್ಟೆಗಳನ್ನು ಕೊಡುತ್ತೇನೆ. ನಿನ್ನ ಕತ್ತಿಗೆ ಚಿನ್ನದ ಹಾರವನ್ನು ಹಾಕುತ್ತೇನೆ; ನಿನ್ನನ್ನು ನನ್ನ ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನನ್ನಾಗಿ ನೇಮಿಸುತ್ತೇನೆ” ಎಂದು ಹೇಳಿದನು.


ಬಳಿಕ ರಾಜನು ಶದ್ರಕ್, ಮೇಶಕ್ ಮತ್ತು ಅಬೇದ್‌ನೆಗೋ ಈ ಮೂವರಿಗೆ ಬಾಬಿಲೋನ್ ಸಂಸ್ಥಾನದಲ್ಲಿ ಹೆಚ್ಚು ಮಹತ್ವದ ಪದವಿಗಳನ್ನು ಕೊಟ್ಟನು.


ಅರಸನೇ, ಕೆಲವು ಜನ ಯೆಹೂದ್ಯರು ತಮ್ಮ ಆಜ್ಞೆಯನ್ನು ಪಾಲಿಸಲಿಲ್ಲ. ಆ ಯೆಹೂದ್ಯರನ್ನು ತಾವು ಬಾಬಿಲೋನ್ ಪ್ರಾಂತ್ಯದಲ್ಲಿ ಪ್ರಮುಖ ಅಧಿಕಾರಿಗಳನ್ನಾಗಿ ನೇಮಿಸಿದ್ದೀರಿ. ಅವರ ಹೆಸರುಗಳು, ಶದ್ರಕ್, ಮೇಶಕ್, ಅಬೇದ್‌ನೆಗೋ ಎಂದು. ಅವರು ನಿಮ್ಮ ದೇವರುಗಳನ್ನು ಪೂಜಿಸುವುದಿಲ್ಲ. ನೀವು ನಿಲ್ಲಿಸಿದ ಬಂಗಾರದ ವಿಗ್ರಹಕ್ಕೆ ಅಡ್ಡಬಿದ್ದು ಪೂಜಿಸುವದಿಲ್ಲ” ಎಂದು ಚಾಡಿ ಹೇಳಿದರು.


ಅರಸನಾದ ನೆಬೂಕದ್ನೆಚ್ಚರನು ಒಂದು ಬಂಗಾರದ ವಿಗ್ರಹವನ್ನು ಮಾಡಿಸಿದ್ದನು. ಆ ವಿಗ್ರಹವು ಅರವತ್ತು ಮೊಳ ಎತ್ತರವಾಗಿತ್ತು. ಆರು ಮೊಳ ಅಗಲವಾಗಿತ್ತು. ಆ ವಿಗ್ರಹವನ್ನು ಬಾಬಿಲೋನ್ ಪ್ರಾಂತ್ಯದ ದೂರಾ ಎಂಬ ಬಯಲಿನಲ್ಲಿ ನಿಲ್ಲಿಸಿದನು.


ನಾನು ಯೆಹೂದದ ಜನನಾಯಕರ ಹತ್ತಿರ ಹೋಗಿ ಅವರೊಂದಿಗೆ ಮಾತನಾಡುವೆನು. ಜನನಾಯಕರು ಯೆಹೋವನ ಮಾರ್ಗಗಳನ್ನು ನಿಶ್ಚಯವಾಗಿ ತಿಳಿದುಕೊಂಡಿರುವರು. ಅವರು ತಮ್ಮ ಯೆಹೋವನ ನ್ಯಾಯವಿಧಿಗಳನ್ನು ಅರಿತುಕೊಂಡಿರುತ್ತಾರೆ” ಅಂದುಕೊಂಡೆನು. ಆದರೆ ಈ ಜನನಾಯಕರುಗಳೆಲ್ಲಾ ದೇವರ ಸೇವೆಯನ್ನು ತೊರೆದುಬಿಟ್ಟಿದ್ದರು. ಅವರು ದೇವರಿಗೆ ವಿರೋಧಿಗಳಾದರು.


ಯೋಬನಿಗೆ ಏಳು ಸಾವಿರ ಕುರಿಗಳೂ ಮೂರು ಸಾವಿರ ಒಂಟೆಗಳೂ ಒಂದು ಸಾವಿರ ಎತ್ತುಗಳೂ ಮತ್ತು ಐನೂರು ಹೆಣ್ಣುಕತ್ತೆಗಳೂ ಇದ್ದವು. ಅವನಿಗೆ ಅನೇಕ ಮಂದಿ ಸೇವಕರಿದ್ದರು. ಪೂರ್ವ ದೇಶದವರಲ್ಲೆಲ್ಲಾ ಯೋಬನು ಮಹಾ ಐಶ್ವರ್ಯವಂತನಾಗಿದ್ದನು.


ಅರಾಮ್ಯರ ರಾಜನ ಸೇನೆಯಲ್ಲಿ ನಾಮಾನನೆಂಬ ಸೇನಾಪತಿಯಿದ್ದನು. ನಾಮಾನನು ಅವನ ರಾಜನಿಗೆ ಬಹಳ ಪ್ರಾಮುಖ್ಯ ವ್ಯಕ್ತಿಯಾಗಿದ್ದನು. ಯೆಹೋವನು ನಾಮಾನನ ಮುಖಾಂತರ ಅರಾಮ್ಯರಿಗೆ ವಿಜಯವನ್ನು ತಂದುಕೊಟ್ಟಿದ್ದರಿಂದ ಅವನು ಪ್ರಮುಖನಾಗಿದ್ದನು. ನಾಮಾನನು ಮಹಾಪುರುಷನೂ ಶಕ್ತಿಶಾಲಿಯೂ ಆದ ಮನುಷ್ಯನಾಗಿದ್ದನು. ಆದರೆ ಅವನು ಕುಷ್ಠರೋಗ ಪೀಡಿತನಾಗಿದ್ದನು.


ಬರ್ಜಿಲ್ಲೈಯನು ಮುದುಕನಾಗಿದ್ದನು. ಅವನಿಗೆ ಎಂಭತ್ತು ವರ್ಷ ವಯಸ್ಸಾಗಿತ್ತು. ದಾವೀದನು ಮಹನಯಿಮಿನಲ್ಲಿ ವಾಸಿಸುತ್ತಿದ್ದಾಗ ಅವನು ದಾವೀದನಿಗೆ ಆಹಾರವನ್ನೂ ಮತ್ತಿತರ ವಸ್ತುಗಳನ್ನೂ ಕೊಟ್ಟಿದ್ದನು; ಯಾಕೆಂದರೆ ಅವನು ಶ್ರೀಮಂತನಾಗಿದ್ದನು.


ಮಾವೋನ್‌ನಲ್ಲಿ ಒಬ್ಬ ಮನುಷ್ಯನು ವಾಸಿಸುತ್ತಿದ್ದನು. ಈ ಮನುಷ್ಯನು ಬಹಳ ಶ್ರೀಮಂತನಾಗಿದ್ದನು. ಅವನು ಮೂರು ಸಾವಿರ ಕುರಿಗಳನ್ನೂ ಒಂದು ಸಾವಿರ ಆಡುಗಳನ್ನೂ ಹೊಂದಿದ್ದನು. ಅವನು ಕರ್ಮೆಲಿನಲ್ಲಿ ವ್ಯಾಪಾರ ಮಾಡುತ್ತಿದ್ದನು. ಒಮ್ಮೆ ಅವನು ಕುರಿಗಳ ತುಪ್ಪಟವನ್ನು ಕತ್ತರಿಸುವುದಕ್ಕಾಗಿ ಕರ್ಮೆಲಿಗೆ ಹೋಗಿದ್ದನು.


ಇಸ್ರೇಲರಲ್ಲಿನ ಒಬ್ಬನು, “ನೀವು ಅವನನ್ನು ನೋಡಿದಿರಾ! ಅವನನ್ನು ನೋಡಿ! ಆ ಗೊಲ್ಯಾತನು ಪ್ರತಿನಿತ್ಯ ಹೊರಗೆ ಬಂದು ಇಸ್ರೇಲರನ್ನು ಮತ್ತೆಮತ್ತೆ ಹಾಸ್ಯಮಾಡುತ್ತಿದ್ದಾನೆ. ಅವನನ್ನು ಕೊಂದವನಿಗೆ ಸೌಲನು ಅಪಾರ ಐಶ್ವರ್ಯವನ್ನು ಕೊಡುವುದಲ್ಲದೆ ತನ್ನ ಮಗಳನ್ನೂ ಅವನಿಗೆ ಕೊಟ್ಟು ಮದುವೆ ಮಾಡುತ್ತಾನೆ; ಅಲ್ಲದೆ ಅವನ ವಂಶವನ್ನು ಇಸ್ರೇಲಿನಲ್ಲಿ ಸ್ವತಂತ್ರಗೊಳಿಸುತ್ತಾನೆ” ಎಂದು ಹೇಳಿದನು.


ಆದ್ದರಿಂದ ನೀನೀಗ ನೇರವಾಗಿ ಮನೆಗೆ ಹೋಗಿಬಿಡು. ನಿನಗೆ ಹೆಚ್ಚು ಹಣ ಕೊಡುವುದಾಗಿ ಆಲೋಚಿಸಿದ್ದೆನು. ಆದರೆ ನೀನು ನಿನ್ನ ಬಹುಮಾನವನ್ನು ಕಳೆದುಕೊಳ್ಳುವಂತೆ ಯೆಹೋವನು ಮಾಡಿದನು” ಎಂದು ಹೇಳಿದನು.


ಯೆಹೋವನು ಬಡವರನ್ನು ಧೂಳಿನಿಂದ ಮೇಲಕ್ಕೆತ್ತುತ್ತಾನೆ. ಯೆಹೋವನು ದೀನರನ್ನು ತಿಪ್ಪೆಯಿಂದ ಮೇಲಕ್ಕೆತ್ತುತ್ತಾನೆ. ಯೆಹೋವನು ಬಡವರನ್ನು ರಾಜಕುಮಾರರೊಂದಿಗೆ ಕುಳ್ಳಿರಿಸುತ್ತಾನೆ. ಆತನು ಬಡವರನ್ನು ಗೌರವಪೀಠದಲ್ಲಿ ಕುಳ್ಳಿರಿಸುತ್ತಾನೆ. ಲೋಕವೂ ಅದರ ಅಡಿಪಾಯಗಳೂ ಯೆಹೋವನವೇ. ಆತನು ಆ ಕಂಬಗಳ ಮೇಲೆ ಲೋಕವನ್ನು ನಿಲ್ಲಿಸಿರುವನು.


ಆಗ ರಾಜನು ಗಟ್ಟಿಯಾಗಿ ಕೂಗಿಕೊಂಡು ಮಂತ್ರವಾದಿ, ಪಂಡಿತ, ಶಾಕುನಿಕರನ್ನು ತನ್ನಲ್ಲಿಗೆ ಕರೆಸಿದನು. ಅವನು ಆ ವಿದ್ವಾಂಸರಿಗೆ, “ಈ ಬರವಣಿಗೆಯನ್ನು ಓದಿ ನನಗೆ ಅದರ ಅರ್ಥವನ್ನು ಹೇಳಬಲ್ಲ ಮನುಷ್ಯನಿಗೆ ನಾನು ಬಹುಮಾನವನ್ನು ಕೊಡುತ್ತೇನೆ. ಆ ಮನುಷ್ಯನಿಗೆ ನಾನು ಕಂದು ಬಣ್ಣದ ವಸ್ತ್ರಗಳನ್ನು ಕೊಡುತ್ತೇನೆ. ಅವನ ಕೊರಳಿಗೆ ಚಿನ್ನದ ಹಾರವನ್ನು ಹಾಕಿಸಿ ಅವನನ್ನು ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನನ್ನಾಗಿ ನೇಮಿಸುವೆನು” ಎಂದು ಹೇಳಿದನು.


ದಾನಿಯೇಲನೆಂಬ ನಾನು ಬಹಳ ಅಶಕ್ತನಾದೆನು. ಆ ದರ್ಶನದ ತರುವಾಯ ಹಲವಾರು ದಿವಸ ನಾನು ಕಾಯಿಲೆ ಬಿದ್ದೆನು. ಆಮೇಲೆ ನಾನು ಗುಣಹೊಂದಿ ರಾಜಕಾರ್ಯವನ್ನು ಪ್ರಾರಂಭಿಸಿದೆನು. ಆದರೆ ಆ ದರ್ಶನದಿಂದ ನನ್ನ ಮನಸ್ಸು ಕಲಕಿತು. ಆ ದರ್ಶನದ ಅರ್ಥವೇನೆಂಬುದು ನನಗೆ ತಿಳಿಯಲಿಲ್ಲ.


ಅದಕ್ಕಾಗಿ ಬಾಬಿಲೋನಿನ ಎಲ್ಲಾ ವಿದ್ವಾಂಸರನ್ನು ಕರೆತರಬೇಕೆಂದು ಆಜ್ಞೆಯನ್ನು ಕೊಟ್ಟೆ. ಅವರು ನನ್ನ ಕನಸಿನ ಅರ್ಥವನ್ನು ತಿಳಿಸಲಿ ಎಂಬುದೇ ನನ್ನ ಉದ್ದೇಶವಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು