ದಾನಿಯೇಲ 2:49 - ಪರಿಶುದ್ದ ಬೈಬಲ್49 ಶದ್ರಕ್, ಮೇಶಕ್, ಅಬೇದ್‌ನೆಗೋ ಇವರುಗಳನ್ನು ಬಾಬಿಲೋನ್ ಸಂಸ್ಥಾನದ ದೊಡ್ಡ ಅಧಿಕಾರಿಗಳನ್ನಾಗಿ ನೇಮಿಸಬೇಕೆಂದು ದಾನಿಯೇಲನು ಅರಸನನ್ನು ಕೇಳಿಕೊಂಡನು. ದಾನಿಯೇಲನು ಹೇಳಿದಂತೆ ಅರಸನು ಮಾಡಿದನು. ದಾನಿಯೇಲನು ಅರಸನ ಸನ್ನಿಧಿಯಲ್ಲಿರುವ ಪ್ರಮುಖರಲ್ಲಿ ಒಬ್ಬನಾದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201949 ದಾನಿಯೇಲನು ಬಿನ್ನಹ ಮಾಡಲು ರಾಜನು ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರಿಗೆ ಬಾಬೆಲ್ ಸಂಸ್ಥಾನದ ಕಾರ್ಯಭಾರವನ್ನು ವಹಿಸಿದನು. ದಾನಿಯೇಲನು ಅರಮನೆಯಲ್ಲಿ ಉಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)49 ದಾನಿಯೇಲನ ಕೋರಿಕೆಯ ಪ್ರಕಾರ ರಾಜನು ಶದ್ರಕ್, ಮೇಶಕ್ ಮತ್ತು ಅಬೇದ್‍ನೆಗೋ ಎಂಬುವರನ್ನು ಬಾಬಿಲೋನಿನ ಪ್ರಾಂತ್ಯಾಧಿಪತಿಗಳನ್ನಾಗಿ ನೇಮಿಸಿದನು. ದಾನಿಯೇಲನು ಮಾತ್ರ ಅರಮನೆಯಲ್ಲೇ ಕಾರ್ಯನಿರತನಾದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)49 ದಾನಿಯೇಲನು ಬಿನ್ನಹ ಮಾಡಲು ರಾಜನು ಶದ್ರಕ್ ಮೇಶಕ್ ಅಬೇದ್‍ನೆಗೋ ಎಂಬವರಿಗೆ ಬಾಬೆಲ್ ಸಂಸ್ಥಾನದ ಕಾರ್ಯಭಾರವನ್ನು ವಹಿಸಿದನು; ದಾನಿಯೇಲನೋ ಅರಮನೆಯಲ್ಲಿ ನಿಂತನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ49 ದಾನಿಯೇಲನು ಅರಸನನ್ನು ಬೇಡಿಕೊಂಡಿದ್ದರಿಂದ, ಅರಸನು ಶದ್ರಕ್, ಮೇಶಕ್, ಅಬೇದ್‌ನೆಗೋ ಎಂಬುವರನ್ನು ಬಾಬಿಲೋನಿನ ಸಂಸ್ಥಾನದ ಕಾರ್ಯಾಧಿಕಾರಿಗಳನ್ನಾಗಿ ನೇಮಿಸಿದನು. ದಾನಿಯೇಲನು ಅರಸನ ಅರಮನೆಯಲ್ಲಿ ಉಳಿದನು. ಅಧ್ಯಾಯವನ್ನು ನೋಡಿ |