ದಾನಿಯೇಲ 2:7 - ಪರಿಶುದ್ದ ಬೈಬಲ್7 ಆ ಪಂಡಿತರು ಅರಸನಿಗೆ, “ದಯವಿಟ್ಟು ತಾವು ಕನಸಿನ ಬಗ್ಗೆ ಹೇಳಿರಿ. ನಾವು ಅದರ ಅಭಿಪ್ರಾಯವನ್ನು ಹೇಳುತ್ತೇವೆ” ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಪಂಡಿತರು ಉತ್ತರವಾಗಿ, “ರಾಜನು ತನ್ನ ದಾಸರಿಗೆ ಕನಸನ್ನು ತಿಳಿಸಲಿ, ನಾವು ಅದರ ತಾತ್ಪರ್ಯವನ್ನು ವಿವರಿಸುವೆವು” ಎಂಬ ಉತ್ತರವನ್ನೇ ಪುನಃ ಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಪಂಡಿತರು, “ರಾಜರು ತಮ್ಮ ದಾಸರಿಗೆ ಕನಸನ್ನು ತಿಳಿಸೋಣವಾಗಲಿ, ನಾವು ಅದರ ತಾತ್ಪರ್ಯವನ್ನು ವಿವರಿಸುವೆವು,” ಎಂದು ಮತ್ತೊಮ್ಮೆ ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ರಾಜನು ತನ್ನ ದಾಸರಿಗೆ ಕನಸನ್ನು ತಿಳಿಸೋಣವಾಗಲಿ, ನಾವು ಅದರ ತಾತ್ಪರ್ಯವನ್ನು ವಿವರಿಸುವೆವು ಎಂಬ ಉತ್ತರವನ್ನೇ ಪುನಃ ಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಅವರು ಮತ್ತೆ ಉತ್ತರವಾಗಿ, “ಅರಸನು ತನ್ನ ಸೇವಕರಿಗೆ ಕನಸನ್ನು ಮೊದಲು ಹೇಳಲಿ. ಆಗ ಅದರ ಅರ್ಥವನ್ನು ನಾವು ತಿಳಿಸುವೆವು,” ಎಂದರು. ಅಧ್ಯಾಯವನ್ನು ನೋಡಿ |
ನೀವು ನನಗೆ ನನ್ನ ಕನಸಿನ ಬಗ್ಗೆ ಹೇಳದಿದ್ದರೆ ನಿಮಗೆ ಶಿಕ್ಷೆಯಾಗುವದೆಂದು ನೀವು ಬಲ್ಲಿರಿ. ನೀವೆಲ್ಲ ನನಗೆ ಸುಳ್ಳು ಹೇಳಬೇಕೆಂದು ನಿರ್ಧರಿಸಿಕೊಂಡಿದ್ದೀರಿ. ನೀವು ಹೆಚ್ಚಿನ ಸಮಯವನ್ನು ಪಡೆಯಲಿಚ್ಛಿಸುತ್ತಿದ್ದೀರಿ. ನಿಮಗೆ ಹೇಳಿದ್ದನ್ನು ನಾನು ಮರೆತುಬಿಡಬಹುದೆಂದು ನೀವು ಭಾವಿಸುತ್ತಿರುವಿರಿ. ಈಗ ನನ್ನ ಕನಸನ್ನು ತಿಳಿಸಿರಿ. ನೀವು ಕನಸನ್ನು ತಿಳಿಸಿದರೆ ಅದರ ನಿಜವಾದ ಅರ್ಥವನ್ನೂ ಹೇಳಬಲ್ಲಿರಿ” ಎಂದು ಅವರಿಗೆ ಉತ್ತರಕೊಟ್ಟನು.