Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 2:9 - ಪರಿಶುದ್ದ ಬೈಬಲ್‌

9 ನೀವು ನನಗೆ ನನ್ನ ಕನಸಿನ ಬಗ್ಗೆ ಹೇಳದಿದ್ದರೆ ನಿಮಗೆ ಶಿಕ್ಷೆಯಾಗುವದೆಂದು ನೀವು ಬಲ್ಲಿರಿ. ನೀವೆಲ್ಲ ನನಗೆ ಸುಳ್ಳು ಹೇಳಬೇಕೆಂದು ನಿರ್ಧರಿಸಿಕೊಂಡಿದ್ದೀರಿ. ನೀವು ಹೆಚ್ಚಿನ ಸಮಯವನ್ನು ಪಡೆಯಲಿಚ್ಛಿಸುತ್ತಿದ್ದೀರಿ. ನಿಮಗೆ ಹೇಳಿದ್ದನ್ನು ನಾನು ಮರೆತುಬಿಡಬಹುದೆಂದು ನೀವು ಭಾವಿಸುತ್ತಿರುವಿರಿ. ಈಗ ನನ್ನ ಕನಸನ್ನು ತಿಳಿಸಿರಿ. ನೀವು ಕನಸನ್ನು ತಿಳಿಸಿದರೆ ಅದರ ನಿಜವಾದ ಅರ್ಥವನ್ನೂ ಹೇಳಬಲ್ಲಿರಿ” ಎಂದು ಅವರಿಗೆ ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಕಾಲಾಂತರವನ್ನು ನಿರೀಕ್ಷಿಸಿಕೊಂಡೇ ನನ್ನ ಮುಂದೆ ಕೆಟ್ಟ ಸುಳ್ಳುಗಳನ್ನು ಆಡುತ್ತಿರಬೇಕೆಂದು ಒಪ್ಪಂದ ಮಾಡಿಕೊಂಡಿದ್ದೀರಿ; ಅಂತು ಆ ಕನಸನ್ನು ತಿಳಿಸಬೇಕು; ಆದುದರಿಂದ ನೀವು ಅದರ ಅರ್ಥವನ್ನೂ ವಿವರಿಸಬಲ್ಲಿರೆಂದು ತಿಳಿದುಕೊಳ್ಳುವೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಕಾಲ ಬದಲಾಗುತ್ತಿರುತ್ತದೆ ಎಂದುಕೊಂಡೇ ನನ್ನ ಮುಂದೆ ಇಲ್ಲಸಲ್ಲದ್ದನ್ನು ಆಡಲು ಒಪ್ಪಂದ ಮಾಡಿಕೊಂಡಿದ್ದೀರಿ. ಅಂತು ಆ ಕನಸನ್ನು ನೀವು ನನಗೆ ತಿಳಿಸಲೇಬೇಕು. ಆಗ ಅದರ ಉದ್ದೇಶವನ್ನು ವಿವರಿಸಬಲ್ಲಿರೆಂದು ನಾನು ತಿಳಿದುಕೊಳ್ಳುವೆನು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಕಾಲಾಂತರವನ್ನು ನಿರೀಕ್ಷಿಸಿಕೊಂಡೇ ನನ್ನ ಮುಂದೆ ಕೆಟ್ಟ ಸುಳ್ಳುಗಳನ್ನು ಆಡುತ್ತಿರಬೇಕೆಂದು ಕಟ್ಟುಮಾಡಿಕೊಂಡಿದ್ದೀರಿ; ಅಂತು ಆ ಕನಸನ್ನು ತಿಳಿಸಬೇಕು; ಅದರಿಂದ ನೀವು ಅದರ ಅಭಿಪ್ರಾಯವನ್ನೂ ವಿವರಿಸಬಲ್ಲಿರೆಂದು ತಿಳಿದುಕೊಳ್ಳುವೆನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ನೀವು ಕನಸನ್ನು ನನಗೆ ಹೇಳದಿದ್ದರೆ, ನಿಮಗೆ ಒಂದೇ ಒಂದು ಶಿಕ್ಷೆಯಿದೆ. ತಪ್ಪು ಮಾರ್ಗಕ್ಕೆ ನಡೆಸುವ ಹಾಗೂ ಕೆಟ್ಟ ಸಂಗತಿಗಳನ್ನು ನನಗೆ ಹೇಳಿ, ಪರಿಸ್ಥಿತಿಯನ್ನು ನೀವು ನನಗೆ ವಿರೋಧವಾಗಿ ಒಪ್ಪಂದ ಮಾಡಿಕೊಂಡಿದ್ದೀರಿ, ಬದಲಾವಣೆಯನ್ನು ನಿರೀಕ್ಷಿಸುವಂತೆ. ಆದ್ದರಿಂದ ಕನಸನ್ನು ನನಗೆ ಹೇಳಲೇಬೇಕು. ಆಗ ಅದನ್ನು ವ್ಯಾಖ್ಯಾನ ಮಾಡಿ, ವಿವರಿಸುವಿರೆಂದು ನಾನು ತಿಳಿಯುವೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 2:9
17 ತಿಳಿವುಗಳ ಹೋಲಿಕೆ  

ಈ ಪುರಾತನ ರಾಜನು ಮಹೋನ್ನತನಾದ ದೇವರ ವಿರುದ್ಧ ಮಾತನಾಡುವನು. ಆ ರಾಜನು ದೇವರ ಪರಮ ಭಕ್ತರಿಗೆ ತೊಂದರೆ ಕೊಡುವನು ಮತ್ತು ಕೊಲೆ ಮಾಡುವನು. ಆ ರಾಜನು ರೂಢಿಯಲ್ಲಿದ್ದ ಧರ್ಮವಿಧಿಗಳನ್ನು ಮಾರ್ಪಡಿಸುವ ಪ್ರಯತ್ನ ಮಾಡುವನು. ಆ ಭಕ್ತರು ಒಂದು ಕಾಲ, ಎರಡು ಕಾಲ, ಅರ್ಧಕಾಲ ಅವನ ಕೈವಶವಾಗಿರುವರು.


ಆತನು ಕಾಲಸಮಯಗಳನ್ನು ಮಾರ್ಪಡಿಸುತ್ತಾನೆ. ಆತನು ಅರಸರನ್ನು ಬದಲಾಯಿಸುತ್ತಾನೆ. ಆತನು ಅರಸರಿಗೆ ಪ್ರಭುತ್ವವನ್ನು ಕೊಡುವನು. ಆತನು ಅವರ ಪ್ರಭುತ್ವವನ್ನು ಕಿತ್ತುಕೊಳ್ಳುವನು! ಜನರಿಗೆ ಜ್ಞಾನವನ್ನು ಕೊಟ್ಟು ಜ್ಞಾನಿಗಳನ್ನಾಗಿ ಮಾಡುವವನು ಆತನೇ. ಜನರಿಗೆ ವಿವೇಕವನ್ನು ಕೊಟ್ಟು ವಿವೇಕಿಗಳನ್ನಾಗಿ ಮಾಡುವವನು ಆತನೇ.


ಮುಂದೆ ಸಂಭವಿಸುವುದನ್ನು ತಿಳಿದುಕೊಳ್ಳಲು ನಾವು ಯಾವ ಸೂಚನೆಗಳಿಗಾಗಿ ಎದುರು ನೋಡಬೇಕು? ತಿಳಿಸಿರಿ. ನೀವೇ ದೇವರುಗಳೆಂದು ಆಗ ನಮಗೆ ಖಚಿತವಾಗುವುದು. ಏನನ್ನಾದರೂ ಮಾಡಿರಿ. ಯಾವದನ್ನಾದರೂ ಮಾಡಿರಿ. ಒಳ್ಳೆಯದನ್ನು, ಕೆಟ್ಟದ್ದನ್ನು ಮಾಡಿರಿ. ಆಗ ನೀವು ಜೀವವುಳ್ಳವರೆಂದು ತಿಳಿದು ನಿಮಗೆ ಗೌರವಿಸಿ, ಭಯಪಟ್ಟು ನಿಮ್ಮನ್ನು ಹಿಂಬಾಲಿಸುವೆವು.


ಮೊರ್ದೆಕೈ, ಸಾಮ್ರಾಜ್ಯದಲ್ಲಿರುವ ಎಲ್ಲಾ ಅಧಿಕಾರಿಗಳಿಗೂ ಪ್ರಜೆಗಳಿಗೂ ತಿಳಿದಿರುವ ಒಂದು ವಿಷಯವೇನೆಂದರೆ, ರಾಜನು ಕರೆಯದೆ ಯಾರಾದರೂ ಆತನ ಬಳಿಗೆ ಹೋದರೆ ಅದಕ್ಕೆ ಮರಣದಂಡನೆಯೇ ಶಿಕ್ಷೆ ಎಂಬುದು. ರಾಜನು ತನ್ನ ಬಂಗಾರದ ದಂಡವನ್ನು ಯಾರ ಮೇಲೆ ತೋರಿಸುವನೋ ಅವನು ಮರಣಶಿಕ್ಷೆಯಿಂದ ಪಾರಾಗುವನು. ಈಗ ರಾಜನು ನನ್ನನ್ನು ಕರೆದು ಮೂವತ್ತು ದಿವಸಗಳಾದವು.”


ಉಪರ್ಸಿನ್ ಎಂದರೆ: ನಿನ್ನ ರಾಜ್ಯವನ್ನು ನಿನ್ನಿಂದ ತೆಗೆದುಕೊಂಡು ವಿಭಜಿಸಲಾಗಿದೆ. ಅದನ್ನು ಮೇದ್ಯಯರಿಗೂ ಪಾರಸಿಯರಿಗೂ ಕೊಡಲಾಗುವುದು” ಎಂದು ವಿವರಿಸಿದನು.


ಈಗಲಾದರೋ ತುತ್ತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ, ವಾಲಗ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ನೀವು ಅಡ್ಡಬಿದ್ದು ಚಿನ್ನದ ವಿಗ್ರಹವನ್ನು ಪೂಜಿಸಬೇಕು. ನಾನು ಮಾಡಿಸಿದ ಈ ವಿಗ್ರಹವನ್ನು ಪೂಜಿಸಲು ನೀವು ಸಿದ್ಧರಾಗಿದ್ದರೆ ಸರಿ. ನೀವು ಅದನ್ನು ಪೂಜಿಸದಿದ್ದರೆ ತಕ್ಷಣ ನಿಮ್ಮನ್ನು ಉರಿಯುವ ಕೊಂಡದಲ್ಲಿ ಎಸೆಯಲಾಗುವುದು. ಆಗ ನನ್ನ ಕೈಯಿಂದ ನಿಮ್ಮನ್ನು ಬಿಡಿಸುವುದು ಯಾವ ದೇವರಿಗೂ ಸಾಧ್ಯವಾಗಲಾರದು” ಎಂದು ಹೇಳಿದನು.


“‘ಅವರನ್ನು ಯೆಹೋವನು ಕಳುಹಿಸಿಲ್ಲದಿದ್ದರೂ ಅವರು, “ಯೆಹೋವನು ಇದನ್ನು ಹೇಳಿದ್ದಾನೆ” ಎನ್ನುತ್ತಾರೆ. ಅವರು ಮಾಟಮಂತ್ರ ಮಾಡಿ ಇಂತಿಂಥದ್ದು ಸಂಭವಿಸುವುದು ಎಂದು ಸುಳ್ಳು ಹೇಳುತ್ತಾರೆ. ದೇವರು ನಮ್ಮನ್ನು ಕಳುಹಿಸಿದ್ದು ಎಂದು ಸುಳ್ಳು ಹೇಳುವರು. ಅವರು ತಮ್ಮ ಸುಳ್ಳು ನಿಜವಾಗುತ್ತಿರುವದನ್ನು ನೋಡಲು ಕಾಯುತ್ತಿದ್ದಾರೆ.


ಸುಳ್ಳುಪ್ರವಾದಿಗಳು ಸುಳ್ಳನ್ನೇ ಹೇಳುತ್ತಾರೆ. ಅವರು ಹೇಳಿದ್ದೆಲ್ಲವೂ ಸುಳ್ಳು ಎಂದು ಯೆಹೋವನು ತೋರಿಸಿಕೊಡುತ್ತಾನೆ. ಮಂತ್ರಗಾರರನ್ನು ದೇವರು ಮೂರ್ಖರನ್ನಾಗಿ ಮಾಡುತ್ತಾನೆ. ಆತನು ಜ್ಞಾನಿಗಳನ್ನು ಗಲಿಬಿಲಿಗೊಳಿಸುತ್ತಾನೆ. ಅವರು ತಮಗೆ ಎಲ್ಲವೂ ಗೊತ್ತಿದೆ ಎಂದು ತಿಳಿದುಕೊಳ್ಳುತ್ತಾರೆ. ಆದರೆ ದೇವರು ಅವರನ್ನು ಮೂಢರನ್ನಾಗಿ ಮಾಡುತ್ತಾನೆ.


ಇತರ ಅನೇಕರು ಮಾಡುವಂತೆ ನಾವು ದೇವರ ವಾಕ್ಯವನ್ನು ಕಲಬೆರಕೆ ಮಾಡುವುದಿಲ್ಲ. ಆದರೆ ಕ್ರಿಸ್ತನಲ್ಲಿದ್ದುಕೊಂಡು ದೇವರ ಸನ್ನಿಧಾನದಲ್ಲಿ ಸತ್ಯವನ್ನು ಹೇಳುತ್ತೇವೆ. ದೇವರಿಂದ ಕಳುಹಿಸಲ್ಪಟ್ಟ ಜನರಂತೆ ನಾವು ಮಾತಾಡುತ್ತೇವೆ.


ಮೇದ್ಯನಾದ ದಾರ್ಯಾವೆಷನು ಹೊಸ ಅರಸನಾದನು. ಅವನು ಸುಮಾರು ಅರವತ್ತೆರಡು ವರ್ಷದವನಾಗಿದ್ದನು.


ಜನರೆದುರಿನಲ್ಲಿ ನನಗೆ ನೀವು ಮಹತ್ವವನ್ನು ಕೊಡುವದಿಲ್ಲ. ಸ್ವಲ್ಪ ಬಾರ್ಲಿಗಾಗಿಯೂ ಕೆಲವು ತುಂಡು ರೊಟ್ಟಿಗಾಗಿಯೂ ನೀವು ನನಗೆ ವಿರುದ್ಧವಾಗಿ ವರ್ತಿಸುತ್ತೀರಿ. ನನ್ನ ಜನರಿಗೆ ನೀವು ಸುಳ್ಳನ್ನು ಆಡುತ್ತೀರಿ. ಅವರಿಗೆ ಸುಳ್ಳೆಂದರೆ ಬಹಳ ಪ್ರೀತಿ. ನೀವು ಸಾಯತಕ್ಕಲ್ಲದವರನ್ನು ಸಾವಿಗೀಡು ಮಾಡುತ್ತೀರಿ. ಬದುಕತಕ್ಕಲ್ಲದವರನ್ನು ಜೀವಂತವಾಗಿಡುತ್ತೀರಿ.


ದೇವರು ಹೀಗೆ ನುಡಿದನು: “ನರಪುತ್ರನೇ, ಇಸ್ರೇಲಿನ ಪ್ರವಾದಿನಿಯರನ್ನು ನೋಡು. ಆ ಪ್ರವಾದಿನಿಯರು ನನ್ನ ಪರವಾಗಿ ಮಾತಾಡುತ್ತಿಲ್ಲ. ಅವರು ತಮ್ಮ ಇಚ್ಛೆಯ ಪ್ರಕಾರ ಮಾತನಾಡುತ್ತಾರೆ. ಆದ್ದರಿಂದ ನೀನು ನನ್ನ ಪರವಾಗಿ ಅವರ ವಿರುದ್ಧವಾಗಿ ಮಾತನಾಡಬೇಕು. ಅವರಿಗೆ ಈ ಮಾತುಗಳನ್ನು ಹೇಳಬೇಕು.


ಸುಳ್ಳುತುಟಿಗಳು ಕ್ಷಣಿಕ. ಆದರೆ ಸತ್ಯವು ಶಾಶ್ವತ.


ಯೆಹೋವನು, ‘ರಾಜನಾದ ಅಹಾಬನನ್ನು ನೀನು ಹೇಗೆ ಪ್ರೇರೇಪಿಸುವೆ?’ ಎಂದು ಉತ್ತರಿಸಿದಾಗ, ದೂತನು, ‘ಅಹಾಬನ ಎಲ್ಲಾ ಪ್ರವಾದಿಗಳು ಗಲಿಬಿಲಿಗೊಳ್ಳುವಂತೆ ಮಾಡುತ್ತೇನೆ. ರಾಜನಾದ ಅಹಾಬನಿಗೆ ಪ್ರವಾದಿಗಳು ಸುಳ್ಳುಹೇಳುವಂತೆ ನಾನು ಮಾಡುತ್ತೇನೆ. ಪ್ರವಾದಿಗಳ ಸಂದೇಶವೆಲ್ಲವೂ ಸುಳ್ಳಾಗಿರುವುದು’ ಎಂದನು. ಆದ್ದರಿಂದ ಯೆಹೋವನು, ‘ಸರಿ, ಹೋಗಿ ರಾಜನಾದ ಅಹಾಬನನ್ನು ಪ್ರೇರೇಪಿಸು. ನೀನು ಸಫಲನಾಗುವೆ’” ಎಂದು ಹೇಳಿದನು.


ಅಹಾಬನು ಪ್ರವಾದಿಗಳ ಸಭೆಯೊಂದನ್ನು ಕರೆದನು. ಆ ಸಮಯದಲ್ಲಿ ನಾನೂರುಮಂದಿ ಪ್ರವಾದಿಗಳಿದ್ದರು. ಅಹಾಬನು ಪ್ರವಾದಿಗಳನ್ನು, “ಅರಾಮ್ಯರ ಸೇನೆಯ ವಿರುದ್ಧ ಹೋರಾಡಲು ನಾನು ರಾಮೋತಿಗೆ ಹೋಗಬೇಕೇ? ಅಥವಾ ನಾನು ಬೇರೊಂದು ಸಮಯಕ್ಕಾಗಿ ಕಾಯಬೇಕೇ?” ಎಂದು ಕೇಳಿದನು. ಪ್ರವಾದಿಗಳು, “ನೀನು ಹೋಗಿ ಯುದ್ಧಮಾಡು. ನೀನು ಗೆಲ್ಲುವಂತೆ ಯೆಹೋವನು ಮಾಡುವನು” ಎಂದು ಹೇಳಿದರು.


ಅರಸನಾದ ನೆಬೂಕದ್ನೆಚ್ಚರನು, “ನೀವು ಹೆಚ್ಚಿನ ಕಾಲಾವಕಾಶವನ್ನು ಪಡೆಯುವ ಪ್ರಯತ್ನ ಮಾಡುತ್ತಿದ್ದೀರೆಂಬುದನ್ನು ನಾನು ಬಲ್ಲೆ. ನಾನು ಹೇಳಿದ್ದು ನಿಮಗೆ ಸರಿಯಾಗಿ ತಿಳಿದಿದೆ.


ಆಗ ದಾನಿಯೇಲನು ಅರಸನಾದ ನೆಬೂಕದ್ನೆಚ್ಚರನ ಬಳಿಗೆ ಹೋಗಿ ತನಗೆ ಸ್ವಲ್ಪ ಸಮಯ ಕೊಡುವುದಾದರೆ ತಾನು ಅರಸನ ಕನಸನ್ನೂ ಅದರ ಅರ್ಥವನ್ನೂ ತಿಳಿಸುವುದಾಗಿ ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು