ದಾನಿಯೇಲ 3:11 - ಪರಿಶುದ್ದ ಬೈಬಲ್11 ಯಾರಾದರೂ ಅಡ್ಡಬಿದ್ದು ಬಂಗಾರದ ವಿಗ್ರಹವನ್ನು ಪೂಜಿಸದಿದ್ದರೆ ಅವರನ್ನು ಉರಿಯುವ ಬೆಂಕಿಯ ಕೊಂಡದಲ್ಲಿ ಎಸೆಯಲಾಗುವುದೆಂದು ಕೂಡ ತಾವು ಹೇಳಿದ್ದೀರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 “ಯಾರು ಅಡ್ಡಬಿದ್ದು ಪೂಜಿಸುವುದಿಲ್ಲವೋ ಅವನು ಧಗಧಗಿಸುವ ಬೆಂಕಿಯೊಳಗೆ ಹಾಕಲ್ಪಡಲಿ ಎಂದು ಆಜ್ಞೆಮಾಡಿದಿಯಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಯಾವನು ಅಡ್ಡಬಿದ್ದು ಆರಾಧಿಸುವುದಿಲ್ಲವೋ ಅಂಥವನು ಧಗಧಗಿಸುವ ಆವಿಗೆಯೊಳಗೆ ಹಾಕಲ್ಪಡಲಿ ಎಂದು ತಾವು ಆಜ್ಞೆ ಮಾಡಿದಿರಲ್ಲವೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಯಾವನು ಅಡ್ಡಬಿದ್ದು ಪೂಜಿಸುವದಿಲ್ಲವೋ ಅವನು ಧಗಧಗಿಸುವ ಆವಿಗೆಯೊಳಗೆ ಹಾಕಲ್ಪಡಲಿ ಎಂದು ಆಜ್ಞೆಮಾಡಿದಿಯಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಅಡ್ಡಬೀಳದೆ ಆರಾಧಿಸದೆ ಇರುವವರನ್ನು ಉರಿಯುವ ಬೆಂಕಿಯ ಕುಲುಮೆಯ ಮಧ್ಯದಲ್ಲಿ ಹಾಕಬೇಕೆಂದು ಆಜ್ಞೆಮಾಡಿದಿಯಲ್ಲಾ? ಅಧ್ಯಾಯವನ್ನು ನೋಡಿ |
ರಾಜ್ಯದ ಸಕಲ ಮುಖ್ಯಾಧಿಕಾರಿಗಳು, ನಾಯಕರು, ದೇಶಾಧಿಪತಿಗಳು, ಮಂತ್ರಿಗಳು ಮತ್ತು ಸಂಸ್ಥಾನಾಧ್ಯಕ್ಷರು ಸೇರಿ ಒಂದು ಆಲೋಚನೆಯನ್ನು ಮಾಡಿದ್ದಾರೆ. ಈ ಸಂಬಂಧವಾಗಿ ಅರಸನು ಒಂದು ನಿಬಂಧನೆಯನ್ನು ಮಾಡಿ ರಾಜಾಜ್ಞೆಯನ್ನು ಹೊರಡಿಸಬೇಕೆಂದು ನಮ್ಮೆಲ್ಲರ ಅನಿಸಿಕೆ. ಎಲ್ಲರೂ ಆ ರಾಜಾಜ್ಞೆಯನ್ನು ಪಾಲಿಸಬೇಕು. ಆ ನಿಬಂಧನೆ ಹೀಗಿದೆ: ಬರಲಿರುವ ಮೂವತ್ತು ದಿನ ಯಾರೂ ಅರಸನಾದ ನಿನ್ನನ್ನು ಬಿಟ್ಟು ಬೇರೆ ಯಾವ ದೇವರನ್ನಾಗಲಿ ಮನುಷ್ಯನನ್ನಾಗಲಿ ಪ್ರಾರ್ಥಿಸಕೂಡದು. ಯಾರಾದರೂ ಹಾಗೆ ಮಾಡಿದರೆ ಅವರನ್ನು ಸಿಂಹಗಳ ಗುಹೆಯಲ್ಲಿ ಎಸೆಯಲಾಗುವುದು.