Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 3:12 - ಪರಿಶುದ್ದ ಬೈಬಲ್‌

12 ಅರಸನೇ, ಕೆಲವು ಜನ ಯೆಹೂದ್ಯರು ತಮ್ಮ ಆಜ್ಞೆಯನ್ನು ಪಾಲಿಸಲಿಲ್ಲ. ಆ ಯೆಹೂದ್ಯರನ್ನು ತಾವು ಬಾಬಿಲೋನ್ ಪ್ರಾಂತ್ಯದಲ್ಲಿ ಪ್ರಮುಖ ಅಧಿಕಾರಿಗಳನ್ನಾಗಿ ನೇಮಿಸಿದ್ದೀರಿ. ಅವರ ಹೆಸರುಗಳು, ಶದ್ರಕ್, ಮೇಶಕ್, ಅಬೇದ್‌ನೆಗೋ ಎಂದು. ಅವರು ನಿಮ್ಮ ದೇವರುಗಳನ್ನು ಪೂಜಿಸುವುದಿಲ್ಲ. ನೀವು ನಿಲ್ಲಿಸಿದ ಬಂಗಾರದ ವಿಗ್ರಹಕ್ಕೆ ಅಡ್ಡಬಿದ್ದು ಪೂಜಿಸುವದಿಲ್ಲ” ಎಂದು ಚಾಡಿ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನೀನು ಬಾಬೆಲ್ ಸಂಸ್ಥಾನದ ಕಾರ್ಯಭಾರವನ್ನು ವಹಿಸಿಕೊಟ್ಟ ಶದ್ರಕ್, ಮೇಶಕ್, ಅಬೇದ್ನೆಗೋ ಎಂಬ ಕೆಲವು ಮಂದಿ ಯೆಹೂದ್ಯರು ಇದ್ದಾರೆ. ರಾಜನೇ, ಇವರು ನಿನ್ನನ್ನು ಲಕ್ಷಿಸುವುದಿಲ್ಲ, ನಿನ್ನ ದೇವರುಗಳನ್ನು ಸೇವಿಸುವುದಿಲ್ಲ, ನೀನು ನಿಲ್ಲಿಸಿದ ಬಂಗಾರದ ಪ್ರತಿಮೆಯನ್ನು ಪೂಜಿಸುವುದಿಲ್ಲ” ಎಂದು ಅರಿಕೆಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ತಾವು ಬಾಬಿಲೋನಿನ ಸಂಸ್ಥಾನಾಧಿಕಾರತ್ವವನ್ನು ವಹಿಸಿಕೊಟ್ಟ ಶದ್ರಕ್, ಮೇಶಕ್ ಹಾಗೂ ಅಬೇದ್‍ನೆಗೋ ಎಂಬ ಕೆಲವು ಮಂದಿ ಯೆಹೂದ್ಯರು ಇದ್ದಾರೆ. ರಾಜರೇ ಅವರು ನಿಮ್ಮನ್ನು ಲಕ್ಷಿಸುವುದಿಲ್ಲ. ನಿಮ್ಮ ದೇವರುಗಳಿಗೆ ಸೇವೆಮಾಡುವುದಿಲ್ಲ, ನೀವು ಸ್ಥಾಪಿಸಿದ ಬಂಗಾರದ ಪ್ರತಿಮೆಯನ್ನು ಆರಾಧಿಸುವುದಿಲ್ಲ,” ಎಂದು ಆಪಾದಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನೀನು ಬಾಬೆಲ್ ಸಂಸ್ಥಾನದ ಕಾರ್ಯಭಾರವನ್ನು ವಹಿಸಿಕೊಟ್ಟ ಶದ್ರಕ್ ಮೇಶಕ್ ಅಬೇದ್‍ನೆಗೋ ಎಂಬ ಕೆಲವು ಮಂದಿ ಯೆಹೂದ್ಯರು ಇದ್ದಾರೆ; ರಾಜನೇ, ಇವರು ನಿನ್ನನ್ನು ಲಕ್ಷಿಸುವದಿಲ್ಲ, ನಿನ್ನ ದೇವರುಗಳನ್ನು ಸೇವಿಸುವದಿಲ್ಲ, ನೀನು ನಿಲ್ಲಿಸಿದ ಬಂಗಾರದ ಪ್ರತಿಮೆಯನ್ನು ಪೂಜಿಸುವದಿಲ್ಲ ಎಂದು ಅರಿಕೆಮಾಡಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆದರೆ ನೀನು ಬಾಬಿಲೋನಿನ ಪ್ರಾಂತದ ಕೆಲಸಗಳ ಮೇಲೆ ಇಟ್ಟಿರುವ ಯೆಹೂದ್ಯರಾದ ಕೆಲವರು ಎಂದರೆ ಶದ್ರಕ್, ಮೇಶಕ್, ಅಬೇದ್‌ನೆಗೋ ಅವರು ನಿನ್ನನ್ನು ಲಕ್ಷಿಸುವುದಿಲ್ಲ. ಅವರು ನಿನ್ನ ದೇವರುಗಳನ್ನಾಗಲಿ, ನೀನು ನಿಲ್ಲಿಸಿರುವ ಬಂಗಾರದ ಪ್ರತಿಮೆಯನ್ನಾದರೂ ಆರಾಧಿಸುವುದಿಲ್ಲ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 3:12
15 ತಿಳಿವುಗಳ ಹೋಲಿಕೆ  

ಆಗ ಅವರು ರಾಜನಿಗೆ, “ದಾನಿಯೇಲನೆಂಬ ಆ ಮನುಷ್ಯ ನಿನ್ನ ಕಡೆಗೆ ಎಳ್ಳಷ್ಟೂ ಗಮನ ಕೊಡುತ್ತಿಲ್ಲ. ಅವನು ಯೆಹೂದದ ಸೆರೆಯಾಳುಗಳಲ್ಲೊಬ್ಬನು. ನೀನು ರುಜುಹಾಕಿದ ಶಾಸನಕ್ಕೆ ಅವನು ಸ್ವಲ್ಪವಾದರೂ ಬೆಲೆಕೊಡುತ್ತಿಲ್ಲ. ದಾನಿಯೇಲನು ಈಗಲೂ ದಿನಕ್ಕೆ ಮೂರು ಸಲ ತನ್ನ ದೇವರಲ್ಲಿ ಪ್ರಾರ್ಥಿಸುತ್ತಾನೆ” ಎಂದು ಹೇಳಿದರು.


ಶದ್ರಕ್, ಮೇಶಕ್, ಅಬೇದ್‌ನೆಗೋ ಇವರುಗಳನ್ನು ಬಾಬಿಲೋನ್ ಸಂಸ್ಥಾನದ ದೊಡ್ಡ ಅಧಿಕಾರಿಗಳನ್ನಾಗಿ ನೇಮಿಸಬೇಕೆಂದು ದಾನಿಯೇಲನು ಅರಸನನ್ನು ಕೇಳಿಕೊಂಡನು. ದಾನಿಯೇಲನು ಹೇಳಿದಂತೆ ಅರಸನು ಮಾಡಿದನು. ದಾನಿಯೇಲನು ಅರಸನ ಸನ್ನಿಧಿಯಲ್ಲಿರುವ ಪ್ರಮುಖರಲ್ಲಿ ಒಬ್ಬನಾದನು.


ಯಾಸೋನನು ಇವರನ್ನು ತನ್ನ ಮನೆಯಲ್ಲಿ ಇರಿಸಿಕೊಂಡಿದ್ದಾನೆ. ಇವರೆಲ್ಲರೂ ಸೀಸರನ ಕಾನೂನುಗಳನ್ನು ಉಲ್ಲಂಘಿಸುತ್ತಾರೆ ಮತ್ತು ‘ಯೇಸು’ ಎಂಬ ಮತ್ತೊಬ್ಬ ರಾಜನಿರುವನೆಂದು ಹೇಳುತ್ತಾರೆ” ಎಂದು ಕೂಗಿ ಹೇಳಿದರು.


ಕೋಪವು ಕ್ರೂರ; ಅದು ಪ್ರವಾಹದಂತೆ ನಾಶಕರ. ಹೊಟ್ಟೆಕಿಚ್ಚು ಅದಕ್ಕಿಂತಲೂ ನಾಶಕರ.


“ಈ ಮನುಷ್ಯನ (ಯೇಸುವಿನ) ಬಗ್ಗೆ ನೀವು ಬೋಧಿಸಕೂಡದೆಂದು ನಾವು ನಿಮಗೆ ಆಜ್ಞಾಪಿಸಿದೆವು. ಆದರೆ ನೀವು ಮಾಡಿರುವುದೇನು? ನೀವು ಜೆರುಸಲೇಮನ್ನು ನಿಮ್ಮ ಉಪದೇಶದಿಂದ ತುಂಬಿಸಿಬಿಟ್ಟಿದ್ದೀರಿ. ಈ ಮನುಷ್ಯನ (ಯೇಸುವಿನ) ಸಾವಿಗೆ ನಮ್ಮನ್ನೇ ಜವಾಬ್ದಾರರನ್ನಾಗಿ ಮಾಡಲು ನೀವು ಪ್ರಯತ್ನಿಸುತ್ತಿದ್ದೀರಿ” ಎಂದರು.


ಆಮೇಲೆ ನಾನು, “ಜನರು ಪ್ರಯಾಸಪಟ್ಟು ಕೆಲಸ ಮಾಡುವುದೇಕೆ?” ಎಂದು ಆಲೋಚಿಸಿದೆ. ಜನರು ಏಳಿಗೆ ಹೊಂದಲು ಮತ್ತು ಬೇರೆಯವರಿಗಿಂತ ಹೆಚ್ಚು ಅಭಿವೃದ್ಧಿಯಾಗಲು ಪ್ರಯತ್ನಿಸುವರು; ಅದಕ್ಕೆ ಅವರ ಮತ್ಸರವೇ ಕಾರಣ. ಇದೂ ಗಾಳಿಯನ್ನು ಹಿಂದಟ್ಟಿದ್ದ ಹಾಗೆ ವ್ಯರ್ಥ.


ಹಾಮಾನನು ಅರಸನಾದ ಅಹಷ್ವೇರೋಷನ ಬಳಿಗೆ ಬಂದು, “ಅರಸನೇ, ನಿನ್ನ ಸಾಮ್ರಾಜ್ಯದ ಎಲ್ಲಾ ಸಂಸ್ಥಾನಗಳಲ್ಲಿ ಒಂದು ಜನಾಂಗದವರು ಹಬ್ಬಿರುತ್ತಾರೆ. ಇವರು ಇತರ ಎಲ್ಲಾ ಜನರಿಂದ ಪ್ರತ್ಯೇಕವಾಗಿ ಇರುತ್ತಾರೆ. ಅವರ ನೀತಿರೀತಿಗಳೆಲ್ಲಾ ಬೇರೆ ಜನರಿಗಿಂತ ವಿಭಿನ್ನವಾಗಿರುತ್ತದೆ. ಅವರು ರಾಜನ ಕಟ್ಟಳೆಗೆ ವಿಧೇಯರಾಗುವುದಿಲ್ಲ. ನಿನ್ನ ರಾಜ್ಯದಲ್ಲಿ ಅವರು ಹೀಗೆಯೇ ಇರುವದು ಒಳ್ಳೆಯದಲ್ಲ.


ಅಶ್ಪೆನಜನು ಆ ಯೆಹೂದ್ಯ ತರುಣರಿಗೆ ಬಾಬಿಲೋನಿನ ಹೆಸರುಗಳನ್ನಿಟ್ಟನು. ದಾನಿಯೇಲನ ಹೊಸ ಹೆಸರು ಬೇಲ್ತೆಶಚ್ಚರ್, ಹನನ್ಯನ ಹೊಸ ಹೆಸರು ಶದ್ರಕ್, ಮೀಶಾಯೇಲನ ಹೊಸ ಹೆಸರು ಮೇಶಕ್ ಮತ್ತು ಅಜರ್ಯನ ಹೊಸ ಹೆಸರು ಅಬೇದ್‌ನೆಗೋ.


ತರುವಾಯ ಅರಸನು ದಾನಿಯೇಲನಿಗೆ ತನ್ನ ರಾಜ್ಯದಲ್ಲಿ ಬಹುಮುಖ್ಯವಾದ ಉದ್ಯೋಗವನ್ನು ಕೊಟ್ಟನು. ಅಮೂಲ್ಯವಾದ ಕಾಣಿಕೆಗಳನ್ನೂ ಕೊಟ್ಟನು. ನೆಬೂಕದ್ನೆಚ್ಚರನು ದಾನಿಯೇಲನನ್ನು ಬಾಬಿಲೋನ್ ಸಂಸ್ಥಾನದ ಅಧಿಪತಿಯನ್ನಾಗಿ ಮಾಡಿದನು. ಬಾಬಿಲೋನಿನ ಎಲ್ಲಾ ವಿದ್ವಾಂಸರ ಮುಖ್ಯಸ್ಥನನ್ನಾಗಿ ಮಾಡಿದನು.


ಯಾರಾದರೂ ಅಡ್ಡಬಿದ್ದು ಬಂಗಾರದ ವಿಗ್ರಹವನ್ನು ಪೂಜಿಸದಿದ್ದರೆ ಅವರನ್ನು ಉರಿಯುವ ಬೆಂಕಿಯ ಕೊಂಡದಲ್ಲಿ ಎಸೆಯಲಾಗುವುದೆಂದು ಕೂಡ ತಾವು ಹೇಳಿದ್ದೀರಿ.


ಇದನ್ನು ಕೇಳಿ ಶದ್ರಕ್, ಮೇಶಕ್, ಅಬೇದ್‌ನೆಗೋ ಎಂಬುವವರು ಅರಸನಿಗೆ, “ನೆಬೂಕದ್ನೆಚ್ಚರನೇ, ಈ ವಿಷಯದಲ್ಲಿ ನಾವು ನಿನಗೆ ಏನೂ ಹೇಳಬೇಕಾಗಿಲ್ಲ.


ನಾನು ಈಗ ಸಕಲ ಜನಾಂಗ, ಕುಲ, ಭಾಷೆಗಳ ಜನರಲ್ಲಿ ಯಾರಾದರೂ ಶದ್ರಕ್, ಮೇಶಕ್, ಅಬೇದ್‌ನೆಗೋ ಇವರ ದೇವರ ವಿರುದ್ಧವಾಗಿ ಮಾತನಾಡಿದರೆ ಅವರನ್ನು ತುಂಡುತುಂಡಾಗಿ ಕತ್ತರಿಸಿ ಅವರ ಮನೆಗಳನ್ನು ತಿಪ್ಪೆಯನ್ನಾಗಿ ಮಾಡಬೇಕೆಂಬ ಆಜ್ಞೆಯನ್ನು ವಿಧಿಸುತ್ತೇನೆ. ಬೇರೆ ಯಾವ ದೇವರೂ ತನ್ನ ಭಕ್ತರನ್ನು ಈ ರೀತಿ ರಕ್ಷಿಸಲಾರನು” ಎಂದು ಹೇಳಿದನು.


ಬಳಿಕ ರಾಜನು ಶದ್ರಕ್, ಮೇಶಕ್ ಮತ್ತು ಅಬೇದ್‌ನೆಗೋ ಈ ಮೂವರಿಗೆ ಬಾಬಿಲೋನ್ ಸಂಸ್ಥಾನದಲ್ಲಿ ಹೆಚ್ಚು ಮಹತ್ವದ ಪದವಿಗಳನ್ನು ಕೊಟ್ಟನು.


ಇದನ್ನು ಕೇಳಿ ಅರಸನಿಗೆ ದುಃಖವೂ ವ್ಯಸನವೂ ಆಯಿತು. ದಾನಿಯೇಲನನ್ನು ರಕ್ಷಿಸಲು ಉಪಾಯವೊಂದನ್ನು ಕಂಡುಹಿಡಿಯಲು ಸಾಯಂಕಾಲದವರೆಗೆ ಯೋಚಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು