Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 3:15 - ಪರಿಶುದ್ದ ಬೈಬಲ್‌

15 ಈಗಲಾದರೋ ತುತ್ತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ, ವಾಲಗ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ನೀವು ಅಡ್ಡಬಿದ್ದು ಚಿನ್ನದ ವಿಗ್ರಹವನ್ನು ಪೂಜಿಸಬೇಕು. ನಾನು ಮಾಡಿಸಿದ ಈ ವಿಗ್ರಹವನ್ನು ಪೂಜಿಸಲು ನೀವು ಸಿದ್ಧರಾಗಿದ್ದರೆ ಸರಿ. ನೀವು ಅದನ್ನು ಪೂಜಿಸದಿದ್ದರೆ ತಕ್ಷಣ ನಿಮ್ಮನ್ನು ಉರಿಯುವ ಕೊಂಡದಲ್ಲಿ ಎಸೆಯಲಾಗುವುದು. ಆಗ ನನ್ನ ಕೈಯಿಂದ ನಿಮ್ಮನ್ನು ಬಿಡಿಸುವುದು ಯಾವ ದೇವರಿಗೂ ಸಾಧ್ಯವಾಗಲಾರದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 “ಈಗಲಾದರೂ ನೀವು ಸಿದ್ಧವಾಗಿದ್ದು ತುತ್ತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ, ವಾಲಗ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ಅಡ್ಡಬಿದ್ದು, ನಾನು ನಿಲ್ಲಿಸಿದ ಪ್ರತಿಮೆಯನ್ನು ಪೂಜಿಸಿದರೆ ಸರಿ; ಇಲ್ಲವಾದರೆ ತಕ್ಷಣವೇ ಧಗಧಗನೆ ಉರಿಯುವ ಬೆಂಕಿಯೊಳಗೆ ಹಾಕಲ್ಪಡುವಿರಿ; ನಿಮ್ಮನ್ನು ನನ್ನ ಕೈಯೊಳಗಿಂದ ಬಿಡಿಸಬಲ್ಲ ದೇವರು ಯಾರು?” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಈಗಲಾದರು ನೀವು ಸಿದ್ಧರಾಗಿದ್ದು ತುತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ, ಓಲಗ ಮುಂತಾದ ಸಕಲ ವಾದ್ಯಗಳ ಧ್ವನಿ ಕೇಳಿದ ಕೂಡಲೆ ಅಡ್ಡಬಿದ್ದು ನಾನು ಸ್ಥಾಪಿಸಿದ ಪ್ರತಿಮೆಯನ್ನು ಆರಾಧಿಸಿದರೆ ಸರಿ, ಇಲ್ಲವಾದರೆ ಈ ಗಳಿಗೆಯಲ್ಲೆ ನಿಮ್ಮನ್ನು ಧಗಧಗನೆ ಉರಿಯುವ ಆವಿಗೆಯೊಳಗೆ ಹಾಕಲಾಗುವುದು. ನಿಮ್ಮನ್ನು ನನ್ನ ಕೈಯಿಂದ ಬಿಡಿಸಬಲ್ಲ ದೇವರು ಯಾರಿದ್ದಾನೆ?” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಈಗಲಾದರೂ ನೀವು ಸಿದ್ಧವಾಗಿದ್ದು ತುತೂರಿ ಕೊಳಲು ಕಿನ್ನರಿ ತಂಬೂರಿ ವೀಣೆ ವಾಲಗ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ಅಡ್ಡಬಿದ್ದು ನಾನು ನಿಲ್ಲಿಸಿದ ಪ್ರತಿಮೆಯನ್ನು ಪೂಜಿಸಿದರೆ ಸರಿ; ಇಲ್ಲವಾದರೆ ತಕ್ಷಣವೇ ಧಗಧಗನೆ ಉರಿಯುವ ಆವಿಗೆಯೊಳಗೆ ಹಾಕಲ್ಪಡುವಿರಿ; ನಿಮ್ಮನ್ನು ನನ್ನ ಕೈಯೊಳಗಿಂದ ಬಿಡಿಸಬಲ್ಲ ದೇವರು ಯಾರು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಈಗ ನೀವು ಸಿದ್ಧವಾಗಿದ್ದು ತುತೂರಿ, ಕೊಳಲು, ತಂಬೂರಿ, ವೀಣೆ, ಕಿನ್ನರಿ, ನಾದಸ್ವರ ಎಲ್ಲಾ ವಿಧವಾದ ವಾದ್ಯಗಳ ಶಬ್ದವನ್ನು ಕೇಳುವ ಸಮಯದಲ್ಲಿ ನಾನು ಮಾಡಿಸಿದ ಪ್ರತಿಮೆಯನ್ನು ಆರಾಧಿಸಿದರೆ ಸರಿ, ಆರಾಧಿಸದಿದ್ದರೆ ಅದೇ ಗಳಿಗೆಯಲ್ಲಿ ಉರಿಯುವ ಬೆಂಕಿಯ ಕುಲುಮೆಯ ಮಧ್ಯದಲ್ಲಿ ಹಾಕಲಾಗುವಿರಿ. ನನ್ನ ಕೈಯಿಂದ ನಿಮ್ಮನ್ನು ಬಿಡಿಸುವ ಆ ದೇವರು ಯಾರು?” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 3:15
25 ತಿಳಿವುಗಳ ಹೋಲಿಕೆ  

ಪೇತ್ರ ಮತ್ತು ಉಳಿದ ಅಪೊಸ್ತಲರು, “ನಾವು ವಿಧೇಯರಾಗಬೇಕಾದದ್ದು ದೇವರಿಗೇ ಹೊರತು ನಿಮಗಲ್ಲ!


ನೀನು ನಮ್ಮನ್ನು ಉರಿಯುವ ಕೊಂಡದಲ್ಲಿ ಎಸೆದರೆ ನಾವು ಆರಾಧಿಸುವ ದೇವರು ನಮ್ಮನ್ನು ರಕ್ಷಿಸಬಲ್ಲನು. ಆತನು ಇಚ್ಛಿಸಿದರೆ ನಮ್ಮನ್ನು ನಿನ್ನ ಕೈಯಿಂದ ಬಿಡಿಸಬಲ್ಲನು.


ಬೇರೆ ಜನಾಂಗಗಳ ದೇವತೆಗಳು ಯಾವುದಾದರೂ ತಮ್ಮ ದೇಶವನ್ನು ನನ್ನಿಂದ ರಕ್ಷಿಸುತ್ತವೆಯೇ? ಇಲ್ಲ! ಜೆರುಸಲೇಮನ್ನು ಯೆಹೋವನು ನನ್ನಿಂದ ರಕ್ಷಿಸುತ್ತಾನೆಯೇ ಇಲ್ಲ!’”


ಆದರೆ ಫರೋಹನು, “ಯೆಹೋವನು ಯಾರು? ನಾನು ಆತನಿಗೆ ಯಾಕೆ ವಿಧೇಯನಾಗಬೇಕು. ಇಸ್ರೇಲರನ್ನು ನಾನು ಯಾಕೆ ಹೋಗಗೊಡಿಸಬೇಕು. ನೀವು ಯೆಹೋವನೆಂದು ಕರೆಯುವ ಆತನನ್ನು ನಾನು ಅರಿಯೆನು, ಆದ್ದರಿಂದ ಇಸ್ರೇಲರನ್ನು ಹೋಗಗೊಡಿಸುವುದಿಲ್ಲ” ಅಂದನು.


ಆದರೆ ಪೇತ್ರ ಮತ್ತು ಯೋಹಾನ ಅವರಿಗೆ, “ನಾವು ನಿಮಗೆ ವಿಧೇಯರಾಗಬೇಕೇ ಅಥವಾ ದೇವರಿಗೆ ವಿಧೇಯರಾಗಬೇಕೇ? ಇದರಲ್ಲಿ ಯಾವುದು ದೇವರಿಗೆ ಅಪೇಕ್ಷೆಯಾದದು? ನೀವೇ ಹೇಳಿ.


ನೀವು ಬಂಧಿಸಲ್ಪಟ್ಟು ನ್ಯಾಯವಿಚಾರಣೆಗೆ ಒಳಗಾಗುವಿರಿ. ಆದರೆ ನೀವು ಏನು ಹೇಳಬೇಕೆಂಬುದರ ಬಗ್ಗೆ ಯೋಚಿಸಬೇಡಿ, ಆ ಸಮಯದಲ್ಲಿ ದೇವರು ನಿಮಗೆ ತಿಳಿಸಿಕೊಡುವುದನ್ನೇ ಹೇಳಿರಿ. ಆಗ ಮಾತಾಡುವವರು ನೀವಲ್ಲ, ಪವಿತ್ರಾತ್ಮನೇ.


ರಾಜನಾದ ದಾರ್ಯಾವೆಷನು ಆಜ್ಞೆಯನ್ನು ಕೊಟ್ಟನು. ಅವರು ದಾನಿಯೇಲನನ್ನು ಸಿಂಹಗಳ ಗುಹೆಯಲ್ಲಿ ಎಸೆದರು. ಅರಸನು ದಾನಿಯೇಲನಿಗೆ, “ನೀನು ಸೇವೆ ಮಾಡುತ್ತಲೇ ಇರುವ ದೇವರು ನಿನ್ನನ್ನು ರಕ್ಷಿಸುವನೆಂದು ನನಗೆ ಗೊತ್ತಿದೆ” ಎಂದನು.


ಸಭೆಯಲ್ಲಿ ಕುಳಿತಿದ್ದವರೆಲ್ಲರೂ ಸ್ತೆಫನನ ಮುಖವನ್ನು ದಿಟ್ಟಿಸಿ ನೋಡಲು ಅವನ ಮುಖವು ದೇವದೂತನ ಮುಖದಂತೆ ಕಂಗೊಳಿಸಿತು.


ಆಗ ಮುಂದಿನ ವರ್ಷ ಈ ಮರ ಫಲವನ್ನು ಕೊಡಬಹುದು. ಒಂದುವೇಳೆ ಇದು ಫಲವನ್ನು ಕೊಡದಿದ್ದರೆ ನೀನು ಇದನ್ನು ಕಡಿದುಹಾಕು’ ಎಂದು ಉತ್ತರಿಸಿದನು.”


“ಜನರು ನಿಮ್ಮನ್ನು ಸಭಾಮಂದಿರಗಳಿಗೂ ನ್ಯಾಯಾಧಿಪತಿಗಳ ಮತ್ತು ದೇಶಾಧಿಕಾರಿಗಳ ಬಳಿಗೂ ಎಳೆದೊಯ್ಯುವಾಗ ಅವರಿಗೆ ಏನು ಹೇಳಬೇಕೆಂದು ಚಿಂತೆ ಮಾಡಬೇಡಿ.


ರಾಜನಿಗೆ ಬಹಳ ಚಿಂತೆಯಾಗಿತ್ತು. ರಾಜನು ಸಿಂಹಗಳ ಗುಹೆಗೆ ಹೋಗಿ, “ದಾನಿಯೇಲನೇ, ಜೀವಸ್ವರೂಪನಾದ ದೇವರ ಸೇವಕನೇ, ನೀನು ನಿತ್ಯವೂ ಸೇವೆ ಮಾಡುವ ನಿನ್ನ ದೇವರು ನಿನ್ನನ್ನು ಸಿಂಹಗಳಿಂದ ಉಳಿಸಲು ಶಕ್ತನಾದನೇ?” ಎಂದು ಕೂಗಿ ಕೇಳಿದನು.


ನೀನು ಅವಮಾನಪಡಿಸಿ ಪರಿಹಾಸ್ಯ ಮಾಡಿ ವಿರೋಧವಾಗಿ ಮಾತಾಡಿದ್ದು ಯಾರಿಗೆ? ನೀನು ಇಸ್ರೇಲಿನ ಪರಿಶುದ್ಧನಿಗೆ ವಿರುದ್ಧವಾಗಿರುವೆ. ಆತನಿಗಿಂತ ನೀನೇ ಉತ್ತಮನೆಂಬ ರೀತಿಯಲ್ಲಿ ನೀನು ವರ್ತಿಸಿರುವೆ.


ಅವರ ಈ ಪಾಪವನ್ನು ಕ್ಷಮಿಸು. ನೀನು ಅವರನ್ನು ಕ್ಷಮಿಸುವುದಿಲ್ಲವಾದರೆ ನಿನ್ನ ಜೀವಭಾದ್ಯರ ಪಟ್ಟಿಯ ಪುಸ್ತಕದಿಂದ ನನ್ನ ಹೆಸರನ್ನು ಅಳಿಸಿಬಿಡು” ಎಂದು ಪ್ರಾರ್ಥಿಸಿದನು.


ಇವನು ದೇವರನ್ನು ನಂಬಿದ್ದನು. ಈಗ ದೇವರಿಗೆ ನಿಜವಾಗಿಯೂ ಇವನು ಬೇಕಿದ್ದರೆ, ದೇವರೇ ಇವನನ್ನು ಕಾಪಾಡಲಿ. ‘ನಾನು ದೇವರ ಮಗನು’ ಎಂದು ಇವನೇ ಹೇಳಿಕೊಂಡನಲ್ಲಾ” ಎಂದು ಅವರು ಹೇಳಿದರು.


ನಿಮ್ಮನ್ನು ಬಂಧಿಸಿದಾಗ ನೀವು ಏನು ಮಾತಾಡಬೇಕು, ಹೇಗೆ ಮಾತಾಡಬೇಕು ಎಂದು ಚಿಂತಿಸಬೇಡಿ. ನೀವು ಹೇಳಬೇಕಾದುವುಗಳನ್ನು ಆ ಸಮಯದಲ್ಲಿ ನಿಮಗೆ ಅನುಗ್ರಹಿಸಲಾಗುವುದು.


ನೀವು ನನಗೆ ನನ್ನ ಕನಸಿನ ಬಗ್ಗೆ ಹೇಳದಿದ್ದರೆ ನಿಮಗೆ ಶಿಕ್ಷೆಯಾಗುವದೆಂದು ನೀವು ಬಲ್ಲಿರಿ. ನೀವೆಲ್ಲ ನನಗೆ ಸುಳ್ಳು ಹೇಳಬೇಕೆಂದು ನಿರ್ಧರಿಸಿಕೊಂಡಿದ್ದೀರಿ. ನೀವು ಹೆಚ್ಚಿನ ಸಮಯವನ್ನು ಪಡೆಯಲಿಚ್ಛಿಸುತ್ತಿದ್ದೀರಿ. ನಿಮಗೆ ಹೇಳಿದ್ದನ್ನು ನಾನು ಮರೆತುಬಿಡಬಹುದೆಂದು ನೀವು ಭಾವಿಸುತ್ತಿರುವಿರಿ. ಈಗ ನನ್ನ ಕನಸನ್ನು ತಿಳಿಸಿರಿ. ನೀವು ಕನಸನ್ನು ತಿಳಿಸಿದರೆ ಅದರ ನಿಜವಾದ ಅರ್ಥವನ್ನೂ ಹೇಳಬಲ್ಲಿರಿ” ಎಂದು ಅವರಿಗೆ ಉತ್ತರಕೊಟ್ಟನು.


“ನಿನ್ನ ದೇವರು ಸರ್ವಶ್ರೇಷ್ಠನು ಮತ್ತು ಪ್ರಬಲನು ಎನ್ನುವದು ನನಗೆ ಖಚಿತವಾಯಿತು. ಆತನು ಎಲ್ಲ ಅರಸರ ಒಡೆಯನಾಗಿದ್ದಾನೆ. ಆತನು ಜನರಿಗೆ ನಿಗೂಢವಾಗಿದ್ದ ರಹಸ್ಯವನ್ನು ತಿಳಿಸುತ್ತಾನೆ. ನೀನು ನನಗೆ ಈ ರಹಸ್ಯವನ್ನು ತಿಳಿಸಲು ಸಮರ್ಥನಾದುದರಿಂದ ಇದೆಲ್ಲ ನಿಜವೆಂದು ನಾನು ನಂಬುತ್ತೇನೆ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು