ದಾನಿಯೇಲ 3:18 - ಪರಿಶುದ್ದ ಬೈಬಲ್18 ಅರಸನೇ, ಒಂದುವೇಳೆ ದೇವರು ನಮ್ಮನ್ನು ರಕ್ಷಿಸದಿದ್ದರೂ ನಾವು ನಿನ್ನ ದೇವರುಗಳನ್ನು ಪೂಜಿಸುವುದಿಲ್ಲ. ನೀನು ನಿಲ್ಲಿಸಿದ ಬಂಗಾರದ ವಿಗ್ರಹವನ್ನು ಪೂಜಿಸುವುದಿಲ್ಲ. ಇದು ನಿನಗೆ ತಿಳಿದಿರಲಿ” ಎಂದು ಖಂಡಿತವಾಗಿ ಹೇಳಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಚಿತ್ತವಿಲ್ಲದಿದ್ದರೂ ರಾಜನೇ, ಇದು ನಿನಗೆ ತಿಳಿದಿರಲಿ, ನಾವು ನಿನ್ನ ದೇವರುಗಳನ್ನು ಆರಾಧಿಸುವುದಿಲ್ಲ, ನೀನು ನಿಲ್ಲಿಸಿದ ಬಂಗಾರದ ಪ್ರತಿಮೆಯನ್ನು ಪೂಜಿಸುವುದಿಲ್ಲ’” ಎಂದು ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಒಂದು ವೇಳೆ ಬಿಡಿಸದಿದ್ದರೂ ರಾಜರೇ, ಇದು ನಿಮಗೆ ತಿಳಿದಿರಲಿ: ನಾವು ನಿಮ್ಮ ದೇವರುಗಳಿಗೆ ಸೇವೆಮಾಡುವುದಿಲ್ಲ. ನೀವು ಸ್ಥಾಪಿಸಿರುವ ಬಂಗಾರದ ಪ್ರತಿಮೆಯನ್ನು ಆರಾಧಿಸುವುದಿಲ್ಲ,” ಎಂದು ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಚಿತ್ತವಿಲ್ಲದಿದ್ದರೂ ರಾಜನೇ, ಇದು ನಿನಗೆ ತಿಳಿದಿರಲಿ, ನಾವು ನಿನ್ನ ದೇವರುಗಳನ್ನು ಸೇವಿಸುವದಿಲ್ಲ, ನೀನು ನಿಲ್ಲಿಸಿದ ಬಂಗಾರದ ಪ್ರತಿಮೆಯನ್ನು ಪೂಜಿಸುವದಿಲ್ಲ ಎಂದುತ್ತರಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಆದರೆ ಒಂದು ವೇಳೆ ಅವರು ತಪ್ಪಿಸದಿದ್ದರೂ, ಅರಸನೇ ನಾವು ನಿನ್ನ ದೇವರುಗಳನ್ನು ಸೇವಿಸುವುದಿಲ್ಲವೆಂದೂ, ನೀನು ನಿಲ್ಲಿಸಿರುವ ಬಂಗಾರದ ಪ್ರತಿಮೆಯನ್ನು ಆರಾಧಿಸುವುದಿಲ್ಲವೆಂದೂ ನಿನಗೆ ತಿಳಿದಿರಲಿ,” ಎಂದರು. ಅಧ್ಯಾಯವನ್ನು ನೋಡಿ |
“ನೀವು ಯೆಹೋವನ ಸೇವೆಮಾಡಲು ಇಷ್ಟಪಡದಿದ್ದರೆ ಯಾರ ಸೇವೆಯನ್ನು ಮಾಡಬೇಕೆಂದಿದ್ದೀರಿ? ಈ ಹೊತ್ತೇ ಆರಿಸಿಕೊಳ್ಳಿರಿ. ನಿಮ್ಮ ಪೂರ್ವಿಕರು ಯೂಫ್ರೇಟೀಸ್ ನದಿಯ ಆಚೆ ಇದ್ದಾಗ ಪೂಜಿಸುತ್ತಿದ್ದ ದೇವರುಗಳ ಸೇವೆಮಾಡುವಿರೋ ಅಥವಾ ಈ ಪ್ರದೇಶದಲ್ಲಿದ್ದ ಅಮೋರಿಯರ ದೇವತೆಗಳ ಸೇವೆಮಾಡುವಿರೋ ಎಂಬುದನ್ನು ನೀವು ಇಂದು ನಿರ್ಧರಿಸಬೇಕು. ಆಯ್ಕೆ ನಿಮಗೆ ಬಿಟ್ಟಿದ್ದು. ಆದರೆ ನಾನು ಮತ್ತು ನನ್ನ ಕುಟುಂಬದವರು ಯೆಹೋವನನ್ನೇ ಸೇವಿಸುತ್ತೇವೆ” ಅಂದನು.
ಆಗ ನೆಬೂಕದ್ನೆಚ್ಚರನು, “ಶದ್ರಕ್, ಮೇಶಕ್, ಅಬೇದ್‌ನೆಗೋ ಇವರುಗಳ ದೇವರಿಗೆ ಸ್ತೋತ್ರವಾಗಲಿ. ಅವರ ದೇವರು ತನ್ನ ದೂತನನ್ನು ಕಳುಹಿಸಿ ತನ್ನ ಸೇವಕರನ್ನು ಬೆಂಕಿಯಿಂದ ರಕ್ಷಿಸಿದ್ದಾನೆ. ಈ ಮೂರು ಜನರು ತಮ್ಮ ದೇವರ ಮೇಲೆ ವಿಶ್ವಾಸವಿಟ್ಟರು. ಅವರು ನನ್ನ ಆಜ್ಞೆಯನ್ನು ಪಾಲಿಸಲು ಒಪ್ಪಲಿಲ್ಲ. ಬೇರೆ ಯಾವ ದೇವರನ್ನೂ ಪೂಜಿಸುವುದಕ್ಕೆ ಅಥವಾ ಸೇವಿಸುವುದಕ್ಕೆ ಬದಲಾಗಿ ಸಾಯಲು ಅವರು ಸಿದ್ಧರಾಗಿದ್ದರು.
ಎಲೀಯನು, “ಸರ್ವಶಕ್ತನಾದ ಯೆಹೋವ ದೇವರೇ, ನಾನು ಯಾವಾಗಲೂ ನಿನ್ನ ಸೇವೆಯನ್ನು ಮಾಡಿದೆನು. ನಾನು ನನ್ನಿಂದ ಸಾಧ್ಯವಾದಷ್ಟು ಉತ್ತಮವಾಗಿ ನಿನ್ನ ಸೇವೆಯನ್ನು ಮಾಡಿದೆನು. ಆದರೆ ಇಸ್ರೇಲಿನ ಜನರು ನಿನ್ನೊಂದಿಗೆ ತಾವು ಮಾಡಿಕೊಂಡ ಒಡಂಬಡಿಕೆಯನ್ನು ಉಲ್ಲಂಘಿಸಿದರು. ಅವರು ನಿನ್ನ ಯಜ್ಞವೇದಿಕೆಗಳನ್ನು ನಾಶಪಡಿಸಿದರು. ಅವರು ನಿನ್ನ ಪ್ರವಾದಿಗಳನ್ನು ಕೊಂದುಹಾಕಿದರು. ಇನ್ನೂ ಜೀವಂತವಾಗಿರುವ ಪ್ರವಾದಿಯು ನಾನೊಬ್ಬನು ಮಾತ್ರ. ಅವರು ಈಗ ನನ್ನನ್ನೂ ಕೊಲ್ಲಲು ಪ್ರಯತ್ನಿಸುತ್ತಿದ್ದಾರೆ!” ಎಂದು ಹೇಳಿದನು.