Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 3:19 - ಪರಿಶುದ್ದ ಬೈಬಲ್‌

19 ಆಗ ನೆಬೂಕದ್ನೆಚ್ಚರನಿಗೆ ಬಹಳ ಕೋಪ ಬಂತು. ಶದ್ರಕ್, ಮೇಶಕ್, ಅಬೇದ್‌ನೆಗೋ ಅವರ ವಿರುದ್ಧವಾಗಿ ಅವನ ಮುಖಭಾವವು ಕೆರಳಿತು. ಕುಲುಮೆಯನ್ನು ಏಳರಷ್ಟು ಹೆಚ್ಚಾಗಿ ಉರಿಸಬೇಕೆಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಆಗ ನೆಬೂಕದ್ನೆಚ್ಚರನು ಕೋಪೋದ್ರೇಕದಿಂದ ಮುಖಭಾವವನ್ನು ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರ ಕಡೆಗೆ ತಿರುಗಿಸಿಕೊಂಡು ಬೆಂಕಿಯನ್ನು ನಿತ್ಯಕ್ಕಿಂತ ಏಳರಷ್ಟು ಹೆಚ್ಚಾಗಿ ಉರಿಸಬೇಕು ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಆಗ ನೆಬೂಕದ್ನೆಚ್ಚರನು ಕೋಪೋದ್ರೇಕಗೊಂಡನು. ಶದ್ರಕ್, ಮೇಶಕ್ ಮತ್ತು ಅಬೇದ್‍ನೆಗೋ ಅವರ ಬಗ್ಗೆ ಅವನ ಮುಖಚರ್ಯೆ ಬದಲಾಯಿತು. ಆವಿಗೆಯನ್ನು ವಾಡಿಕೆಗಿಂತ ಏಳರಷ್ಟು ಹೆಚ್ಚಾಗಿ ಉರಿಸಬೇಕೆಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಆಗ ನೆಬೂಕದ್ನೆಚ್ಚರನು ಕೋಪೋದ್ರೇಕದಿಂದ ಮುಖಭಾವವನ್ನು ಶದ್ರಕ್ ಮೇಶಕ್ ಅಬೇದ್‍ನೆಗೋ ಎಂಬವರ ಕಡೆಗೆ ಬೇರೆಮಾಡಿಕೊಂಡು ಆವಿಗೆಯನ್ನು ನಿತ್ಯಕ್ಕಿಂತ ಏಳರಷ್ಟು ಹೆಚ್ಚಾಗಿ ಉರಿಸಬೇಕೆಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಆಗ ನೆಬೂಕದ್ನೆಚ್ಚರನು ಉಗ್ರದಿಂದ ತುಂಬಿದವನಾಗಿ, ಅವನ ಮುಖಭಾವವು ಶದ್ರಕ್, ಮೇಶಕ್, ಅಬೇದ್‌ನೆಗೋ ಎಂಬವರಿಗೆ ವಿರೋಧವಾಗಿ ಬೇರೆಯಾಯಿತು. ಆಗ ಅವನು ಆ ಕುಲುಮೆಯನ್ನು ಸಾಧಾರಣವಾದ ಉರಿಗಿಂತ ಏಳರಷ್ಟು ಹೆಚ್ಚಾಗಿ ಉರಿ ಹಾಕಬೇಕೆಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 3:19
26 ತಿಳಿವುಗಳ ಹೋಲಿಕೆ  

ನೆಬೂಕದ್ನೆಚ್ಚರನಿಗೆ ಬಹಳ ಕೋಪ ಬಂತು. ಅವನು ಶದ್ರಕ್, ಮೇಶಕ್, ಅಬೇದ್‌ನೆಗೋ ಇವರುಗಳನ್ನು ಕರೆಸಿದನು. ಅವರನ್ನು ಅರಸನ ಬಳಿಗೆ ಕರೆದುತರಲಾಯಿತು.


ಆಗ ನಾನು ಸಹ ನಿಮಗೆ ವಿರೋಧವಾಗಿ ನಡೆಯುವೆನು. ಹೌದು, ನಾನೇ ನಿಮ್ಮನ್ನು ನಿಮ್ಮ ಪಾಪಗಳಿಗಾಗಿ ಏಳರಷ್ಟಾಗಿ ದಂಡಿಸುವೆನು.


ಗರ್ವಿಷ್ಠನೂ ದುರಾಭಿಮಾನಿಯೂ ಆಗಿರುವವನಿಗೆ ಗೇಲಿಗಾರನೆಂದು ಹೆಸರು. ಅವನ ನಡತೆಯು ಗರ್ವದ ಮದದಿಂದ ಕೂಡಿರುತ್ತದೆ.


ನಾನು ನಿಜವಾಗಿ ನನ್ನ ಕೋಪವನ್ನು ತೋರಿಸುವೆನು. ಹೌದು, ನಾನೇ ನಿಮ್ಮ ಪಾಪಗಳಿಗಾಗಿ ನಿಮ್ಮನ್ನು ಏಳರಷ್ಟಾಗಿ ದಂಡಿಸುವೆನು.


ಯೆಹೂದ್ಯನಾಯಕರು ಈ ಮಾತುಗಳನ್ನು ಕೇಳಿ ಬಹು ಕೋಪಗೊಂಡು, ಅಪೊಸ್ತಲರನ್ನು ಕೊಲ್ಲಬೇಕೆಂದಿದ್ದರು.


ರಾಜನಾದ ಬೇಲ್ಶಚ್ಚರನು ಬಹಳ ಹೆದರಿದನು. ಭಯದಿಂದ ಅವನ ಮುಖವು ಕಳೆಗುಂದಿತು; ಮತ್ತು ಅವನ ಮೊಣಕಾಲುಗಳು ನಡುಗಿ ಒಂದಕ್ಕೊಂದು ಬಡಿಯುತ್ತಿದ್ದವು. ಅವನ ಕಾಲುಗಳು ತುಂಬ ಬಲಹೀನವಾಗಿ ಅವನಿಗೆ ನಿಲ್ಲಲಾಗಲಿಲ್ಲ.


ದೇವರೇ, ನೀನು ದುಷ್ಟರನ್ನು ದಂಡಿಸುವಾಗ ಜನರು ನಿನ್ನನ್ನು ಕೊಂಡಾಡುವರು; ನಿನ್ನ ಕೋಪವನ್ನು ತೋರಿಸುವಾಗ ಅಳಿದುಳಿದವರು ಬಲಿಷ್ಠರಾಗುವರು.


“ನೀವು ಇನ್ನೂ ನನಗೆ ವಿರುದ್ಧವಾಗಿ ತಿರುಗಿ ಅವಿಧೇಯರಾದರೆ, ನಾನು ಇನ್ನೂ ಏಳರಷ್ಟು ಕಠಿಣವಾಗಿ ನಿಮ್ಮನ್ನು ಬಾಧಿಸುವೆನು. ನೀವು ಹೆಚ್ಚು ಪಾಪಮಾಡಿದಂತೆಲ್ಲಾ ಹೆಚ್ಚೆಚ್ಚಾಗಿ ಶಿಕ್ಷಿಸಲ್ಪಡುವಿರಿ.


“ಇಷ್ಟಾದರೂ ನೀವು ನನಗೆ ವಿಧೇಯರಾಗದಿದ್ದರೆ ನಿಮ್ಮ ಪಾಪಗಳಿಗಾಗಿ ಇನ್ನೂ ಏಳರಷ್ಟು ನಿಮ್ಮನ್ನು ಶಿಕ್ಷಿಸುವೆನು.


ಸ್ತೆಫನನ ಈ ಮಾತುಗಳನ್ನು ಕೇಳಿದ ಆ ಯೆಹೂದ್ಯನಾಯಕರು ಬಹಳ ಕೋಪಗೊಂಡರು. ಅವರು ರೋಷದಿಂದ ಸ್ತೆಫನನ ಮೇಲೆ ಹಲ್ಲು ಕಡಿದರು.


ಆಗ ರಾಜನು ದಾನಿಯೇಲನ ಮೇಲೆ ದೋಷಾರೋಪಣೆಯನ್ನು ಮಾಡಿದ ಜನರನ್ನು ಸಿಂಹಗಳ ಗುಹೆಗೆ ಕರೆತರಬೇಕೆಂದು ಆಜ್ಞಾಪಿಸಿದನು. ಆ ಜನರನ್ನೂ ಅವರ ಹೆಂಡತಿಮಕ್ಕಳನ್ನೂ ಸಹಿತವಾಗಿ ಸಿಂಹಗಳ ಗುಹೆಯಲ್ಲಿ ಎಸೆಯಲಾಯಿತು. ಅವರು ಗುಹೆಯ ನೆಲಕ್ಕೆ ಮುಟ್ಟುವ ಮೊದಲೇ ಸಿಂಹಗಳು ಅವರನ್ನು ಎಳೆದುಕೊಂಡವು. ಸಿಂಹಗಳು ಅವರ ದೇಹಗಳನ್ನು ತಿಂದು ಎಲುಬುಗಳನ್ನು ಅಗಿದುಹಾಕಿದವು.


ಈಗ ನನ್ನ ಕೋಪದ ದೆಸೆಯಿಂದ ನಿನಗೆ ಹಾನಿ ಮಾಡಿದವರನ್ನು ಶಿಕ್ಷಿಸುವೆನು. ಅವರು ನಿನ್ನನ್ನು ಕೊಲ್ಲಲು ಪ್ರಯತ್ನಿಸಿದರು. ‘ನಮ್ಮ ಮುಂದೆ ಸಾಷ್ಟಾಂಗಬೀಳು. ಆಗ ನಿನ್ನ ಮೇಲೆ ನಾವು ನಡೆಯುವೆವು’ ಎಂದು ಹೇಳಿದರು. ಅವರಿಗೆ ಅಡ್ಡಬೀಳಲು ನಿನ್ನನ್ನು ಬಲಾತ್ಕರಿಸಿದರು. ಆ ಬಳಿಕ ಅವರು ನೀನು ಮಣ್ಣಿನ ಧೂಳೋ ಎಂಬಂತೆ ನಿನ್ನ ಬೆನ್ನಿನ ಮೇಲೆ ನಡೆದಾಡಿದರು. ನೀನು ಅವರಿಗೆ ನಡೆಯಲು ಬೀದಿಯಾದಿ.”


ರಾಜನು ಕೋಪದಿಂದಿರುವಾಗ ಯಾರನ್ನಾದರೂ ಕೊಂದರೂ ಕೊಲ್ಲಬಹುದು. ಆದರೆ ಜ್ಞಾನಿಯು ಆತನ ಕೋಪವನ್ನು ಶಮನಗೊಳಿಸಬಲ್ಲನು.


ಅರಸನು ಕೋಪೋದ್ರಿಕ್ತನಾಗಿ, ಪಾನಪಾತ್ರೆಯನ್ನು ಅಲ್ಲಿಯೇ ಬಿಟ್ಟು ಎದ್ದು ಹೂತೋಟಕ್ಕೆ ಹೋದನು. ಹಾಮಾನನು ಕೋಣೆಯಲ್ಲಿಯೇ ಉಳಿದು ತನ್ನ ಪ್ರಾಣವನ್ನು ಉಳಿಸಬೇಕೆಂದು ಎಸ್ತೇರ್ ರಾಣಿಯನ್ನು ಬೇಡುತ್ತಿದ್ದನು. ಯಾಕೆಂದರೆ ರಾಜನು ತನ್ನನ್ನು ಕೊಲ್ಲಲು ತೀರ್ಮಾನಿಸಿರುವುದು ಅವನಿಗೆ ಅರಿವಾಯಿತು.


ಲಾಬಾನನು ಮೊದಲಿನಂತೆ ಸ್ನೇಹದಿಂದ ಇಲ್ಲದಿರುವುದನ್ನು ಸಹ ಯಾಕೋಬನು ಗಮನಿಸಿದನು.


ಇದನ್ನು ಕೇಳಿ ಅರಸನು ಬಹಳ ಕೋಪಗೊಂಡು ಬಾಬಿಲೋನಿನ ಎಲ್ಲಾ ವಿದ್ವಾಂಸರನ್ನು ಕೊಲ್ಲಬೇಕೆಂದು ಆಜ್ಞಾಪಿಸಿದನು.


ಆಮೇಲೆ ನೆಬೂಕದ್ನೆಚ್ಚರನು, ಶದ್ರಕ್, ಮೇಶಕ್, ಅಬೇದ್‌ನೆಗೋ ಇವರುಗಳನ್ನು ಬಂಧಿಸಿ ಉರಿಯುವ ಕೊಂಡದಲ್ಲಿ ಎಸೆಯಬೇಕೆಂದು ತನ್ನ ಸೈನ್ಯದಲ್ಲಿದ್ದ ಅತಿ ಬಲಶಾಲಿಗಳಾದ ಕೆಲವರಿಗೆ ಆಜ್ಞಾಪಿಸಿದನು.


ಮೊರ್ದೆಕೈ ತನಗೆ ಅಡ್ಡಬೀಳದಿರುವುದರಿಂದ ಮತ್ತು ಗೌರವಿಸದಿರುವುದರಿಂದ ಹಾಮಾನನು ಬಹಳ ಕೋಪಗೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು