ದಾನಿಯೇಲ 3:2 - ಪರಿಶುದ್ದ ಬೈಬಲ್2 ಅರಸನು ಆ ವಿಗ್ರಹದ ಪ್ರತಿಷ್ಠಾಪನೆಯ ಮಹೋತ್ಸವಕ್ಕೆ ಉಪರಾಜರನ್ನು, ನಾಯಕರನ್ನು, ದೇಶಾಧಿಪತಿಗಳನ್ನು, ಮಂತ್ರಿಗಳನ್ನು, ಕೋಶಾಧ್ಯಕ್ಷರನ್ನು, ನ್ಯಾಯಾಧಿಪತಿಗಳನ್ನು ಮತ್ತು ಉಳಿದೆಲ್ಲ ಅಧಿಕಾರಿಗಳನ್ನು ಕರೆಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಆಗ ರಾಜನಾದ ನೆಬೂಕದ್ನೆಚ್ಚರನು ತಾನು ನಿಲ್ಲಿಸಿದ ಪ್ರತಿಮೆಯ ಪ್ರತಿಷ್ಠೋತ್ಸವಕ್ಕೆ ಉಪರಾಜ, ನಾಯಕ, ದೇಶಾಧಿಪತಿ, ಮಂತ್ರಿ, ಕೋಶಾಧ್ಯಕ್ಷ, ನ್ಯಾಯಾಧಿಪತಿ, ವಿಚಾರಕ ಮುಂತಾದವರನ್ನೂ, ಸಮಸ್ತ ಸಂಸ್ಥಾನಾಧಿಕಾರಿಗಳನ್ನೂ ಒಟ್ಟುಗೂಡಿಸುವಂತೆ ಸಮಾಚಾರವನ್ನು ಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಬಳಿಕ ರಾಜ ನೆಬೂಕದ್ನೆಚ್ಚರನು ತಾನು ನಿಲ್ಲಿಸಿದ್ದ ಆ ಪ್ರತಿಮೆಯ ಪ್ರತಿಷ್ಠಾಪನಾ ಸಮಾರಂಭವನ್ನು ಏರ್ಪಡಿಸಿ, ಉಪರಾಜ, ನಾಯಕ, ದೇಶಾಧಿಪತಿ, ಮಂತ್ರಿ, ಕೋಶಾಧ್ಯಕ್ಷ, ನ್ಯಾಯಾಧಿಪತಿ, ವಿಚಾರಕ ಇವರನ್ನೂ, ಸಮಸ್ತ ಸಂಸ್ಥಾನಾಧಿಕಾರಿಗಳನ್ನೂ ಸಭೆ ಸೇರಿಸುವಂತೆ ದೂತರನ್ನು ಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಆಗ ರಾಜನಾದ ನೆಬೂಕದ್ನೆಚ್ಚರನು ತಾನು ನಿಲ್ಲಿಸಿದ ಪ್ರತಿಮೆಯ ಪ್ರತಿಷ್ಠೋತ್ಸವಕ್ಕೆ ಉಪರಾಜ, ನಾಯಕ, ದೇಶಾಧಿಪತಿ, ಮಂತ್ರಿ, ಕೋಶಾಧ್ಯಕ್ಷ, ನ್ಯಾಯಾಧಿಪತಿ, ವಿಚಾರಕ ಇವರನ್ನೂ ಸಮಸ್ತ ಸಂಸ್ಥಾನಾಧಿಕಾರಿಗಳನ್ನೂ ಒಟ್ಟುಗೂಡಿಸುವಂತೆ ದೂತರನ್ನು ಕಳುಹಿಸಲು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಆಮೇಲೆ ನೆಬೂಕದ್ನೆಚ್ಚರನು ಉಪರಾಜರನ್ನೂ ರಾಜ್ಯಪಾಲರನ್ನೂ ಅಧಿಕಾರಸ್ಥರನ್ನೂ ನ್ಯಾಯಾಧಿಪತಿಗಳನ್ನೂ ಖಜಾಂಚಿದವರನ್ನೂ ಮತ್ತು ಸಲಹೆಗಾರರನ್ನೂ ಪಂಡಿತರನ್ನೂ ಎಲ್ಲಾ ಪ್ರಾಂತಗಳ ಅಧಿಕಾರಿಗಳನ್ನೂ ತಾನು ನಿಲ್ಲಿಸಿದ ಪ್ರತಿಮೆಯ ಪ್ರತಿಷ್ಠಾಪನಾ ಸಮಾರಂಭಕ್ಕೆ ಕರೆಯಿಸಿದನು. ಅಧ್ಯಾಯವನ್ನು ನೋಡಿ |
ರಾಜನಾದ ಯಾರೊಬ್ಬಾಮನು ಹೊಸಹಬ್ಬದ ದಿನವನ್ನು ಆರಂಭಿಸಿದನು. ಈ ಹಬ್ಬವು ಯೆಹೂದ್ಯರ ಪಸ್ಕಹಬ್ಬದಂತಿತ್ತು. ಆದರೆ ಈ ಹಬ್ಬವು ಎಂಟನೆಯ ತಿಂಗಳ ಹದಿನೈದನೆಯ ದಿವಸವಾಗಿತ್ತು. ಆ ಸಂದರ್ಭದಲ್ಲಿ ರಾಜನು ಬೇತೇಲ್ ನಗರದಲ್ಲಿ ಯಜ್ಞವೇದಿಕೆಯ ಮೇಲೆ ಯಜ್ಞಗಳನ್ನು ಅರ್ಪಿಸಿದನು. ಅವನು ತಾನೇ ನಿರ್ಮಿಸಿದ ಕರುಗಳಿಗೆ ಯಜ್ಞಗಳನ್ನು ಅರ್ಪಿಸಿದನು. ರಾಜನಾದ ಯಾರೊಬ್ಬಾಮನು ತಾನು ನಿರ್ಮಿಸಿದ ಎತ್ತರದ ಸ್ಥಳಗಳಲ್ಲಿ ಸೇವೆಮಾಡಲು ಯಾಜಕರನ್ನು ಬೇತೇಲ್‌ನಲ್ಲಿಯೇ ಆರಿಸಿಕೊಂಡನು.