Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 3:20 - ಪರಿಶುದ್ದ ಬೈಬಲ್‌

20 ಆಮೇಲೆ ನೆಬೂಕದ್ನೆಚ್ಚರನು, ಶದ್ರಕ್, ಮೇಶಕ್, ಅಬೇದ್‌ನೆಗೋ ಇವರುಗಳನ್ನು ಬಂಧಿಸಿ ಉರಿಯುವ ಕೊಂಡದಲ್ಲಿ ಎಸೆಯಬೇಕೆಂದು ತನ್ನ ಸೈನ್ಯದಲ್ಲಿದ್ದ ಅತಿ ಬಲಶಾಲಿಗಳಾದ ಕೆಲವರಿಗೆ ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಇದಲ್ಲದೆ ತನ್ನ ಸೈನ್ಯದ ಕೆಲವು ಮಂದಿ ಶೂರರಿಗೆ ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರನ್ನು ಕಟ್ಟಿ ಧಗಧಗನೆ ಉರಿಯುವ ಬೆಂಕಿಯೊಳಗೆ ಎತ್ತಿಹಾಕಬೇಕೆಂದು ಅಪ್ಪಣೆಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಇದಲ್ಲದೆ ತನ್ನ ಸೈನ್ಯದ ಕೆಲವುಮಂದಿ ಶೂರರಿಗೆ ಶದ್ರಕ್, ಮೇಶಕ್, ಅಬೇದ್‍ನೆಗೋ ಅವರನ್ನು ಕಟ್ಟಿ ಧಗಧಗನೆ ಉರಿಯುವ ಆವಿಗೆಯೊಳಗೆ ಎತ್ತಿಹಾಕಬೇಕೆಂದು ಅಪ್ಪಣೆಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಇದಲ್ಲದೆ ತನ್ನ ಸೈನ್ಯದ ಕೆಲವು ಮಂದಿ ಶೂರರಿಗೆ ಶದ್ರಕ್ ಮೇಶಕ್ ಅಬೇದ್‍ನೆಗೋ ಎಂಬವರನ್ನು ಕಟ್ಟಿ ಧಗಧಗನೆ ಉರಿಯುವ ಆವಿಗೆಯೊಳಗೆ ಎತ್ತಿಹಾಕಬೇಕೆಂದು ಅಪ್ಪಣೆಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಇದಲ್ಲದೆ ತನ್ನ ಸೈನ್ಯದಲ್ಲಿರುವ ಅತ್ಯಂತ ಬಲಿಷ್ಠರಾದವರಿಗೆ ಶದ್ರಕ್, ಮೇಶಕ್, ಅಬೇದ್‌ನೆಗೋ ಎಂಬವರನ್ನು ಕಟ್ಟಿ, ಉರಿಯುವ ಬೆಂಕಿಯ ಕುಲುಮೆಯಲ್ಲಿ ಹಾಕಬೇಕೆಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 3:20
7 ತಿಳಿವುಗಳ ಹೋಲಿಕೆ  

ಸುಮಾರು ಮಧ್ಯರಾತ್ರಿಯಲ್ಲಿ ಪೌಲ ಸೀಲರು ಪ್ರಾರ್ಥನೆ ಮಾಡುತ್ತಾ ದೇವರಿಗೆ ಸ್ತುತಿಗೀತೆಗಳನ್ನು ಹಾಡುತ್ತಾ ಇದ್ದರು. ಇತರ ಕೈದಿಗಳೆಲ್ಲರೂ ಆಲಿಸುತ್ತಿದ್ದರು.


ಬಳಿಕ ಸೆರೆಮನೆಯ ಅಧಿಕಾರಿಗೆ, “ಅವರನ್ನು ಬಹು ಎಚ್ಚರಿಕೆಯಿಂದ ಕಾಯಿರಿ!” ಎಂದು ಆಜ್ಞಾಪಿಸಿದರು.


ಈಗಲಾದರೋ ತುತ್ತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ, ವಾಲಗ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ನೀವು ಅಡ್ಡಬಿದ್ದು ಚಿನ್ನದ ವಿಗ್ರಹವನ್ನು ಪೂಜಿಸಬೇಕು. ನಾನು ಮಾಡಿಸಿದ ಈ ವಿಗ್ರಹವನ್ನು ಪೂಜಿಸಲು ನೀವು ಸಿದ್ಧರಾಗಿದ್ದರೆ ಸರಿ. ನೀವು ಅದನ್ನು ಪೂಜಿಸದಿದ್ದರೆ ತಕ್ಷಣ ನಿಮ್ಮನ್ನು ಉರಿಯುವ ಕೊಂಡದಲ್ಲಿ ಎಸೆಯಲಾಗುವುದು. ಆಗ ನನ್ನ ಕೈಯಿಂದ ನಿಮ್ಮನ್ನು ಬಿಡಿಸುವುದು ಯಾವ ದೇವರಿಗೂ ಸಾಧ್ಯವಾಗಲಾರದು” ಎಂದು ಹೇಳಿದನು.


ಅಶ್ಪೆನಜನು ಆ ಯೆಹೂದ್ಯ ತರುಣರಿಗೆ ಬಾಬಿಲೋನಿನ ಹೆಸರುಗಳನ್ನಿಟ್ಟನು. ದಾನಿಯೇಲನ ಹೊಸ ಹೆಸರು ಬೇಲ್ತೆಶಚ್ಚರ್, ಹನನ್ಯನ ಹೊಸ ಹೆಸರು ಶದ್ರಕ್, ಮೀಶಾಯೇಲನ ಹೊಸ ಹೆಸರು ಮೇಶಕ್ ಮತ್ತು ಅಜರ್ಯನ ಹೊಸ ಹೆಸರು ಅಬೇದ್‌ನೆಗೋ.


ಆಗ ನೆಬೂಕದ್ನೆಚ್ಚರನಿಗೆ ಬಹಳ ಕೋಪ ಬಂತು. ಶದ್ರಕ್, ಮೇಶಕ್, ಅಬೇದ್‌ನೆಗೋ ಅವರ ವಿರುದ್ಧವಾಗಿ ಅವನ ಮುಖಭಾವವು ಕೆರಳಿತು. ಕುಲುಮೆಯನ್ನು ಏಳರಷ್ಟು ಹೆಚ್ಚಾಗಿ ಉರಿಸಬೇಕೆಂದು ಆಜ್ಞಾಪಿಸಿದನು.


ಅವರು ಶದ್ರಕ್, ಮೇಶಕ್, ಅಬೇದ್‌ನೆಗೋ ಎಂಬವರನ್ನು ಚೆನ್ನಾಗಿ ಬಿಗಿದುಕಟ್ಟಿ ಉರಿಯುವ ಕೊಂಡದಲ್ಲಿ ಎಸೆದರು. ಅವರು ತಮ್ಮ ಶಲ್ಯ, ಇಜಾರು, ಟೊಪ್ಪಿಗೆ ಮೊದಲಾದ ಉಡುಪನ್ನು ಧರಿಸಿಕೊಂಡಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು