Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 3:23 - ಪರಿಶುದ್ದ ಬೈಬಲ್‌

23 ಶದ್ರಕ್, ಮೇಶಕ್, ಅಬೇದ್‌ನೆಗೋ ಈ ಮೂವರು ಕಟ್ಟಲ್ಪಟ್ಟವರಾಗಿ ಧಗಧಗನೆ ಉರಿಯುವ ಬೆಂಕಿಯಲ್ಲಿ ಬಿದ್ದುಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಶದ್ರಕ್, ಮೇಶಕ್, ಅಬೇದ್ನೆಗೋ ಈ ಮೂವರು ಕಟ್ಟಲ್ಪಟ್ಟವರಾಗಿ ಧಗಧಗನೆ ಉರಿಯುವ ಬೆಂಕಿಯ ಮಧ್ಯದಲ್ಲಿ ಬಿದ್ದುಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಅತ್ತ ಶದ್ರಕ್, ಮೇಶಕ್, ಅಬೇದ್‍ನೆಗೋ ಈ ಮೂವರು ಕಟ್ಟಿನೊಂದಿಗೆ ಧಗಧಗನೆ ಉರಿಯುವ ಆವಿಗೆಯ ನಡುವೆ ಬಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಶದ್ರಕ್ ಮೇಶಕ್ ಅಬೇದ್‍ನೆಗೋ ಈ ಮೂವರು ಕಟ್ಟಲ್ಪಟ್ಟವರಾಗಿ ಧಗಧಗನೆ ಉರಿಯುವ ಆವಿಗೆಯ ಮಧ್ಯದಲ್ಲಿ ಬಿದ್ದುಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಶದ್ರಕ್, ಮೇಶಕ್, ಅಬೇದ್‌ನೆಗೋ ಈ ಮೂವರು ಕಟ್ಟಿನೊಂದಿಗೆ ಧಗಧಗನೆ ಉರಿಯುವ ಬೆಂಕಿಯ ಕುಲುಮೆಯ ನಡುವೆ ಬಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 3:23
13 ತಿಳಿವುಗಳ ಹೋಲಿಕೆ  

ಆಗ ಆ ಅಧಿಕಾರಿಗಳು ಯೆರೆಮೀಯನನ್ನು ಹಿಡಿದು ಮಲ್ಕೀಯನ ಬಾವಿಯೊಳಗೆ ಹಾಕಿದರು. (ಮಲ್ಕೀಯನು ರಾಜವಂಶದವನಾಗಿದ್ದನು.) ಆ ಬಾವಿಯು ಕಾರಾಗೃಹದ ಅಂಗಳದಲ್ಲಿತ್ತು. ಆ ಅಧಿಕಾರಿಗಳು ಹಗ್ಗಗಳನ್ನು ಕಟ್ಟಿ ಯೆರೆಮೀಯನನ್ನು ಬಾವಿಯಲ್ಲಿ ಇಳಿಬಿಟ್ಟರು. ಆ ಬಾವಿಯಲ್ಲಿ ಸ್ವಲ್ಪವೂ ನೀರಿರಲಿಲ್ಲ. ಕೇವಲ ಕೇಸರಿತ್ತು. ಯೆರೆಮೀಯನು ಕೆಸರಿನಲ್ಲಿ ಮುಳುಗಿಹೋದನು.


ನೀತಿವಂತರಿಗೆ ಅನೇಕ ಕಷ್ಟಗಳು ಬಂದರೂ ಯೆಹೋವನು ಅವೆಲ್ಲವುಗಳಿಂದ ಬಿಡಿಸುವನು.


ಸ್ವಲ್ಪಕಾಲದವರೆಗೆ ನಮಗೆ ಚಿಕ್ಕಪುಟ್ಟ ಇಕ್ಕಟ್ಟುಗಳಿರುತ್ತವೆ. ಆದರೆ ನಿತ್ಯವಾದ ಮಹಿಮೆಯನ್ನು ಹೊಂದಿಕೊಳ್ಳಲು ಅವು ನಮಗೆ ಸಹಾಯಕವಾಗಿವೆ. ಆ ಮಹಿಮೆಯು ಇಂದಿನ ಇಕ್ಕಟ್ಟುಗಳಿಗಿಂತಲೂ ಮಹತ್ವವುಳ್ಳದ್ದಾಗಿದೆ.


ಕೆಲವರು ಉರಿಯುವ ಬೆಂಕಿಯನ್ನು ನಂದಿಸಿದರು; ಇನ್ನು ಕೆಲವರು ಕತ್ತಿಗಳ ಬಾಯಿಂದ ಪಾರಾದರು; ದುರ್ಬಲರಾಗಿದ್ದವರು ತಮ್ಮ ನಂಬಿಕೆಯಿಂದ ಪ್ರಬಲರಾದರು; ಯುದ್ಧದಲ್ಲಿ ಶಕ್ತಿಶಾಲಿಗಳಾಗಿ ಶತ್ರುಗಳನ್ನು ಸೋಲಿಸಿದರು.


ನಿನ್ನ ಕಷ್ಟಕಾಲದಲ್ಲಿ ನಾನು ನಿನ್ನೊಂದಿಗಿರುವೆನು. ನೀನು ಜಲರಾಶಿಯನ್ನು ಹಾದುಹೋಗುವಾಗ ನಾನೇ ನಿನ್ನೊಂದಿಗಿರುವೆ. ನೀನು ನದಿಗಳನ್ನು ದಾಟುವಾಗ ಅಪಾಯಕ್ಕೆ ಗುರಿಯಾಗದಿರುವೆ. ಬೆಂಕಿಯೊಳಗಿಂದ ನಡೆಯುವಾಗ ನಿನಗೆ ಹಾನಿಯಾಗದು.


ಅಶ್ಪೆನಜನು ಆ ಯೆಹೂದ್ಯ ತರುಣರಿಗೆ ಬಾಬಿಲೋನಿನ ಹೆಸರುಗಳನ್ನಿಟ್ಟನು. ದಾನಿಯೇಲನ ಹೊಸ ಹೆಸರು ಬೇಲ್ತೆಶಚ್ಚರ್, ಹನನ್ಯನ ಹೊಸ ಹೆಸರು ಶದ್ರಕ್, ಮೀಶಾಯೇಲನ ಹೊಸ ಹೆಸರು ಮೇಶಕ್ ಮತ್ತು ಅಜರ್ಯನ ಹೊಸ ಹೆಸರು ಅಬೇದ್‌ನೆಗೋ.


ಅರಸನಾದ ನೆಬೂಕದ್ನೆಚ್ಚರನು ಬೆಚ್ಚಿ ತಟ್ಟನೆ ಎದ್ದುನಿಂತನು. ಅವನು ಆಶ್ಚರ್ಯಚಕಿತನಾಗಿ ತನ್ನ ಮಂತ್ರಿಗಳನ್ನು, “ನಾವು ಕೇವಲ ಮೂರು ಜನರನ್ನು ಕಟ್ಟಿದೆವು, ಕೇವಲ ಮೂರು ಜನರನ್ನು ಬೆಂಕಿಯಲ್ಲಿ ಎಸೆದೆವು. ಹೌದಲ್ಲವೇ?” ಎಂದು ಕೇಳಿದನು. ಅವನ ಮಂತ್ರಿಗಳು, “ಹೌದು, ಮಹಾರಾಜನೇ” ಎಂದು ಉತ್ತರಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು