ದಾನಿಯೇಲ 3:25 - ಪರಿಶುದ್ದ ಬೈಬಲ್25 ಆಗ ಅರಸನು, “ನೋಡಿರಿ, ನಾಲ್ಕು ಜನರು ಬೆಂಕಿಯಲ್ಲಿ ತಿರುಗಾಡುತ್ತಿರುವುದು ನನಗೆ ಕಾಣುತ್ತಿದೆ. ಅವರು ಕಟ್ಟಲ್ಪಟ್ಟಿಲ್ಲ. ಅವರನ್ನು ಬೆಂಕಿಯು ಸುಟ್ಟಿಲ್ಲ. ನಾಲ್ಕನೆಯವನು ದೇವಕುಮಾರನಂತೆ ಕಾಣುತ್ತಾನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಅದಕ್ಕೆ ಅವನು, “ಇಗೋ, ಕಟ್ಟಿಲ್ಲದ ನಾಲ್ವರನ್ನು ನೋಡುತ್ತೇನೆ, ಬೆಂಕಿಯಲ್ಲಿ ತಿರುಗಾಡುತ್ತಿದ್ದಾರೆ, ಅವರಿಗೆ ಯಾವ ಹಾನಿಯೂ ಇಲ್ಲ; ನಾಲ್ಕನೆಯವನ ರೂಪವು ದೇವಕುಮಾರನ ರೂಪದಂತಿದೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಅದಕ್ಕೆ ಅವರು, “ಆದರೆ, ಇಗೋ ಕಟ್ಟಿಲ್ಲದ ನಾಲ್ವರನ್ನು ನಾನು ನೋಡುತ್ತಿದ್ದೇನೆ. ಬೆಂಕಿಯಲ್ಲಿ ತಿರುಗಾಡುತ್ತಿದ್ದಾರೆ; ಅವರಿಗೆ ಯಾವ ಹಾನಿಯೂ ಆಗುತ್ತಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಅದಕ್ಕೆ ಅವನು - ಇಗೋ, ಕಟ್ಟಿಲ್ಲದ ನಾಲ್ವರನ್ನು ನೋಡುತ್ತೇನೆ, ಬೆಂಕಿಯಲ್ಲಿ ತಿರುಗಾಡುತ್ತಿದ್ದಾರೆ, ಅವರಿಗೆ ಯಾವ ಹಾನಿಯೂ ಇಲ್ಲ; ನಾಲ್ಕನೆಯವನ ರೂಪವು ದೇವಕುಮಾರನ ರೂಪದಂತಿದೆ ಎಂದು ಹೇಳಿ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಅರಸನು ಅವರಿಗೆ ಉತ್ತರವಾಗಿ, “ಇಗೋ, ಕಟ್ಟಿಲ್ಲದ ನಾಲ್ಕು ಮನುಷ್ಯರು ಬೆಂಕಿಯಲ್ಲಿ ನಡೆಯುತ್ತಿರುವುದನ್ನು ನೋಡುತ್ತೇನೆ. ಅವರಿಗೆ ಯಾವ ಹಾನಿಯೂ ಇಲ್ಲ. ಅಲ್ಲದೆ ನಾಲ್ಕನೆಯವರ ರೂಪವು ದೇವಪುತ್ರನ ಹಾಗಿದೆ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |
ಆಗ ನೆಬೂಕದ್ನೆಚ್ಚರನು, “ಶದ್ರಕ್, ಮೇಶಕ್, ಅಬೇದ್‌ನೆಗೋ ಇವರುಗಳ ದೇವರಿಗೆ ಸ್ತೋತ್ರವಾಗಲಿ. ಅವರ ದೇವರು ತನ್ನ ದೂತನನ್ನು ಕಳುಹಿಸಿ ತನ್ನ ಸೇವಕರನ್ನು ಬೆಂಕಿಯಿಂದ ರಕ್ಷಿಸಿದ್ದಾನೆ. ಈ ಮೂರು ಜನರು ತಮ್ಮ ದೇವರ ಮೇಲೆ ವಿಶ್ವಾಸವಿಟ್ಟರು. ಅವರು ನನ್ನ ಆಜ್ಞೆಯನ್ನು ಪಾಲಿಸಲು ಒಪ್ಪಲಿಲ್ಲ. ಬೇರೆ ಯಾವ ದೇವರನ್ನೂ ಪೂಜಿಸುವುದಕ್ಕೆ ಅಥವಾ ಸೇವಿಸುವುದಕ್ಕೆ ಬದಲಾಗಿ ಸಾಯಲು ಅವರು ಸಿದ್ಧರಾಗಿದ್ದರು.