Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 3:26 - ಪರಿಶುದ್ದ ಬೈಬಲ್‌

26 ಆಗ ನೆಬೂಕದ್ನೆಚ್ಚರನು ಉರಿಯುವ ಕೊಂಡದ ಬಾಯಿಯ ಬಳಿಗೆ ಹೋಗಿ, “ಮಹೋನ್ನತನಾದ ದೇವರ ಸೇವಕರಾದ ಶದ್ರಕ್, ಮೇಶಕ್, ಅಬೆದ್‌ನೆಗೋ ಎಂಬವರೇ ಬನ್ನಿ, ಹೊರಗೆ ಬನ್ನಿ” ಎಂದು ಕೂಗಿದನು. ಶದ್ರಕ್, ಮೇಶಕ್, ಅಬೇದ್‌ನೆಗೋ ಈ ಮೂವರು ಬೆಂಕಿಯೊಳಗಿಂದ ಹೊರಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಆಗ ನೆಬೂಕದ್ನೆಚ್ಚರನು ಧಗಧಗನೆ ಉರಿಯುವ ಬೆಂಕಿಯ ಬಾಯಿಯ ಬಳಿಗೆ ಹೋಗಿ, “ಪರಾತ್ಪರದೇವರ ಸೇವಕರಾದ ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರೇ ಬನ್ನಿ, ಹೊರಗೆ ಬನ್ನಿ ಎಂದು ಕೂಗಲು, ಶದ್ರಕ್ ಮೇಶಕ್ ಅಬೇದ್ನೆಗೋ ಎಂಬುವವರು ಬೆಂಕಿಯೊಳಗಿಂದ ಹೊರಟು ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ನಾಲ್ಕನೆಯವನ ರೂಪ ದೇವಪುತ್ರನ ರೂಪದಂತಿದೆ!” ಎಂದು ಹೇಳಿ ಧಗಧಗನೆ ಉರಿಯುತ್ತಿದ್ದ ಆವಿಗೆಯ ಬಾಯಿಯ ಬಳಿಗೆಹೋಗಿ, “ಪರಾತ್ಪರ ದೇವರ ದಾಸರಾದ ಶದ್ರಕ್, ಮೇಶಕ್ ಮತ್ತು ಅಬೇದ್‍ನೆಗೋ ಎಂಬುವರೇ, ಬನ್ನಿ, ಹೊರಗೆ ಬನ್ನಿ,” ಎಂದು ಕೂಗಿಕೊಂಡನು. ಅಂತೆಯೇ ಶದ್ರಕ್, ಮೇಶಕ್ ಹಾಗು ಅಬೇದ್‍ನೆಗೋ ಅವರು ಬೆಂಕಿಯಿಂದ ಹೊರಟುಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಧಗಧಗನೆ ಉರಿಯುವ ಆವಿಗೆಯ ಬಾಯಿಯ ಬಳಿಗೆ ಹೋಗಿ - ಪರಾತ್ಪರದೇವರ ಸೇವಕರಾದ ಶದ್ರಕ್ ಮೇಶಕ್ ಅಬೇದ್‍ನೆಗೋ ಎಂಬವರೇ ಬನ್ನಿ, ಹೊರಗೆ ಬನ್ನಿ, ಎಂದು ಕೂಗಲು ಶದ್ರಕ್ ಮೇಶಕ್ ಅಬೇದ್‍ನೆಗೋ ಎಂಬವರು ಬೆಂಕಿಯೊಳಗಿಂದ ಹೊರಟು ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಆಗ ನೆಬೂಕದ್ನೆಚ್ಚರನು ಧಗಧಗನೆ ಉರಿಯುತ್ತಿರುವ ಬೆಂಕಿಯ ಕುಲುಮೆಯ ಬಾಯಿಯ ಸಮೀಪಕ್ಕೆ ಬಂದು, “ಶದ್ರಕ್, ಮೇಶಕ್, ಅಬೇದ್‌ನೆಗೋ ಎಂಬವರೇ, ಮಹೋನ್ನತ ದೇವರ ಸೇವಕರೇ, ಹೊರಗೆ ಬನ್ನಿರಿ,” ಎಂದನು. ಶದ್ರಕ್, ಮೇಶಕ್, ಅಬೇದ್‌ನೆಗೋ ಎಂಬವರು ಬೆಂಕಿಯೊಳಗಿಂದ ಹೊರಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 3:26
22 ತಿಳಿವುಗಳ ಹೋಲಿಕೆ  

ನೀನು ನಮ್ಮನ್ನು ಉರಿಯುವ ಕೊಂಡದಲ್ಲಿ ಎಸೆದರೆ ನಾವು ಆರಾಧಿಸುವ ದೇವರು ನಮ್ಮನ್ನು ರಕ್ಷಿಸಬಲ್ಲನು. ಆತನು ಇಚ್ಛಿಸಿದರೆ ನಮ್ಮನ್ನು ನಿನ್ನ ಕೈಯಿಂದ ಬಿಡಿಸಬಲ್ಲನು.


ಮಹೋನ್ನತನಾದ ದೇವರು ನನಗೋಸ್ಕರ ಮಾಡಿದ ಸೂಚಕಕಾರ್ಯಗಳನ್ನು ಮತ್ತು ಅದ್ಭುತಕಾರ್ಯಗಳನ್ನು ನಿಮಗೆ ತಿಳಿಸಲು ನನಗೆ ಬಹಳ ಸಂತೋಷವಾಗುತ್ತದೆ.


ಆಗ ಸಿಂಹಾಸನದಿಂದ ಒಂದು ಧ್ವನಿಯು ಬಂದಿತು. ಆ ಧ್ವನಿಯು, “ನಮ್ಮ ದೇವರ ಸೇವೆ ಮಾಡುವ ಜನರೆಲ್ಲರೇ, ಆತನಿಗೆ ಸ್ತೋತ್ರ ಮಾಡಿರಿ! ನಮ್ಮ ದೇವರಿಗೆ ಗೌರವ ನೀಡುವ ಚಿಕ್ಕವರೇ, ದೊಡ್ಡವರೇ, ಆತನಿಗೆ ಸ್ತೋತ್ರ ಮಾಡಿರಿ!” ಎಂದು ಹೇಳಿತು.


ಮನುಷ್ಯರು ನನ್ನನ್ನು ಸ್ವೀಕರಿಸಿಕೊಳ್ಳುವಂತೆ ಮಾಡುವುದಕ್ಕಾಗಿ ನಾನು ಪ್ರಯತ್ನಿಸುತ್ತಿದ್ದೇನೆಂದು ನೀವು ಭಾವಿಸುತ್ತೀರೋ? ಇಲ್ಲ! ನಾನು ದೇವರನ್ನೇ ಮೆಚ್ಚಿಸಲು ಪ್ರಯತ್ನಿಸುತ್ತಿದ್ದೇನೆ. ಮನುಷ್ಯರನ್ನು ಮೆಚ್ಚಿಸುವುದಕ್ಕಾಗಿ ನಾನು ಪ್ರಯತ್ನಿಸುತ್ತಿದ್ದೇನೋ? ನಾನು ಮನುಷ್ಯರನ್ನು ಮೆಚ್ಚಿಸಬೇಕೆಂದಿದ್ದರೆ ಯೇಸು ಕ್ರಿಸ್ತನ ಸೇವಕನಾಗುತ್ತಿರಲಿಲ್ಲ.


ಅವಳು ಪೌಲನನ್ನು ಮತ್ತು ನಮ್ಮನ್ನು ಹಿಂಬಾಲಿಸುತ್ತಾ, “ಈ ಜನರು ಮಹೋನ್ನತನಾದ ದೇವರ ಸೇವಕರು! ನೀವು ಹೇಗೆ ರಕ್ಷಣೆ ಹೊಂದಬಹುದೆಂಬುದನ್ನು ಅವರು ಹೇಳುತ್ತಿದ್ದಾರೆ!” ಎಂದು ಕೂಗುತ್ತಿದ್ದಳು.


“ನಿನ್ನ ದೇವರು ಸರ್ವಶ್ರೇಷ್ಠನು ಮತ್ತು ಪ್ರಬಲನು ಎನ್ನುವದು ನನಗೆ ಖಚಿತವಾಯಿತು. ಆತನು ಎಲ್ಲ ಅರಸರ ಒಡೆಯನಾಗಿದ್ದಾನೆ. ಆತನು ಜನರಿಗೆ ನಿಗೂಢವಾಗಿದ್ದ ರಹಸ್ಯವನ್ನು ತಿಳಿಸುತ್ತಾನೆ. ನೀನು ನನಗೆ ಈ ರಹಸ್ಯವನ್ನು ತಿಳಿಸಲು ಸಮರ್ಥನಾದುದರಿಂದ ಇದೆಲ್ಲ ನಿಜವೆಂದು ನಾನು ನಂಬುತ್ತೇನೆ” ಎಂದು ಹೇಳಿದನು.


ನೀವು ಬಾಬಿಲೋನಿನಿಂದ ಹೊರಗೆ ಬರುವಿರಿ. ತ್ವರೆಪಟ್ಟು ಬರುವಂತೆ ಅವರು ಬಲವಂತ ಮಾಡುವದಿಲ್ಲ. ನೀವು ಓಡಿ ಹೋಗುವಂತೆ ಅವರು ಒತ್ತಾಯಪಡಿಸುವದಿಲ್ಲ. ನೀವು ಹೊರಗೆ ನಡೆಯುವಿರಿ. ಯೆಹೋವನು ನಿಮ್ಮೊಂದಿಗೆ ನಡೆಯುವನು. ಯೆಹೋವನು ನಿಮ್ಮ ಮುಂದೆ ಇರುವನು. ಇಸ್ರೇಲರ ದೇವರು ನಿಮ್ಮ ಹಿಂದೆಯೂ ಇರುವನು.


ಮೋಶೆಯು ಆಜ್ಞಾಪಿಸಿದಂತೆ ಯೆಹೋಶುವನು ಜನರಿಗೆ ತಿಳಿಸಿದ. ಯೆಹೋವನ ಅಪ್ಪಣೆಗಳನ್ನೆಲ್ಲ ಅವರು ಕೈಗೊಳ್ಳುವವರೆಗೆ ಪವಿತ್ರ ಪೆಟ್ಟಿಗೆಯನ್ನು ಹೊತ್ತುಕೊಂಡು ಹೋಗುತ್ತಿದ್ದ ಯಾಜಕರು ನದಿಯ ಮಧ್ಯದಲ್ಲಿ ನಿಂತುಕೊಂಡೇ ಇದ್ದರು. ಜನರು ತ್ವರಿತಗತಿಯಿಂದ ನದಿಯನ್ನು ದಾಟಿದರು.


ಆ ಸ್ಥಳದಲ್ಲಿ ನೆಲವು ಒಣಗಿತ್ತು; ಯಾಜಕರು ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯನ್ನು ನದಿಯ ಮಧ್ಯದವರೆಗೆ ತೆಗೆದುಕೊಂಡು ಹೋಗಿ ಅಲ್ಲಿ ನಿಂತುಕೊಂಡರು. ಯಾಜಕರು ಅಲ್ಲಿಯೇ ನಿಂತುಕೊಂಡಿರಲಾಗಿ ಎಲ್ಲಾ ಇಸ್ರೇಲರು ಒಣನೆಲದ ಮೇಲೆ ನಡೆದುಕೊಂಡು ಹೋಗಿ ಜೋರ್ಡನ್ ನದಿಯನ್ನು ದಾಟಿದರು.


ಆದರೆ ಪೌಲನು, “ನಾವು ಏನು ತಪ್ಪು ಮಾಡಿದ್ದೇವೆಂಬುದನ್ನು ನಿಮ್ಮ ನಾಯಕರು ನಿರೂಪಿಸದೆ ನಮ್ಮನ್ನು ಜನರ ಎದುರಿನಲ್ಲಿ ಹೊಡೆಸಿ ಸೆರೆಮನೆಗೆ ಹಾಕಿಸಿದರು. ನಾವು ರೋಮಿನ ಪ್ರಜೆಗಳು. ಆದ್ದರಿಂದ ನಮಗೂ ಹಕ್ಕುಗಳಿವೆ. ಈಗ ಅವರು ನಮ್ಮನ್ನು ಗೋಪ್ಯವಾಗಿ ಬಿಡುಗಡೆ ಮಾಡಬೇಕೆಂದಿರುವರೇ? ಇಲ್ಲ! ನಾಯಕರೇ ಬಂದು ನಮ್ಮನ್ನು ಹೊರಗೆ ಕರೆದುಕೊಂಡು ಹೋಗಬೇಕು!” ಎಂದು ಹೇಳಿದನು.


ರಾಜನಿಗೆ ಬಹಳ ಚಿಂತೆಯಾಗಿತ್ತು. ರಾಜನು ಸಿಂಹಗಳ ಗುಹೆಗೆ ಹೋಗಿ, “ದಾನಿಯೇಲನೇ, ಜೀವಸ್ವರೂಪನಾದ ದೇವರ ಸೇವಕನೇ, ನೀನು ನಿತ್ಯವೂ ಸೇವೆ ಮಾಡುವ ನಿನ್ನ ದೇವರು ನಿನ್ನನ್ನು ಸಿಂಹಗಳಿಂದ ಉಳಿಸಲು ಶಕ್ತನಾದನೇ?” ಎಂದು ಕೂಗಿ ಕೇಳಿದನು.


ಇದಕ್ಕೋಸ್ಕರವಾಗಿಯೇ, ನನ್ನ ಒಡೆಯನಾದ ಯೆಹೋವನು ಹೀಗೆನ್ನುವನು: “ಚೀಯೋನಿನಲ್ಲಿ ನಾನು ಒಂದು ಮೂಲೆಗಲ್ಲು ಇಡುವೆನು, ಇದು ಬಹು ಅಮೂಲ್ಯವಾದ ಕಲ್ಲು. ಈ ವಿಶೇಷವಾದ ಕಲ್ಲಿನ ಮೇಲೆ ಎಲ್ಲವೂ ಕಟ್ಟಲ್ಪಡುವದು. ಆ ಕಲ್ಲಿನ ಮೇಲೆ ಭರವಸವಿಡುವ ಯಾವನು ಆಶಾಭಂಗಪಡುವುದಿಲ್ಲ.


ಅದಕ್ಕೆ ಅವರು ಈ ರೀತಿಯಾಗಿ ಉತ್ತರಕೊಟ್ಟರು: “ಭೂಪರಲೋಕಗಳ ದೇವರ ಸೇವಕರಾದ ನಾವು ಬಹಳ ವರ್ಷಗಳ ಹಿಂದೆ ಇಸ್ರೇಲರ ರಾಜನು ಕಟ್ಟಿಸಿ ಮುಗಿಸಿದ ದೇವಾಲಯವನ್ನು ಮತ್ತೆ ಕಟ್ಟುತ್ತಿದ್ದೇವೆ.


ಸಾಲೇಮಿನ ರಾಜನಾದ ಮೆಲ್ಕೀಚೆದೆಕನು ಸಹ ಅಬ್ರಾಮನನ್ನು ಭೇಟಿಯಾಗಲು ಹೋದನು. ಮಹೋನ್ನತನಾದ ದೇವರ ಯಾಜಕನಾಗಿದ್ದ ಅವನು ರೊಟ್ಟಿಯನ್ನೂ ದ್ರಾಕ್ಷಾರಸವನ್ನೂ ತೆಗೆದುಕೊಂಡು ಬಂದು,


ಕಳೆದ ರಾತ್ರಿ ದೇವರ ಬಳಿಯಿಂದ ದೂತನೊಬ್ಬನು ನನ್ನ ಬಳಿಗೆ ಬಂದಿದ್ದನು. ಆ ದೇವರನ್ನೇ ನಾನು ಆರಾಧಿಸುವುದು. ನಾನು ಆತನವನು.


ಆದರೆ ಯೆಹೋವನು ನಿಮ್ಮನ್ನು ಈಜಿಪ್ಟ್ ದೇಶದಿಂದ ಹೊರತಂದು ತನ್ನ ಸ್ವಕೀಯ ಪ್ರಜೆಯನ್ನಾಗಿ ಮಾಡಿಕೊಂಡಿರುತ್ತಾನೆ. ಕಬ್ಬಿಣವನ್ನು ಕರಗಿಸುವ ಬೆಂಕಿಯ ಕುಲುಮೆಯಂತಿದ್ದ ಈಜಿಪ್ಟಿನಿಂದ ನಿಮ್ಮನ್ನು ಎಳೆದು ತಂದು ತನ್ನ ವಿಶೇಷ ಜನಾಂಗವಾಗಿ ನಿಮ್ಮನ್ನು ತೆಗೆದುಕೊಂಡಿರುತ್ತಾನೆ. ಈಗ ನೀವು ಆತನ ಜನರಾಗಿದ್ದೀರಿ.


ಅವರು ನಿನ್ನ ಜನರೆಂಬುದನ್ನು ಜ್ಞಾಪಿಸಿಕೊ. ನೀನು ಅವರನ್ನು ಈಜಿಪ್ಟಿನಿಂದ ಬರಮಾಡಿದೆಯೆಂಬುದನ್ನು ಜ್ಞಾಪಿಸಿಕೊ. ಸುಡುವ ಕುಲುಮೆಯಿಂದ ಹೊರಕ್ಕೆ ಎಳೆದು ತಂದಂತೆ ನೀನು ಅವರನ್ನು ರಕ್ಷಿಸಿದೆ.


ನಾನು ನಿಮ್ಮ ಪೂರ್ವಿಕರ ಸಂಗಡ ಮಾಡಿಕೊಂಡ ಒಡಂಬಡಿಕೆಯ ಬಗ್ಗೆ ಮಾತನಾಡುತ್ತಿದ್ದೇನೆ. ನಾನು ಈಜಿಪ್ಟಿನಿಂದ ಅವರನ್ನು ಹೊರತಂದಾಗ ನಾನು ಅವರೊಂದಿಗೆ ಈ ಒಡಂಬಡಿಕೆಯನ್ನು ಮಾಡಿಕೊಂಡೆ. ಈಜಿಪ್ಟು ಅನೇಕ ಕಷ್ಟಗಳ ನಾಡಾಗಿತ್ತು. ಅದು ಕಬ್ಬಿಣವನ್ನು ಕರಗಿಸುವ ಉರಿಯುವ ಕುಲುಮೆಯಂತಿತ್ತು. ನಾನು ಅವರಿಗೆ, ‘ನನ್ನ ಆಜ್ಞಾಪಾಲನೆಯನ್ನು ಮಾಡಿರಿ ಮತ್ತು ನಾನು ಹೇಳಿದಂತೆ ಎಲ್ಲವನ್ನು ಮಾಡಿರಿ. ಆಗ ನೀವು ನನ್ನ ಭಕ್ತರಾಗುವಿರಿ. ನಾನು ನಿಮ್ಮ ದೇವರಾಗುವೆನು’ ಎಂದೆ.


ಈ ಪುರಾತನ ರಾಜನು ಮಹೋನ್ನತನಾದ ದೇವರ ವಿರುದ್ಧ ಮಾತನಾಡುವನು. ಆ ರಾಜನು ದೇವರ ಪರಮ ಭಕ್ತರಿಗೆ ತೊಂದರೆ ಕೊಡುವನು ಮತ್ತು ಕೊಲೆ ಮಾಡುವನು. ಆ ರಾಜನು ರೂಢಿಯಲ್ಲಿದ್ದ ಧರ್ಮವಿಧಿಗಳನ್ನು ಮಾರ್ಪಡಿಸುವ ಪ್ರಯತ್ನ ಮಾಡುವನು. ಆ ಭಕ್ತರು ಒಂದು ಕಾಲ, ಎರಡು ಕಾಲ, ಅರ್ಧಕಾಲ ಅವನ ಕೈವಶವಾಗಿರುವರು.


ಶತ್ರುಗಳು ನಮ್ಮ ಮೇಲೆ ನಡೆಯಮಾಡಿದೆ. ನೀನು ನಮ್ಮನ್ನು ಬೆಂಕಿಯಲ್ಲಿಯೂ ನೀರಿನಲ್ಲಿಯೂ ಹಾಯಿಸಿದೆ. ಆದರೂ ಸುರಕ್ಷಿತ ಸ್ಥಳಕ್ಕೆ ನಮ್ಮನ್ನು ತಂದು ಸೇರಿಸಿದೆ.


ದಾನಿಯೇಲನು, “ಅರಸನೇ, ಚಿರಂಜೀವಿಯಾಗಿರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು