Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 3:27 - ಪರಿಶುದ್ದ ಬೈಬಲ್‌

27 ಅವರು ಹೊರಗೆ ಬಂದ ಮೇಲೆ ಉಪರಾಜರು, ನಾಯಕರು, ದೇಶಾಧಿಪತಿಗಳು, ಮಂತ್ರಿಗಳು ಮತ್ತು ಇತರರು ಅವರ ಸುತ್ತಲೂ ನೆರೆದರು. ಶದ್ರಕ್, ಮೇಶಕ್, ಅಬೇದ್‌ನೆಗೋ ಇವರುಗಳನ್ನು ಬೆಂಕಿಯು ಸುಟ್ಟಿಲ್ಲ. ಅವರ ದೇಹಕ್ಕೆ ಬೆಂಕಿಯು ಮುಟ್ಟಿಲ್ಲ. ಅವರ ಕೂದಲಿಗೂ ವಸ್ತ್ರಗಳಿಗೂ ಬೆಂಕಿಯು ತಾಕಿಲ್ಲ. ಬೆಂಕಿಯ ಸಮೀಪಕ್ಕೆ ಹೋದ ವಾಸನೆಯೂ ಅವರಿಗೆ ಮುಟ್ಟಿಲ್ಲ ಎಂಬುದನ್ನು ಅವರು ತಿಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಅಲ್ಲಿ ಕೂಡಿದ್ದ ಉಪರಾಜ, ನಾಯಕ, ದೇಶಾಧಿಪತಿ, ಮಂತ್ರಿಗಳು ಅವರನ್ನು ನೋಡಿ ಅವರ ಮೇಲೆ ಬೆಂಕಿಯ ಅಧಿಕಾರವು ನಡೆದಿಲ್ಲ, ಅವರ ತಲೆಕೂದಲೂ ಸುಟ್ಟಿಲ್ಲ, ಅವರ ಶಲ್ಯಗಳಿಗೆ ವಿಕಾರವಿಲ್ಲ, ಬೆಂಕಿಯ ವಾಸನೆಯೇ ಮುಟ್ಟಿಲ್ಲ” ಎಂದು ತಿಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಅವರನ್ನು ನೋಡಲು ಉಪರಾಜ, ನಾಯಕ, ದೇಶಾಧಿಪತಿ, ಮಂತ್ರಿ ಇವರೆಲ್ಲರು ಕೂಡಿಬಂದರು. ಅವರಿಗೆ ಬೆಂಕಿಯ ತಾಪವೂ ತಟ್ಟಿಲ್ಲ. ತಲೆಗೂದಲೂ ಸುಟ್ಟಿಲ್ಲ, ಅವರ ಬಟ್ಟೆಬರೆಗೆ ಏನೂ ಆಗಿಲ್ಲ, ಬೆಂಕಿಯ ವಾಸನೆಯೂ ಇಲ್ಲ, ಎಂದು ತಿಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಅಲ್ಲಿ ಕೂಡಿದ್ದ ಉಪರಾಜ ನಾಯಕ ದೇಶಾಧಿಪತಿ ಮಂತ್ರಿಗಳು ಅವರನ್ನು ನೋಡಿ ಅವರ ಮೇಲೆ ಬೆಂಕಿಯ ಅಧಿಕಾರವು ನಡೆದಿಲ್ಲ, ಅವರ ತಲೆಕೂದಲೂ ಸುಟ್ಟಿಲ್ಲ, ಅವರ ಶಲ್ಯಗಳಿಗೆ ವಿಕಾರವಿಲ್ಲ, ಬೆಂಕಿಯ ವಾಸನೆಯೇ ಮುಟ್ಟಿಲ್ಲ ಎಂದು ತಿಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಆಗ ಉಪರಾಜರು, ರಾಜ್ಯಪಾಲರು, ಅಧಿಪತಿಗಳು, ಅರಸನ ಆಲೋಚನಾಗಾರರು, ಎಲ್ಲರೂ ಒಟ್ಟುಗೂಡಿ ಅವರನ್ನು ಸುತ್ತುವರಿದು, ಅವರ ಶರೀರದ ಮೇಲೆ ಬೆಂಕಿಯಿಂದ ಯಾವ ಅಪಾಯವಾಗಿರದೇ ಇರುವುದನ್ನೂ, ಅವರ ತಲೆಗೂದಲುಗಳಲ್ಲಿ ಒಂದಾದರೂ ಸುಡದಿರುವುದನ್ನೂ, ಅವರ ಅಂಗಿಗಳು ನಾಶವಾಗದಿರುವುದನ್ನೂ, ಬೆಂಕಿಯ ವಾಸನೆಯೂ ಸಹ ಅವರನ್ನು ಮುಟ್ಟದಿರುವುದನ್ನೂ ಕಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 3:27
17 ತಿಳಿವುಗಳ ಹೋಲಿಕೆ  

ನಿನ್ನ ಕಷ್ಟಕಾಲದಲ್ಲಿ ನಾನು ನಿನ್ನೊಂದಿಗಿರುವೆನು. ನೀನು ಜಲರಾಶಿಯನ್ನು ಹಾದುಹೋಗುವಾಗ ನಾನೇ ನಿನ್ನೊಂದಿಗಿರುವೆ. ನೀನು ನದಿಗಳನ್ನು ದಾಟುವಾಗ ಅಪಾಯಕ್ಕೆ ಗುರಿಯಾಗದಿರುವೆ. ಬೆಂಕಿಯೊಳಗಿಂದ ನಡೆಯುವಾಗ ನಿನಗೆ ಹಾನಿಯಾಗದು.


ಕೆಲವರು ಉರಿಯುವ ಬೆಂಕಿಯನ್ನು ನಂದಿಸಿದರು; ಇನ್ನು ಕೆಲವರು ಕತ್ತಿಗಳ ಬಾಯಿಂದ ಪಾರಾದರು; ದುರ್ಬಲರಾಗಿದ್ದವರು ತಮ್ಮ ನಂಬಿಕೆಯಿಂದ ಪ್ರಬಲರಾದರು; ಯುದ್ಧದಲ್ಲಿ ಶಕ್ತಿಶಾಲಿಗಳಾಗಿ ಶತ್ರುಗಳನ್ನು ಸೋಲಿಸಿದರು.


ಈಗ ನೀವು ಸ್ವಲ್ಪವಾದರೂ ತಿನ್ನುವಂತೆ ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ನೀವು ಜೀವಂತವಾಗಿ ಉಳಿಯಬೇಕಾದರೆ ನಿಮಗೆ ಊಟ ಅವಶ್ಯಕವಾಗಿದೆ. ನಿಮ್ಮಲ್ಲಿರುವ ಯಾರೂ ನಿಮ್ಮ ತಲೆಕೂದಲುಗಳಲ್ಲಿ ಒಂದನ್ನಾದರೂ ಕಳೆದುಕೊಳ್ಳುವುದಿಲ್ಲ” ಎಂದು ಹೇಳಿದನು.


ನಿಮ್ಮ ತಲೆಯಲ್ಲಿ ಎಷ್ಟು ಕೂದಲುಗಳು ಇವೆ ಎಂಬುದು ಸಹ ದೇವರಿಗೆ ತಿಳಿದಿದೆ.


ಆದರೆ ದೇವರೇ, ನೀನು ಅವರನ್ನು ಶಿಕ್ಷಿಸಿದರೆ ಅವರು ಅದನ್ನು ನೋಡುವರು. ನಿನ್ನ ಜನರ ಮೇಲೆ ನಿನಗಿರುವ ಗಾಢಪ್ರೀತಿಯನ್ನು ಆ ದುಷ್ಟಜನರು ನೋಡಲಿ. ಆಗ ಅವರು ಅವಮಾನ ಹೊಂದುವರು. ನಿನ್ನ ಶತ್ರುಗಳು ತಮ್ಮ ದುಷ್ಟತನದ ಬೆಂಕಿಯಲ್ಲಿಯೇ ಸುಟ್ಟುಹೋಗುವರು.


ಆಗ ಅವರು ನೀನೊಬ್ಬನೇ ದೇವರೆಂದೂ ನಿನ್ನ ಹೆಸರು ಯೆಹೋವನೆಂದೂ ತಿಳಿದುಕೊಳ್ಳುವರು. ಭೂಲೋಕಕ್ಕೆಲ್ಲಾ ಮಹೋನ್ನತನಾದ ದೇವರೊಬ್ಬನೇ ದೇವರೆಂದು ಅವರು ಅರಿತುಕೊಳ್ಳುವರು.


ನಮ್ಮ ದೇವರಾದ ಯೆಹೋವನೇ, ಅಶ್ಶೂರದ ರಾಜನಿಂದ ನಮ್ಮನ್ನು ರಕ್ಷಿಸು. ಭೂಲೋಕದ ರಾಜ್ಯಗಳೆಲ್ಲ ನೀನೊಬ್ಬನೇ ದೇವರಾದ ಯೆಹೋವನೆಂದು ತಿಳಿದುಕೊಳ್ಳುವಂತೆ ನಮ್ಮನ್ನು ಇವನ ಕೈಯಿಂದ ಬಿಡಿಸು” ಎಂದು ಪ್ರಾರ್ಥಿಸಿದನು.


ಅವರು ಶದ್ರಕ್, ಮೇಶಕ್, ಅಬೇದ್‌ನೆಗೋ ಎಂಬವರನ್ನು ಚೆನ್ನಾಗಿ ಬಿಗಿದುಕಟ್ಟಿ ಉರಿಯುವ ಕೊಂಡದಲ್ಲಿ ಎಸೆದರು. ಅವರು ತಮ್ಮ ಶಲ್ಯ, ಇಜಾರು, ಟೊಪ್ಪಿಗೆ ಮೊದಲಾದ ಉಡುಪನ್ನು ಧರಿಸಿಕೊಂಡಿದ್ದರು.


ರಾಜನಾದ ಅಗ್ರಿಪ್ಪನಿಗೆ ಈ ಸಂಗತಿಗಳು ತಿಳಿದಿವೆ. ನಾನು ಅವನೊಂದಿಗೆ ಸ್ವತಂತ್ರವಾಗಿ ಮಾತಾಡಬಲ್ಲೆನು. ಈ ಎಲ್ಲಾ ಸಂಗತಿಗಳ ಬಗ್ಗೆ ಅವನು ಕೇಳಿದ್ದಾನೆಂದು ನನಗೆ ಗೊತ್ತಿದೆ. ಯಾಕೆಂದರೆ ಎಲ್ಲಾ ಜನರು ನೋಡಬಹುದಾದ ಸ್ಥಳದಲ್ಲಿ ಈ ಸಂಗತಿಗಳು ನೆರವೇರಿದವು.


ರಾಜ್ಯದ ಸಕಲ ಮುಖ್ಯಾಧಿಕಾರಿಗಳು, ನಾಯಕರು, ದೇಶಾಧಿಪತಿಗಳು, ಮಂತ್ರಿಗಳು ಮತ್ತು ಸಂಸ್ಥಾನಾಧ್ಯಕ್ಷರು ಸೇರಿ ಒಂದು ಆಲೋಚನೆಯನ್ನು ಮಾಡಿದ್ದಾರೆ. ಈ ಸಂಬಂಧವಾಗಿ ಅರಸನು ಒಂದು ನಿಬಂಧನೆಯನ್ನು ಮಾಡಿ ರಾಜಾಜ್ಞೆಯನ್ನು ಹೊರಡಿಸಬೇಕೆಂದು ನಮ್ಮೆಲ್ಲರ ಅನಿಸಿಕೆ. ಎಲ್ಲರೂ ಆ ರಾಜಾಜ್ಞೆಯನ್ನು ಪಾಲಿಸಬೇಕು. ಆ ನಿಬಂಧನೆ ಹೀಗಿದೆ: ಬರಲಿರುವ ಮೂವತ್ತು ದಿನ ಯಾರೂ ಅರಸನಾದ ನಿನ್ನನ್ನು ಬಿಟ್ಟು ಬೇರೆ ಯಾವ ದೇವರನ್ನಾಗಲಿ ಮನುಷ್ಯನನ್ನಾಗಲಿ ಪ್ರಾರ್ಥಿಸಕೂಡದು. ಯಾರಾದರೂ ಹಾಗೆ ಮಾಡಿದರೆ ಅವರನ್ನು ಸಿಂಹಗಳ ಗುಹೆಯಲ್ಲಿ ಎಸೆಯಲಾಗುವುದು.


ಅರಸನಾದ ದಾರ್ಯಾವೆಷನಿಗೆ ಬಹಳ ಸಂತೋಷವಾಯಿತು. ದಾನಿಯೇಲನನ್ನು ಸಿಂಹಗಳ ಗುಹೆಯಿಂದ ಮೇಲಕ್ಕೆ ಎತ್ತಿಸಬೇಕೆಂದು ತನ್ನ ಸೇವಕರಿಗೆ ಆಜ್ಞಾಪಿಸಿದನು. ದಾನಿಯೇಲನನ್ನು ಸಿಂಹಗಳ ಗುಹೆಯಿಂದ ಹೊರತೆಗೆದು ನೋಡಲಾಗಿ ಸಿಂಹಗಳಿಂದ ಅವನಿಗೆ ಯಾವ ಗಾಯಗಳೂ ಆಗಿರಲಿಲ್ಲ. ದಾನಿಯೇಲನು ತನ್ನ ದೇವರಲ್ಲಿ ನಂಬಿಕೆಯಿಟ್ಟಿದ್ದರಿಂದ ಅವನಿಗೆ ಸಿಂಹಗಳಿಂದ ಯಾವ ನೋವೂ ಆಗಿರಲಿಲ್ಲ.


ಪ್ರವಾದಿಯು ಹೋಗಿ ರಸ್ತೆಯ ಮೇಲೆ ಬಿದ್ದಿರುವ ದೇಹವನ್ನು ಕಂಡನು. ಕತ್ತೆ ಮತ್ತು ಸಿಂಹವು ಆ ದೇಹದ ಹತ್ತಿರ ಇನ್ನೂ ನಿಂತಿದ್ದವು. ಸಿಂಹವು ಆ ದೇಹವನ್ನು ತಿಂದಿರಲಿಲ್ಲ ಮತ್ತು ಕತ್ತೆಗೆ ತೊಂದರೆಯನ್ನೂ ಮಾಡಿರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು