Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 3:29 - ಪರಿಶುದ್ದ ಬೈಬಲ್‌

29 ನಾನು ಈಗ ಸಕಲ ಜನಾಂಗ, ಕುಲ, ಭಾಷೆಗಳ ಜನರಲ್ಲಿ ಯಾರಾದರೂ ಶದ್ರಕ್, ಮೇಶಕ್, ಅಬೇದ್‌ನೆಗೋ ಇವರ ದೇವರ ವಿರುದ್ಧವಾಗಿ ಮಾತನಾಡಿದರೆ ಅವರನ್ನು ತುಂಡುತುಂಡಾಗಿ ಕತ್ತರಿಸಿ ಅವರ ಮನೆಗಳನ್ನು ತಿಪ್ಪೆಯನ್ನಾಗಿ ಮಾಡಬೇಕೆಂಬ ಆಜ್ಞೆಯನ್ನು ವಿಧಿಸುತ್ತೇನೆ. ಬೇರೆ ಯಾವ ದೇವರೂ ತನ್ನ ಭಕ್ತರನ್ನು ಈ ರೀತಿ ರಕ್ಷಿಸಲಾರನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಸಕಲ ಜನಾಂಗ, ಕುಲ, ಭಾಷೆಗಳವರಲ್ಲಿ ಯಾರಾದರೂ ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರ ದೇವರ ವಿಷಯದಲ್ಲಿ ಅಲ್ಲ ಸಲ್ಲದ ಮಾತುಗಳನ್ನಾಡಿದರೆ ಅವರನ್ನು ತುಂಡುತುಂಡಾಗಿ ಕತ್ತರಿಸಿ, ಅವರ ಮನೆಗಳನ್ನು ತಿಪ್ಪೆಯನ್ನಾಗಿ ಮಾಡಬೇಕೆಂಬ ಆಜ್ಞೆಯನ್ನು ವಿಧಿಸುತ್ತೇನೆ; ಹೀಗೆ ಉದ್ಧರಿಸಲು ಸಮರ್ಥನಾದ ಇನ್ಯಾವ ದೇವರೂ ಇಲ್ಲವಲ್ಲಾ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಸಕಲ ದೇಶ-ಕುಲ-ಭಾಷೆಗಳವರಲ್ಲಿ ಯಾರಾದರು ಶದ್ರಕ್, ಮೇಶಕ್ ಹಾಗು ಅಬೇದ್‍ನೆಗೋ ಎಂಬುವರ ದೇವರ ವಿಷಯದಲ್ಲಿ ಅಲ್ಲಸಲ್ಲದ ಮಾತನಾಡಿದರೆ ಅಂಥವರನ್ನು ತುಂಡುತುಂಡಾಗಿ ಕತ್ತರಿಸಿ ಅವರ ಮನೆಗಳನ್ನು ತಿಪ್ಪೆಗುಂಡಿಯನ್ನಾಗಿಸಬೇಕೆಂದು ಆಜ್ಞೆ ವಿಧಿಸುತ್ತೇನೆ. ಹೀಗೆ ರಕ್ಷಿಸಲು ಸಮರ್ಥನಾದ ಇನ್ನಾವ ದೇವರೂ ಇಲ್ಲವೇ ಇಲ್ಲ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಸಕಲ ಜನಾಂಗಕುಲಭಾಷೆಗಳವರಲ್ಲಿ ಯಾರಾದರೂ ಶದ್ರಕ್ ಮೇಶಕ್ ಅಬೇದ್‍ನೆಗೋ ಎಂಬವರ ದೇವರ ವಿಷಯದಲ್ಲಿ ಅಲ್ಲದ ಮಾತನ್ನಾಡಿದರೆ ಅವರನ್ನು ಚೂರುಚೂರಾಗಿ ಕತ್ತರಿಸಿ ಅವರ ಮನೆಗಳನ್ನು ತಿಪ್ಪೆಯನ್ನಾಗಿ ಮಾಡಬೇಕೆಂಬ ಆಜ್ಞೆಯನ್ನು ವಿಧಿಸುತ್ತೇನೆ; ಹೀಗೆ ಉದ್ಧರಿಸಲು ಸಮರ್ಥನಾದ ಇನ್ನಾವ ದೇವರೂ ಇಲ್ಲವಲ್ಲಾ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಆದ್ದರಿಂದ ಸಕಲ ಪ್ರಜೆ, ಜನಾಂಗ, ಭಾಷೆಗಳಲ್ಲಿ ಯಾರು ಶದ್ರಕ್, ಮೇಶಕ್, ಅಬೇದ್‌ನೆಗೋ ಎಂಬುವರ ದೇವರಿಗೆ ವಿರೋಧವಾಗಿ ದೂಷಣೆ ಮಾಡುವರೋ, ಅವರನ್ನು ತುಂಡುತುಂಡಾಗಿ ಮಾಡಿರಿ, ಅವರ ಮನೆಗಳು ತಿಪ್ಪೆ ಗುಂಡಿಗಳಾಗಿ ಮಾಡಿರಿ, ಎಂದು ನಾನು ರಾಜಾಜ್ಞೆಯನ್ನು ವಿಧಿಸುತ್ತೇನೆ. ಏಕೆಂದರೆ ಈ ವಿಧವಾಗಿ ರಕ್ಷಿಸುವ ದೇವರು ಇನ್ಯಾರೂ ಇರುವುದಿಲ್ಲ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 3:29
17 ತಿಳಿವುಗಳ ಹೋಲಿಕೆ  

ಆಗ ಅರಸನಾದ ನೆಬೂಕದ್ನೆಚ್ಚರನು, “ಹಾಗಲ್ಲ, ನೀವು ನನಗೆ ನನ್ನ ಕನಸನ್ನೂ ಅದರ ಅರ್ಥವನ್ನೂ ತಿಳಿಸಬೇಕು. ಇಲ್ಲವಾದರೆ ನಾನು ನಿಮ್ಮ ದೇಹವನ್ನು ತುಂಡುತುಂಡಾಗಿ ಕತ್ತರಿಸಲು ಆಜ್ಞಾಪಿಸುತ್ತೇನೆ. ನಿಮ್ಮ ಮನೆಗಳನ್ನು ಬೀಳಿಸಿ ಮಣ್ಣುಗುಡ್ಡೆಯನ್ನಾಗಿಯೂ ಮತ್ತು ಬೂದಿರಾಶಿಯನ್ನಾಗಿಯೂ ಮಾಡುವಂತೆ ಆಜ್ಞಾಪಿಸುತ್ತೇನೆ.


ದೇವರೇ, ನೀನು ದುಷ್ಟರನ್ನು ದಂಡಿಸುವಾಗ ಜನರು ನಿನ್ನನ್ನು ಕೊಂಡಾಡುವರು; ನಿನ್ನ ಕೋಪವನ್ನು ತೋರಿಸುವಾಗ ಅಳಿದುಳಿದವರು ಬಲಿಷ್ಠರಾಗುವರು.


ನಮ್ಮ ವೈರಿಗಳ ಬಂಡೆಯು ನಮ್ಮ ಬಂಡೆಯಂತೆ ಬಲಶಾಲಿಯಲ್ಲ. ವೈರಿಗಳಿಗೂ ಇದು ಗೊತ್ತಿದೆ.


ಆಗ ನೆಬೂಕದ್ನೆಚ್ಚರನು, “ಶದ್ರಕ್, ಮೇಶಕ್, ಅಬೇದ್‌ನೆಗೋ ಇವರುಗಳ ದೇವರಿಗೆ ಸ್ತೋತ್ರವಾಗಲಿ. ಅವರ ದೇವರು ತನ್ನ ದೂತನನ್ನು ಕಳುಹಿಸಿ ತನ್ನ ಸೇವಕರನ್ನು ಬೆಂಕಿಯಿಂದ ರಕ್ಷಿಸಿದ್ದಾನೆ. ಈ ಮೂರು ಜನರು ತಮ್ಮ ದೇವರ ಮೇಲೆ ವಿಶ್ವಾಸವಿಟ್ಟರು. ಅವರು ನನ್ನ ಆಜ್ಞೆಯನ್ನು ಪಾಲಿಸಲು ಒಪ್ಪಲಿಲ್ಲ. ಬೇರೆ ಯಾವ ದೇವರನ್ನೂ ಪೂಜಿಸುವುದಕ್ಕೆ ಅಥವಾ ಸೇವಿಸುವುದಕ್ಕೆ ಬದಲಾಗಿ ಸಾಯಲು ಅವರು ಸಿದ್ಧರಾಗಿದ್ದರು.


ನೀನು ನಮ್ಮನ್ನು ಉರಿಯುವ ಕೊಂಡದಲ್ಲಿ ಎಸೆದರೆ ನಾವು ಆರಾಧಿಸುವ ದೇವರು ನಮ್ಮನ್ನು ರಕ್ಷಿಸಬಲ್ಲನು. ಆತನು ಇಚ್ಛಿಸಿದರೆ ನಮ್ಮನ್ನು ನಿನ್ನ ಕೈಯಿಂದ ಬಿಡಿಸಬಲ್ಲನು.


ಈಗಲಾದರೋ ತುತ್ತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ, ವಾಲಗ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ನೀವು ಅಡ್ಡಬಿದ್ದು ಚಿನ್ನದ ವಿಗ್ರಹವನ್ನು ಪೂಜಿಸಬೇಕು. ನಾನು ಮಾಡಿಸಿದ ಈ ವಿಗ್ರಹವನ್ನು ಪೂಜಿಸಲು ನೀವು ಸಿದ್ಧರಾಗಿದ್ದರೆ ಸರಿ. ನೀವು ಅದನ್ನು ಪೂಜಿಸದಿದ್ದರೆ ತಕ್ಷಣ ನಿಮ್ಮನ್ನು ಉರಿಯುವ ಕೊಂಡದಲ್ಲಿ ಎಸೆಯಲಾಗುವುದು. ಆಗ ನನ್ನ ಕೈಯಿಂದ ನಿಮ್ಮನ್ನು ಬಿಡಿಸುವುದು ಯಾವ ದೇವರಿಗೂ ಸಾಧ್ಯವಾಗಲಾರದು” ಎಂದು ಹೇಳಿದನು.


ಯೆಹೋವನು ತನ್ನ ಜನರನ್ನು ರಕ್ಷಿಸಬಲ್ಲನು. ಯೆಹೋವನೇ, ದಯವಿಟ್ಟು ನಿನ್ನ ಜನರಿಗೆ ಒಳ್ಳೆಯದನ್ನು ಮಾಡು.


ಮಾತ್ರವಲ್ಲದೆ, ನನ್ನ ಆಜ್ಞೆ ಏನೆಂದರೆ: ಯಾವನಾದರೂ ನನ್ನ ಆಜ್ಞೆಯನ್ನು ಬದಲಾಯಿಸಿದರೆ ಅವನ ಮನೆಯಿಂದಲೇ ಒಂದು ತೊಲೆಯನ್ನು ಎಳೆದು ಅದನ್ನು ಶೂಲವನ್ನಾಗಿ ಮಾಡಿ, ಅವನನ್ನು ಅದಕ್ಕೆ ನೇತು ಹಾಕಬೇಕು; ಅವನ ಮನೆಯನ್ನು ಕೆಡವಿ ಅದನ್ನು ಮಣ್ಣುದಿಬ್ಬವನ್ನಾಗಿ ಮಾಡಬೇಕು.


ಬಾಳನ ಆಲಯವನ್ನೂ ಅವರು ಹಾಳುಗೆಡವಿದರು. ಅವರು ಬಾಳನ ಆಲಯವನ್ನು ಶೌಚಗೃಹವನ್ನಾಗಿ ಮಾಡಿದರು. ಇಂದೂ ಸಹ ಅದನ್ನು ಶೌಚಗೃಹವಾಗಿ ಬಳಸುತ್ತಾರೆ.


ಅಶ್ಪೆನಜನು ಆ ಯೆಹೂದ್ಯ ತರುಣರಿಗೆ ಬಾಬಿಲೋನಿನ ಹೆಸರುಗಳನ್ನಿಟ್ಟನು. ದಾನಿಯೇಲನ ಹೊಸ ಹೆಸರು ಬೇಲ್ತೆಶಚ್ಚರ್, ಹನನ್ಯನ ಹೊಸ ಹೆಸರು ಶದ್ರಕ್, ಮೀಶಾಯೇಲನ ಹೊಸ ಹೆಸರು ಮೇಶಕ್ ಮತ್ತು ಅಜರ್ಯನ ಹೊಸ ಹೆಸರು ಅಬೇದ್‌ನೆಗೋ.


ರಾಜನು ಅವರ ಸಂಗಡ ಮಾತಾಡಿದನು. ಅರಸನಿಗೆ ದಾನಿಯೇಲ, ಹನನ್ಯ, ಮೀಶಾಯೇಲ, ಅಜರ್ಯ ಇವರಷ್ಟು ಯೊಗ್ಯರಾದವರು ಆ ಸಮಸ್ತ ಯುವಕರಲ್ಲಿ ಮತ್ತಾರೂ ಕಂಡು ಬರಲಿಲ್ಲ. ಆದ್ದರಿಂದ ಆ ನಾಲ್ಕು ಜನ ಯುವಕರು ರಾಜನ ಸೇವಕರಾದರು.


ದಾನಿಯೇಲನು ಮನೆಗೆ ಹೋಗಿ ತನ್ನ ಸ್ನೇಹಿತರಾದ ಹನನ್ಯ, ಮೀಶಾಯೇಲ ಮತ್ತು ಅಜರ್ಯ ಇವರುಗಳಿಗೆ ಈ ವಿಷಯ ತಿಳಿಸಿದನು.


“ನಿನ್ನ ದೇವರು ಸರ್ವಶ್ರೇಷ್ಠನು ಮತ್ತು ಪ್ರಬಲನು ಎನ್ನುವದು ನನಗೆ ಖಚಿತವಾಯಿತು. ಆತನು ಎಲ್ಲ ಅರಸರ ಒಡೆಯನಾಗಿದ್ದಾನೆ. ಆತನು ಜನರಿಗೆ ನಿಗೂಢವಾಗಿದ್ದ ರಹಸ್ಯವನ್ನು ತಿಳಿಸುತ್ತಾನೆ. ನೀನು ನನಗೆ ಈ ರಹಸ್ಯವನ್ನು ತಿಳಿಸಲು ಸಮರ್ಥನಾದುದರಿಂದ ಇದೆಲ್ಲ ನಿಜವೆಂದು ನಾನು ನಂಬುತ್ತೇನೆ” ಎಂದು ಹೇಳಿದನು.


ಶದ್ರಕ್, ಮೇಶಕ್, ಅಬೇದ್‌ನೆಗೋ ಇವರುಗಳನ್ನು ಬಾಬಿಲೋನ್ ಸಂಸ್ಥಾನದ ದೊಡ್ಡ ಅಧಿಕಾರಿಗಳನ್ನಾಗಿ ನೇಮಿಸಬೇಕೆಂದು ದಾನಿಯೇಲನು ಅರಸನನ್ನು ಕೇಳಿಕೊಂಡನು. ದಾನಿಯೇಲನು ಹೇಳಿದಂತೆ ಅರಸನು ಮಾಡಿದನು. ದಾನಿಯೇಲನು ಅರಸನ ಸನ್ನಿಧಿಯಲ್ಲಿರುವ ಪ್ರಮುಖರಲ್ಲಿ ಒಬ್ಬನಾದನು.


ಅರಸನೇ, ಕೆಲವು ಜನ ಯೆಹೂದ್ಯರು ತಮ್ಮ ಆಜ್ಞೆಯನ್ನು ಪಾಲಿಸಲಿಲ್ಲ. ಆ ಯೆಹೂದ್ಯರನ್ನು ತಾವು ಬಾಬಿಲೋನ್ ಪ್ರಾಂತ್ಯದಲ್ಲಿ ಪ್ರಮುಖ ಅಧಿಕಾರಿಗಳನ್ನಾಗಿ ನೇಮಿಸಿದ್ದೀರಿ. ಅವರ ಹೆಸರುಗಳು, ಶದ್ರಕ್, ಮೇಶಕ್, ಅಬೇದ್‌ನೆಗೋ ಎಂದು. ಅವರು ನಿಮ್ಮ ದೇವರುಗಳನ್ನು ಪೂಜಿಸುವುದಿಲ್ಲ. ನೀವು ನಿಲ್ಲಿಸಿದ ಬಂಗಾರದ ವಿಗ್ರಹಕ್ಕೆ ಅಡ್ಡಬಿದ್ದು ಪೂಜಿಸುವದಿಲ್ಲ” ಎಂದು ಚಾಡಿ ಹೇಳಿದರು.


ದಾನಿಯೇಲನು ದಾರ್ಯಾವೆಷನ ಆಳ್ವಿಕೆಯಲ್ಲಿಯೂ ಪಾರಸಿಯನಾದ ಕೋರೆಷನ ಆಳ್ವಿಕೆಯಲ್ಲಿಯೂ ಘನತೆಯನ್ನು ಪಡೆದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು