ದಾನಿಯೇಲ 3:4 - ಪರಿಶುದ್ದ ಬೈಬಲ್4 ಆಗ ಸಾರುವವನು ದೊಡ್ಡ ಧ್ವನಿಯಲ್ಲಿ, “ವಿವಿಧ ಜನಾಂಗ, ಕುಲ, ಭಾಷೆಗಳ ಜನರೇ, ನಾನು ಹೇಳುವುದನ್ನು ಕೇಳಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಆಗ ಸಾರುವವನು ಗಟ್ಟಿಯಾಗಿ ಕೂಗಿ, “ವಿವಿಧ ಜನಾಂಗ, ಕುಲ, ಭಾಷೆಗಳವರೇ, ನಿಮಗೆ ರಾಜಾಜ್ಞೆಯಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಆಗ, ಸಾರುವವರು ಗಟ್ಟಿಯಾಗಿ ಕೂಗಿ, “ವಿವಿಧ ಜನಾಂಗ-ಕುಲ-ಭಾಷೆಗಳವರೇ, ನಿಮಗೆ ಹೀಗೆಂದು ರಾಜಾಜ್ಞೆಯಾಗಿದೆ: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಆಗ ಸಾರುವವನು ಗಟ್ಟಿಯಾಗಿ ಕೂಗಿ - ವಿವಿಧ ಜನಾಂಗ ಕುಲಭಾಷೆಗಳವರೇ, ನಿಮಗೆ ರಾಜಾಜ್ಞೆಯಾಗಿದೆ - ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಆಗ ಘೋಷಣೆ ಮಾಡುವವರು ಗಟ್ಟಿಯಾಗಿ ಕೂಗಿ, “ಪ್ರಜೆಗಳೇ, ಜನಾಂಗಗಳೇ, ವಿವಿಧ ಭಾಷೆಯವರೇ ಅಧ್ಯಾಯವನ್ನು ನೋಡಿ |
ಯಾಕೆಂದರೆ ನೀವು ಒಮ್ರಿಯ ಆಜ್ಞೆಯನ್ನು ಪರಿಪಾಲಿಸಿದಿರಿ. ಅಹಾಬನ ಮನೆಯವರು ಮಾಡುತ್ತಿದ್ದ ದುಷ್ಕೃತ್ಯಗಳನ್ನು ನೀವು ಮಾಡುತ್ತೀರಿ. ನೀವು ಅವರ ಬೋಧನೆಯನ್ನು ಅನುಸರಿಸುತ್ತೀರಿ. ಆದ್ದರಿಂದ ನೀವು ನಾಶವಾಗುವಂತೆ ಮಾಡುವೆನು. ಕೆಡವಲ್ಪಟ್ಟ ನಿಮ್ಮ ನಗರವನ್ನು ನೋಡಿದ ಜನರು ಆಶ್ಚರ್ಯದಿಂದ ಸಿಳ್ಳುಹಾಕುವರು. ಆಗ ಬೇರೆ ಜನಾಂಗದವರು ನಿಮ್ಮ ಮೇಲೆ ಹೊರಿಸಿದ ಅವಮಾನವನ್ನು ನೀವು ಸಹಿಸಿಕೊಳ್ಳುವಿರಿ.”
ಕೂಡಲೇ ರಾಜಲೇಖಕರನ್ನು ಕರೆಯಿಸಿ ಅವರಿಂದ ಮೊರ್ದೆಕೈ ಹೇಳಿದಂತೆ ರಾಜಾಜ್ಞೆಯನ್ನು ಸಾಮ್ರಾಜ್ಯದ ನಾನಾ ಭಾಷೆಗಳಲ್ಲಿ ಬರೆಯಿಸಲಾಯಿತು. ಹಿಂದೂಸ್ಥಾನದಿಂದ ಹಿಡಿದು ಇಥಿಯೋಪ್ಯದ ತನಕ ರಾಜ್ಯದ ನೂರಿಪ್ಪತ್ತೇಳು ಸಂಸ್ಥಾನಗಳ ಅಧಿಕಾರಿಗಳಿಗೆ, ಎಲ್ಲಾ ರಾಜ್ಯಪಾಲರಿಗೆ, ಜನನಾಯಕರಿಗೆ ಮತ್ತು ಯೆಹೂದ್ಯರಿಗೆ ಆಯಾ ಭಾಷೆಗಳ ಲಿಪಿಗಳಲ್ಲಿ ಮೂರನೇ ತಿಂಗಳಾದ ಸೀವಾನ್ ಮಾಸದ ಇಪ್ಪತ್ತಮೂರನೇ ದಿವಸದಲ್ಲಿ ಬರೆಯಿಸಲಾಯಿತು.