7 ಆದ್ದರಿಂದ ತುತ್ತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ಅವರು ಅಡ್ಡಬಿದ್ದು ಬಂಗಾರದ ವಿಗ್ರಹವನ್ನು ಪೂಜಿಸಿದರು. ಅರಸನಾದ ನೆಬೂಕದ್ನೆಚ್ಚರನು ನಿಲ್ಲಿಸಿದ ವಿಗ್ರಹವನ್ನು ಎಲ್ಲ ಜನಾಂಗಗಳ, ಭಾಷೆಗಳ ಜನರು ಪೂಜಿಸಿದರು.
7 ಆದಕಾರಣ ಅದೇ ಕಾಲದಲ್ಲಿ ಸಮಸ್ತ ಜನಾಂಗ, ಕುಲ, ಭಾಷೆಗಳವರು ತುತ್ತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ಎಲ್ಲರೂ ಅಡ್ಡಬಿದ್ದು ರಾಜನಾದ ನೆಬೂಕದ್ನೆಚ್ಚರನು ನಿಲ್ಲಿಸಿದ ಬಂಗಾರದ ಪ್ರತಿಮೆಯನ್ನು ಪೂಜಿಸಿದರು.
7 ಅಂತೆಯೇ ಸಮಸ್ತ ಜನಾಂಗ-ಕುಲ-ಭಾಷೆಗಳವರು ತುತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ಎಲ್ಲರು ಅದೇ ಸಮಯದಲ್ಲಿ ಅಡ್ಡಬಿದ್ದು ರಾಜ ನೆಬೂಕದ್ನೆಚ್ಚರನು ನಿಲ್ಲಿಸಿದ್ದ ಆ ಬಂಗಾರದ ಪ್ರತಿಮೆಯನ್ನು ಆರಾಧಿಸಿದರು.
7 ಆದಕಾರಣ ಅದೇ ಕಾಲದಲ್ಲಿ ಸಮಸ್ತ ಜನಾಂಗ ಕುಲಭಾಷೆಗಳವರು ತುತೂರಿ ಕೊಳಲು ಕಿನ್ನರಿ ತಂಬೂರಿ ವೀಣೆ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ಎಲ್ಲರೂ ಅಡ್ಡಬಿದ್ದು ರಾಜನಾದ ನೆಬೂಕದ್ನೆಚ್ಚರನು ನಿಲ್ಲಿಸಿದ ಬಂಗಾರದ ಪ್ರತಿಮೆಯನ್ನು ಪೂಜಿಸಿದರು.
7 ಆದ್ದರಿಂದ ಜನರೆಲ್ಲರು ತುತೂರಿ, ಕೊಳಲು, ತಂಬೂರಿ, ವೀಣೆ, ಕಿನ್ನರಿ, ನಾಗಸ್ವರ ಮೊದಲಾದ ಶಬ್ದವನ್ನು ಕೇಳಿದ ಕೂಡಲೇ, ಎಲ್ಲಾ ಪ್ರಜೆಗಳು ಜನಾಂಗಗಳು ವಿವಿಧ ಭಾಷೆಯವರು ಅಡ್ಡಬಿದ್ದು, ಅರಸನಾದ ನೆಬೂಕದ್ನೆಚ್ಚರನು ನಿಲ್ಲಿಸಿದ ಬಂಗಾರದ ಪ್ರತಿಮೆಯನ್ನು ಆರಾಧಿಸಿದರು.
ಆದರೆ ಆ ಮೃಗವನ್ನೂ ಸುಳ್ಳುಪ್ರವಾದಿಯನ್ನೂ ಸೆರೆಹಿಡಿಯಲಾಯಿತು. ಈ ಸುಳ್ಳುಪ್ರವಾದಿಯೇ ಮೃಗಕ್ಕಾಗಿ ಅದ್ಭುತಗಳನ್ನು ಮಾಡಿದವನು. ಈ ಸುಳ್ಳುಪ್ರವಾದಿಯು ಮೃಗದ ಗುರುತು ಹಾಕಿಸಿಕೊಂಡಿರುವ ಮತ್ತು ಅದರ ವಿಗ್ರಹವನ್ನು ಆರಾಧಿಸಿದ ಜನರನ್ನು ಮರುಳು ಮಾಡಲು ಈ ಅದ್ಭುತಗಳನ್ನು ಬಳಸಿದ್ದನು. ಈ ಸುಳ್ಳುಪ್ರವಾದಿಯನ್ನೂ ಮೃಗವನ್ನೂ, ಬೆಂಕಿ ಮತ್ತು ಗಂಧಕಗಳಿಂದ ಉರಿಯುವ ಕೆರೆಯಲ್ಲಿ ಜೀವಂತವಾಗಿ ಎಸೆಯಲಾಯಿತು.
ನೀನು ನೋಡಿದ ಆ ಮೃಗವು ಒಂದು ಕಾಲದಲ್ಲಿ ಜೀವಿಸಿತ್ತು. ಆದರೆ ಈಗ ಆ ಮೃಗವು ಜೀವಂತವಾಗಿಲ್ಲ. ಆದರೆ ಆ ಮೃಗವು ತಳವಿಲ್ಲದ ಕೂಪದಿಂದ ಜೀವಂತವಾಗಿ ಮೇಲೆದ್ದುಬಂದು ನಾಶವಾಗು ವುದು. ಲೋಕದಲ್ಲಿ ಜೀವಿಸುತ್ತಿರುವ ಜನರು ಆ ಮೃಗವನ್ನು ನೋಡಿ, ಅದು ಒಂದು ಕಾಲದಲ್ಲಿ ಜೀವಂತವಾಗಿತ್ತು, ಈಗ ಇಲ್ಲ, ಆದರೆ ಮತ್ತೆ ಬರುವುದು ಎಂಬುದನ್ನು ತಿಳಿದು ಅವರು ಆಶ್ಚರ್ಯಪಡುವರು. ಲೋಕವು ಸೃಷ್ಟಿಯಾದಂದಿನಿಂದ ಜೀವಬಾಧ್ಯರ ಪುಸ್ತಕದಲ್ಲಿ ಈ ಜನರ ಹೆಸರುಗಳನ್ನು ಬರೆದೇ ಇಲ್ಲ.
ಈ ಎರಡನೆಯ ಮೃಗವು ಅದ್ಭುತಗಳನ್ನು ಮಾಡಲು ತನಗೆ ನೀಡಿರುವ ಶಕ್ತಿಯಿಂದ ಭೂಮಿಯ ಮೇಲೆ ವಾಸಿಸುವ ಜನರನ್ನು ಮರುಳು ಗೊಳಿಸುತ್ತದೆ. ಮೊದಲನೆಯ ಮೃಗದ ಸೇವೆಯನ್ನು ಮಾಡಲು ಅದು ಈ ಅದ್ಭುತಗಳನ್ನು ಮಾಡುತ್ತದೆ. ಕತ್ತಿಯಿಂದ ಗಾಯಗೊಂಡಿದ್ದೂ ಸಾಯದೆ ಬದುಕಿದ ಮೊದಲನೆಯ ಮೃಗಕ್ಕೆ ಗೌರವ ತೋರಲು ವಿಗ್ರಹವನ್ನು ನಿರ್ಮಿಸುವಂತೆ ಅದು ಜನರಿಗೆ ಆಜ್ಞಾಪಿಸಿತು.
ಲೋಕದಲ್ಲಿ ವಾಸಿಸುವ ಜನರೆಲ್ಲರೂ ಆ ಮೃಗವನ್ನು ಆರಾಧಿಸುತ್ತಾರೆ. ಲೋಕವು ಆರಂಭಗೊಂಡಂದಿನಿಂದಲೂ ಕೊಲ್ಲಲ್ಪಟ್ಟ ಕುರಿಮರಿಯಾದಾತನ ಜೀವಬಾಧ್ಯರ ಪುಸ್ತಕದಲ್ಲಿ ಯಾರ ಹೆಸರುಗಳನ್ನು ಬರೆದಿಲ್ಲವೋ ಅವರೇ ಈ ಜನರು.
ಮೃಗದ ತಲೆಗಳಲ್ಲಿ ಒಂದು ತಲೆಯು ಗಾಯಗೊಂಡು ಸತ್ತಂತೆ ಕಾಣುತ್ತಿತ್ತು. ಆದರೆ ಮರಣಕರವಾದ ಈ ಗಾಯವನ್ನು ವಾಸಿಮಾಡಲಾಯಿತು. ಈ ಲೋಕದಲ್ಲಿದ್ದ ಜನರೆಲ್ಲರೂ ಆಶ್ಚರ್ಯಗೊಂಡು ಆ ಮೃಗವನ್ನು ಹಿಂಬಾಲಿಸಿದರು.
ಆ ಘಟಸರ್ಪವನ್ನು ಪರಲೋಕದಿಂದ (ಆ ಘಟಸರ್ಪಕ್ಕೆ ಸೈತಾನನೆಂತಲೂ ಪಿಶಾಚನೆಂತಲೂ ಹೆಸರಿದೆ. ಅದು ಲೋಕವನ್ನೆಲ್ಲಾ ತಪ್ಪು ಮಾರ್ಗಕ್ಕೆ ಎಳೆಯುತ್ತಿತ್ತು.) ಅದರ ದೂತರೊಂದಿಗೆ ಭೂಮಿಯ ಮೇಲೆ ಎಸೆಯಲಾಯಿತು.
ಆಗ ಅರಸನಾದ ನೆಬೂಕದ್ನೆಚ್ಚರನು ದಾನಿಯೇಲನ ಮುಂದೆ ಅಡ್ಡಬಿದ್ದು ಅವನನ್ನು ಹೊಗಳಿದನು; ಅವನ ಗೌರವಾರ್ಥವಾಗಿ ಧೂಪಹಾಕಿ ನೈವೇದ್ಯಮಾಡಬೇಕೆಂದು ಆಜ್ಞಾಪಿಸಿದನು. ಆಮೇಲೆ ಅರಸನು ದಾನಿಯೇಲನಿಗೆ,
ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೇ ನೀವು ಅಡ್ಡಬೀಳಬೇಕು. ಇದು ರಾಜಾಜ್ಞೆ. ತುತ್ತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ, ವಾಲಗ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ನೀವು ಬಂಗಾರದ ವಿಗ್ರಹವನ್ನು ಪೂಜಿಸಬೇಕು. ಅರಸನಾದ ನೆಬೂಕದ್ನೆಚ್ಚರನು ಈ ವಿಗ್ರಹವನ್ನು ನಿಲ್ಲಿಸಿದ್ದಾನೆ.
ಅರಸನೇ, ತುತ್ತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ, ವಾಲಗ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಪ್ರತಿಯೊಬ್ಬನೂ ಅಡ್ಡಬಿದ್ದು ಬಂಗಾರದ ವಿಗ್ರಹವನ್ನು ಪೂಜಿಸಬೇಕು ಎಂದು ತಾವು ಆಜ್ಞೆ ಕೊಟ್ಟಿದ್ದೀರಿ.