Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 4:1 - ಪರಿಶುದ್ದ ಬೈಬಲ್‌

1 ಲೋಕದಲ್ಲೆಲ್ಲ ವಾಸಿಸುವ ಸಕಲ ಜನಾಂಗ, ಕುಲ, ಭಾಷೆಗಳ ಜನರಿಗೆ ಅರಸನಾದ ನೆಬೂಕದ್ನೆಚ್ಚರನು ಈ ಪತ್ರವನ್ನು ಕಳುಹಿಸಿದನು. ಶುಭಾಶಯಗಳು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಲೋಕದಲ್ಲೆಲ್ಲಾ ವಾಸಿಸುವ ಸಕಲ ಜನಾಂಗ, ಕುಲ ಭಾಷೆಗಳವರಿಗೆ ರಾಜನಾದ ನೆಬೂಕದ್ನೆಚ್ಚರನ ಪ್ರಕಟನೆ, “ನಿಮಗೆ ಸುಖವು ಹೆಚ್ಚೆಚ್ಚಾಗಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಜಗದಲ್ಲಿ ವಾಸಿಸುವ ಎಲ್ಲಾ ಜನಾಂಗದವರಿಗೂ ಕುಲದವರಿಗೂ ಭಾಷೆಯವರಿಗೂ ರಾಜ ನೆಬೂಕದ್ನೆಚ್ಚರನು ಹೊರಡಿಸಿದ ಪ್ರಕಟಣೆ - “ನಿಮಗೆ ಹೆಚ್ಚೆಚ್ಚು ಸುಖಶಾಂತಿ ಲಭಿಸಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಲೋಕದಲ್ಲೆಲ್ಲಾ ವಾಸಿಸುವ ಸಕಲ ಜನಾಂಗಕುಲಭಾಷೆಗಳವರಿಗೆ ರಾಜನಾದ ನೆಬೂಕದ್ನೆಚ್ಚರನ ಪ್ರಕಟನೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಅರಸನಾದ ನೆಬೂಕದ್ನೆಚ್ಚರನು, ಭೂಲೋಕದಲ್ಲೆಲ್ಲಾ ವಾಸಮಾಡುವ ಎಲ್ಲಾ ಪ್ರಜೆಗಳಿಗೂ, ಜನಾಂಗಗಳಿಗೂ, ಭಾಷೆಯವರಿಗೂ, ನಿಮಗೆ ಶಾಂತಿಯು ಹೆಚ್ಚಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 4:1
16 ತಿಳಿವುಗಳ ಹೋಲಿಕೆ  

ಆಗ ಅರಸನಾದ ದಾರ್ಯಾವೆಷನು ಲೋಕದಲ್ಲೆಲ್ಲಾ ವಾಸಿಸುವ ಸಕಲ ಜನಾಂಗ ಕುಲಭಾಷೆಗಳವರಿಗೆ ಈ ಪತ್ರವನ್ನು ಬರೆದನು: ಶುಭಾಶಯಗಳು.


ದೇವರು ನಿಮ್ಮನ್ನು ಪರಿಶುದ್ಧರನ್ನಾಗಿ ಮಾಡುವುದರ ಮೂಲಕ ಆರಿಸಿಕೊಳ್ಳಲು ಬಹುಕಾಲದ ಹಿಂದೆಯೇ ಯೋಜನೆ ಮಾಡಿದ್ದನು. ನಿಮ್ಮನ್ನು ಪರಿಶುದ್ಧರನ್ನಾಗಿ ಮಾಡುವುದು ಪರಿಶುದ್ಧಾತ್ಮನ ಕಾರ್ಯ. ನೀವು ಯೇಸು ಕ್ರಿಸ್ತನ ರಕ್ತದ ಮೂಲಕ ಪರಿಶುದ್ಧರಾಗಿ ತನಗೆ ವಿಧೇಯರಾಗಬೇಕೆಂಬುದು ದೇವರ ಅಪೇಕ್ಷೆಯಾಗಿತ್ತು. ಕೃಪೆಯೂ ಶಾಂತಿಯೂ ನಿಮಗೆ ಅಧಿಕವಾಗಿ ಲಭಿಸಲಿ.


ಆಗ ಸಾರುವವನು ದೊಡ್ಡ ಧ್ವನಿಯಲ್ಲಿ, “ವಿವಿಧ ಜನಾಂಗ, ಕುಲ, ಭಾಷೆಗಳ ಜನರೇ, ನಾನು ಹೇಳುವುದನ್ನು ಕೇಳಿರಿ.


ನಮ್ಮ ತಂದೆಯಾದ ದೇವರು ಮತ್ತು ಪ್ರಭುವಾದ ಯೇಸು ಕ್ರಿಸ್ತನು ನಿಮಗೆ ಕೃಪೆಯನ್ನೂ ಶಾಂತಿಯನ್ನೂ ದಯಪಾಲಿಸಲಿ.


ನಾನು ಈಗ ಸಕಲ ಜನಾಂಗ, ಕುಲ, ಭಾಷೆಗಳ ಜನರಲ್ಲಿ ಯಾರಾದರೂ ಶದ್ರಕ್, ಮೇಶಕ್, ಅಬೇದ್‌ನೆಗೋ ಇವರ ದೇವರ ವಿರುದ್ಧವಾಗಿ ಮಾತನಾಡಿದರೆ ಅವರನ್ನು ತುಂಡುತುಂಡಾಗಿ ಕತ್ತರಿಸಿ ಅವರ ಮನೆಗಳನ್ನು ತಿಪ್ಪೆಯನ್ನಾಗಿ ಮಾಡಬೇಕೆಂಬ ಆಜ್ಞೆಯನ್ನು ವಿಧಿಸುತ್ತೇನೆ. ಬೇರೆ ಯಾವ ದೇವರೂ ತನ್ನ ಭಕ್ತರನ್ನು ಈ ರೀತಿ ರಕ್ಷಿಸಲಾರನು” ಎಂದು ಹೇಳಿದನು.


ಈ ಪತ್ರಕ್ಕೆ ಅರಸನಾದ ಅರ್ತಷಸ್ತನು ಈ ರೀತಿಯಾಗಿ ಉತ್ತರಿಸಿದನು. ದೇಶಾಧಿಪತಿಯಾದ ರೆಹೂಮನಿಗೂ ಕಾರ್ಯದರ್ಶಿಯಾದ ಶಿಂಷೈಗೂ ಮತ್ತು ಸಮಾರ್ಯದಲ್ಲೂ ಯೂಫ್ರೇಟೀಸ್ ಪಶ್ಚಿಮ ಪ್ರಾಂತ್ಯದಲ್ಲೂ ವಾಸಿಸುವ ಜನರಿಗೆ ವಂದನೆಗಳು.


ಮೂವತ್ತು ಮಂದಿ ಶೂರರ ನಾಯಕನಾದ ಅಮಾಸೈಯು ಆತ್ಮನಿಂದ ತುಂಬಿದವನಾಗಿ ಹೇಳಿದ್ದೇನೆಂದರೆ: “ದಾವೀದನೇ, ನಾವು ನಿನ್ನವರು. ಇಷಯನ ಮಗನೇ, ನಾವು ನಿನಗೆ ಸೇರಿದವರು; ನಿನಗೆ ಸಮಾಧಾನ ಕೋರುವವರು; ನಿನಗೆ ಸಹಾಯ ಮಾಡುವವರಿಗೆ ಸಮಾಧಾನ ಕೋರುವೆವು; ಯಾಕೆಂದರೆ ನಿನ್ನ ದೇವರು ನಿನಗೆ ಸಹಾಯಮಾಡುತ್ತಿದ್ದಾನೆ.” ದಾವೀದನು ಇವರನ್ನು ಸ್ವಾಗತಿಸಿ ತನ್ನ ಸೈನ್ಯಾಧಿಪತಿಗಳನ್ನಾಗಿ ಮಾಡಿದನು.


ನೀನು ನಂಬಿಕೆ ಉಳ್ಳವನಾಗಿರುವುದರಿಂದ ನನಗೆ ನಿಜವಾದ ಮಗನಂತಿರುವೆ. ತಂದೆಯಾದ ದೇವರಿಂದ ಮತ್ತು ನಮ್ಮ ಪ್ರಭುವಾದ ಕ್ರಿಸ್ತ ಯೇಸುವಿನಿಂದ ಕೃಪೆಯೂ ಕರುಣೆಯೂ ಶಾಂತಿಯೂ ನಿನಗೆ ಲಭಿಸಲಿ.


ರೋಮಿನಲ್ಲಿರುವವರೂ ದೇವರ ಪವಿತ್ರ ಜನರಾಗಿರುವುದಕ್ಕಾಗಿ ದೇವರಿಂದಲೇ ಕರೆಯಲ್ಪಟ್ಟವರೂ ಆಗಿರುವ ನಿಮ್ಮೆಲ್ಲರಿಗೆ ಈ ಪತ್ರವನ್ನು ಬರೆಯುತ್ತಿದ್ದೇನೆ. ನೀವು ದೇವರಿಗೆ ಪ್ರಿಯರಾದ ಜನರಾಗಿದ್ದೀರಿ. ನಮ್ಮ ತಂದೆಯಾದ ದೇವರಿಂದಲೂ ಪ್ರಭುವಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ.


ಈ ಶಬ್ದವನ್ನು ಕೇಳಿ ಈ ಜನರ ಒಂದು ದೊಡ್ಡ ಸಮೂಹವೇ ಅಲ್ಲಿಗೆ ಬಂದಿತು. ಅಪೊಸ್ತಲರು ಮಾತಾಡುತ್ತಿರುವುದು ಪ್ರತಿಯೊಬ್ಬರಿಗೂ ಅವರವರ ಸ್ವಂತ ಭಾಷೆಗಳಲ್ಲಿ ಕೇಳಿಸುತ್ತಿರುವುದನ್ನು ಕಂಡು ಅವರಿಗೆ ಆಶ್ಚರ್ಯವಾಯಿತು.


ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ: “ಆ ಸಮಯದಲ್ಲಿ ಬೇರೆಬೇರೆ ಭಾಷೆಗಳನ್ನು ಮಾತಾಡುವ ಅನೇಕ ವಿದೇಶಿಯರು ಯೆಹೂದ್ಯನೊಬ್ಬನ ಬಳಿಗೆ ಬಂದು, ಅವನ ಬಟ್ಟೆಯ ಅಂಚನ್ನು ಹಿಡಿದು, ‘ದೇವರು ನಿಮ್ಮೊಂದಿಗಿದ್ದಾನೆಂದು ನಾವು ಕೇಳಿದ್ದೇವೆ. ನಿಮ್ಮೊಂದಿಗೆ ನಾವೂ ಬಂದು ಆತನನ್ನು ಆರಾಧಿಸಬಹುದೋ?’” ಎಂದು ಕೇಳುವರು.


“ಮನುಷ್ಯಕುಮಾರನಂತಿರುವ ಆ ವ್ಯಕ್ತಿಗೆ ದೊರೆತನ, ಮಹಿಮೆ ಮತ್ತು ಆಳುವ ಸಂಪೂರ್ಣ ಅಧಿಕಾರವನ್ನು ಕೊಡಲಾಯಿತು. ಸಕಲ ಜನರು, ಜನಾಂಗಗಳು ಮತ್ತು ಎಲ್ಲ ಭಾಷೆಯ ಜನರು ಆತನನ್ನು ಸೇವಿಸುವರು. ಆತನ ಅಧಿಕಾರವು ಶಾಶ್ವತ, ಆತನ ರಾಜ್ಯವು ಎಂದಿಗೂ ಅಳಿಯದು.


ದೇವರು ಜನರಿಗೆ ಸಹಾಯ ಮಾಡುತ್ತಾನೆ ಮತ್ತು ರಕ್ಷಿಸುತ್ತಾನೆ. ದೇವರು ಭೂಮ್ಯಾಕಾಶಗಳಲ್ಲಿ ಅದ್ಭುತಕಾರ್ಯಗಳನ್ನು ಮಾಡುತ್ತಾನೆ. ದೇವರು ದಾನಿಯೇಲನನ್ನು ಸಿಂಹಗಳಿಂದ ರಕ್ಷಿಸಿದನು.


ಕೂಡಲೇ ರಾಜಲೇಖಕರನ್ನು ಕರೆಯಿಸಿ ಅವರಿಂದ ಮೊರ್ದೆಕೈ ಹೇಳಿದಂತೆ ರಾಜಾಜ್ಞೆಯನ್ನು ಸಾಮ್ರಾಜ್ಯದ ನಾನಾ ಭಾಷೆಗಳಲ್ಲಿ ಬರೆಯಿಸಲಾಯಿತು. ಹಿಂದೂಸ್ಥಾನದಿಂದ ಹಿಡಿದು ಇಥಿಯೋಪ್ಯದ ತನಕ ರಾಜ್ಯದ ನೂರಿಪ್ಪತ್ತೇಳು ಸಂಸ್ಥಾನಗಳ ಅಧಿಕಾರಿಗಳಿಗೆ, ಎಲ್ಲಾ ರಾಜ್ಯಪಾಲರಿಗೆ, ಜನನಾಯಕರಿಗೆ ಮತ್ತು ಯೆಹೂದ್ಯರಿಗೆ ಆಯಾ ಭಾಷೆಗಳ ಲಿಪಿಗಳಲ್ಲಿ ಮೂರನೇ ತಿಂಗಳಾದ ಸೀವಾನ್ ಮಾಸದ ಇಪ್ಪತ್ತಮೂರನೇ ದಿವಸದಲ್ಲಿ ಬರೆಯಿಸಲಾಯಿತು.


ಮೊದಲನೆ ತಿಂಗಳಿನ ಹದಿಮೂರನೇ ದಿವಸದಂದು ರಾಜಲೇಖಕರನ್ನು ಕರೆಯಿಸಿ ಹಾಮಾನನ ಆಜ್ಞೆಯನ್ನು ಆಯಾಭಾಷೆಗಳಲ್ಲಿ ಬರೆಯಿಸಿದನು. ರಾಜನ ಸಂಸ್ಥಾನಾಧಿಕಾರಿಗಳಿಗೆ, ರಾಜ್ಯಪಾಲರಿಗೆ ಮತ್ತು ವಿವಿಧ ಜನಾಂಗದ ಅಧಿಕಾರಿಗಳಿಗೆ ಅರಸನಾದ ಅಹಷ್ವೇರೋಷನ ಹೆಸರಿನಲ್ಲಿ ಬರೆದು ಅದಕ್ಕೆ ರಾಜನ ಮುದ್ರೆಯನ್ನೊತ್ತಲಾಯಿತು.


ಪತ್ರದ ನಕಲು ಹೀಗಿದೆ: ಅರಸನಾದ ದಾರ್ಯಾವೆಷನಿಗೆ ವಂದನೆಗಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು