ದಾನಿಯೇಲ 4:13 - ಪರಿಶುದ್ದ ಬೈಬಲ್13 “ನಾನು ನನ್ನ ಹಾಸಿಗೆಯಲ್ಲಿ ಮಲಗಿಕೊಂಡು ನನ್ನ ದರ್ಶನದಲ್ಲಿ ಅದೆಲ್ಲವನ್ನು ನೋಡುತ್ತಿದ್ದೆ. ಆಗ ಪವಿತ್ರ ದೇವದೂತನೊಬ್ಬನು ಆಕಾಶದಿಂದ ಕೆಳಗಿಳಿದು ಬರುವುದನ್ನು ಕಂಡೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ನಾನು ಹಾಸಿಗೆಯ ಮೇಲೆ ಮಲಗಿದ್ದಾಗ ನನ್ನ ಮನಸ್ಸಿಗೆ ಬಿದ್ದ ಕನಸಿನಲ್ಲಿ ನೋಡಲಾಗಿ ದೇವದೂತನು ಆಕಾಶದಿಂದಿಳಿದು ಗಟ್ಟಿಯಾಗಿ ಕೂಗಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ‘ನಾನು ಹಾಸಿಗೆ ಮೇಲೆ ಮಲಗಿದ್ದಾಗ ನನ್ನ ಮನಸ್ಸಿಗೆ ಬಿದ್ದ ಕನಸಿನಲ್ಲಿ, ಇಗೋ, ಕಾವಲುಗಾರನಾದ ದೇವದೂತನೊಬ್ಬನು ಆಕಾಶದಿಂದ ಇಳಿದು, ಗಟ್ಟಿಯಾಗಿ ಕೂಗಿ: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ನಾನು ಹಾಸಿಗೆಯ ಮೇಲೆ ಮಲಗಿದ್ದಾಗ ನನ್ನ ಮನಸ್ಸಿಗೆ ಬಿದ್ದ ಕನಸಿನಲ್ಲಿ ಅನಿವಿುಷನಾದ ದೇವದೂತನು ಆಕಾಶದಿಂದಿಳಿದು ಗಟ್ಟಿಯಾಗಿ ಕೂಗಿ - ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 “ನನ್ನ ಹಾಸಿಗೆಯ ಮೇಲೆ ಮಲಗಿದ್ದಾಗ, ದರ್ಶನಗಳನ್ನು ನಾನು ನೋಡಲಾಗಿ, ಒಬ್ಬ ದೂತನಾದ ಪರಿಶುದ್ಧನೊಬ್ಬನು ಪರಲೋಕದಿಂದ ಇಳಿದು ಬಂದನು. ಅಧ್ಯಾಯವನ್ನು ನೋಡಿ |
ಆಗ ಒಬ್ಬ ಪವಿತ್ರನು ಮಾತನಾಡುವದನ್ನು ಕೇಳಿದೆ. ಮತ್ತೊಬ್ಬ ಪವಿತ್ರನು ಮೊದಲನೆಯ ಪವಿತ್ರನಿಗೆ ಉತ್ತರಿಸುವದನ್ನೂ ಕೇಳಿದೆ. ಮೊದಲನೆಯ ಪವಿತ್ರನು, “ಈ ದರ್ಶನ ನಿತ್ಯಹೋಮಗಳಿಗೆ ಏನಾಗುವದೆಂಬುದನ್ನು ತೋರಿಸುವದು. ಇದು ಆ ಭಯಾನಕ ಪಾಪದ ಕುರಿತಾಗಿದೆ. ಅಧಿಪತಿಯು ಆರಾಧಿಸಲ್ಪಡುವ ಪವಿತ್ರಾಲಯವನ್ನು ಜನರು ಹಾಳುಮಾಡಿದರೆ, ಜನರು ಆ ಸ್ಥಳವನ್ನು ತುಳಿದಾಡಿದರೆ, ಆ ನಕ್ಷತ್ರಗಳ ಮೇಲೆ ಜನರು ನಡೆದಾಡಿದರೆ ಏನಾಗುವದೆಂಬುದನ್ನು ಇದು ತೋರಿಸಿಕೊಡುತ್ತದೆ. ಆದರೆ ಇದೆಲ್ಲ ಎಷ್ಟು ದಿನ ನಡೆಯುವದು?” ಎಂದನು.
“ಅರಸನೇ, ನೀನು ಆಕಾಶದಿಂದ ಇಳಿದುಬರುತ್ತಿದ್ದ ಒಬ್ಬ ಪರಿಶುದ್ಧ ದೇವದೂತನನ್ನು ಕಂಡೆ. ಅವನು, ‘ಮರವನ್ನು ಕಡಿದು ನಾಶಮಾಡಿರಿ. ಅದರ ಬುಡದ ಮೋಟಿನ ಸುತ್ತಲೂ ಕಬ್ಬಿಣದ ಮತ್ತು ಕಂಚಿನ ಒಂದು ಪಟ್ಟಿಯನ್ನು ಹಾಕಿರಿ. ಆ ಬುಡದ ಮೋಟನ್ನು ಮತ್ತು ಬೇರುಗಳನ್ನು ಭೂಮಿಯಲ್ಲಿ ಬಿಟ್ಟುಬಿಡಿ. ಅದರ ಸುತ್ತಲೂ ಕಾಡಿನ ಹುಲ್ಲು ಬೆಳೆಯಲಿ. ಅದು ಇಬ್ಬನಿಯಿಂದ ತೋಯ್ದು ಹೋಗಲಿ. ಅದು ಕಾಡುಪ್ರಾಣಿಯಂತೆ ಇರುವುದು. ಅದು ಏಳು ವರ್ಷ ಕಳೆಯುವವರೆಗೆ ಹಾಗೆಯೇ ಇರುವುದು’ ಎಂದು ಹೇಳಿದನು.