ದಾನಿಯೇಲ 4:14 - ಪರಿಶುದ್ದ ಬೈಬಲ್14 ಅವನು ಮಹಾ ಧ್ವನಿಯಿಂದ, ‘ಮರವನ್ನು ಕಡಿದುಹಾಕಿರಿ; ಅದರ ಕೊಂಬೆಗಳನ್ನು ಕಡಿದುಹಾಕಿರಿ; ಅದರ ಎಲೆಗಳನ್ನು ಕಿತ್ತುಹಾಕಿರಿ; ಹಣ್ಣುಗಳನ್ನು ಸುತ್ತಲೂ ಉದುರಿಸಿಬಿಡಿ. ಮರದ ಕೆಳಗೆ ಇದ್ದ ಪ್ರಾಣಿಗಳು ಓಡಿಹೋಗುವವು. ಅದರ ಕೊಂಬೆಗಳಲ್ಲಿ ವಾಸವಾಗಿದ್ದ ಪಕ್ಷಿಗಳು ಹಾರಿಹೋಗುವವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ವೃಕ್ಷವನ್ನು ಕಡಿಯಿರಿ, ಕೊಂಬೆಗಳನ್ನು ಕತ್ತರಿಸಿರಿ, ಎಲೆಗಳನ್ನು ಉದುರಿಸಿರಿ, ಹಣ್ಣುಗಳನ್ನು ಚೆಲ್ಲಿರಿ; ಮೃಗಗಳು ನೆರಳನ್ನು ಬಿಟ್ಟುಬಿಡಲಿ, ಪಕ್ಷಿಗಳು ರೆಂಬೆಗಳನ್ನು ತೊರೆದು ಹೋಗಲಿ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಆ ಮರವನ್ನು ಕಡಿಯಿರಿ, ಕೊಂಬೆಗಳನ್ನು ಕತ್ತರಿಸಿ, ಎಲೆಗಳನ್ನು ಉದುರಿಸಿ, ಹಣ್ಣುಗಳನ್ನು ಕಿತ್ತುಬಿಸಾಡಿ. ಮೃಗಗಳು ಅದರ ನೆರಳನ್ನು ಬಿಟ್ಟು ತೆರಳಲಿ, ಪಕ್ಷಿಗಳು ರೆಂಬೆಗಳನ್ನು ತೊರೆದುಹೋಗಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ವೃಕ್ಷವನ್ನು ಕಡಿಯಿರಿ, ಕೊಂಬೆಗಳನ್ನು ಕತ್ತರಿಸಿರಿ, ಎಲೆಗಳನ್ನು ಉದುರಿಸಿರಿ, ಹಣ್ಣುಗಳನ್ನು ಚೆಲ್ಲಿರಿ; ಮೃಗಗಳು ನೆರಳನ್ನು ಬಿಟ್ಟುಬಿಡಲಿ, ಪಕ್ಷಿಗಳು ರೆಂಬೆಗಳನ್ನು ತೊರೆದು ಹೋಗಲಿ! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಅವನು ಗಟ್ಟಿಯಾಗಿ ಕೂಗಿ: ‘ಮರವನ್ನು ಕಡಿಯಿರಿ. ಅದರ ಕೊಂಬೆಗಳನ್ನು ಕತ್ತರಿಸಿ, ಅದರ ಎಲೆಗಳನ್ನು ಉದುರಿಸಿ, ಅದರ ಫಲವನ್ನು ಚದುರಿಸಿಬಿಡಿರಿ. ಮೃಗಗಳು ಅದರ ಕೆಳಗಿನಿಂದಲೂ, ಪಕ್ಷಿಗಳು ಅದರ ಕೊಂಬೆಗಳಿಂದಲೂ ಹೋಗಿಬಿಡಲಿ. ಅಧ್ಯಾಯವನ್ನು ನೋಡಿ |
“ಅರಸನೇ, ನೀನು ಆಕಾಶದಿಂದ ಇಳಿದುಬರುತ್ತಿದ್ದ ಒಬ್ಬ ಪರಿಶುದ್ಧ ದೇವದೂತನನ್ನು ಕಂಡೆ. ಅವನು, ‘ಮರವನ್ನು ಕಡಿದು ನಾಶಮಾಡಿರಿ. ಅದರ ಬುಡದ ಮೋಟಿನ ಸುತ್ತಲೂ ಕಬ್ಬಿಣದ ಮತ್ತು ಕಂಚಿನ ಒಂದು ಪಟ್ಟಿಯನ್ನು ಹಾಕಿರಿ. ಆ ಬುಡದ ಮೋಟನ್ನು ಮತ್ತು ಬೇರುಗಳನ್ನು ಭೂಮಿಯಲ್ಲಿ ಬಿಟ್ಟುಬಿಡಿ. ಅದರ ಸುತ್ತಲೂ ಕಾಡಿನ ಹುಲ್ಲು ಬೆಳೆಯಲಿ. ಅದು ಇಬ್ಬನಿಯಿಂದ ತೋಯ್ದು ಹೋಗಲಿ. ಅದು ಕಾಡುಪ್ರಾಣಿಯಂತೆ ಇರುವುದು. ಅದು ಏಳು ವರ್ಷ ಕಳೆಯುವವರೆಗೆ ಹಾಗೆಯೇ ಇರುವುದು’ ಎಂದು ಹೇಳಿದನು.
ಕನಸು ಕಂಡ ಹನ್ನೆರಡು ತಿಂಗಳುಗಳಾದ ಮೇಲೆ ಅರಸನಾದ ನೆಬೂಕದ್ನೆಚ್ಚರನು ಬಾಬಿಲೋನಿನಲ್ಲಿದ್ದ ಅರಮನೆಯ ಮಾಳಿಗೆಯ ಮೇಲೆ ತಿರುಗಾಡುತ್ತಿದ್ದನು. ಮಾಳಿಗೆಯ ಮೇಲಿದ್ದಾಗ ಅರಸನು, “ಈ ಬಾಬಿಲೋನ್ ನಗರವನ್ನು ನೋಡಿ, ನಾನು ಈ ಮಹಾನಗರವನ್ನು ಕಟ್ಟಿದೆ. ಇದು ನನ್ನ ಅರಮನೆ. ನಾನು ನನ್ನ ಸಾಮರ್ಥ್ಯದಿಂದ ಈ ಅರಮನೆಯನ್ನು ಕಟ್ಟಿದೆ. ನಾನು ಎಂಥಾ ದೊಡ್ಡವನು ಎಂದು ಲೋಕಕ್ಕೆ ತೋರಿಸಲು ನಾನು ಈ ಅರಮನೆಯನ್ನು ಕಟ್ಟಿದೆ” ಎಂದು ತನ್ನಷ್ಟಕ್ಕೆ ತಾನೇ ಹೇಳಿಕೊಳ್ಳುತ್ತಿದ್ದನು.
ಅನಂತರ ನೆಬೂಕದ್ನೆಚ್ಚರನನ್ನು ಜನರ ಮಧ್ಯದಿಂದ ಓಡಿಸಲಾಯಿತು. ಅವನ ಬುದ್ಧಿಯು ಮೃಗಬುದ್ಧಿಯಂತಾಯಿತು. ಅವನು ಕಾಡುಕತ್ತೆಗಳ ಜೊತೆ ವಾಸಿಸಿದನು; ಹಸುಗಳಂತೆ ಹುಲ್ಲು ತಿಂದನು; ಮಂಜಿನಲ್ಲಿ ನೆನೆದನು. ಅವನಿಗೆ ಸರಿಯಾದ ಬುದ್ಧಿ ಬರುವತನಕ ಅವನು ಆ ಸ್ಥಿತಿಯಲ್ಲಿದ್ದನು. ಆಗ ಅವನು ಮಹೋನ್ನತನಾದ ದೇವರೇ ಮಾನವರ ಸಾಮ್ರಾಜ್ಯವನ್ನು ಆಳುತ್ತಾನೆ ಮತ್ತು ಆ ಸಾಮ್ರಾಜ್ಯಕ್ಕೆ ತನಗೆ ಬೇಕಾದವರನ್ನು ಅರಸರನ್ನಾಗಿ ನೇಮಿಸುತ್ತಾನೆ ಎಂಬುದನ್ನು ತಿಳಿದುಕೊಂಡನು.