ದಾನಿಯೇಲ 4:2 - ಪರಿಶುದ್ದ ಬೈಬಲ್2 ಮಹೋನ್ನತನಾದ ದೇವರು ನನಗೋಸ್ಕರ ಮಾಡಿದ ಸೂಚಕಕಾರ್ಯಗಳನ್ನು ಮತ್ತು ಅದ್ಭುತಕಾರ್ಯಗಳನ್ನು ನಿಮಗೆ ತಿಳಿಸಲು ನನಗೆ ಬಹಳ ಸಂತೋಷವಾಗುತ್ತದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಪರಾತ್ಪರನಾದ ದೇವರು ನನ್ನ ವಿಷಯದಲ್ಲಿ ನಡೆಸಿರುವ ಮಹತ್ತುಗಳನ್ನೂ, ಅದ್ಭುತಗಳನ್ನೂ ಪ್ರಚುರಪಡಿಸಬೇಕೆಂಬುವುದು ನನಗೆ ಸ್ಪಷ್ಟವಾಗಿ ತೋರಿಬಂದಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಪರಾತ್ಪರ ದೇವರು ನನ್ನ ವಿಷಯದಲ್ಲಿ ನಡೆಸಿರುವ ಸೂಚಕಕಾರ್ಯಗಳನ್ನೂ ಅದ್ಭುತಗಳನ್ನೂ ಪ್ರಚುರಪಡಿಸುವುದು ನನಗೆ ವಿಹಿತವೆಂದು ತೋರಿಬಂದಿದೆ: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ನಿಮಗೆ ಸುಖವು ಹೆಚ್ಚೆಚ್ಚಾಗಲಿ! ಪರಾತ್ಪರದೇವರು ನನ್ನ ವಿಷಯದಲ್ಲಿ ನಡಿಸಿರುವ ಮಹತ್ತುಗಳನ್ನೂ ಅದ್ಭುತಗಳನ್ನೂ ಪ್ರಚುರಪಡಿಸಬೇಕೆಂಬದು ನನಗೆ ವಿಹಿತವಾಗಿ ತೋರಿಬಂದಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಮಹೋನ್ನತ ದೇವರು ನನ್ನ ವಿಷಯದಲ್ಲಿ ನಡೆಸಿರುವ ಸೂಚಕಕಾರ್ಯಗಳನ್ನೂ, ಅದ್ಭುತಗಳನ್ನೂ ಪ್ರಚುರಪಡಿಸಬೇಕೆಂದು ನನಗೆ ವಿಹಿತವಾಗಿ ತೋರಿ ಬಂದಿದೆ. ಅಧ್ಯಾಯವನ್ನು ನೋಡಿ |
ರಾಜನಾದ ನೆಬೂಕದ್ನೆಚ್ಚರನೇ, ನಿನ್ನನ್ನು ಬಲವಂತದಿಂದ ಜನರಿಂದ ದೂರಮಾಡುವರು. ನೀನು ಕಾಡುಪ್ರಾಣಿಗಳೊಂದಿಗೆ ವಾಸಮಾಡುವೆ; ಹಸುಗಳಂತೆ ಹುಲ್ಲು ತಿನ್ನುವೆ; ಇಬ್ಬನಿಯಿಂದ ತೋಯಿಸಿಕೊಳ್ಳುವೆ. ಏಳು ವರ್ಷಗಳು ಕಳೆಯುವವು. ಆಗ ನೀನು ಮಹೋನ್ನತನಾದ ದೇವರು ಮಾನವರ ಸಾಮ್ರಾಜ್ಯದ ಮೇಲೆ ಆಳ್ವಿಕೆ ಮಾಡುತ್ತಾನೆ ಮತ್ತು ತನಗೆ ಬೇಕಾದವರಿಗೆ ರಾಜ್ಯವನ್ನು ಕೊಡುತ್ತಾನೆ ಎಂಬ ಪಾಠವನ್ನು ಕಲಿಯುವೆ.