Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 4:22 - ಪರಿಶುದ್ದ ಬೈಬಲ್‌

22 ಅರಸನೇ, ನೀನೇ ಆ ಮರ. ನೀನು ಪ್ರಖ್ಯಾತನೂ ಮತ್ತು ಪ್ರಬಲನೂ ಆಗಿರುವೆ. ನೀನು ಗಗನಚುಂಬಿಯಾದ ಆ ಮರದಂತೆ ಬೆಳೆದಿರುವೆ. ನಿನ್ನ ಪ್ರಾಬಲ್ಯವು ಈ ಭೂಮಿಯಲ್ಲಿ ದೂರದೂರದವರೆಗೆ ಹಬ್ಬಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆ ವೃಕ್ಷವು ನೀನೇ; ರಾಜಾ, ನೀನು ಬೆಳೆದು ಬಲಗೊಂಡಿದ್ದೀ, ನಿನ್ನ ಮಹಿಮೆಯು ವೃದ್ಧಿಯಾಗಿ ಆಕಾಶಕ್ಕೆ ಮುಟ್ಟಿದೆ, ನಿನ್ನ ಆಳ್ವಿಕೆಯು ಲೋಕದ ಕಟ್ಟಕಡೆಗೂ ವ್ಯಾಪಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 “ರಾಜರೇ, ನೀವು ಬೆಳೆದು ಬಲಗೊಂಡಿದ್ದೀರಿ. ನಿಮ್ಮ ಕೀರ್ತಿ ವೃದ್ಧಿಯಾಗಿ ಗಗನಕ್ಕೇರಿದೆ. ನಿಮ್ಮ ಆಳ್ವಿಕೆ ಲೋಕದ ಕಟ್ಟಕಡೆಗೂ ವ್ಯಾಪಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ರಾಜಾ, ನೀನು ಬೆಳೆದು ಬಲಗೊಂಡಿದ್ದೀ, ನಿನ್ನ ಮಹಿಮೆಯು ವೃದ್ಧಿಯಾಗಿ ಆಕಾಶಕ್ಕೆ ಮುಟ್ಟಿದೆ, ನಿನ್ನ ಆಳಿಕೆಯು ಲೋಕದ ಕಟ್ಟಕಡೆಗೂ ವ್ಯಾಪಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಅರಸನೇ, ಆ ಮರವು ನೀನೇ ಆಗಿರುವೆ. ನೀನು ಬೆಳೆದು ಬಲವಾಗಿರುವೆ. ಹೌದು, ನಿನ್ನ ಮಹತ್ತು ಬೆಳೆದು ಆಕಾಶಕ್ಕೂ, ನಿನ್ನ ಅಧಿಕಾರವು ಭೂಮಿಯ ಅಂತ್ಯದವರೆಗೂ ಮುಟ್ಟುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 4:22
18 ತಿಳಿವುಗಳ ಹೋಲಿಕೆ  

ಆಗ ನಾತಾನನು ದಾವೀದನಿಗೆ, “ನೀನೇ ಆ ಮನುಷ್ಯ! ಇಸ್ರೇಲರ ದೇವರಾದ ಯೆಹೋವನು ಹೀಗೆನ್ನುತ್ತಾನೆ: ‘ನಿನ್ನನ್ನು ಇಸ್ರೇಲರ ರಾಜನನ್ನಾಗಿ ಆರಿಸಿದವನು ನಾನೇ. ಸೌಲನಿಂದ ನಿನ್ನನ್ನು ರಕ್ಷಿಸಿದವನು ನಾನೇ.


ಆ ನಗರಿಯ ಪಾಪಗಳು ಪರಲೋಕವನ್ನು ಮುಟ್ಟುವಂತೆ ಬೆಳೆದುನಿಂತಿವೆ. ಅವಳು ಮಾಡಿದ ಕೆಟ್ಟಕಾರ್ಯಗಳನ್ನು ದೇವರು ಮರೆತಿಲ್ಲ.


ಯೋಹಾನನು ಹೆರೋದನಿಗೆ, “ಹೆರೋದ್ಯಳನ್ನು ನೀನು ಇಟ್ಟುಕೊಂಡಿರುವುದು ಸರಿಯಲ್ಲ” ಎಂದು ಹೇಳುತ್ತಿದ್ದುದೇ ಈ ಸೆರೆವಾಸಕ್ಕೆ ಕಾರಣ.


ಯಾಕೆಂದರೆ ನಿನ್ನ ಪ್ರೀತಿಯು ಆಕಾಶಕ್ಕಿಂತಲೂ ಉನ್ನತವಾಗಿದೆ; ನಿನ್ನ ನಂಬಿಗಸ್ತಿಕೆಯು ಮೋಡಗಳಿಗಿಂತಲೂ ಎತ್ತರವಾಗಿದೆ.


ಯೆಹೋವನೇ, ನಿನ್ನ ಪ್ರೀತಿಯು ಆಕಾಶಕ್ಕಿಂತಲೂ ಉನ್ನತವಾಗಿದೆ. ನಿನ್ನ ನಂಬಿಗಸ್ತಿಕೆಯು ಮೇಘಗಳಿಗಿಂತಲೂ ಎತ್ತರವಾಗಿದೆ.


ಆಗ ಯೆಹೋವನ ಪ್ರವಾದಿಯವರಲ್ಲೊಬ್ಬನು ಅಲ್ಲಿದ್ದನು. ಅವನ ಹೆಸರು ಓದೇದ್. ಓದೇದನು ಸಮಾರ್ಯಕ್ಕೆ ಬರುತ್ತಿದ್ದ ಇಸ್ರೇಲ್ ಸೈನ್ಯದವರನ್ನು ಎದುರುಗೊಂಡು ಅವರಿಗೆ, “ನಿಮ್ಮ ಪೂರ್ವಿಕರ ದೇವರಾದ ಯೆಹೋವನು ಯೆಹೂದದ ಜನರು ಸೋತುಹೋಗುವಂತೆ ಮಾಡಿದನು. ಯಾಕೆಂದರೆ ಆತನು ಅವರ ಮೇಲೆ ಸಿಟ್ಟಿಗೆದ್ದಿದ್ದನು. ನೀವು ಯೆಹೂದದ ಜನರನ್ನು ನಿಷ್ಕರುಣೆಯಿಂದ ಕೊಂದುಹಾಕಿದಿರಿ. ಈಗ ದೇವರು ನಿಮ್ಮ ಮೇಲೆ ಕೋಪಗೊಂಡಿದ್ದಾನೆ.


ಯಾಕೋಬನಿಗೆ ಒಂದು ಕನಸಾಯಿತು. ಆ ಕನಸಿನಲ್ಲಿ ಒಂದು ಏಣಿ ನೆಲದ ಮೇಲೆ ನಿಂತಿತ್ತು, ಅದರ ತುದಿ ಆಕಾಶವನ್ನು ಮುಟ್ಟಿತ್ತು. ದೇವದೂತರು ಅದರಲ್ಲಿ ಮೇಲೆರುತ್ತಾ ಕೆಳಗಿಳಿಯುತ್ತಾ ಇರುವುದನ್ನು ಯಾಕೋಬನು ಕಂಡನು.


ಬಳಿಕ ಅವರು, “ನಾವು ನಮಗಾಗಿ ಒಂದು ಪಟ್ಟಣವನ್ನೂ ಆಕಾಶವನ್ನು ಮುಟ್ಟುವಂಥ ಗೋಪುರವನ್ನೂ ಕಟ್ಟಿದರೆ ನಾವು ಪ್ರಸಿದ್ಧರಾಗುತ್ತೇವೆ. ಆಗ ನಾವು ಭೂಮಿಯಲ್ಲೆಲ್ಲಾ ಚದರಿಹೋಗದೆ ಒಂದೇ ಸ್ಥಳದಲ್ಲಿ ವಾಸಿಸಲು ಸಾಧ್ಯವಾಗುತ್ತದೆ” ಎಂದು ಮಾತಾಡಿಕೊಂಡರು.


ಅವರಿಗೆ ಹೀಗೆ ಹೇಳು, ದೇವರಾದ ಯೆಹೋವನು ಹೀಗೆನ್ನುತ್ತಾನೆ: “‘ಅಗಲವಾದ ರೆಕ್ಕೆಗಳುಳ್ಳ ದೊಡ್ಡ ಹದ್ದು (ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು) ಲೆಬನೋನಿಗೆ ಬಂದಿತು. ಅದರ ರೆಕ್ಕೆಗಳು ಅನೇಕ ಚುಕ್ಕೆಗಳನ್ನು ಹೊಂದಿತ್ತು.


ಆ ಮರವು ಬಹಳ ದೊಡ್ಡದಾಗಿ ಮತ್ತು ಬಲಯುತವಾಗಿ ಬೆಳೆಯಿತು. ಆ ಮರದ ತುದಿಯು ಆಕಾಶಕ್ಕೆ ಮುಟ್ಟಿತ್ತು. ಅದನ್ನು ಭೂಲೋಕದ ಯಾವ ಸ್ಥಳದಿಂದಲಾದರೂ ನೋಡಬಹುದಾಗಿತ್ತು.


ಆಗ ದೇವರು ನನಗೆ ಸರಿಯಾದ ಬುದ್ಧಿಯನ್ನು ಕೊಟ್ಟನು. ನನಗೆ ರಾಜನ ಗೌರವ, ಪ್ರಭಾವ, ವೈಭವಗಳು ಮತ್ತೆ ಲಭಿಸಿದವು. ನನ್ನ ಮಂತ್ರಿಗಳೂ ಅಧಿಪತಿಗಳೂ ನನ್ನನ್ನು ಸ್ವೀಕರಿಸಿದರು. ನಾನು ಮತ್ತೆ ಅರಸನಾದೆನು. ನಾನು ಮೊದಲಿಗಿಂತಲೂ ಅಧಿಕ ಶಕ್ತಿಶಾಲಿಯಾದ ಮತ್ತು ಪ್ರಭಾವಶಾಲಿಯಾದ ಅರಸನಾದೆನು.


ನಾನು ಭೂಮಿಯನ್ನೂ ಮತ್ತು ಅದರ ಮೇಲಿರುವ ಎಲ್ಲಾ ಜನರನ್ನೂ ಸೃಷ್ಟಿಸಿದೆ. ನಾನು ಭೂಮಿಯ ಮೇಲಿನ ಎಲ್ಲಾ ಪ್ರಾಣಿಗಳನ್ನು ಸೃಷ್ಟಿಸಿದೆ. ನಾನು ಇದನ್ನು ನನ್ನ ಮಹಾಶಕ್ತಿಯಿಂದಲೂ ಬಲವಾದ ತೋಳುಗಳಿಂದಲೂ ಸೃಷ್ಟಿಸಿದೆ. ನಾನು ಆ ಭೂಮಿಯನ್ನು ನನ್ನ ಮನಸ್ಸಿಗೆ ಬಂದವರಿಗೆ ಕೊಡಬಹುದು.


ಆತನು ಕಾಲಸಮಯಗಳನ್ನು ಮಾರ್ಪಡಿಸುತ್ತಾನೆ. ಆತನು ಅರಸರನ್ನು ಬದಲಾಯಿಸುತ್ತಾನೆ. ಆತನು ಅರಸರಿಗೆ ಪ್ರಭುತ್ವವನ್ನು ಕೊಡುವನು. ಆತನು ಅವರ ಪ್ರಭುತ್ವವನ್ನು ಕಿತ್ತುಕೊಳ್ಳುವನು! ಜನರಿಗೆ ಜ್ಞಾನವನ್ನು ಕೊಟ್ಟು ಜ್ಞಾನಿಗಳನ್ನಾಗಿ ಮಾಡುವವನು ಆತನೇ. ಜನರಿಗೆ ವಿವೇಕವನ್ನು ಕೊಟ್ಟು ವಿವೇಕಿಗಳನ್ನಾಗಿ ಮಾಡುವವನು ಆತನೇ.


ಕನಸು ಕಂಡ ಹನ್ನೆರಡು ತಿಂಗಳುಗಳಾದ ಮೇಲೆ ಅರಸನಾದ ನೆಬೂಕದ್ನೆಚ್ಚರನು ಬಾಬಿಲೋನಿನಲ್ಲಿದ್ದ ಅರಮನೆಯ ಮಾಳಿಗೆಯ ಮೇಲೆ ತಿರುಗಾಡುತ್ತಿದ್ದನು. ಮಾಳಿಗೆಯ ಮೇಲಿದ್ದಾಗ ಅರಸನು, “ಈ ಬಾಬಿಲೋನ್ ನಗರವನ್ನು ನೋಡಿ, ನಾನು ಈ ಮಹಾನಗರವನ್ನು ಕಟ್ಟಿದೆ. ಇದು ನನ್ನ ಅರಮನೆ. ನಾನು ನನ್ನ ಸಾಮರ್ಥ್ಯದಿಂದ ಈ ಅರಮನೆಯನ್ನು ಕಟ್ಟಿದೆ. ನಾನು ಎಂಥಾ ದೊಡ್ಡವನು ಎಂದು ಲೋಕಕ್ಕೆ ತೋರಿಸಲು ನಾನು ಈ ಅರಮನೆಯನ್ನು ಕಟ್ಟಿದೆ” ಎಂದು ತನ್ನಷ್ಟಕ್ಕೆ ತಾನೇ ಹೇಳಿಕೊಳ್ಳುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು