23 “ಅರಸನೇ, ನೀನು ಆಕಾಶದಿಂದ ಇಳಿದುಬರುತ್ತಿದ್ದ ಒಬ್ಬ ಪರಿಶುದ್ಧ ದೇವದೂತನನ್ನು ಕಂಡೆ. ಅವನು, ‘ಮರವನ್ನು ಕಡಿದು ನಾಶಮಾಡಿರಿ. ಅದರ ಬುಡದ ಮೋಟಿನ ಸುತ್ತಲೂ ಕಬ್ಬಿಣದ ಮತ್ತು ಕಂಚಿನ ಒಂದು ಪಟ್ಟಿಯನ್ನು ಹಾಕಿರಿ. ಆ ಬುಡದ ಮೋಟನ್ನು ಮತ್ತು ಬೇರುಗಳನ್ನು ಭೂಮಿಯಲ್ಲಿ ಬಿಟ್ಟುಬಿಡಿ. ಅದರ ಸುತ್ತಲೂ ಕಾಡಿನ ಹುಲ್ಲು ಬೆಳೆಯಲಿ. ಅದು ಇಬ್ಬನಿಯಿಂದ ತೋಯ್ದು ಹೋಗಲಿ. ಅದು ಕಾಡುಪ್ರಾಣಿಯಂತೆ ಇರುವುದು. ಅದು ಏಳು ವರ್ಷ ಕಳೆಯುವವರೆಗೆ ಹಾಗೆಯೇ ಇರುವುದು’ ಎಂದು ಹೇಳಿದನು.
23 “ಕಾವಲುಗಾರನಾದ ದೇವದೂತನು ಆಕಾಶದಿಂದಿಳಿದು, ‘ವೃಕ್ಷವನ್ನು ಕಡಿದು ಹಾಳುಮಾಡಿರಿ; ಆದರೆ ಬುಡದ ಮೋಟನ್ನು ನೆಲದಲ್ಲಿ ಉಳಿಸಿ ಕಬ್ಬಿಣ, ತಾಮ್ರಗಳ ಪಟ್ಟೆಯನ್ನು ಅದಕ್ಕೆ ಬಿಗಿಯಿರಿ, ಅಡವಿಯ ಹುಲ್ಲು ಅದರ ಸುತ್ತ ಬೆಳೆದಿರಲಿ, ಆಕಾಶದ ಇಬ್ಬನಿಯು ಅದನ್ನು ತೋಯಿಸಲಿ, ಅದಕ್ಕೆ ಏಳು ವರ್ಷ ಕಳೆಯುವ ತನಕ ಕಾಡು ಮೃಗಗಳ ಸಹವಾಸದ ಗತಿಯು ಬರಲಿ’ ಎಂದು ಸಾರುವುದನ್ನು ರಾಜನಾದ ನೀನು ನೋಡಿದಿಯಲ್ಲಾ.
23 ಕಾವಲುಗಾರನಾದ ದೂತನು ಆಕಾಶದಿಂದ ಇಳಿದುಬಂದು: ‘ಈ ಮರವನ್ನು ಕಡಿದು ಹಾಳುಮಾಡಿ. ಅದರ ಬುಡದ ಮೋಟನ್ನು ನೆಲದಲ್ಲಿ ಉಳಿಸಿ ಹಿತ್ತಾಳೆ ಕಬ್ಬಿಣಗಳ ಪಟ್ಟಿಯನ್ನು ಅದಕ್ಕೆ ಬಿಗಿಯಿರಿ. ಅಡವಿಯ ಹುಲ್ಲು ಅದರ ಸುತ್ತಲು ಬೆಳೆದಿರಲಿ, ಆಕಾಶದ ಇಬ್ಬನಿ ಅದನ್ನು ತೋಯಿಸಲಿ. ಏಳು ವರ್ಷಕಾಲ ಕಳೆಯುವ ತನಕ ಕಾಡುಮೃಗಗಳ ಸಹವಾಸದ ಗತಿ ಬರಲಿ’ ಎಂದು ಸಾರುವುದನ್ನು ರಾಜರಾದ ನೀವೇ ನೋಡಿದ್ದೀರಿ.”
23 ಅನಿವಿುಷನಾದ ದೇವದೂತನು ಆಕಾಶದಿಂದಿಳಿದು - ವೃಕ್ಷವನ್ನು ಕಡಿದು ಹಾಳುಮಾಡಿರಿ; ಆದರೆ ಬುಡದ ಮೋಟನ್ನು ನೆಲದಲ್ಲಿ ಉಳಿಸಿ ಕಬ್ಬಿಣ ತಾಮ್ರಗಳ ಪಟ್ಟೆಯನ್ನು ಅದಕ್ಕೆ ಬಿಗಿಯಿರಿ, ಅಡವಿಯ ಹುಲ್ಲು ಅದರ ಸುತ್ತ ಬೆಳೆದಿರಲಿ, ಆಕಾಶದ ಇಬ್ಬನಿಯು ಅದನ್ನು ತೋಯಿಸಲಿ, ಅದಕ್ಕೆ ಏಳು ವರುಷ ಕಳೆಯುವ ತನಕ ಕಾಡುಮೃಗಗಳ ಸಹವಾಸದ ಗತಿಯು ಬರಲಿ ಎಂದು ಸಾರುವದನ್ನು ರಾಜನಾದ ನೀನು ನೋಡಿದಿಯಲ್ಲಾ;
23 “ಪರಿಶುದ್ಧನಾದ ಒಬ್ಬನು ಪರಲೋಕದಿಂದ ಇಳಿದುಬಂದು, ‘ಮರವನ್ನು ಕಡಿದು ನಾಶಮಾಡಿರಿ. ಆದರೆ ಅದರ ಬೇರಿನ ಮೋಟನ್ನು ನೆಲದಲ್ಲಿ ಉಳಿಸಿ, ಮೋಟನ್ನು ಕಬ್ಬಿಣ ಮತ್ತು ಕಂಚುಗಳಿಂದ ಕಟ್ಟಿ, ಬಯಲಿನ ಎಳೆಯ ಹುಲ್ಲಿನಲ್ಲಿಯೂ, ಬೇರುಗಳನ್ನು ಭೂಮಿಯಲ್ಲಿಯೂ ಬಿಡಿರಿ. ಅವನು ಆಕಾಶದ ಮಂಜಿನಿಂದ ತೇವವಾಗಲಿ. ಏಳು ಕಾಲಗಳು ಕಳೆಯುವ ತನಕ ಅವನು ಕಾಡುಮೃಗಗಳ ಹಾಗೆ ಜೀವಿಸಲಿ, ಎಂದು ಸಾರುವುದನ್ನು ಅರಸನಾದ ನೀನು ನೋಡಿದೆಯಲ್ಲಾ.’
ಅನಂತರ ನೆಬೂಕದ್ನೆಚ್ಚರನನ್ನು ಜನರ ಮಧ್ಯದಿಂದ ಓಡಿಸಲಾಯಿತು. ಅವನ ಬುದ್ಧಿಯು ಮೃಗಬುದ್ಧಿಯಂತಾಯಿತು. ಅವನು ಕಾಡುಕತ್ತೆಗಳ ಜೊತೆ ವಾಸಿಸಿದನು; ಹಸುಗಳಂತೆ ಹುಲ್ಲು ತಿಂದನು; ಮಂಜಿನಲ್ಲಿ ನೆನೆದನು. ಅವನಿಗೆ ಸರಿಯಾದ ಬುದ್ಧಿ ಬರುವತನಕ ಅವನು ಆ ಸ್ಥಿತಿಯಲ್ಲಿದ್ದನು. ಆಗ ಅವನು ಮಹೋನ್ನತನಾದ ದೇವರೇ ಮಾನವರ ಸಾಮ್ರಾಜ್ಯವನ್ನು ಆಳುತ್ತಾನೆ ಮತ್ತು ಆ ಸಾಮ್ರಾಜ್ಯಕ್ಕೆ ತನಗೆ ಬೇಕಾದವರನ್ನು ಅರಸರನ್ನಾಗಿ ನೇಮಿಸುತ್ತಾನೆ ಎಂಬುದನ್ನು ತಿಳಿದುಕೊಂಡನು.
“ಮರದ ಬುಡದ ಮೋಟನ್ನು ಮತ್ತು ಅದರ ಬೇರುಗಳನ್ನು ಭೂಮಿಯಲ್ಲಿಯೇ ಬಿಟ್ಟುಬಿಡಿ ಎಂಬುದರ ಅರ್ಥವೇನೆಂದರೆ, ನಿನ್ನ ರಾಜ್ಯವನ್ನು ನಿನಗೆ ಹಿಂತಿರುಗಿಸಲಾಗುವುದು. ಮಹೋನ್ನತನಾದ ದೇವರು ನಿನ್ನ ಸಾಮ್ರಾಜ್ಯದ ಮೇಲೆ ಆಳ್ವಿಕೆ ಮಾಡುತ್ತಾನೆ ಎಂಬುದನ್ನು ನೀನು ತಿಳಿದುಕೊಂಡ ಬಳಿಕ ಹೀಗಾಗುವುದು.
ಆಗ ಒಬ್ಬ ಪವಿತ್ರನು ಮಾತನಾಡುವದನ್ನು ಕೇಳಿದೆ. ಮತ್ತೊಬ್ಬ ಪವಿತ್ರನು ಮೊದಲನೆಯ ಪವಿತ್ರನಿಗೆ ಉತ್ತರಿಸುವದನ್ನೂ ಕೇಳಿದೆ. ಮೊದಲನೆಯ ಪವಿತ್ರನು, “ಈ ದರ್ಶನ ನಿತ್ಯಹೋಮಗಳಿಗೆ ಏನಾಗುವದೆಂಬುದನ್ನು ತೋರಿಸುವದು. ಇದು ಆ ಭಯಾನಕ ಪಾಪದ ಕುರಿತಾಗಿದೆ. ಅಧಿಪತಿಯು ಆರಾಧಿಸಲ್ಪಡುವ ಪವಿತ್ರಾಲಯವನ್ನು ಜನರು ಹಾಳುಮಾಡಿದರೆ, ಜನರು ಆ ಸ್ಥಳವನ್ನು ತುಳಿದಾಡಿದರೆ, ಆ ನಕ್ಷತ್ರಗಳ ಮೇಲೆ ಜನರು ನಡೆದಾಡಿದರೆ ಏನಾಗುವದೆಂಬುದನ್ನು ಇದು ತೋರಿಸಿಕೊಡುತ್ತದೆ. ಆದರೆ ಇದೆಲ್ಲ ಎಷ್ಟು ದಿನ ನಡೆಯುವದು?” ಎಂದನು.