ದಾನಿಯೇಲ 4:24 - ಪರಿಶುದ್ದ ಬೈಬಲ್24 “ಕನಸಿನ ಅರ್ಥವು ಹೀಗಿದೆ: ಅರಸನೇ, ಮಹೋನ್ನತನಾದ ದೇವರು ನನ್ನ ಒಡೆಯನಾದ ಅರಸನಿಗೆ ಹೀಗಾಗಬೇಕೆಂದು ಆಜ್ಞಾಪಿಸಿದ್ದಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 “ರಾಜನೇ ಇದರ ತಾತ್ಪರ್ಯವೇನೆಂದರೆ, ಎನ್ನೊಡೆಯನಾದ ಅರಸನಿಗೆ ಉಂಟಾಗಿರುವ ಪರಾತ್ಪರನಾದ ದೇವರ ತೀರ್ಪು ಹೀಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 “ರಾಜರೇ, ಕನಸಿನ ತಾತ್ಪರ್ಯ ಇದು: ನನ್ನೊಡೆಯರಾದ ಅರಸರಿಗೆ ಉಂಟಾಗಲಿರುವ ಪರಾತ್ಪರ ದೇವರ ತೀರ್ಪು ಹೀಗಿದೆ - ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ರಾಜನೇ, ಇದರ ತಾತ್ಪರ್ಯವೇನಂದರೆ, ಎನ್ನೊಡೆಯನಾದ ಅರಸನಿಗೆ ಉಂಟಾಗಿರುವ ಪರಾತ್ಪರನ ತೀರ್ಪು ಹೀಗಿದೆ - ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 “ಅರಸನೇ, ಇದರ ವ್ಯಾಖ್ಯಾನವು ಏನೆಂದರೆ, ನನ್ನ ಒಡೆಯನಾದ ಅರಸನ ಮೇಲೆ ಬಂದಂಥ ಮಹೋನ್ನತನ ನಿರ್ಣಯವು ಹೀಗಿದೆ: ಅಧ್ಯಾಯವನ್ನು ನೋಡಿ |
ಆಗ ದಾನಿಯೇಲನು (ಬೇಲ್ತೆಶಚ್ಚರನು) ಸುಮಾರು ಒಂದು ಗಂಟೆಯವರೆಗೆ ಮೌನವಾಗಿದ್ದನು. ಅವನ ಬುದ್ಧಿಗೆ ತೋರಿದ ವಿಷಯಗಳು ಅವನನ್ನು ಗಾಬರಿಪಡಿಸಿದವು. ಆಗ ರಾಜನು, “ಬೇಲ್ತೆಶಚ್ಚರನೇ, ಕನಸು ಅಥವಾ ಕನಸಿನ ಅರ್ಥವು ನಿನ್ನನ್ನು ಭಯಗೊಳಿಸದಿರಲಿ” ಎಂದು ಧೈರ್ಯ ಹೇಳಿದನು. ಆಗ ಬೇಲ್ತೆಶಚ್ಚರನು ಅರಸನಿಗೆ, “ನನ್ನ ಒಡೆಯನೇ, ಈ ಕನಸು ನಿನ್ನ ವಿರೋಧಿಗಳಿಗೆ ಫಲಿಸಲಿ. ಇದರ ಅರ್ಥವು ನಿನ್ನ ವಿರೋಧಿಗಳ ಅನುಭವಕ್ಕೆ ಬರಲಿ ಎಂದು ನಾನು ಹಾರೈಸುತ್ತೇನೆ.