Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 4:25 - ಪರಿಶುದ್ದ ಬೈಬಲ್‌

25 ರಾಜನಾದ ನೆಬೂಕದ್ನೆಚ್ಚರನೇ, ನಿನ್ನನ್ನು ಬಲವಂತದಿಂದ ಜನರಿಂದ ದೂರಮಾಡುವರು. ನೀನು ಕಾಡುಪ್ರಾಣಿಗಳೊಂದಿಗೆ ವಾಸಮಾಡುವೆ; ಹಸುಗಳಂತೆ ಹುಲ್ಲು ತಿನ್ನುವೆ; ಇಬ್ಬನಿಯಿಂದ ತೋಯಿಸಿಕೊಳ್ಳುವೆ. ಏಳು ವರ್ಷಗಳು ಕಳೆಯುವವು. ಆಗ ನೀನು ಮಹೋನ್ನತನಾದ ದೇವರು ಮಾನವರ ಸಾಮ್ರಾಜ್ಯದ ಮೇಲೆ ಆಳ್ವಿಕೆ ಮಾಡುತ್ತಾನೆ ಮತ್ತು ತನಗೆ ಬೇಕಾದವರಿಗೆ ರಾಜ್ಯವನ್ನು ಕೊಡುತ್ತಾನೆ ಎಂಬ ಪಾಠವನ್ನು ಕಲಿಯುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ನೀನು ಮನುಷ್ಯರೊಳಗಿಂದ ತಳ್ಳಲ್ಪಟ್ಟು ಕಾಡು ಮೃಗಗಳೊಂದಿಗೆ ವಾಸಿಸುವಿ, ಎತ್ತುಗಳಂತೆ ಹುಲ್ಲು ಮೇಯುವುದೇ ನಿನಗೆ ಗತಿಯಾಗುವುದು, ಆಕಾಶದ ಇಬ್ಬನಿಯು ನಿನ್ನನ್ನು ತೋಯಿಸುವುದು; ಪರಾತ್ಪರನಾದ ದೇವರು ಮನುಷ್ಯರ ರಾಜ್ಯದಲ್ಲಿ ರಾಜನಾಗಿ ಅದನ್ನು ತನಗೆ ಬೇಕಾದವರಿಗೆ ಒಪ್ಪಿಸುತ್ತಾನೆ ಎಂಬುದು ನಿನಗೆ ತಿಳಿದು ಬರುವುದರೊಳಗೆ ಏಳು ವರ್ಷ ಹೀಗೆ ಕಳೆಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ತಾವು ಮಾನವ ಸಮಾಜದಿಂದ ಬಹಿಷ್ಕೃತರಾಗುವಿರಿ. ಕಾಡುಮೃಗಗಳ ನಡುವೆ ವಾಸಮಾಡುವಿರಿ. ದನಕರುಗಳಂತೆ ಹುಲ್ಲು ಮೇಯುವ ಗತಿ ನಿಮ್ಮದಾಗುವುದು. ಆಕಾಶದ ಇಬ್ಬನಿ ನಿಮ್ಮನ್ನು ತೋಯಿಸುವುದು. ಪರಾತ್ಪರ ದೇವರಿಗೆ ಮಾನವರ ರಾಜ್ಯದ ಮೇಲೂ ಅಧಿಕಾರವಿದೆ. ಅದನ್ನು ತಮಗೆ ಬೇಕಾದವರಿಗೆ ಒಪ್ಪಿಸುತ್ತಾರೆ. ಇದು ತಮಗೆ ತಿಳಿದುಬರುವುದರೊಳಗೆ ಏಳು ವರ್ಷ ಕಳೆದಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ನೀನು ಮನುಷ್ಯರೊಳಗಿಂದ ತಳ್ಳಲ್ಪಟ್ಟು ಕಾಡುಮೃಗಗಳೊಂದಿಗೆ ವಾಸಿಸುವಿ, ದನಗಳಂತೆ ಹುಲ್ಲು ಮೇಯುವದೇ ನಿನಗೆ ಗತಿಯಾಗುವದು, ಆಕಾಶದ ಇಬ್ಬನಿಯು ನಿನ್ನನ್ನು ತೋಯಿಸುವದು; ಪರಾತ್ಪರನು ಮನುಷ್ಯರ ರಾಜ್ಯದಲ್ಲಿ ರಾಜನಾಗಿ ಅದನ್ನು ತನಗೆ ಬೇಕಾದವರಿಗೆ ಒಪ್ಪಿಸುತ್ತಾನೆ ಎಂಬದು ನಿನಗೆ ತಿಳಿದುಬರುವದರೊಳಗೆ ಏಳು ವರುಷ ನಿನಗೆ ಹೀಗೆ ಕಳೆಯುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ನಿನ್ನನ್ನು ಮನುಷ್ಯರೊಳಗಿಂದ ಬಹಿಷ್ಕರಿಸಿ ಬಿಡುವರು. ನಿನ್ನ ನಿವಾಸವು ಕಾಡುಮೃಗಗಳ ಸಂಗಡ ಇರುವುದು. ಪಶುಗಳಂತೆ ನೀನು ಹುಲ್ಲನ್ನು ತಿನ್ನುವೆ. ಆಕಾಶದ ಮಂಜಿನಿಂದ ನಿನ್ನನ್ನು ತೋಯಿಸುವುದು. ಮಹೋನ್ನತರು ಮನುಷ್ಯರ ರಾಜ್ಯವನ್ನು ಆಳುವರೆಂದೂ, ತಮಗೆ ಬೇಕಾದವರಿಗೆ ಅದನ್ನು ಕೊಡುತ್ತಾರೆಂದೂ ನೀನು ತಿಳಿಯುವವರೆಗೂ, ಆ ಏಳು ಕಾಲಗಳು ಕಳೆದುಹೋಗುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 4:25
15 ತಿಳಿವುಗಳ ಹೋಲಿಕೆ  

“ಈ ಶಿಕ್ಷೆಯನ್ನು ದೇವದೂತನು ಸಾರಿದನು. ಮಾನವ ಸಾಮ್ರಾಜ್ಯಗಳ ಮೇಲೆ ಮಹೋನ್ನತನಾದ ದೇವರು ಆಳುವನು. ಅವನು ಆ ಸಾಮ್ರಾಜ್ಯಗಳನ್ನು ತನಗೆ ಬೇಕಾದವರಿಗೆ ಒಪ್ಪಿಸುವನು, ಕನಿಷ್ಠರನ್ನು ನೇಮಿಸುವನು ಎಂಬುದು ಲೋಕದ ಜನರಿಗೆಲ್ಲ ತಿಳಿದುಬರಲಿ ಎಂದೇ ಅವನು ಸಾರಿದನು.


ನಾನು ಭೂಮಿಯನ್ನೂ ಮತ್ತು ಅದರ ಮೇಲಿರುವ ಎಲ್ಲಾ ಜನರನ್ನೂ ಸೃಷ್ಟಿಸಿದೆ. ನಾನು ಭೂಮಿಯ ಮೇಲಿನ ಎಲ್ಲಾ ಪ್ರಾಣಿಗಳನ್ನು ಸೃಷ್ಟಿಸಿದೆ. ನಾನು ಇದನ್ನು ನನ್ನ ಮಹಾಶಕ್ತಿಯಿಂದಲೂ ಬಲವಾದ ತೋಳುಗಳಿಂದಲೂ ಸೃಷ್ಟಿಸಿದೆ. ನಾನು ಆ ಭೂಮಿಯನ್ನು ನನ್ನ ಮನಸ್ಸಿಗೆ ಬಂದವರಿಗೆ ಕೊಡಬಹುದು.


ಆಗ ಅವರು ನೀನೊಬ್ಬನೇ ದೇವರೆಂದೂ ನಿನ್ನ ಹೆಸರು ಯೆಹೋವನೆಂದೂ ತಿಳಿದುಕೊಳ್ಳುವರು. ಭೂಲೋಕಕ್ಕೆಲ್ಲಾ ಮಹೋನ್ನತನಾದ ದೇವರೊಬ್ಬನೇ ದೇವರೆಂದು ಅವರು ಅರಿತುಕೊಳ್ಳುವರು.


ಆತನು ಕಾಲಸಮಯಗಳನ್ನು ಮಾರ್ಪಡಿಸುತ್ತಾನೆ. ಆತನು ಅರಸರನ್ನು ಬದಲಾಯಿಸುತ್ತಾನೆ. ಆತನು ಅರಸರಿಗೆ ಪ್ರಭುತ್ವವನ್ನು ಕೊಡುವನು. ಆತನು ಅವರ ಪ್ರಭುತ್ವವನ್ನು ಕಿತ್ತುಕೊಳ್ಳುವನು! ಜನರಿಗೆ ಜ್ಞಾನವನ್ನು ಕೊಟ್ಟು ಜ್ಞಾನಿಗಳನ್ನಾಗಿ ಮಾಡುವವನು ಆತನೇ. ಜನರಿಗೆ ವಿವೇಕವನ್ನು ಕೊಟ್ಟು ವಿವೇಕಿಗಳನ್ನಾಗಿ ಮಾಡುವವನು ಆತನೇ.


ಹುಲ್ಲುತಿನ್ನುವ ಹೋರಿಯ ಮೂರ್ತಿಗಾಗಿ ಅವರು ಮಹಿಮಾಸ್ವರೂಪನಾದ ದೇವರನ್ನೇ ಬಿಟ್ಟುಕೊಟ್ಟರು!


ನ್ಯಾಯಾಧಿಪತಿಯು ದೇವರೇ. ಯಾರನ್ನು ಉದ್ಧಾರಮಾಡಬೇಕು ಎಂಬ ನಿರ್ಣಯವನ್ನು ತೆಗೆದುಕೊಳ್ಳುವಾತನು ದೇವರೇ. ದೇವರು ಒಬ್ಬನನ್ನು ಉನ್ನತಿಗೇರಿಸುವನು; ಮತ್ತೊಬ್ಬನನ್ನು ಅವನತಿಗಿಳಿಸುವನು.


ಯೆಹೋವನ ಸಿಂಹಾಸನವು ಪರಲೋಕದಲ್ಲಿದೆ. ಆತನು ಸಮಸ್ತವನ್ನು ಆಳುವನು.


ಅರಸನೇ, ನೀನು ರಾಜಾಧಿರಾಜ. ಪರಲೋಕದ ದೇವರು ನಿನಗೆ ರಾಜ್ಯ, ಬಲ, ಪರಾಕ್ರಮ ಮತ್ತು ವೈಭವಗಳನ್ನು ದಯಪಾಲಿಸಿದ್ದಾನೆ.


“ನಿನ್ನ ದೇವರು ಸರ್ವಶ್ರೇಷ್ಠನು ಮತ್ತು ಪ್ರಬಲನು ಎನ್ನುವದು ನನಗೆ ಖಚಿತವಾಯಿತು. ಆತನು ಎಲ್ಲ ಅರಸರ ಒಡೆಯನಾಗಿದ್ದಾನೆ. ಆತನು ಜನರಿಗೆ ನಿಗೂಢವಾಗಿದ್ದ ರಹಸ್ಯವನ್ನು ತಿಳಿಸುತ್ತಾನೆ. ನೀನು ನನಗೆ ಈ ರಹಸ್ಯವನ್ನು ತಿಳಿಸಲು ಸಮರ್ಥನಾದುದರಿಂದ ಇದೆಲ್ಲ ನಿಜವೆಂದು ನಾನು ನಂಬುತ್ತೇನೆ” ಎಂದು ಹೇಳಿದನು.


ಮಹೋನ್ನತನಾದ ದೇವರು ನನಗೋಸ್ಕರ ಮಾಡಿದ ಸೂಚಕಕಾರ್ಯಗಳನ್ನು ಮತ್ತು ಅದ್ಭುತಕಾರ್ಯಗಳನ್ನು ನಿಮಗೆ ತಿಳಿಸಲು ನನಗೆ ಬಹಳ ಸಂತೋಷವಾಗುತ್ತದೆ.


ಅದು ಮನುಷ್ಯನಂತೆ ವಿಚಾರ ಮಾಡುವುದನ್ನು ಬಿಟ್ಟು ಪ್ರಾಣಿಯಂತೆ ವಿಚಾರ ಮಾಡತೊಡಗಲಿ. ಅದು ಈ ಸ್ಥಿತಿಯಲ್ಲಿ ಏಳು ವರ್ಷವಿರಲಿ’ ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು