Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 4:26 - ಪರಿಶುದ್ದ ಬೈಬಲ್‌

26 “ಮರದ ಬುಡದ ಮೋಟನ್ನು ಮತ್ತು ಅದರ ಬೇರುಗಳನ್ನು ಭೂಮಿಯಲ್ಲಿಯೇ ಬಿಟ್ಟುಬಿಡಿ ಎಂಬುದರ ಅರ್ಥವೇನೆಂದರೆ, ನಿನ್ನ ರಾಜ್ಯವನ್ನು ನಿನಗೆ ಹಿಂತಿರುಗಿಸಲಾಗುವುದು. ಮಹೋನ್ನತನಾದ ದೇವರು ನಿನ್ನ ಸಾಮ್ರಾಜ್ಯದ ಮೇಲೆ ಆಳ್ವಿಕೆ ಮಾಡುತ್ತಾನೆ ಎಂಬುದನ್ನು ನೀನು ತಿಳಿದುಕೊಂಡ ಬಳಿಕ ಹೀಗಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ವೃಕ್ಷದ ಬುಡದ ಮೋಟನ್ನು ಉಳಿಸಿರಿ ಎಂದು ಅಪ್ಪಣೆಯಾಯಿತಲ್ಲಾ; ಇದರ ತಾತ್ಪರ್ಯವೇನೆಂದರೆ ಪರಲೋಕಕ್ಕೆ ಸರ್ವಾಧಿಕಾರ ಉಂಟೆಂಬುವುದನ್ನು ನೀನು ತಿಳಿದುಕೊಂಡ ನಂತರ ನಿನ್ನ ರಾಜ್ಯವು ನಿನಗೆ ಸ್ಥಿರವಾಗುವುದು ಎಂಬುವುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಆ ಮರದ ಬುಡದ ಮೋಟನ್ನು ಉಳಿಸಿರೆಂದು ಅಪ್ಪಣೆಯಾಗಿದೆ. ಇದರ ತಾತ್ಪರ್ಯವೇನೆಂದರೆ: ಪರಲೋಕದ ದೇವರಿಗೆ ಸರ್ವಾಧಿಕಾರ ಉಂಟೆಂಬುದನ್ನು ತಾವು ಅರಿತುಕೊಂಡ ನಂತರ ನಿಮ್ಮ ರಾಜ್ಯ ನಿಮಗೆ ಸ್ಥಿರವಾಗಿ ದೊರಕುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ವೃಕ್ಷದ ಬುಡದ ಮೋಟನ್ನು ಉಳಿಸಿರಿ ಎಂದು ಅಪ್ಪಣೆಯಾಯಿತಲ್ಲಾ; ಇದರ ತಾತ್ಪರ್ಯವೇನಂದರೆ ಪರಲೋಕಕ್ಕೆ ಸರ್ವಾಧಿಕಾರವುಂಟೆಂಬದನ್ನು ನೀನು ತಿಳಿದುಕೊಂಡ ನಂತರ ನಿನ್ನ ರಾಜ್ಯವು ನಿನಗೆ ಸ್ಥಿರವಾಗುವದು ಎಂಬದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಆ ಮರದ ಬೇರಿನ ಮೋಟನ್ನು ಉಳಿಸಬೇಕೆಂಬ ಆಜ್ಞೆಯ ಅರ್ಥ ಏನೆಂದರೆ, ಪರಲೋಕವು ಆಳುತ್ತದೆಂದು ನೀನು ತಿಳಿದುಕೊಂಡ ಮೇಲೆ ನಿನ್ನ ರಾಜ್ಯವು ನಿನಗೆ ಪುನಃಸ್ಥಾಪನೆಯಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 4:26
13 ತಿಳಿವುಗಳ ಹೋಲಿಕೆ  

ಆದರೆ ಅದರ ಬೇರುಗಳು ಮತ್ತು ಬುಡದ ಮೋಟು ಭೂಮಿಯಲ್ಲಿ ಉಳಿಯಲಿ. ಅದರ ಸುತ್ತಲೂ ಕಬ್ಬಿಣದ ಮತ್ತು ಕಂಚಿನ ಒಂದು ಪಟ್ಟಿಯನ್ನು ಹಾಕಿರಿ. ಆ ಮೋಟು ಮತ್ತು ಬೇರುಗಳು ಹೊಲದಲ್ಲಿ ಉಳಿಯಲಿ. ಅದರ ಸುತ್ತ ಹುಲ್ಲು ಬೆಳೆದಿರಲಿ. ಅದು ಅಡವಿಯಲ್ಲಿ ಕಾಡುಪ್ರಾಣಿಗಳ ಮತ್ತು ಸಸಿಗಳ ಜೊತೆಯಲ್ಲಿ ಇರಲಿ; ಅದು ಇಬ್ಬನಿಯಿಂದ ನೆನೆಯಲಿ.


ಮಗನು ತನ್ನ ತಂದೆಗೆ, ‘ಅಪ್ಪಾ, ನಾನು ದೇವರಿಗೆ ವಿರೋಧವಾಗಿಯೂ ನಿನಗೆ ವಿರೋಧವಾಗಿಯೂ ಪಾಪಮಾಡಿದ್ದೇನೆ. ನಿನ್ನ ಮಗನೆಂದು ಕರೆಸಿಕೊಳ್ಳುವುದಕ್ಕೆ ನಾನು ಯೋಗ್ಯನಲ್ಲ’ ಎಂದು ಹೇಳಿದನು.


ನಾನು ಇಲ್ಲಿಂದ ನನ್ನ ತಂದೆಯ ಬಳಿಗೆ ಹೊರಟುಹೋಗುತ್ತೇನೆ. ನಾನು ನನ್ನ ತಂದೆಗೆ, ಅಪ್ಪಾ, ನಾನು ದೇವರಿಗೆ ವಿರೋಧವಾಗಿಯೂ ನಿನಗೆ ವಿರೋಧವಾಗಿಯೂ ಪಾಪ ಮಾಡಿದ್ದೇನೆ.


ಶಿಷ್ಯರು ಇದನ್ನು ನೋಡಿ ಬಹಳ ಆಶ್ಚರ್ಯಪಟ್ಟು, “ಈ ಅಂಜೂರದ ಮರವು ಅಷ್ಟು ಬೇಗನೆ ಹೇಗೆ ಒಣಗಿ ಹೋಯಿತು?” ಎಂದು ಕೇಳಿದರು.


ಆದರೆ ನಾನು ಹೇಳುವುದೇನೆಂದರೆ, ಆಣೆ ಇಡಲೇಬೇಡಿ. ಪರಲೋಕದ ಮೇಲೂ ಆಣೆ ಇಡಬೇಡಿ, ಏಕೆಂದರೆ ಪರಲೋಕವು ದೇವರ ಸಿಂಹಾಸನ.


“ಅರಸನೇ, ನೀನು ಆಕಾಶದಿಂದ ಇಳಿದುಬರುತ್ತಿದ್ದ ಒಬ್ಬ ಪರಿಶುದ್ಧ ದೇವದೂತನನ್ನು ಕಂಡೆ. ಅವನು, ‘ಮರವನ್ನು ಕಡಿದು ನಾಶಮಾಡಿರಿ. ಅದರ ಬುಡದ ಮೋಟಿನ ಸುತ್ತಲೂ ಕಬ್ಬಿಣದ ಮತ್ತು ಕಂಚಿನ ಒಂದು ಪಟ್ಟಿಯನ್ನು ಹಾಕಿರಿ. ಆ ಬುಡದ ಮೋಟನ್ನು ಮತ್ತು ಬೇರುಗಳನ್ನು ಭೂಮಿಯಲ್ಲಿ ಬಿಟ್ಟುಬಿಡಿ. ಅದರ ಸುತ್ತಲೂ ಕಾಡಿನ ಹುಲ್ಲು ಬೆಳೆಯಲಿ. ಅದು ಇಬ್ಬನಿಯಿಂದ ತೋಯ್ದು ಹೋಗಲಿ. ಅದು ಕಾಡುಪ್ರಾಣಿಯಂತೆ ಇರುವುದು. ಅದು ಏಳು ವರ್ಷ ಕಳೆಯುವವರೆಗೆ ಹಾಗೆಯೇ ಇರುವುದು’ ಎಂದು ಹೇಳಿದನು.


ಅರಸನೇ, ನೀನು ರಾಜಾಧಿರಾಜ. ಪರಲೋಕದ ದೇವರು ನಿನಗೆ ರಾಜ್ಯ, ಬಲ, ಪರಾಕ್ರಮ ಮತ್ತು ವೈಭವಗಳನ್ನು ದಯಪಾಲಿಸಿದ್ದಾನೆ.


ಪರಲೋಕದ ದೇವರು ತನಗೆ ಸಹಾಯ ಮಾಡುವಂತೆಯೂ ಕೃಪೆ ತೋರುವಂತೆಯೂ ಪ್ರಾರ್ಥಿಸಬೇಕೆಂದು ದಾನಿಯೇಲನು ಅವರನ್ನು ಕೇಳಿಕೊಂಡನು. ದಾನಿಯೇಲ ಮತ್ತು ಅವನ ಸ್ನೇಹಿತರು ಮರಣದಂಡನೆಯಿಂದ ಪಾರಾಗಬೇಕಿದ್ದರೆ ಕನಸನ್ನೂ ಅದರ ಅರ್ಥವನ್ನೂ ತಿಳಿಸಬೇಕಿತ್ತು.


ಅಂದು ರಾತ್ರಿ ದಾನಿಯೇಲನಿಗೆ ದೇವದರ್ಶನವಾಯಿತು. ಆಗ ದಾನಿಯೇಲನು ಪರಲೋಕದ ದೇವರನ್ನು ಹೀಗೆ ಸ್ತುತಿಸಿದನು:


ಆ ಶಬ್ದಗಳು ಇನ್ನೂ ಬಾಯಿಯಲ್ಲಿಯೇ ಇದ್ದಾಗ, ಆಕಾಶವಾಣಿಯಾಯಿತು. ಆ ಧ್ವನಿಯು, “ಅರಸನಾದ ನೆಬೂಕದ್ನೆಚ್ಚರನೇ, ನಿನ್ನಿಂದ ನಿನ್ನ ರಾಜಪದವಿಯನ್ನು ಕಿತ್ತುಕೊಳ್ಳಲಾಗಿದೆ.


ಅರಸ ನೆಬೂಕದ್ನೆಚ್ಚರನಾದ ನಾನು ಈಗ ಪರಲೋಕದ ರಾಜನನ್ನು ಘನಪಡಿಸುತ್ತೇನೆ, ಮಹಿಮೆಪಡಿಸುತ್ತೇನೆ. ಆತನು ಮಾಡುವದೆಲ್ಲ ಸರಿ. ಆತನು ಯಾವಾಗಲೂ ನ್ಯಾಯವಂತನಾಗಿದ್ದಾನೆ. ಆತನು ಗರ್ವಿಷ್ಠರನ್ನು ದೀನರನ್ನಾಗಿ ಮಾಡಬಲ್ಲನು.


“ಆದರೆ ನೆಬೂಕದ್ನೆಚ್ಚರನು ಬಹಳ ಅಹಂಕಾರಿಯಾಗಿದ್ದನು ಮತ್ತು ಹಟಮಾರಿಯಾಗಿದ್ದನು. ಆದ್ದರಿಂದ ಅವನ ಅಧಿಕಾರವನ್ನು ಕಸಿದುಕೊಳ್ಳಲಾಯಿತು. ರಾಜಸಿಂಹಾಸನದಿಂದ ಇಳಿಸಿ ಅವನ ಎಲ್ಲ ಘನತೆಗೌರವಗಳನ್ನು ಕಿತ್ತುಕೊಳ್ಳಲಾಯಿತು.


ಅನಂತರ ನೆಬೂಕದ್ನೆಚ್ಚರನನ್ನು ಜನರ ಮಧ್ಯದಿಂದ ಓಡಿಸಲಾಯಿತು. ಅವನ ಬುದ್ಧಿಯು ಮೃಗಬುದ್ಧಿಯಂತಾಯಿತು. ಅವನು ಕಾಡುಕತ್ತೆಗಳ ಜೊತೆ ವಾಸಿಸಿದನು; ಹಸುಗಳಂತೆ ಹುಲ್ಲು ತಿಂದನು; ಮಂಜಿನಲ್ಲಿ ನೆನೆದನು. ಅವನಿಗೆ ಸರಿಯಾದ ಬುದ್ಧಿ ಬರುವತನಕ ಅವನು ಆ ಸ್ಥಿತಿಯಲ್ಲಿದ್ದನು. ಆಗ ಅವನು ಮಹೋನ್ನತನಾದ ದೇವರೇ ಮಾನವರ ಸಾಮ್ರಾಜ್ಯವನ್ನು ಆಳುತ್ತಾನೆ ಮತ್ತು ಆ ಸಾಮ್ರಾಜ್ಯಕ್ಕೆ ತನಗೆ ಬೇಕಾದವರನ್ನು ಅರಸರನ್ನಾಗಿ ನೇಮಿಸುತ್ತಾನೆ ಎಂಬುದನ್ನು ತಿಳಿದುಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು