Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 4:29 - ಪರಿಶುದ್ದ ಬೈಬಲ್‌

29-30 ಕನಸು ಕಂಡ ಹನ್ನೆರಡು ತಿಂಗಳುಗಳಾದ ಮೇಲೆ ಅರಸನಾದ ನೆಬೂಕದ್ನೆಚ್ಚರನು ಬಾಬಿಲೋನಿನಲ್ಲಿದ್ದ ಅರಮನೆಯ ಮಾಳಿಗೆಯ ಮೇಲೆ ತಿರುಗಾಡುತ್ತಿದ್ದನು. ಮಾಳಿಗೆಯ ಮೇಲಿದ್ದಾಗ ಅರಸನು, “ಈ ಬಾಬಿಲೋನ್ ನಗರವನ್ನು ನೋಡಿ, ನಾನು ಈ ಮಹಾನಗರವನ್ನು ಕಟ್ಟಿದೆ. ಇದು ನನ್ನ ಅರಮನೆ. ನಾನು ನನ್ನ ಸಾಮರ್ಥ್ಯದಿಂದ ಈ ಅರಮನೆಯನ್ನು ಕಟ್ಟಿದೆ. ನಾನು ಎಂಥಾ ದೊಡ್ಡವನು ಎಂದು ಲೋಕಕ್ಕೆ ತೋರಿಸಲು ನಾನು ಈ ಅರಮನೆಯನ್ನು ಕಟ್ಟಿದೆ” ಎಂದು ತನ್ನಷ್ಟಕ್ಕೆ ತಾನೇ ಹೇಳಿಕೊಳ್ಳುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಹನ್ನೆರಡು ತಿಂಗಳು ಕಳೆದನಂತರ ಅವನು ಬಾಬೆಲಿನ ಅರಮನೆಯ ಮಹಡಿಯ ಮೇಲೆ ತಿರುಗಾಡುತ್ತಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಹನ್ನೆರಡು ತಿಂಗಳು ಕಳೆದ ನಂತರ ಅವನು ಒಂದು ದಿನ ಬಾಬಿಲೋನಿನ ಅರಮನೆಯ ಮೇಲ್ಗಡೆ ತಿರುಗಾಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಹನ್ನೆರಡು ತಿಂಗಳು ಕಳೆದನಂತರ ಅವನು ಬಾಬೆಲಿನ ಅರಮನೆಯ ಮೇಲೆ ತಿರುಗಾಡುತ್ತಾ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಹನ್ನೆರಡು ತಿಂಗಳಾದ ಮೇಲೆ ಅರಸನು ಬಾಬಿಲೋನಿನ ರಾಜ್ಯದ ಅರಮನೆಯ ಮೇಲ್ಗಡೆ ತಿರುಗಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 4:29
9 ತಿಳಿವುಗಳ ಹೋಲಿಕೆ  

ತನ್ನ ಮನಸ್ಸನ್ನು ಪರಿವರ್ತಿಸಿಕೊಂಡು ಪಾಪಗಳಿಂದ ದೂರ ಸರಿಯಲು ನಾನು ಆಕೆಗೆ ಸಮಯ ಕೊಟ್ಟರೂ ಪರಿವರ್ತನೆ ಹೊಂದಲು ಆಕೆಗೆ ಇಷ್ಟವಿಲ್ಲ.


ನಾವು ರಕ್ಷಣೆ ಹೊಂದಿಕೊಂಡದ್ದು ನಮ್ಮ ಪ್ರಭುವಿನ ತಾಳ್ಮೆಯಿಂದಲೇ ಎಂಬುದನ್ನು ನೆನಪು ಮಾಡಿಕೊಳ್ಳಿರಿ. ನಮ್ಮ ಪ್ರಿಯ ಸಹೋದರನಾದ ಪೌಲನು ದೇವರಿಂದ ತನಗೆ ದೊರೆತ ಜ್ಞಾನದಿಂದ ನಿಮಗೆ ಪತ್ರ ಬರೆದಾಗ ಇದನ್ನೇ ತಿಳಿಸಿದನು.


ಬಹಳ ಹಿಂದೆ ನೋಹನ ಕಾಲದಲ್ಲಿ ದೇವರಿಗೆ ಅವಿಧೇಯರಾಗಿದ್ದವರೇ ಅವರು. ನೋಹನು ನಾವೆಯನ್ನು ಕಟ್ಟುತ್ತಿದ್ದಾಗ ದೇವರು ತಾಳ್ಮೆಯಿಂದ ಕಾಯುತ್ತಿದ್ದನು. ಕೆಲವರು ಅಂದರೆ ಎಂಟು ಮಂದಿ ಮಾತ್ರ, ಆ ನಾವೆಯಲ್ಲಿ ನೀರಿನ ಮೂಲಕ ರಕ್ಷಿಸಲ್ಪಟ್ಟರು.


ಜನರ ಅಪರಾಧಗಳಿಗೆ ದಂಡನೆಯು ಕೂಡಲೇ ಬರದಿರುವುದರಿಂದ ದುಷ್ಕೃತ್ಯಗಳನ್ನು ಮಾಡಲು ಇತರರು ಸಹ ಪ್ರೇರಿತರಾಗುತ್ತಾರೆ.


ಅವನು ಮಹಾ ಧ್ವನಿಯಿಂದ, ‘ಮರವನ್ನು ಕಡಿದುಹಾಕಿರಿ; ಅದರ ಕೊಂಬೆಗಳನ್ನು ಕಡಿದುಹಾಕಿರಿ; ಅದರ ಎಲೆಗಳನ್ನು ಕಿತ್ತುಹಾಕಿರಿ; ಹಣ್ಣುಗಳನ್ನು ಸುತ್ತಲೂ ಉದುರಿಸಿಬಿಡಿ. ಮರದ ಕೆಳಗೆ ಇದ್ದ ಪ್ರಾಣಿಗಳು ಓಡಿಹೋಗುವವು. ಅದರ ಕೊಂಬೆಗಳಲ್ಲಿ ವಾಸವಾಗಿದ್ದ ಪಕ್ಷಿಗಳು ಹಾರಿಹೋಗುವವು.


ಅರಸನೇ, ನೀನೇ ಆ ಮರ. ನೀನು ಪ್ರಖ್ಯಾತನೂ ಮತ್ತು ಪ್ರಬಲನೂ ಆಗಿರುವೆ. ನೀನು ಗಗನಚುಂಬಿಯಾದ ಆ ಮರದಂತೆ ಬೆಳೆದಿರುವೆ. ನಿನ್ನ ಪ್ರಾಬಲ್ಯವು ಈ ಭೂಮಿಯಲ್ಲಿ ದೂರದೂರದವರೆಗೆ ಹಬ್ಬಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು