ದಾನಿಯೇಲ 4:31 - ಪರಿಶುದ್ದ ಬೈಬಲ್31 ಆ ಶಬ್ದಗಳು ಇನ್ನೂ ಬಾಯಿಯಲ್ಲಿಯೇ ಇದ್ದಾಗ, ಆಕಾಶವಾಣಿಯಾಯಿತು. ಆ ಧ್ವನಿಯು, “ಅರಸನಾದ ನೆಬೂಕದ್ನೆಚ್ಚರನೇ, ನಿನ್ನಿಂದ ನಿನ್ನ ರಾಜಪದವಿಯನ್ನು ಕಿತ್ತುಕೊಳ್ಳಲಾಗಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಈ ಮಾತು ರಾಜನ ಬಾಯಿಂದ ಹೊರಡುತ್ತಿರುವಾಗ, “ಅರಸನಾದ ನೆಬೂಕದ್ನೆಚ್ಚರನೇ, ನಿನಗಾದ ದೈವೋಕ್ತಿಯನ್ನು ಕೇಳು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ಈ ಮಾತು ಅವನ ಬಾಯಿಂದ ಹೊರಡುತ್ತಿರುವಾಗಲೆ, “ಎಲೈ ರಾಜ ನೆಬೂಕದ್ನೆಚ್ಚರನೇ, ನಿನ್ನ ವಿಷಯವಾದ ಈ ದೈವೋಕ್ತಿಯನ್ನು ಕೇಳು - ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಈ ಮಾತು ರಾಜನ ಬಾಯಿಂದ ಹೊರಡುತ್ತಿರುವಾಗ - ಅರಸನಾದ ನೆಬೂಕದ್ನೆಚ್ಚರನೇ, ನಿನಗಾದ ದೈವೋಕ್ತಿಯನ್ನು ಕೇಳು; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ಈ ಮಾತು ಅರಸನ ಬಾಯಿಯಲ್ಲಿ ಇರುವಾಗಲೇ ಪರಲೋಕದಿಂದ ಒಂದು ಧ್ವನಿ ಉಂಟಾಯಿತು: “ಅರಸನಾದ ನೆಬೂಕದ್ನೆಚ್ಚರನೇ, ನಿನ್ನ ವಿಷಯವಾದ ದೈವೋಕ್ತಿ ಏನೆಂದರೆ: ನಿನ್ನ ರಾಜ್ಯವು ನಿನ್ನಿಂದ ತೆಗೆಯಲಾಗುವುದು. ಅಧ್ಯಾಯವನ್ನು ನೋಡಿ |
ಜನರನ್ನು ಬಿಟ್ಟುಹೋಗುವಂತೆ ನಿನ್ನನ್ನು ಒತ್ತಾಯಿಸಲಾಗುವುದು. ನೀನು ಕಾಡುಪ್ರಾಣಿಗಳೊಂದಿಗೆ ವಾಸಿಸುವೆ. ಹಸುಗಳಂತೆ ಹುಲ್ಲು ತಿನ್ನುವೆ; ನೀನು ಪಾಠ ಕಲಿಯುವದಕ್ಕೆ ಏಳು ವರ್ಷ ಬೇಕಾಗುವುದು. ಆಗ ಮಹೋನ್ನತನಾದ ದೇವರು ಮಾನವನ ಸಾಮ್ರಾಜ್ಯಗಳ ಮೇಲೆ ಆಳ್ವಿಕೆ ಮಾಡುತ್ತಾನೆ ಮತ್ತು ತನಗೆ ಬೇಕಾದವರಿಗೆ ಸಾಮ್ರಾಜ್ಯವನ್ನು ಕೊಡುತ್ತಾನೆ ಎಂಬ ಸತ್ಯವನ್ನು ನೀನು ತಿಳಿದುಕೊಳ್ಳುವೆ” ಎಂದು ನುಡಿಯಿತು.