32 ಜನರನ್ನು ಬಿಟ್ಟುಹೋಗುವಂತೆ ನಿನ್ನನ್ನು ಒತ್ತಾಯಿಸಲಾಗುವುದು. ನೀನು ಕಾಡುಪ್ರಾಣಿಗಳೊಂದಿಗೆ ವಾಸಿಸುವೆ. ಹಸುಗಳಂತೆ ಹುಲ್ಲು ತಿನ್ನುವೆ; ನೀನು ಪಾಠ ಕಲಿಯುವದಕ್ಕೆ ಏಳು ವರ್ಷ ಬೇಕಾಗುವುದು. ಆಗ ಮಹೋನ್ನತನಾದ ದೇವರು ಮಾನವನ ಸಾಮ್ರಾಜ್ಯಗಳ ಮೇಲೆ ಆಳ್ವಿಕೆ ಮಾಡುತ್ತಾನೆ ಮತ್ತು ತನಗೆ ಬೇಕಾದವರಿಗೆ ಸಾಮ್ರಾಜ್ಯವನ್ನು ಕೊಡುತ್ತಾನೆ ಎಂಬ ಸತ್ಯವನ್ನು ನೀನು ತಿಳಿದುಕೊಳ್ಳುವೆ” ಎಂದು ನುಡಿಯಿತು.
32 ರಾಜ್ಯವು ನಿನ್ನಿಂದ ತೊಲಗಿದೆ, ನೀನು ಮನುಷ್ಯರೊಳಗಿಂದ ತಳ್ಳಲ್ಪಟ್ಟು ಕಾಡು ಮೃಗಗಳೊಂದಿಗೆ ವಾಸಿಸುವಿ, ಎತ್ತುಗಳಂತೆ ಹುಲ್ಲು ಮೇಯುವುದೇ ನಿನಗೆ ಗತಿಯಾಗುವುದು; ಪರಾತ್ಪರನಾದ ದೇವರು ಮನುಷ್ಯರ ರಾಜ್ಯದಲ್ಲಿ ರಾಜನಾಗಿ ಅದನ್ನು ತನಗೆ ಬೇಕಾದವರಿಗೆ ಒಪ್ಪಿಸುತ್ತಾನೆ ಎಂಬುದು ನಿನ್ನ ತಿಳಿವಳಿಕೆಗೆ ಬರುವುದರೊಳಗೆ ಏಳು ವರ್ಷ ನಿನಗೆ ಹೀಗೆ ಕಳೆಯುವುದು” ಎಂದು ಆಕಾಶವಾಣಿಯಾಯಿತು.
32 ‘ಈ ರಾಜ್ಯ ನಿನ್ನನ್ನು ಬಿಟ್ಟು ತೊಲಗಿದೆ. ನೀನು ಮಾನವ ಸಮಾಜದಿಂದ ಬಹುಷ್ಕೃತನಾಗುವೆ. ಕಾಡುಮೃಗಗಳ ನಡುವೆ ವಾಸಿಸುವೆ. ದನಗಳಂತೆ ಹುಲ್ಲು ಮೇಯುವ ಗತಿ ನಿನ್ನದಾಗುವುದು. ಪರಾತ್ಪರ ದೇವರಿಗೆ ನರಮಾನವರ ರಾಜ್ಯದ ಮೇಲೆ ಅಧಿಕಾರವಿದೆ. ಆ ರಾಜ್ಯವನ್ನು ತಮಗೆ ಬೇಕಾದವರಿಗೆ ಒಪ್ಪಿಸುತ್ತಾರೆ. ಇದನ್ನು ನೀನು ಗ್ರಹಿಸುವುದರೊಳಗೆ ಏಳು ವರ್ಷ ಕಳೆಯುವುದು,” ಎಂದು ದೈವವಾಣಿಯಾಯಿತು.”
32 ರಾಜ್ಯವು ನಿನ್ನಿಂದ ತೊಲಗಿದೆ, ನೀನು ಮನುಷ್ಯರೊಳಗಿಂದ ತಳ್ಳಲ್ಪಟ್ಟು ಕಾಡುಮೃಗಗಳೊಂದಿಗೆ ವಾಸಿಸುವಿ, ದನಗಳಂತೆ ಹುಲ್ಲುಮೇಯುವದೇ ನಿನಗೆ ಗತಿಯಾಗುವದು; ಪರಾತ್ಪರನು ಮನುಷ್ಯರ ರಾಜ್ಯದಲ್ಲಿ ರಾಜನಾಗಿ ಅದನ್ನು ತನಗೆ ಬೇಕಾದವರಿಗೆ ಒಪ್ಪಿಸುತ್ತಾನೆ ಎಂಬದು ನಿನ್ನ ತಿಳುವಳಿಕೆಗೆ ಬರುವದರೊಳಗೆ ಏಳು ವರುಷ ನಿನಗೆ ಹೀಗೆ ಕಳೆಯುವದು ಎಂದು ಆಕಾಶವಾಣಿಯಾಯಿತು.
32 ನೀನು ಮಾನವ ಸಮಾಜದಿಂದ ಬಹುಷ್ಕೃತನಾಗುವೆ. ಕಾಡುಮೃಗಗಳ ನಡುವೆ ವಾಸಿಸುವೆ. ನೀನು ದನಗಳ ಹಾಗೆ ಹುಲ್ಲನ್ನು ಮೇಯುವೆ. ಮಹೋನ್ನತರು ಮನುಷ್ಯರ ರಾಜ್ಯವನ್ನಾಳುವರೆಂದು ತಮ್ಮ ಮನಸ್ಸಿಗೆ ಸರಿ ಬಂದವರಿಗೆ ಅದನ್ನು ಕೊಡುವೆರೆಂದು ನೀನು ತಿಳಿಯುವಷ್ಟರಲ್ಲಿ ಏಳು ಕಾಲಗಳು ನಿನ್ನನ್ನು ದಾಟಿ ಹೋಗುವುವು,” ಎಂಬುದೇ.
ಅನಂತರ ನೆಬೂಕದ್ನೆಚ್ಚರನನ್ನು ಜನರ ಮಧ್ಯದಿಂದ ಓಡಿಸಲಾಯಿತು. ಅವನ ಬುದ್ಧಿಯು ಮೃಗಬುದ್ಧಿಯಂತಾಯಿತು. ಅವನು ಕಾಡುಕತ್ತೆಗಳ ಜೊತೆ ವಾಸಿಸಿದನು; ಹಸುಗಳಂತೆ ಹುಲ್ಲು ತಿಂದನು; ಮಂಜಿನಲ್ಲಿ ನೆನೆದನು. ಅವನಿಗೆ ಸರಿಯಾದ ಬುದ್ಧಿ ಬರುವತನಕ ಅವನು ಆ ಸ್ಥಿತಿಯಲ್ಲಿದ್ದನು. ಆಗ ಅವನು ಮಹೋನ್ನತನಾದ ದೇವರೇ ಮಾನವರ ಸಾಮ್ರಾಜ್ಯವನ್ನು ಆಳುತ್ತಾನೆ ಮತ್ತು ಆ ಸಾಮ್ರಾಜ್ಯಕ್ಕೆ ತನಗೆ ಬೇಕಾದವರನ್ನು ಅರಸರನ್ನಾಗಿ ನೇಮಿಸುತ್ತಾನೆ ಎಂಬುದನ್ನು ತಿಳಿದುಕೊಂಡನು.
ನಾನು ಭೂಮಿಯನ್ನೂ ಮತ್ತು ಅದರ ಮೇಲಿರುವ ಎಲ್ಲಾ ಜನರನ್ನೂ ಸೃಷ್ಟಿಸಿದೆ. ನಾನು ಭೂಮಿಯ ಮೇಲಿನ ಎಲ್ಲಾ ಪ್ರಾಣಿಗಳನ್ನು ಸೃಷ್ಟಿಸಿದೆ. ನಾನು ಇದನ್ನು ನನ್ನ ಮಹಾಶಕ್ತಿಯಿಂದಲೂ ಬಲವಾದ ತೋಳುಗಳಿಂದಲೂ ಸೃಷ್ಟಿಸಿದೆ. ನಾನು ಆ ಭೂಮಿಯನ್ನು ನನ್ನ ಮನಸ್ಸಿಗೆ ಬಂದವರಿಗೆ ಕೊಡಬಹುದು.
ಇಲ್ಲವಾದರೆ, ನಾನು ನಿನ್ನ ವಿರುದ್ಧವಾಗಿಯೂ ನಿನ್ನ ಅಧಿಕಾರಿಗಳ ವಿರುದ್ಧವಾಗಿಯೂ ನಿನ್ನ ಜನರ ವಿರುದ್ಧವಾಗಿಯೂ ನನ್ನ ಪೂರ್ಣಶಕ್ತಿಯಿಂದ ಉಪದ್ರವಗಳನ್ನು ಕಳುಹಿಸುವೆನು. ಆಗ ನನ್ನಂಥ ದೇವರು ಲೋಕದಲ್ಲಿ ಇಲ್ಲವೇ ಇಲ್ಲವೆಂದು ನೀನು ತಿಳಿದುಕೊಳ್ಳುವೆ.
ಯೆಹೋವನು ಮನಸ್ಸೆಯ ಬೇಡಿಕೆಗಳನ್ನು ಕೇಳಿ ಅವನಿಗೆ ಕರುಣೆ ತೋರಿದನು. ಅವನು ಜೆರುಸಲೇಮಿಗೂ ತನ್ನ ಸಿಂಹಾಸನಕ್ಕೂ ಹಿಂತಿರುಗಿ ಬರುವಂತೆ ಮಾಡಿದನು. ಆಗ ಮನಸ್ಸೆಯು ಯೆಹೋವನೇ ನಿಜ ದೇವರೆಂದು ಅರಿತನು.
ಆತನು ಕಾಲಸಮಯಗಳನ್ನು ಮಾರ್ಪಡಿಸುತ್ತಾನೆ. ಆತನು ಅರಸರನ್ನು ಬದಲಾಯಿಸುತ್ತಾನೆ. ಆತನು ಅರಸರಿಗೆ ಪ್ರಭುತ್ವವನ್ನು ಕೊಡುವನು. ಆತನು ಅವರ ಪ್ರಭುತ್ವವನ್ನು ಕಿತ್ತುಕೊಳ್ಳುವನು! ಜನರಿಗೆ ಜ್ಞಾನವನ್ನು ಕೊಟ್ಟು ಜ್ಞಾನಿಗಳನ್ನಾಗಿ ಮಾಡುವವನು ಆತನೇ. ಜನರಿಗೆ ವಿವೇಕವನ್ನು ಕೊಟ್ಟು ವಿವೇಕಿಗಳನ್ನಾಗಿ ಮಾಡುವವನು ಆತನೇ.