33 ಆ ಮಾತುಗಳು ತಕ್ಷಣ ನೆರವೇರಿದವು. ನೆಬೂಕದ್ನೆಚ್ಚರನು ಜನರನ್ನು ಬಿಟ್ಟುಹೋಗಬೇಕಾಯಿತು. ಅವನು ಹಸುಗಳಂತೆ ಹುಲ್ಲು ತಿನ್ನತೊಡಗಿದನು. ಅವನು ಇಬ್ಬನಿಯಿಂದ ನೆನೆದನು. ಅವನ ಕೂದಲುಗಳು ಹದ್ದಿನ ಗರಿಗಳಂತೆ ಬೆಳೆದವು. ಅವನ ಉಗುರುಗಳು ಪಕ್ಷಿಗಳ ಉಗುರುಗಳಂತೆ ಬೆಳೆದವು.
33 ಈ ನುಡಿಯು ನೆಬೂಕದ್ನೆಚ್ಚರನಲ್ಲಿ ತಕ್ಷಣವೇ ನೆರವೇರಿತು; ಅವನು ಮನುಷ್ಯರೊಳಗಿಂದ ತಳ್ಳಲ್ಪಟ್ಟು, ಎತ್ತುಗಳಂತೆ ಹುಲ್ಲು ಮೇಯುತ್ತಾ, ಆಕಾಶದ ಇಬ್ಬನಿಯಿಂದ ನೆನೆಯುತ್ತಾ ಇದ್ದನು; ಅವನ ಕೂದಲು ಹದ್ದುಗಳ ಗರಿಯಂತೆಯೂ, ಅವನ ಉಗುರು ಹಕ್ಕಿಗಳ ಉಗುರಿನ ಹಾಗೂ ಬೆಳೆದವು.
33 ಆ ನುಡಿ ಕೂಡಲೆ ನೆರವೇರಿತು. ನೆಬೂಕದ್ನೆಚ್ಚರನು ಸಮಾಜದಿಂದ ಬಹಿಷ್ಕೃತನಾದನು. ದನಗಳಂತೆ ಹುಲ್ಲು ಮೇಯುತ್ತಿದ್ದನು. ಕೊನೆಗೆ ಅವನ ಕೂದಲು ಹದ್ದಿನ ಗರಿಗಳಂತೆಯೂ, ಅವನ ಉಗುರುಗಳು ಪಕ್ಷಿಗಳ ಉಗುರುಗಳ ಹಾಗೆ ಬೆಳೆಯುವವರೆಗೆ ಅವನ ಶರೀರವು ಆಕಾಶದ ಮಂಜಿನಿಂದ ತೇವವಾಯಿತು.
ಜನರನ್ನು ಬಿಟ್ಟುಹೋಗುವಂತೆ ನಿನ್ನನ್ನು ಒತ್ತಾಯಿಸಲಾಗುವುದು. ನೀನು ಕಾಡುಪ್ರಾಣಿಗಳೊಂದಿಗೆ ವಾಸಿಸುವೆ. ಹಸುಗಳಂತೆ ಹುಲ್ಲು ತಿನ್ನುವೆ; ನೀನು ಪಾಠ ಕಲಿಯುವದಕ್ಕೆ ಏಳು ವರ್ಷ ಬೇಕಾಗುವುದು. ಆಗ ಮಹೋನ್ನತನಾದ ದೇವರು ಮಾನವನ ಸಾಮ್ರಾಜ್ಯಗಳ ಮೇಲೆ ಆಳ್ವಿಕೆ ಮಾಡುತ್ತಾನೆ ಮತ್ತು ತನಗೆ ಬೇಕಾದವರಿಗೆ ಸಾಮ್ರಾಜ್ಯವನ್ನು ಕೊಡುತ್ತಾನೆ ಎಂಬ ಸತ್ಯವನ್ನು ನೀನು ತಿಳಿದುಕೊಳ್ಳುವೆ” ಎಂದು ನುಡಿಯಿತು.
ರಾಜನಾದ ನೆಬೂಕದ್ನೆಚ್ಚರನೇ, ನಿನ್ನನ್ನು ಬಲವಂತದಿಂದ ಜನರಿಂದ ದೂರಮಾಡುವರು. ನೀನು ಕಾಡುಪ್ರಾಣಿಗಳೊಂದಿಗೆ ವಾಸಮಾಡುವೆ; ಹಸುಗಳಂತೆ ಹುಲ್ಲು ತಿನ್ನುವೆ; ಇಬ್ಬನಿಯಿಂದ ತೋಯಿಸಿಕೊಳ್ಳುವೆ. ಏಳು ವರ್ಷಗಳು ಕಳೆಯುವವು. ಆಗ ನೀನು ಮಹೋನ್ನತನಾದ ದೇವರು ಮಾನವರ ಸಾಮ್ರಾಜ್ಯದ ಮೇಲೆ ಆಳ್ವಿಕೆ ಮಾಡುತ್ತಾನೆ ಮತ್ತು ತನಗೆ ಬೇಕಾದವರಿಗೆ ರಾಜ್ಯವನ್ನು ಕೊಡುತ್ತಾನೆ ಎಂಬ ಪಾಠವನ್ನು ಕಲಿಯುವೆ.
ಅನಂತರ ನೆಬೂಕದ್ನೆಚ್ಚರನನ್ನು ಜನರ ಮಧ್ಯದಿಂದ ಓಡಿಸಲಾಯಿತು. ಅವನ ಬುದ್ಧಿಯು ಮೃಗಬುದ್ಧಿಯಂತಾಯಿತು. ಅವನು ಕಾಡುಕತ್ತೆಗಳ ಜೊತೆ ವಾಸಿಸಿದನು; ಹಸುಗಳಂತೆ ಹುಲ್ಲು ತಿಂದನು; ಮಂಜಿನಲ್ಲಿ ನೆನೆದನು. ಅವನಿಗೆ ಸರಿಯಾದ ಬುದ್ಧಿ ಬರುವತನಕ ಅವನು ಆ ಸ್ಥಿತಿಯಲ್ಲಿದ್ದನು. ಆಗ ಅವನು ಮಹೋನ್ನತನಾದ ದೇವರೇ ಮಾನವರ ಸಾಮ್ರಾಜ್ಯವನ್ನು ಆಳುತ್ತಾನೆ ಮತ್ತು ಆ ಸಾಮ್ರಾಜ್ಯಕ್ಕೆ ತನಗೆ ಬೇಕಾದವರನ್ನು ಅರಸರನ್ನಾಗಿ ನೇಮಿಸುತ್ತಾನೆ ಎಂಬುದನ್ನು ತಿಳಿದುಕೊಂಡನು.
ಆಗ ಫಕ್ಕನೆ ಮನುಷ್ಯನ ಕೈಯೊಂದು ಕಾಣಿಸಿಕೊಂಡು ಗೋಡೆಯ ಮೇಲೆ ಬರೆಯುವದಕ್ಕೆ ಪ್ರಾರಂಭಿಸಿತು. ಬೆರಳುಗಳು ಗೋಡೆಯ ಸುಣ್ಣದ ಮೇಲೆ ಅಕ್ಷರಗಳನ್ನು ಕೊರೆದವು. ಆ ಕೈಯು ದೀಪಸ್ತಂಭದ ಹತ್ತಿರ ಅರಮನೆಯ ಗೋಡೆಯ ಮೇಲೆ ಅರಸನ ಕಣ್ಣೆದುರಿನಲ್ಲಿಯೇ ಬರೆಯಿತು.
ಒಂದು ದೊಡ್ಡ ಆವೆಮಣ್ಣಿನ ಭರಣಿ ನಚ್ಚುನೂರಾಗಿ ಹೋಗುವಂತೆ ನೀವಿದ್ದೀರಿ. ಅದರ ತುಂಡುಗಳಿಂದ ಏನೂ ಪ್ರಯೋಜನವಿಲ್ಲ. ಆ ಭರಣಿಯ ಚೂರಿನಿಂದ ಸುಡುವ ಕಲ್ಲಿದ್ದಲನ್ನು ಹೊರತೆಗೆಯಲು ಅಥವಾ ಅದರಿಂದ ನೀರು ಸೇದಲು ಆಗುವದಿಲ್ಲ.”