Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 4:36 - ಪರಿಶುದ್ದ ಬೈಬಲ್‌

36 ಆಗ ದೇವರು ನನಗೆ ಸರಿಯಾದ ಬುದ್ಧಿಯನ್ನು ಕೊಟ್ಟನು. ನನಗೆ ರಾಜನ ಗೌರವ, ಪ್ರಭಾವ, ವೈಭವಗಳು ಮತ್ತೆ ಲಭಿಸಿದವು. ನನ್ನ ಮಂತ್ರಿಗಳೂ ಅಧಿಪತಿಗಳೂ ನನ್ನನ್ನು ಸ್ವೀಕರಿಸಿದರು. ನಾನು ಮತ್ತೆ ಅರಸನಾದೆನು. ನಾನು ಮೊದಲಿಗಿಂತಲೂ ಅಧಿಕ ಶಕ್ತಿಶಾಲಿಯಾದ ಮತ್ತು ಪ್ರಭಾವಶಾಲಿಯಾದ ಅರಸನಾದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಅದೇ ಸಮಯದಲ್ಲಿ ನನ್ನ ಬುದ್ಧಿಯು ಪುನಃ ನನ್ನ ಸ್ವಾಧೀನವಾಯಿತು; ನನ್ನ ಪ್ರಭಾವ ವೈಭವಗಳು ನನಗೆ ಮತ್ತೆ ಲಭಿಸಿ ನನ್ನ ರಾಜ್ಯದ ಕೀರ್ತಿಯು ಪ್ರಕಾಶಿಸಿತು; ನನ್ನ ಮಂತ್ರಿಗಳೂ ಅಧಿಪತಿಗಳೂ ನನ್ನನ್ನು ಸಮಾಧಾನಪಡಿಸಿದರು; ನನ್ನ ರಾಜ್ಯದಲ್ಲಿ ರಾಜನಾಗಿ ನೆಲೆಗೊಂಡೆನು; ನನ್ನ ಮಹಿಮೆಯು ಅತ್ಯಧಿಕವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 ಅದೇ ಸಮಯದಲ್ಲಿ ನನ್ನ ಬುದ್ಧಿ ನನಗೆ ಮತ್ತೆ ಸ್ವಾಧೀನವಾಯಿತು. ಘನತೆ ಗೌರವಗಳು ನನಗೆ ಮತ್ತೆ ಲಭಿಸಿದವು. ನನ್ನ ರಾಜ್ಯದ ಕೀರ್ತಿ ಬೆಳಗತೊಡಗಿತು. ನನ್ನ ಮಂತ್ರಿಗಳೂ ಪದಾಧಿಕಾರಿಗಳೂ ನನ್ನನ್ನು ಸ್ವಾಗತಿಸಲು ಬಂದರು. ರಾಜ್ಯದಲ್ಲಿ ನಾನು ನೆಲೆಗೊಂಡೆ. ಹಿಂದೆ ಇದ್ದುದಕ್ಕಿಂತಲೂ ಹೆಚ್ಚಿನ ಪ್ರತಿಭೆ ನನ್ನದಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ಅದೇ ಸಮಯದಲ್ಲಿ ನನ್ನ ಬುದ್ಧಿಯು ಪುನಃ ನನ್ನ ಸ್ವಾಧೀನವಾಯಿತು; ನನ್ನ ಪ್ರಭಾವ ವೈಭವಗಳು ನನಗೆ ಮತ್ತೆ ಲಭಿಸಿ ನನ್ನ ರಾಜ್ಯದ ಕೀರ್ತಿಯು ಪ್ರಕಾಶಿಸಿತು; ನನ್ನ ಮಂತ್ರಿಗಳೂ ಅಧಿಪತಿಗಳೂ ನನ್ನನ್ನು ಓಲೈಸಿದರು; ನನ್ನ ರಾಜ್ಯದಲ್ಲಿ ರಾಜನಾಗಿ ನೆಲೆಗೊಂಡೆನು; ನನ್ನ ಮಹಿಮೆಯು ಅತ್ಯಧಿಕವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ಇದೇ ಸಮಯದಲ್ಲಿ ನನ್ನ ಬುದ್ಧಿಯು ನನಗೆ ತಿರುಗಿ ಬಂತು. ನನ್ನ ರಾಜ್ಯದ ಮಹಿಮೆಗಾಗಿ ನನ್ನ ಘನವೂ, ನನ್ನ ತೇಜಸ್ಸೂ ತಿರುಗಿ ಬಂದವು. ನನ್ನ ಆಲೋಚನಾಗಾರರೂ, ನನ್ನ ಪ್ರಭುಗಳೂ ನನ್ನನ್ನು ಹುಡುಕಿ ಬಂದರು. ನಾನು ನನ್ನ ರಾಜ್ಯದಲ್ಲಿ ಪುನಃ ನೆಲೆಗೊಂಡೆನು. ಮೊದಲಿಗಿಂತಲೂ ನನಗೆ ಹೆಚ್ಚಿನ ಪ್ರತಿಭೆ ದೊರೆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 4:36
11 ತಿಳಿವುಗಳ ಹೋಲಿಕೆ  

ಆ ಕಾಲವು ಕಳೆದ ಮೇಲೆ ನೆಬೂಕದ್ನೆಚ್ಚರನಾದ ನಾನು ಆಕಾಶದ ಕಡೆಗೆ ನೋಡಿದೆ. ಆಗ ನಾನು ಸ್ವಸ್ಥ ಬುದ್ಧಿಯುಳ್ಳವನಾಗಿದ್ದೆ. ಬಳಿಕ ನಾನು ಮಹೋನ್ನತನಾದ ದೇವರನ್ನು ಸ್ತುತಿಸಿದೆ. ನಿತ್ಯನಾದ ಆ ದೇವರನ್ನು ಕೊಂಡಾಡಿದೆ. ಸ್ತೋತ್ರಮಾಡಿದೆ. ದೇವರ ಆಳ್ವಿಕೆಯು ಶಾಶ್ವತವಾದದ್ದು! ಆತನ ಸಾಮ್ರಾಜ್ಯವು ಎಲ್ಲಾ ತಲೆಮಾರುಗಳಲ್ಲಿಯೂ ಇರುವುದು.


ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿದ್ದು ದೀನತೆಯಿಂದಿರು; ಆಗ ನೀನು ಐಶ್ವರ್ಯ, ಸನ್ಮಾನ ಮತ್ತು ನಿಜಜೀವವನ್ನು ಹೊಂದಿಕೊಳ್ಳುವೆ.


ಆದ್ದರಿಂದ ನೀವು ದೇವರ ರಾಜ್ಯಕ್ಕಾಗಿ ಮತ್ತು ಆತನ ಚಿತ್ತಕ್ಕನುಸಾರವಾಗಿ ಕಾರ್ಯಗಳನ್ನು ಮಾಡಲು ಬಹಳ ತವಕಪಡಬೇಕು. ಆಗ ನಿಮಗೆ ಅಗತ್ಯವಾದ ಉಳಿದವುಗಳನ್ನು ಸಹ ಕೊಡಲಾಗುವುದು.


ಜನರನ್ನು ಬಿಟ್ಟುಹೋಗುವಂತೆ ನಿನ್ನನ್ನು ಒತ್ತಾಯಿಸಲಾಗುವುದು. ನೀನು ಕಾಡುಪ್ರಾಣಿಗಳೊಂದಿಗೆ ವಾಸಿಸುವೆ. ಹಸುಗಳಂತೆ ಹುಲ್ಲು ತಿನ್ನುವೆ; ನೀನು ಪಾಠ ಕಲಿಯುವದಕ್ಕೆ ಏಳು ವರ್ಷ ಬೇಕಾಗುವುದು. ಆಗ ಮಹೋನ್ನತನಾದ ದೇವರು ಮಾನವನ ಸಾಮ್ರಾಜ್ಯಗಳ ಮೇಲೆ ಆಳ್ವಿಕೆ ಮಾಡುತ್ತಾನೆ ಮತ್ತು ತನಗೆ ಬೇಕಾದವರಿಗೆ ಸಾಮ್ರಾಜ್ಯವನ್ನು ಕೊಡುತ್ತಾನೆ ಎಂಬ ಸತ್ಯವನ್ನು ನೀನು ತಿಳಿದುಕೊಳ್ಳುವೆ” ಎಂದು ನುಡಿಯಿತು.


ಸ್ವಲ್ಪಕಾಲದವರೆಗೆ ನಮಗೆ ಚಿಕ್ಕಪುಟ್ಟ ಇಕ್ಕಟ್ಟುಗಳಿರುತ್ತವೆ. ಆದರೆ ನಿತ್ಯವಾದ ಮಹಿಮೆಯನ್ನು ಹೊಂದಿಕೊಳ್ಳಲು ಅವು ನಮಗೆ ಸಹಾಯಕವಾಗಿವೆ. ಆ ಮಹಿಮೆಯು ಇಂದಿನ ಇಕ್ಕಟ್ಟುಗಳಿಗಿಂತಲೂ ಮಹತ್ವವುಳ್ಳದ್ದಾಗಿದೆ.


ನೀವಾಡುವ ಸ್ಮರಣೀಯ ನುಡಿಗಳು ಬೂದಿಗೆ ಸಮಾನವಾಗಿವೆ. ನಿಮ್ಮ ವಾದಗಳು ಮಣ್ಣಿನಷ್ಟೇ ಬಲಹೀನವಾಗಿವೆ.


“ನಿಮ್ಮ ತಂದೆಯ ಕುಟುಂಬವು ಸರ್ವಕಾಲವೂ ಆತನ ಸೇವೆ ಮಾಡುವುದೆಂದು ಇಸ್ರೇಲಿನ ದೇವರಾದ ಯೆಹೋವನು ವಾಗ್ದಾನ ಮಾಡಿದ್ದನು. ಆದರೆ ಈಗ ಯೆಹೋವನು ಹೀಗೆನ್ನುತ್ತಾನೆ: ‘ಅದೆಂದಿಗೂ ಸಾಧ್ಯವಿಲ್ಲ. ನನ್ನನ್ನು ಸನ್ಮಾನಿಸುವವರನ್ನು ನಾನೂ ಸನ್ಮಾನಿಸುತ್ತೇನೆ. ಆದರೆ ನನ್ನನ್ನು ತಿರಸ್ಕರಿಸುವವರನ್ನು ನಾನೂ ತಿರಸ್ಕರಿಸುತ್ತೇನೆ.


“ಅರಸನೇ, ನಿನ್ನ ಕನಸಿನಲ್ಲಿ ನಿನ್ನ ಎದುರಿಗೆ ಒಂದು ದೊಡ್ಡ ಪ್ರತಿಮೆಯನ್ನು ಕಂಡೆ. ಅದು ಬಹಳ ದೊಡ್ಡದಾಗಿಯೂ ಪ್ರಕಾಶಮಾನವಾಗಿಯೂ ಪ್ರಭಾವಶಾಲಿಯಾಗಿಯೂ ಇತ್ತು. ನೋಡಿದವರು ಆಶ್ಚರ್ಯಚಕಿತರಾಗಿ ಕಣ್ಣರಳಿಸುವಂತಿತ್ತು.


ಅರಸನೇ, ನೀನೇ ಆ ಮರ. ನೀನು ಪ್ರಖ್ಯಾತನೂ ಮತ್ತು ಪ್ರಬಲನೂ ಆಗಿರುವೆ. ನೀನು ಗಗನಚುಂಬಿಯಾದ ಆ ಮರದಂತೆ ಬೆಳೆದಿರುವೆ. ನಿನ್ನ ಪ್ರಾಬಲ್ಯವು ಈ ಭೂಮಿಯಲ್ಲಿ ದೂರದೂರದವರೆಗೆ ಹಬ್ಬಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು