ದಾನಿಯೇಲ 4:37 - ಪರಿಶುದ್ದ ಬೈಬಲ್37 ಅರಸ ನೆಬೂಕದ್ನೆಚ್ಚರನಾದ ನಾನು ಈಗ ಪರಲೋಕದ ರಾಜನನ್ನು ಘನಪಡಿಸುತ್ತೇನೆ, ಮಹಿಮೆಪಡಿಸುತ್ತೇನೆ. ಆತನು ಮಾಡುವದೆಲ್ಲ ಸರಿ. ಆತನು ಯಾವಾಗಲೂ ನ್ಯಾಯವಂತನಾಗಿದ್ದಾನೆ. ಆತನು ಗರ್ವಿಷ್ಠರನ್ನು ದೀನರನ್ನಾಗಿ ಮಾಡಬಲ್ಲನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201937 ಈಗ ನೆಬೂಕದ್ನೆಚ್ಚರನಾದ ನಾನು ಪರಲೋಕ ರಾಜನನ್ನು ಹೊಗಳಿ, ಕೊಂಡಾಡಿ ಕೀರ್ತಿಸುತ್ತೇನೆ. ಆತನ ಕಾರ್ಯಗಳೆಲ್ಲಾ ಸತ್ಯ, ಆತನ ಮಾರ್ಗಗಳೆಲ್ಲಾ ನ್ಯಾಯ; ಸೊಕ್ಕಿನಿಂದ ನಡೆಯುವವರನ್ನು ತಗ್ಗಿಸಬಲ್ಲನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)37 ನೆಬೂಕದ್ನೆಚ್ಚರನಾದ ನಾನು ಪರಲೋಕ ರಾಜನನ್ನು ಹೊಗಳಿ, ಕೊಂಡಾಡಿ, ಕೀರ್ತಿಸುತ್ತೇನೆ: ಆತನ ಕಾರ್ಯಗಳೆಲ್ಲವು ಸತ್ಯ, ಆತನ ಮಾರ್ಗಗಳೆಲ್ಲವು ನ್ಯಾಯ, ಗರ್ವಿಷ್ಠರನ್ನು ಆತ ತಗ್ಗಿಸಬಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)37 ಈಗ ನೆಬೂಕದ್ನೆಚ್ಚರನಾದ ನಾನು ಪರಲೋಕರಾಜನನ್ನು ಹೊಗಳಿ ಕೊಂಡಾಡಿ ಕೀರ್ತಿಸುತ್ತೇನೆ; ಆತನ ಕಾರ್ಯಗಳೆಲ್ಲಾ ಸತ್ಯ, ಆತನ ಮಾರ್ಗಗಳೆಲ್ಲಾ ನ್ಯಾಯ; ಸೊಕ್ಕಿನಿಂದ ನಡೆಯುವವರನ್ನು ತಗ್ಗಿಸಬಲ್ಲನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ37 ಈಗ ನೆಬೂಕದ್ನೆಚ್ಚರನಾದ ನಾನು ಪರಲೋಕದ ಅರಸರನ್ನು ಸ್ತುತಿಸಿ, ಹೆಚ್ಚಿಸಿ ಘನಪಡಿಸುತ್ತೇನೆ. ಅವರ ಕ್ರಿಯೆಗಳೆಲ್ಲಾ ಸತ್ಯವೇ. ಅವರ ಮಾರ್ಗಗಳು ನ್ಯಾಯವೇ. ಗರ್ವದಲ್ಲಿ ನಡೆಯುವವರನ್ನು ಅವರೇ ತಗ್ಗಿಸಬಲ್ಲರು. ಅಧ್ಯಾಯವನ್ನು ನೋಡಿ |
ಮನಸ್ಸೆಯ ಪ್ರಾರ್ಥನೆಯ ವಿಷಯವಾಗಿಯೂ ದೇವರ ಪ್ರತಿಕ್ರಿಯೆಯ ವಿಷಯವಾಗಿಯೂ ದೇವದರ್ಶಿಗಳ ಚರಿತ್ರೆಯಲ್ಲಿ ಬರೆಯಲ್ಪಟ್ಟಿದೆ. ಮಾತ್ರವಲ್ಲದೆ ಮನಸ್ಸೆಯು ದೇವರಿಗೆ ವಿರುದ್ಧವಾಗಿ ಮಾಡಿದ ಘೋರಕೃತ್ಯಗಳೂ ಪಶ್ಚಾತ್ತಾಪಪಡುವ ಮೊದಲು ಎಲ್ಲೆಲ್ಲಿ ಅನ್ಯದೇವತೆಗಳಿಗೆ ಪೂಜಾಸ್ಥಳಗಳನ್ನು ಮಾಡಿದ್ದನೆಂದೂ ಎಲ್ಲೆಲ್ಲಿ ಅಶೇರಸ್ತಂಭಗಳನ್ನು ನೆಡಿಸಿದ್ದನೆಂದೂ ದೇವದರ್ಶಿಗಳ ಚರಿತ್ರೆಯಲ್ಲಿ ಬರೆಯಲಾಗಿದೆ.
“ಬಾಬಿಲೋನಿನ ಮೇಲೆ ಬಾಣ ಪ್ರಯೋಗ ಮಾಡಲು ಬಿಲ್ಲುಗಾರರಿಗೆ ಹೇಳಿರಿ. ಆ ಜನರಿಗೆ ನಗರವನ್ನು ಮುತ್ತಲು ಹೇಳಿರಿ. ಯಾರೂ ತಪ್ಪಿಸಿಕೊಂಡು ಹೋಗದಂತೆ ನೋಡಿಕೊಳ್ಳಿ. ಅದು ಮಾಡಿದ ದುಷ್ಕೃತ್ಯಗಳಿಗಾಗಿ ಮುಯ್ಯಿತೀರಿಸಿರಿ. ಬೇರೆ ಜನಾಂಗಗಳಿಗೆ ಅದು ಮಾಡಿದಂತೆ ಅದಕ್ಕೆ ಮಾಡಿರಿ. ಬಾಬಿಲೋನ್ ಯೆಹೋವನನ್ನು ಗೌರವಿಸಲಿಲ್ಲ. ಪರಿಶುದ್ಧನಿಗೆ ಅವಮಾನ ಮಾಡಿದೆ. ಆದ್ದರಿಂದ ಬಾಬಿಲೋನನ್ನು ಶಿಕ್ಷಿಸಬೇಕು.