ದಾನಿಯೇಲ 4:4 - ಪರಿಶುದ್ದ ಬೈಬಲ್4 ನೆಬೂಕದ್ನೆಚ್ಚರನಾದ ನಾನು ಅರಮನೆಯಲ್ಲಿದ್ದೆ; ಸುಖಸಂತೋಷದಿಂದ ಇದ್ದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 “ನೆಬೂಕದ್ನೆಚ್ಚರನಾದ ನಾನು ನನ್ನ ಆಲಯದಲ್ಲಿ ಹಾಯಾಗಿದ್ದೆನು, ಹೌದು ನನ್ನ ಅರಮನೆಯಲ್ಲಿ ಸುಖವಾಗಿದ್ದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 “ನೆಬೂಕದ್ನೆಚ್ಚರನಾದ ನಾನು ನನ್ನ ಅರಮನೆಯಲ್ಲಿ ಸುಖವಾಗಿದ್ದೆ. ನನ್ನ ರಾಜಭವನದಲ್ಲಿ ನೆಮ್ಮದಿಯಿಂದ ಇದ್ದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ನೆಬೂಕದ್ನೆಚ್ಚರನಾದ ನಾನು ನನ್ನ ಆಲಯದಲ್ಲಿ ಹಾಯಾಗಿದ್ದೆನು, ಹೌದು ನನ್ನ ಅರಮನೆಯಲ್ಲಿ ಸೊಂಪಾಗಿದ್ದೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ನೆಬೂಕದ್ನೆಚ್ಚರನು ಎಂಬ ನಾನು ನನ್ನ ಅರಮನೆಯಲ್ಲಿ ಸಂತೃಪ್ತನಾಗಿದ್ದೆ ಮತ್ತು ಸಮೃದ್ಧನಾಗಿದ್ದೆ. ಅಧ್ಯಾಯವನ್ನು ನೋಡಿ |
ಆಗ ದಾನಿಯೇಲನು (ಬೇಲ್ತೆಶಚ್ಚರನು) ಸುಮಾರು ಒಂದು ಗಂಟೆಯವರೆಗೆ ಮೌನವಾಗಿದ್ದನು. ಅವನ ಬುದ್ಧಿಗೆ ತೋರಿದ ವಿಷಯಗಳು ಅವನನ್ನು ಗಾಬರಿಪಡಿಸಿದವು. ಆಗ ರಾಜನು, “ಬೇಲ್ತೆಶಚ್ಚರನೇ, ಕನಸು ಅಥವಾ ಕನಸಿನ ಅರ್ಥವು ನಿನ್ನನ್ನು ಭಯಗೊಳಿಸದಿರಲಿ” ಎಂದು ಧೈರ್ಯ ಹೇಳಿದನು. ಆಗ ಬೇಲ್ತೆಶಚ್ಚರನು ಅರಸನಿಗೆ, “ನನ್ನ ಒಡೆಯನೇ, ಈ ಕನಸು ನಿನ್ನ ವಿರೋಧಿಗಳಿಗೆ ಫಲಿಸಲಿ. ಇದರ ಅರ್ಥವು ನಿನ್ನ ವಿರೋಧಿಗಳ ಅನುಭವಕ್ಕೆ ಬರಲಿ ಎಂದು ನಾನು ಹಾರೈಸುತ್ತೇನೆ.