ದಾನಿಯೇಲ 4:5 - ಪರಿಶುದ್ದ ಬೈಬಲ್5 ಆಗ ನನಗೊಂದು ಕನಸು ಬಿತ್ತು. ಅದು ನನ್ನಲ್ಲಿ ಭಯವನ್ನುಂಟುಮಾಡಿತು. ನಾನು ನನ್ನ ಹಾಸಿಗೆಯ ಮೇಲೆ ಮಲಗಿದ್ದೆ. ಅನೇಕ ಚಿತ್ರಗಳನ್ನು ಮತ್ತು ದೃಶ್ಯಗಳನ್ನು ಕಂಡೆ. ಅವುಗಳು ನನ್ನಲ್ಲಿ ಹೆಚ್ಚಿನ ಭಯವನ್ನುಂಟುಮಾಡಿದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಹೀಗಿರಲು ನನ್ನನ್ನು ಹೆದರಿಸುವ ಒಂದು ಕನಸನ್ನು ಕಂಡೆನು; ಹಾಸಿಗೆಯಲ್ಲಿ ನನಗುಂಟಾದ ಯೋಚನೆಗಳೂ, ನನ್ನ ಮನಸ್ಸಿಗೆ ಬಿದ್ದ ಸ್ವಪ್ನಗಳೂ ನನ್ನನ್ನು ಕಳವಳಗೊಳಿಸಿದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಹೀಗಿರುವಲ್ಲಿ ಭಯಂಕರವಾದ ಕನಸೊಂದನ್ನು ಕಂಡೆ. ನಿದ್ರೆಯಲ್ಲಿ ನನಗೆ ತೋಚಿದ ಆಲೋಚನೆಗಳು ಹಾಗು ಮನಸ್ಸಿಗೆ ಬಿದ್ದ ಸ್ವಪ್ನಗಳು ನನ್ನನ್ನು ಕಳವಳಕ್ಕೆ ಈಡುಮಾಡಿದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಹೀಗಿರಲು ನನ್ನನ್ನು ಹೆದರಿಸುವ ಒಂದು ಕನಸನ್ನು ಕಂಡೆನು; ಹಾಸಿಗೆಯಲ್ಲಿ ನನಗುಂಟಾದ ಯೋಚನೆಗಳೂ ನನ್ನ ಮನಸ್ಸಿಗೆ ಬಿದ್ದ ಸ್ವಪ್ನಗಳೂ ನನ್ನನ್ನು ಕಳವಳಗೊಳಿಸಿದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ನನ್ನನ್ನು ಭಯಪಡಿಸುವಂಥಹ ಒಂದು ಕನಸನ್ನು ಕಂಡೆನು. ನನ್ನ ಹಾಸಿಗೆಯ ಮೇಲೆ ಮಲಗಿದ್ದಾಗ, ನನ್ನ ಮನಸ್ಸಿನಲ್ಲಿ ಹಾದುಹೋದ ಚಿತ್ರಗಳು ಮತ್ತು ದರ್ಶನಗಳು ನನ್ನನ್ನು ಭಯಭೀತಗೊಳಿಸಿದವು. ಅಧ್ಯಾಯವನ್ನು ನೋಡಿ |
ಆಗ ದಾನಿಯೇಲನು (ಬೇಲ್ತೆಶಚ್ಚರನು) ಸುಮಾರು ಒಂದು ಗಂಟೆಯವರೆಗೆ ಮೌನವಾಗಿದ್ದನು. ಅವನ ಬುದ್ಧಿಗೆ ತೋರಿದ ವಿಷಯಗಳು ಅವನನ್ನು ಗಾಬರಿಪಡಿಸಿದವು. ಆಗ ರಾಜನು, “ಬೇಲ್ತೆಶಚ್ಚರನೇ, ಕನಸು ಅಥವಾ ಕನಸಿನ ಅರ್ಥವು ನಿನ್ನನ್ನು ಭಯಗೊಳಿಸದಿರಲಿ” ಎಂದು ಧೈರ್ಯ ಹೇಳಿದನು. ಆಗ ಬೇಲ್ತೆಶಚ್ಚರನು ಅರಸನಿಗೆ, “ನನ್ನ ಒಡೆಯನೇ, ಈ ಕನಸು ನಿನ್ನ ವಿರೋಧಿಗಳಿಗೆ ಫಲಿಸಲಿ. ಇದರ ಅರ್ಥವು ನಿನ್ನ ವಿರೋಧಿಗಳ ಅನುಭವಕ್ಕೆ ಬರಲಿ ಎಂದು ನಾನು ಹಾರೈಸುತ್ತೇನೆ.
ಪರಿಶುದ್ಧ ದೇವರುಗಳ ಆತ್ಮವು ನೆಲೆಸಿರುವ ಒಬ್ಬನು ನಿನ್ನ ರಾಜ್ಯದಲ್ಲಿ ಇದ್ದಾನೆ. ದೇವರ ಜ್ಞಾನಕ್ಕೆ ಸಮಾನವಾದ ಜ್ಞಾನವೂ ಬುದ್ಧಿಯೂ ರಹಸ್ಯವನ್ನು ತಿಳಿದುಕೊಳ್ಳುವ ಶಕ್ತಿಯೂ ತನಗಿರುವುದಾಗಿ ಅವನು ನಿನ್ನ ತಂದೆಯ ಕಾಲದಲ್ಲಿಯೇ ತೋರಿಸಿಕೊಟ್ಟಿದ್ದಾನೆ. ನಿನ್ನ ತಂದೆಯಾದ ನೆಬೂಕದ್ನೆಚ್ಚರನು ಈ ಮನುಷ್ಯನನ್ನು ಎಲ್ಲ ವಿದ್ವಾಂಸರ ಅಧ್ಯಕ್ಷನನ್ನಾಗಿ ನೇಮಿಸಿದ್ದನು. ಎಲ್ಲ ಜೋಯಿಸರಿಗೆ, ಮಂತ್ರವಾದಿಗಳಿಗೆ, ಶಾಕುನಿಕರಿಗೆ ಮತ್ತು ಪಂಡಿತರಿಗೆ ಇವನು ಮುಖ್ಯಸ್ಥನಾಗಿದ್ದನು.