ದಾನಿಯೇಲ 4:7 - ಪರಿಶುದ್ದ ಬೈಬಲ್7 ಮಂತ್ರವಾದಿಗಳು, ಜೋಯಿಸರು ಮತ್ತು ವಿದ್ವಾಂಸರು ಬಂದ ಮೇಲೆ ನಾನು ಅವರಿಗೆ ನನ್ನ ಕನಸಿನ ಬಗ್ಗೆ ಹೇಳಿದೆ. ಆದರೆ ಅವರಿಗೆ ಅರ್ಥವನ್ನು ತಿಳಿಸಲಾಗಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 “ಜೋಯಿಸರು, ಮಂತ್ರವಾದಿಗಳು, ಪಂಡಿತರು, ಶಾಕುನಿಕರು, ನನ್ನ ಸಮ್ಮುಖಕ್ಕೆ ಬಂದಾಗ ನಾನು ಆ ಕನಸನ್ನು ತಿಳಿಸಲು ಅವರು ಅದರ ಅಭಿಪ್ರಾಯವನ್ನು ವಿವರಿಸಲಾರದೆ ಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಜೋಯಿಸರು, ಮಂತ್ರವಾದಿಗಳು, ಪಂಡಿತರು, ಶಾಕುನಿಕರು ಇವರೆಲ್ಲರು ನನ್ನ ಸಮ್ಮುಖಕ್ಕೆ ಬಂದರು. ನಾನು ಕನಸನ್ನು ತಿಳಿಸಿದೆ. ಆದರೆ ಅದರ ಅರ್ಥವನ್ನು ಅವರಿಂದ ತಿಳಿಸಲಾಗಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಜೋಯಿಸರು, ಮಂತ್ರವಾದಿಗಳು, ಪಂಡಿತರು, ಶಾಕುನಿಕರು, ಇವರು ಸಮ್ಮುಖಕ್ಕೆ ಬಂದಾಗ ನಾನು ಆ ಕನಸನ್ನು ತಿಳಿಸಲು ಅವರು ಅದರ ಅಭಿಪ್ರಾಯವನ್ನು ವಿವರಿಸಲಾರದೆ ಹೋದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಆಗ ಮಂತ್ರಗಾರರು, ಜೋತಿಷ್ಯರು, ಪಂಡಿತರು, ಶಕುನಗಾರರು ಒಳಗೆ ಬಂದರು. ನಾನು ಕನಸನ್ನು ಅವರಿಗೆ ತಿಳಿಸಿದೆನು. ಆದರೆ ಅವರು ಅದರ ಅರ್ಥವನ್ನು ನನಗೆ ತಿಳಿಸಲಿಲ್ಲ. ಅಧ್ಯಾಯವನ್ನು ನೋಡಿ |
ಆಗ ರಾಜನು ಗಟ್ಟಿಯಾಗಿ ಕೂಗಿಕೊಂಡು ಮಂತ್ರವಾದಿ, ಪಂಡಿತ, ಶಾಕುನಿಕರನ್ನು ತನ್ನಲ್ಲಿಗೆ ಕರೆಸಿದನು. ಅವನು ಆ ವಿದ್ವಾಂಸರಿಗೆ, “ಈ ಬರವಣಿಗೆಯನ್ನು ಓದಿ ನನಗೆ ಅದರ ಅರ್ಥವನ್ನು ಹೇಳಬಲ್ಲ ಮನುಷ್ಯನಿಗೆ ನಾನು ಬಹುಮಾನವನ್ನು ಕೊಡುತ್ತೇನೆ. ಆ ಮನುಷ್ಯನಿಗೆ ನಾನು ಕಂದು ಬಣ್ಣದ ವಸ್ತ್ರಗಳನ್ನು ಕೊಡುತ್ತೇನೆ. ಅವನ ಕೊರಳಿಗೆ ಚಿನ್ನದ ಹಾರವನ್ನು ಹಾಕಿಸಿ ಅವನನ್ನು ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನನ್ನಾಗಿ ನೇಮಿಸುವೆನು” ಎಂದು ಹೇಳಿದನು.