ದಾನಿಯೇಲ 4:8 - ಪರಿಶುದ್ದ ಬೈಬಲ್8 ಕೊನೆಗೆ ದಾನಿಯೇಲನು ಬಂದನು. (ನಾನು ದಾನಿಯೇಲನಿಗೆ ನನ್ನ ದೇವರ ಸ್ಮರಣಾರ್ಥವಾಗಿ ಬೇಲ್ತೆಶಚ್ಚರನೆಂಬ ಹೆಸರನ್ನು ಇಟ್ಟಿದ್ದೆ. ಪರಿಶುದ್ಧ ದೇವರುಗಳ ಆತ್ಮವು ಅವನಲ್ಲಿದೆ.) ನಾನು ದಾನಿಯೇಲನಿಗೆ ನನ್ನ ಕನಸಿನ ಬಗ್ಗೆ ಹೇಳಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ನನ್ನ ದೇವರ ಹೆಸರು ಸೇರಿರುವ ಬೇಲ್ತೆಶಚ್ಚರನೆಂಬ ಅಡ್ಡಹೆಸರನ್ನು ಹೊಂದಿದವನೂ, ಪರಿಶುದ್ಧದೇವರುಗಳ ಆತ್ಮವುಳ್ಳವನೂ ಆದ ದಾನಿಯೇಲನು ಕಟ್ಟಕಡೆಯಲ್ಲಿ ನನ್ನ ಬಳಿಗೆ ಬರಲು ನಾನು ಆ ಕನಸನ್ನು ಅವನಿಗೆ ಹೀಗೆ ತಿಳಿಸಿದೆನು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ನನ್ನ ದೇವರ ಹೆಸರು ಸೇರಿರುವ ‘ಬೇಲ್ತೆಶಚ್ಚರ’ ಎಂಬ ಅಡ್ಡಹೆಸರನ್ನು ಹೊಂದಿದ ದಾನಿಯೇಲನು ಕೊನೆಗೆ ನನ್ನ ಬಳಿಗೆ ಬಂದ. ಪರಿಶುದ್ಧ ದೇವರ ಆತ್ಮ ಅವನಲ್ಲಿತ್ತು. ಅವನಿಗೆ ನನ್ನ ಕನಸನ್ನು ಹೀಗೆ ತಿಳಿಸಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ನನ್ನ ದೇವರ ಹೆಸರು ಸೇರಿರುವ ಬೇಲ್ತೆಶಚ್ಚರನೆಂಬ ಅಡ್ಡಹೆಸರನ್ನು ಹೊಂದಿದವನೂ ಪರಿಶುದ್ಧದೇವರುಗಳ ಆತ್ಮವುಳ್ಳವನೂ ಆದ ದಾನಿಯೇಲನು ಕಟ್ಟಕಡೆಯಲ್ಲಿ ನನ್ನ ಸನ್ನಿಧಿಗೆ ಬರಲು ನಾನು ಆ ಕನಸನ್ನು ಅವನಿಗೆ ಹೀಗೆ ತಿಳಿಸಿದೆನು - ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಕೊನೆಗೆ ದಾನಿಯೇಲನು ನನ್ನ ಬಳಿಗೆ ಬಂದನು. ಅವನು ನನ್ನ ದೇವರ ಹೆಸರು ಸೇರಿರುವ ಬೇಲ್ತೆಶಚ್ಚರ್ ಎಂಬ ಅಡ್ಡಹೆಸರನ್ನು ಹೊಂದಿದ್ದನು. ಪರಿಶುದ್ಧ ದೇವರುಗಳ ಆತ್ಮವು ಅವನಲ್ಲಿತ್ತು. ಅವನಿಗೆ ನನ್ನ ಕನಸನ್ನು ಹೀಗೆ ತಿಳಿಸಿದೆ. ಅಧ್ಯಾಯವನ್ನು ನೋಡಿ |