9 ನಾನು, “ಬೇಲ್ತೆಶಚ್ಚರನೇ, ಎಲ್ಲಾ ಮಂತ್ರವಾದಿಗಳಿಗಿಂತಲೂ ನೀನು ಬಹಳ ಶ್ರೇಷ್ಠನು. ಪರಿಶುದ್ಧ ದೇವರುಗಳ ಆತ್ಮವು ನಿನ್ನಲ್ಲಿ ನೆಲೆಸಿದೆ ಎಂದು ನನಗೆ ಗೊತ್ತಿದೆ. ನಿನಗೆ ತಿಳಿದುಕೊಳ್ಳಲು ಕಷ್ಟವಾದ ಯಾವ ರಹಸ್ಯವೂ ಇಲ್ಲವೆಂದು ನಾನು ಬಲ್ಲೆನು. ನಾನು ಕನಸಿನಲ್ಲಿ ಕಂಡದ್ದು ಇಂತಿದೆ. ಅದರ ಅರ್ಥವನ್ನು ನನಗೆ ಹೇಳು.
9 ‘ಬೇಲ್ತೆಶಚ್ಚರನೇ, ಜೋಯಿಸರಲ್ಲಿ ಪ್ರಧಾನನೇ, ಪರಿಶುದ್ಧ ದೇವರುಗಳ ಆತ್ಮವು ನಿನ್ನಲ್ಲಿ ನೆಲೆಯಾಗಿದೆ ಎಂದು ತಿಳಿದಿದ್ದೇನೆ, ಯಾವ ರಹಸ್ಯವೂ ನಿನಗೆ ಅಶೋಧ್ಯವಲ್ಲವೆಂಬುದು ನನಗೆ ಗೊತ್ತು; ಆದುದರಿಂದ ನಾನು ಕಂಡ ಕನಸನ್ನೂ ಅದರ ಅರ್ಥವನ್ನೂ ನನಗೆ ತಿಳಿಸು.
9 ‘ಬೇಲ್ತೆಶಚ್ಚರನೇ, ಜೋಯಿಸರಲ್ಲಿ ಪ್ರಾಮುಖ್ಯನೇ, ಪರಿಶುದ್ಧ ದೇವರ ಆತ್ಮ ನಿನ್ನಲ್ಲಿ ನೆಲೆಯಾಗಿದೆಯೆಂದು ತಿಳಿದಿದ್ದೇನೆ. ಯಾವ ರಹಸ್ಯವೂ ನಿನಗೆ ಅಶೋಧ್ಯವಲ್ಲವೆಂದು ನನಗೆ ಗೊತ್ತು. ಆದುದರಿಂದ ನಾನು ಕಂಡ ಕನಸನ್ನೂ ಅದರ ಅರ್ಥವನ್ನೂ ನನಗೆ ತಿಳಿಸು.’
9 ಬೇಲ್ತೆಶಚ್ಚರನೇ, ಜೋಯಿಸರಲ್ಲಿ ಪ್ರಧಾನನೇ, ಪರಿಶುದ್ಧದೇವರುಗಳ ಆತ್ಮವು ನಿನ್ನಲ್ಲಿ ನೆಲೆಯಾಗಿದೆ ಎಂದು ತಿಳಿದಿದ್ದೇನೆ, ಯಾವ ರಹಸ್ಯವೂ ನಿನಗೆ ಅಶೋಧ್ಯವಲ್ಲವೆಂಬದು ನನಗೆ ಗೊತ್ತು. ಆದದರಿಂದ ನಾನು ಕಂಡ ಕನಸನ್ನೂ ಅದರ ಅರ್ಥವನ್ನೂ ನನಗೆ ತಿಳಿಸು.
9 “ಮಂತ್ರಗಾರರಲ್ಲಿ ಪ್ರಾಮುಖ್ಯನಾದ ಬೇಲ್ತೆಶಚ್ಚರನೇ, ನಿನ್ನಲ್ಲಿ ಪರಿಶುದ್ಧ ದೇವರುಗಳ ಆತ್ಮವಿರುವುದೆಂದು ನಾನು ಬಲ್ಲೆನು. ಯಾವುದೇ ರಹಸ್ಯವು ನಿನಗೆ ಅಸಾಧ್ಯವಾದದ್ದಲ್ಲ. ಆದ್ದರಿಂದ ನಾನು ಕಂಡ ಕನಸಿನ ದರ್ಶನ, ಅದರ ಅರ್ಥವನ್ನೂ ನೀನು ನನಗೆ ಹೇಳು.
ಪರಿಶುದ್ಧ ದೇವರುಗಳ ಆತ್ಮವು ನೆಲೆಸಿರುವ ಒಬ್ಬನು ನಿನ್ನ ರಾಜ್ಯದಲ್ಲಿ ಇದ್ದಾನೆ. ದೇವರ ಜ್ಞಾನಕ್ಕೆ ಸಮಾನವಾದ ಜ್ಞಾನವೂ ಬುದ್ಧಿಯೂ ರಹಸ್ಯವನ್ನು ತಿಳಿದುಕೊಳ್ಳುವ ಶಕ್ತಿಯೂ ತನಗಿರುವುದಾಗಿ ಅವನು ನಿನ್ನ ತಂದೆಯ ಕಾಲದಲ್ಲಿಯೇ ತೋರಿಸಿಕೊಟ್ಟಿದ್ದಾನೆ. ನಿನ್ನ ತಂದೆಯಾದ ನೆಬೂಕದ್ನೆಚ್ಚರನು ಈ ಮನುಷ್ಯನನ್ನು ಎಲ್ಲ ವಿದ್ವಾಂಸರ ಅಧ್ಯಕ್ಷನನ್ನಾಗಿ ನೇಮಿಸಿದ್ದನು. ಎಲ್ಲ ಜೋಯಿಸರಿಗೆ, ಮಂತ್ರವಾದಿಗಳಿಗೆ, ಶಾಕುನಿಕರಿಗೆ ಮತ್ತು ಪಂಡಿತರಿಗೆ ಇವನು ಮುಖ್ಯಸ್ಥನಾಗಿದ್ದನು.
ತರುವಾಯ ಅರಸನು ದಾನಿಯೇಲನಿಗೆ ತನ್ನ ರಾಜ್ಯದಲ್ಲಿ ಬಹುಮುಖ್ಯವಾದ ಉದ್ಯೋಗವನ್ನು ಕೊಟ್ಟನು. ಅಮೂಲ್ಯವಾದ ಕಾಣಿಕೆಗಳನ್ನೂ ಕೊಟ್ಟನು. ನೆಬೂಕದ್ನೆಚ್ಚರನು ದಾನಿಯೇಲನನ್ನು ಬಾಬಿಲೋನ್ ಸಂಸ್ಥಾನದ ಅಧಿಪತಿಯನ್ನಾಗಿ ಮಾಡಿದನು. ಬಾಬಿಲೋನಿನ ಎಲ್ಲಾ ವಿದ್ವಾಂಸರ ಮುಖ್ಯಸ್ಥನನ್ನಾಗಿ ಮಾಡಿದನು.
ಕೊನೆಗೆ ದಾನಿಯೇಲನು ಬಂದನು. (ನಾನು ದಾನಿಯೇಲನಿಗೆ ನನ್ನ ದೇವರ ಸ್ಮರಣಾರ್ಥವಾಗಿ ಬೇಲ್ತೆಶಚ್ಚರನೆಂಬ ಹೆಸರನ್ನು ಇಟ್ಟಿದ್ದೆ. ಪರಿಶುದ್ಧ ದೇವರುಗಳ ಆತ್ಮವು ಅವನಲ್ಲಿದೆ.) ನಾನು ದಾನಿಯೇಲನಿಗೆ ನನ್ನ ಕನಸಿನ ಬಗ್ಗೆ ಹೇಳಿದೆ.
ಆಗ ನನಗೊಂದು ಕನಸು ಬಿತ್ತು. ಅದು ನನ್ನಲ್ಲಿ ಭಯವನ್ನುಂಟುಮಾಡಿತು. ನಾನು ನನ್ನ ಹಾಸಿಗೆಯ ಮೇಲೆ ಮಲಗಿದ್ದೆ. ಅನೇಕ ಚಿತ್ರಗಳನ್ನು ಮತ್ತು ದೃಶ್ಯಗಳನ್ನು ಕಂಡೆ. ಅವುಗಳು ನನ್ನಲ್ಲಿ ಹೆಚ್ಚಿನ ಭಯವನ್ನುಂಟುಮಾಡಿದವು.
ಅರಸನು ಮಹತ್ವಪೂರ್ಣವಾದ ವಿಷಯಗಳ ಬಗ್ಗೆ ಅವರನ್ನು ಕೇಳಿದಾಗಲೆಲ್ಲ ಅವರು ಹೆಚ್ಚಿನ ಪ್ರಜ್ಞೆಯನ್ನು, ಬುದ್ಧಿಯನ್ನು ತೋರಿದರು. ಅವರು ಇಡೀ ದೇಶದ ಎಲ್ಲ ಜೋಯಿಸರಿಗಿಂತಲೂ ಮಂತ್ರವಾದಿಗಳಿಗಿಂತಲೂ ಹತ್ತರಷ್ಟು ನಿಪುಣರಾಗಿದ್ದಾರೆಂಬುದನ್ನು ಅರಸನು ಕಂಡುಕೊಂಡನು.
ಫರೋಹನು ತನ್ನ ಸೇವಕರಿಗೆ, “ಈ ಜವಾಬ್ದಾರಿಯನ್ನು ವಹಿಸಿಕೊಳ್ಳಲು ಯೋಸೇಫನಿಗಿಂತಲೂ ಉತ್ತಮನಾದ ವ್ಯಕ್ತಿಯನ್ನು ಕಂಡುಕೊಳ್ಳಲು ಸಾಧ್ಯವೇ? ದೇವರಾತ್ಮನೇ ಇವನ ಸಂಗಡವಿದ್ದಾನೆ” ಎಂದು ಹೇಳಿದನು.
“ಅರಸನಾದ ನೆಬೂಕದ್ನೆಚ್ಚರನೆಂಬ ನಾನು ಈ ಕನಸನ್ನು ಕಂಡೆನು. ಈಗ ನೀನು, ಬೇಲ್ತೆಶಚ್ಚರನೇ (ದಾನಿಯೇಲನೇ), ಇದರ ಅರ್ಥವನ್ನು ನನಗೆ ತಿಳಿಸು. ನನ್ನ ರಾಜ್ಯದಲ್ಲಿರುವ ವಿದ್ವಾಂಸರಲ್ಲಿ ಯಾರೂ ಇದರ ಅರ್ಥವನ್ನು ನನಗೆ ಹೇಳಲಾರರು. ಆದರೆ ನೀನು ಈ ಕನಸಿನ ಅರ್ಥವನ್ನು ತಿಳಿಸಬಲ್ಲೆ. ಏಕೆಂದರೆ ಪರಿಶುದ್ಧ ದೇವರುಗಳ ಆತ್ಮವು ನಿನ್ನಲ್ಲಿ ನೆಲೆಸಿರುವದು ನನಗೆ ತಿಳಿದದೆ” ಎಂದೆನು.
ಹಿಂದಿನ ಕಾಲದಲ್ಲಿ ನೀವು ಅನುಭವಿಸಿದ ಸಂಕಟಗಳನ್ನು ನೆನಪುಮಾಡಿಕೊಳ್ಳುವಿರಿ. ನೀವು ಹೀಗೆ ಭಾವಿಸಿಕೊಳ್ಳುವಿರಿ: “ಬೇರೆ ದೇಶಗಳಿಂದ ಬಂದ ಜನರೆಲ್ಲಿದ್ದಾರೆ? ನಮಗೆ ಅರ್ಥವಾಗದಂಥ ಭಾಷೆಯಲ್ಲಿ ಅವರು ಮಾತಾಡುತ್ತಿದ್ದರು. ಪರದೇಶದ ಅಧಿಕಾರಿಗಳು, ತೆರಿಗೆ ಎತ್ತುವವರು ಎಲ್ಲಿ? ನಮ್ಮ ಕೋಟೆಗಳನ್ನು, ಬುರುಜುಗಳನ್ನು ಲೆಕ್ಕಿಸಲು ಬಂದ ಗೂಢಚಾರರೆಲ್ಲಿ? ಅವರೆಲ್ಲಾ ಹೋಗಿಬಿಟ್ಟರು. ನೀವೆಂದೂ ಆ ಜನರನ್ನು ಕಾಣದೆ ಇರುವಿರಿ.”
“ನಿನ್ನ ದೇವರು ಸರ್ವಶ್ರೇಷ್ಠನು ಮತ್ತು ಪ್ರಬಲನು ಎನ್ನುವದು ನನಗೆ ಖಚಿತವಾಯಿತು. ಆತನು ಎಲ್ಲ ಅರಸರ ಒಡೆಯನಾಗಿದ್ದಾನೆ. ಆತನು ಜನರಿಗೆ ನಿಗೂಢವಾಗಿದ್ದ ರಹಸ್ಯವನ್ನು ತಿಳಿಸುತ್ತಾನೆ. ನೀನು ನನಗೆ ಈ ರಹಸ್ಯವನ್ನು ತಿಳಿಸಲು ಸಮರ್ಥನಾದುದರಿಂದ ಇದೆಲ್ಲ ನಿಜವೆಂದು ನಾನು ನಂಬುತ್ತೇನೆ” ಎಂದು ಹೇಳಿದನು.
ಸ್ವತಃ ನಾನೇ ಅದನ್ನು ಇಸ್ರೇಲಿನ ಉನ್ನತವಾದ ಪರ್ವತದ ಮೇಲೆ ನೆಡುವೆನು. ಅದು ಕೊಂಬೆಗಳನ್ನು ಬೆಳೆಸಿ, ಫಲವನ್ನು ಫಲಿಸಿ, ಅಮೋಘವಾದ ದೇವದಾರು ಮರವಾಗುವುದು; ಅದರ ಕೊಂಬೆಗಳ ಮೇಲೆ ಅನೇಕ ಬಗೆಯ ಪಕ್ಷಿಗಳು ವಾಸಿಸುವವು. ಅದರ ಕೊಂಬೆಯ ನೆರಳಿನಲ್ಲಿ ವಿವಿಧ ಬಗೆಯ ಪಕ್ಷಿಗಳು ವಾಸಿಸುವವು.