Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 5:10 - ಪರಿಶುದ್ದ ಬೈಬಲ್‌

10 ಆಗ ರಾಜನ ತಾಯಿಯು ಆ ಔತಣ ಶಾಲೆಗೆ ಬಂದಳು. ರಾಜನು ಮತ್ತು ಅವನ ಅಧಿಕಾರಿಗಳು ಆಡುತ್ತಿದ್ದ ಮಾತುಗಳನ್ನು ಕೇಳಿ ಅವಳು, “ರಾಜನೇ, ಚಿರಂಜೀವಿಯಾಗಿರು, ಭಯಪಡಬೇಡ. ಭಯದಿಂದ ನಿನ್ನ ಮುಖ ಅಷ್ಟೊಂದು ಬಿಳುಚಿಕೊಳ್ಳಲು ಬಿಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ರಾಜನು ಮತ್ತು ಮುಖಂಡರು ಆಡಿದ ಮಾತುಗಳು ರಾಣಿಗೆ ಮುಟ್ಟಲು ಆಕೆಯು ಔತಣದ ಶಾಲೆಗೆ ಬಂದು, “ರಾಜನೇ, ಚಿರಂಜೀವಿಯಾಗಿರು. ನಿನ್ನ ಮನಸ್ಸು ಕಳವಳಗೊಳ್ಳದಿರಲಿ, ನಿನ್ನ ಮುಖ ಕಳೆಗುಂದದಿರಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ರಾಜನೂ ಅವನ ಸಾಮಂತರೂ ಆಡಿದ ಮಾತು ರಾಣಿಗೆ ಮುಟ್ಟಿತು. ಆಕೆ ಔತಣ ಶಾಲೆಗೆ ಬಂದು, “ರಾಜರೇ, ಚಿರಂಜೀವಿಯಾಗಿರಿ! ನಿಮ್ಮ ಮನಸ್ಸು ಕಳವಳಗೊಳ್ಳದಿರಲಿ, ನಿಮ್ಮ ಮುಖ ಕಳೆಗುಂದದಿರಲಿ! ಪರಿಶುದ್ಧ ದೇವರ ಆತ್ಮ ನೆಲೆಸಿರುವ ಒಬ್ಬ ವ್ಯಕ್ತಿ ನಿಮ್ಮ ರಾಜ್ಯದಲ್ಲಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ರಾಜನು ಮತ್ತು ಮುಖಂಡರು ಆಡಿದ ಮಾತುಗಳು ರಾಣಿಗೆ ಮುಟ್ಟಲು ಆಕೆಯು ಔತಣದ ಶಾಲೆಗೆ ಬಂದು - ರಾಜನೇ, ಚಿರಂಜೀವಿಯಾಗಿರು, ನಿನ್ನ ಮನಸ್ಸು ಕಳವಳಗೊಳ್ಳದಿರಲಿ, ನಿನ್ನ ಮುಖ ಕಳೆಗುಂದದಿರಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆಗ ಅರಸನ ಮತ್ತು ಅವನ ಪ್ರಧಾನರ ಮಾತುಗಳನ್ನು ಕೇಳಿ ರಾಣಿಯು ಔತಣದ ಮನೆಗೆ ಬಂದಳು. ಆಗ ಮಾತನಾಡಿ, “ಅರಸನೇ, ನಿರಂತರವಾಗಿ ಬಾಳು! ನಿನ್ನ ಆಲೋಚನೆಗಳು ನಿನ್ನನ್ನು ಕಳವಳಪಡಿಸದಿರಲಿ. ನಿನ್ನ ಮುಖವು ಕಳೆಗುಂದದಿರಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 5:10
10 ತಿಳಿವುಗಳ ಹೋಲಿಕೆ  

ಅರಸನಾದ ನೆಬೂಕದ್ನೆಚ್ಚರನಿಗೆ ಅವರು, “ಮಹಾರಾಜನೇ, ಚಿರಂಜೀವಿಯಾಗಿರು!


ಆ ಇಬ್ಬರು ಮುಖ್ಯಾಧಿಕಾರಿಗಳು ಮತ್ತು ದೇಶಾಧಿಪತಿಗಳು ಒಟ್ಟಿಗೆ ಸೇರಿ ಅರಸನ ಬಳಿಗೆ ಹೋದರು. ಅವರು, “ಅರಸನಾದ ದಾರ್ಯಾವೆಷನೇ, ಚಿರಂಜೀವಿಯಾಗಿರು.


ಆಗ ಆ ಕಸ್ದೀಯರು ಅರಮೇಯಿಕ್ ಭಾಷೆಯಲ್ಲಿ, “ಅರಸನೇ ಚಿರಂಜೀವಿಯಾಗಿರು. ನಾವು ನಿನ್ನ ಸೇವಕರು. ದಯವಿಟ್ಟು ನಮಗೆ ನಿನ್ನ ಕನಸನ್ನು ಹೇಳು. ನಾವು ಅದರ ಅರ್ಥವನ್ನು ತಿಳಿಸುತ್ತೇವೆ” ಎಂದು ಉತ್ತರಕೊಟ್ಟರು.


ದಾನಿಯೇಲನು, “ಅರಸನೇ, ಚಿರಂಜೀವಿಯಾಗಿರು.


“ಆದ್ದರಿಂದ ನೀವು ನಿಮ್ಮ ಬರಿದಾದ ಮಾತುಗಳಿಂದ ನನ್ನನ್ನು ಸಂತೈಸಲಾರಿರಿ. ನಿಮ್ಮ ಉತ್ತರಗಳು ಕೇವಲ ಸುಳ್ಳೇ ಆಗಿವೆ.”


ನೀವಾದರೋ ನಿಮ್ಮ ಆ ಜ್ಞಾನವನ್ನು ಸುಳ್ಳುಗಳಿಂದ ಮುಚ್ಚಲು ಪ್ರಯತ್ನಿಸುತ್ತಿದ್ದೀರಿ. ನೀವೆಲ್ಲರೂ ಗುಣಪಡಿಸಲಾಗದ ವೈದ್ಯರುಗಳಂತಿದ್ದೀರಿ.


ಆಗ ಬತ್ಷೆಬೆಳು ರಾಜನಿಗೆ ಸಾಷ್ಟಾಂಗನಮಸ್ಕಾರ ಮಾಡಿದಳು. ಅವಳು, “ರಾಜನಾದ ದಾವೀದನು ಚಿರಾಯುವಾಗಿರಲಿ!” ಎಂದು ಹೇಳಿದಳು.


ರಾಜನಾದ ಬೇಲ್ಶಚ್ಚರನು ಬಹಳ ಹೆದರಿದನು. ಭಯದಿಂದ ಅವನ ಮುಖವು ಕಳೆಗುಂದಿತು; ಮತ್ತು ಅವನ ಮೊಣಕಾಲುಗಳು ನಡುಗಿ ಒಂದಕ್ಕೊಂದು ಬಡಿಯುತ್ತಿದ್ದವು. ಅವನ ಕಾಲುಗಳು ತುಂಬ ಬಲಹೀನವಾಗಿ ಅವನಿಗೆ ನಿಲ್ಲಲಾಗಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು