Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 5:11 - ಪರಿಶುದ್ದ ಬೈಬಲ್‌

11 ಪರಿಶುದ್ಧ ದೇವರುಗಳ ಆತ್ಮವು ನೆಲೆಸಿರುವ ಒಬ್ಬನು ನಿನ್ನ ರಾಜ್ಯದಲ್ಲಿ ಇದ್ದಾನೆ. ದೇವರ ಜ್ಞಾನಕ್ಕೆ ಸಮಾನವಾದ ಜ್ಞಾನವೂ ಬುದ್ಧಿಯೂ ರಹಸ್ಯವನ್ನು ತಿಳಿದುಕೊಳ್ಳುವ ಶಕ್ತಿಯೂ ತನಗಿರುವುದಾಗಿ ಅವನು ನಿನ್ನ ತಂದೆಯ ಕಾಲದಲ್ಲಿಯೇ ತೋರಿಸಿಕೊಟ್ಟಿದ್ದಾನೆ. ನಿನ್ನ ತಂದೆಯಾದ ನೆಬೂಕದ್ನೆಚ್ಚರನು ಈ ಮನುಷ್ಯನನ್ನು ಎಲ್ಲ ವಿದ್ವಾಂಸರ ಅಧ್ಯಕ್ಷನನ್ನಾಗಿ ನೇಮಿಸಿದ್ದನು. ಎಲ್ಲ ಜೋಯಿಸರಿಗೆ, ಮಂತ್ರವಾದಿಗಳಿಗೆ, ಶಾಕುನಿಕರಿಗೆ ಮತ್ತು ಪಂಡಿತರಿಗೆ ಇವನು ಮುಖ್ಯಸ್ಥನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 “ಪರಿಶುದ್ಧ ದೇವರುಗಳ ಆತ್ಮವು ನೆಲೆಸಿರುವ ಒಬ್ಬನು ನಿನ್ನ ರಾಜ್ಯದಲ್ಲಿ ಇದ್ದಾನೆ; ದೇವರುಗಳ ಜ್ಞಾನಕ್ಕೆ ಸಮಾನವಾದ ಜ್ಞಾನವೂ, ವಿವೇಕವೂ, ಬುದ್ಧಿ ಪ್ರಕಾಶವೂ ನಿನ್ನ ತಂದೆಯ ಕಾಲದಲ್ಲಿ ಅವನೊಳಗೆ ಕಂಡುಬಂದವು. ನಿನ್ನ ತಂದೆಯಾದ ನೆಬೂಕದ್ನೆಚ್ಚರ ರಾಜನು ಅವನನ್ನು ಜೋಯಿಸರು, ಮಂತ್ರವಾದಿಗಳು, ಪಂಡಿತರು, ಶಾಕುನಿಕರು ಇವರಿಗೆ ಅಧ್ಯಕ್ಷನನ್ನಾಗಿ ನೇಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ನಿಮ್ಮ ತಂದೆಯ ಕಾಲದಲ್ಲಿ ಬುದ್ಧಿವಂತಿಕೆ, ತಿಳುವಳಿಕೆ, ದೇವರುಗಳಿಗೆ ಸಮಾನವಾದ ಜ್ಞಾನ ಅವನಲ್ಲಿ ಕಂಡುಬಂದುವು. ನಿಮ್ಮ ತಂದೆ ರಾಜ ನೆಬೂಕದ್ನೆಚ್ಚರನು, ಅವನನ್ನು ಜೋಯಿಸರಿಗೂ ಮಂತ್ರವಾದಿಗಳಿಗೂ ಪಂಡಿತರಿಗೂ ಶಾಕುನಿಕರಿಗೂ ಅಧ್ಯಕ್ಷನನ್ನಾಗಿ ನೇಮಿಸಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಪರಿಶುದ್ಧದೇವರುಗಳ ಆತ್ಮವು ನೆಲೆಸಿರುವ ಒಬ್ಬನು ನಿನ್ನ ರಾಜ್ಯದಲ್ಲಿ ಇದ್ದಾನೆ; ದೇವರುಗಳ ಜ್ಞಾನಕ್ಕೆ ಸಮಾನವಾದ ಜ್ಞಾನವೂ ವಿವೇಕವೂ ಬುದ್ಧಿಪ್ರಕಾಶವೂ ನಿನ್ನ ತಂದೆಯ ಕಾಲದಲ್ಲಿ ಅವನೊಳಗೆ ಕಂಡುಬಂದವು; ನಿನ್ನ ತಂದೆಯಾದ ನೆಬೂಕದ್ನೆಚ್ಚರ ರಾಜನು ಅವನನ್ನು ಜೋಯಿಸರು ಮಂತ್ರವಾದಿಗಳು ಪಂಡಿತರು ಶಾಕುನಿಕರು ಇವರಿಗೆ ಅಧ್ಯಕ್ಷನನ್ನಾಗಿ ನೇವಿುಸಿದನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ನಿನ್ನ ರಾಜ್ಯದಲ್ಲಿ ಪರಿಶುದ್ಧ ದೇವರುಗಳ ಆತ್ಮವುಳ್ಳ ಒಬ್ಬ ಮನುಷ್ಯನಿದ್ದಾನೆ. ದೇವರುಗಳ ಜ್ಞಾನಕ್ಕೆ ಸಮಾನವಾದ ಜ್ಞಾನವೂ, ವಿವೇಕವೂ, ಬುದ್ಧಿಯೂ, ಪ್ರಕಾಶವೂ ನಿನ್ನ ತಂದೆಯ ಕಾಲದಲ್ಲಿ ಅವನೊಳಗೆ ಕಂಡುಬಂದವು. ನಿನ್ನ ತಂದೆ ನೆಬೂಕದ್ನೆಚ್ಚರ ಅರಸನು ಅವನನ್ನು ಮಂತ್ರಗಾರರಿಗೂ, ಜ್ಯೋತಿಷ್ಯರಿಗೂ, ಪಂಡಿತರಿಗೂ, ಶಕುನಗಾರರಿಗೂ ಅಧಿಕಾರಿಯನ್ನಾಗಿ ನೇಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 5:11
19 ತಿಳಿವುಗಳ ಹೋಲಿಕೆ  

“ಅರಸನಾದ ನೆಬೂಕದ್ನೆಚ್ಚರನೆಂಬ ನಾನು ಈ ಕನಸನ್ನು ಕಂಡೆನು. ಈಗ ನೀನು, ಬೇಲ್ತೆಶಚ್ಚರನೇ (ದಾನಿಯೇಲನೇ), ಇದರ ಅರ್ಥವನ್ನು ನನಗೆ ತಿಳಿಸು. ನನ್ನ ರಾಜ್ಯದಲ್ಲಿರುವ ವಿದ್ವಾಂಸರಲ್ಲಿ ಯಾರೂ ಇದರ ಅರ್ಥವನ್ನು ನನಗೆ ಹೇಳಲಾರರು. ಆದರೆ ನೀನು ಈ ಕನಸಿನ ಅರ್ಥವನ್ನು ತಿಳಿಸಬಲ್ಲೆ. ಏಕೆಂದರೆ ಪರಿಶುದ್ಧ ದೇವರುಗಳ ಆತ್ಮವು ನಿನ್ನಲ್ಲಿ ನೆಲೆಸಿರುವದು ನನಗೆ ತಿಳಿದದೆ” ಎಂದೆನು.


ಪರಿಶುದ್ಧ ದೇವರುಗಳ ಆತ್ಮವು ನಿನ್ನಲ್ಲಿದೆ ಎಂದು ನಾನು ಕೇಳಿದ್ದೇನೆ. ನೀನು ರಹಸ್ಯವನ್ನು ತಿಳಿದುಕೊಳ್ಳಬಲ್ಲವನು, ಬಹಳ ಚಾಣಾಕ್ಷನು ಮತ್ತು ಬುದ್ಧಿವಂತನೆಂದು ನಾನು ಕೇಳಿದ್ದೇನೆ.


ಆಲಿಸು! ಅಲ್ಲಿ ಸೈತಾನನ ಗುಂಪಿಗೆ ಸೇರಿದವರಿದ್ದಾರೆ. ಆ ಜನರು ತಮ್ಮನ್ನು ಯೆಹೂದ್ಯರೆಂದು ಹೇಳಿಕೊಳ್ಳುತ್ತಾರೆ. ಆದರೆ ಅದು ಸುಳ್ಳು. ಅವರು ನಿಜವಾದ ಯೆಹೂದ್ಯರಲ್ಲ. ಆ ಜನರು ನಿನ್ನ ಮುಂದೆ ಬಂದು ನಿನ್ನ ಪಾದಗಳಿಗೆ ಅಡ್ಡಬಿದ್ದು ನಮಸ್ಕರಿಸುವಂತೆ ಮಾಡುತ್ತೇನೆ. ನಾನು ಪ್ರೀತಿಸಿದ ಜನರು ನೀವೇ ಎಂಬುದನ್ನು ಆಗ ಅವರು ತಿಳಿದುಕೊಳ್ಳುತ್ತಾರೆ.


ಆ ಜನರು, “ಈ ಧ್ವನಿಯು ಮನುಷ್ಯನದಲ್ಲ, ದೇವರದೇ!” ಎಂದು ಕೂಗಿದರು.


ಮಹಾಪ್ರಭುಗಳು ಕೇಳುವ ವಿಷಯ ಅತಿ ಕಠಿಣವಾದದ್ದು. ದೇವತೆಗಳು ಮಾತ್ರ ಅರಸನ ಕನಸನ್ನೂ ಅದರ ಅರ್ಥವನ್ನೂ ತಿಳಿಸಲು ಸಾಧ್ಯ. ಆದರೆ ದೇವತೆಗಳು ಮಾನವರೊಂದಿಗೆ ವಾಸಮಾಡುವುದಿಲ್ಲ” ಎಂದರು.


ರಾಜನಾದ ನನ್ನ ಒಡೆಯನ ಮಾತುಗಳು ನನಗೆ ವಿಶ್ರಾಂತಿಯನ್ನು ಕೊಡುತ್ತವೆ ಎಂದು ನನಗೆ ತಿಳಿದಿರುವುದರಿಂದ ನಿನ್ನ ಬಳಿಗೆ ಬಂದಿರುವೆನು. ಏಕೆಂದರೆ ನೀನು ದೇವದೂತನಂತಿರುವೆ. ಯಾವುದು ಒಳ್ಳೆಯದು, ಯಾವುದು ಕೆಟ್ಟದ್ದು ಎಂಬುದು ನಿನಗೆ ತಿಳಿದಿದೆ. ನಿನ್ನ ದೇವರಾದ ಯೆಹೋವನು ನಿನ್ನೊಂದಿಗಿರುವನು” ಎಂದು ಹೇಳಿದಳು.


ಒಂದು ಸಲ, ನಾವು ಪ್ರಾರ್ಥನಾಸ್ಥಳಕ್ಕೆ ಹೋಗುತ್ತಿದ್ದಾಗ ಒಂದು ಸಂಗತಿ ಸಂಭವಿಸಿತು. ದಾಸಿಯೊಬ್ಬಳು ನಮ್ಮನ್ನು ಎದುರುಗೊಂಡಳು. ಆಕೆಯಲ್ಲಿ ವಿಶೇಷವಾದ ಆತ್ಮವಿತ್ತು. ಆ ಆತ್ಮದ ಶಕ್ತಿಯಿಂದ ಅವಳು ಮುಂದೆ ಸಂಭವಿಸುವ ಸಂಗತಿಗಳ ಬಗ್ಗೆ ಹೇಳುತ್ತಿದ್ದಳು. ಇದರ ಮೂಲಕವಾಗಿ ಆಕೆ ತನ್ನ ಯಜಮಾನರಿಗೆ ಬಹಳ ಹಣವನ್ನು ಗಳಿಸಿ ಕೊಡುತ್ತಿದ್ದಳು.


ಪೌಲನು ಮಾಡಿದ ಈ ಕಾರ್ಯವನ್ನು ಕಂಡ ಜನರು ತಮ್ಮ ಸ್ವಂತ ಲುಕವೋನಿಯ ಭಾಷೆಯಲ್ಲಿ “ದೇವರುಗಳು ಮನುಷ್ಯರೂಪ ಧರಿಸಿ ನಮ್ಮ ಬಳಿಗೆ ಇಳಿದು ಬಂದಿದ್ದಾರೆ!” ಎಂದು ಆರ್ಭಟಿಸಿದರು.


ಫರೋಹನು ತನ್ನ ಸೇವಕರಿಗೆ, “ಈ ಜವಾಬ್ದಾರಿಯನ್ನು ವಹಿಸಿಕೊಳ್ಳಲು ಯೋಸೇಫನಿಗಿಂತಲೂ ಉತ್ತಮನಾದ ವ್ಯಕ್ತಿಯನ್ನು ಕಂಡುಕೊಳ್ಳಲು ಸಾಧ್ಯವೇ? ದೇವರಾತ್ಮನೇ ಇವನ ಸಂಗಡವಿದ್ದಾನೆ” ಎಂದು ಹೇಳಿದನು.


ನೀನು ದಾನಿಯೇಲನಿಗಿಂತ ಜಾಣನು ಎಂಬುದಾಗಿ ಭಾವಿಸುತ್ತಿ. ಎಲ್ಲಾ ರಹಸ್ಯಗಳು ನನಗೆ ಗೊತ್ತು ಎಂದು ನೀನು ನೆನಸುವೆ.


ಅರಸನಾದ ನೆಬೂಕದ್ನೆಚ್ಚರನು ಆರೋಗ್ಯವಂತರೂ ಅಂಗದೋಷವಿಲ್ಲದವರೂ ಸುಂದರರೂ ಬುದ್ಧಿವಂತರೂ ವಿದ್ಯಾನಿಪುಣರೂ ಆಗಿದ್ದ ಯುವಕರನ್ನು ತನ್ನ ಸನ್ನಿಧಿಸೇವೆಗಾಗಿ ಆರಿಸಿಕೊಂಡು ಅವರಿಗೆ ಕಸ್ದೀಯ ಭಾಷೆಯನ್ನೂ ಬರವಣಿಗೆಯನ್ನೂ ಕಲಿಸಬೇಕೆಂದು ಆಜ್ಞೆ ವಿಧಿಸಿದನು.


ಆಳದಲ್ಲಿ ಅಡಗಿರುವ ರಹಸ್ಯಗಳನ್ನು ಬಲ್ಲವನು ಆತನೇ. ಬೆಳಕು ಆತನಲ್ಲಿಯೇ ಇದೆ. ಆದ್ದರಿಂದ ಕಗ್ಗತ್ತಲೆಯಲ್ಲಿ ಅಡಗಿರುವುದು ಆತನಿಗೆ ಗೋಚರವಾಗುವುದು.


ಆಗ ರಾಜನು ಗಟ್ಟಿಯಾಗಿ ಕೂಗಿಕೊಂಡು ಮಂತ್ರವಾದಿ, ಪಂಡಿತ, ಶಾಕುನಿಕರನ್ನು ತನ್ನಲ್ಲಿಗೆ ಕರೆಸಿದನು. ಅವನು ಆ ವಿದ್ವಾಂಸರಿಗೆ, “ಈ ಬರವಣಿಗೆಯನ್ನು ಓದಿ ನನಗೆ ಅದರ ಅರ್ಥವನ್ನು ಹೇಳಬಲ್ಲ ಮನುಷ್ಯನಿಗೆ ನಾನು ಬಹುಮಾನವನ್ನು ಕೊಡುತ್ತೇನೆ. ಆ ಮನುಷ್ಯನಿಗೆ ನಾನು ಕಂದು ಬಣ್ಣದ ವಸ್ತ್ರಗಳನ್ನು ಕೊಡುತ್ತೇನೆ. ಅವನ ಕೊರಳಿಗೆ ಚಿನ್ನದ ಹಾರವನ್ನು ಹಾಕಿಸಿ ಅವನನ್ನು ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನನ್ನಾಗಿ ನೇಮಿಸುವೆನು” ಎಂದು ಹೇಳಿದನು.


ನಿನ್ನ ಜ್ಞಾನ ಮತ್ತು ತಿಳುವಳಿಕೆಯಿಂದ ನೀನು ಐಶ್ವರ್ಯವನ್ನು ಕೂಡಿಹಾಕಿದ್ದೀ. ನಿನ್ನ ಖಜಾನೆಯಲ್ಲಿ ಬೆಳ್ಳಿಬಂಗಾರವನ್ನು ಶೇಖರಿಸಿದ್ದೀ.


ಆಗ ನನಗೊಂದು ಕನಸು ಬಿತ್ತು. ಅದು ನನ್ನಲ್ಲಿ ಭಯವನ್ನುಂಟುಮಾಡಿತು. ನಾನು ನನ್ನ ಹಾಸಿಗೆಯ ಮೇಲೆ ಮಲಗಿದ್ದೆ. ಅನೇಕ ಚಿತ್ರಗಳನ್ನು ಮತ್ತು ದೃಶ್ಯಗಳನ್ನು ಕಂಡೆ. ಅವುಗಳು ನನ್ನಲ್ಲಿ ಹೆಚ್ಚಿನ ಭಯವನ್ನುಂಟುಮಾಡಿದವು.


ಅದಕ್ಕಾಗಿ ಬಾಬಿಲೋನಿನ ಎಲ್ಲಾ ವಿದ್ವಾಂಸರನ್ನು ಕರೆತರಬೇಕೆಂದು ಆಜ್ಞೆಯನ್ನು ಕೊಟ್ಟೆ. ಅವರು ನನ್ನ ಕನಸಿನ ಅರ್ಥವನ್ನು ತಿಳಿಸಲಿ ಎಂಬುದೇ ನನ್ನ ಉದ್ದೇಶವಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು