Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 5:12 - ಪರಿಶುದ್ದ ಬೈಬಲ್‌

12 ನಾನು ಹೇಳುತ್ತಿರುವ ಮನುಷ್ಯನ ಹೆಸರು ದಾನಿಯೇಲ. ರಾಜನು ಅವನಿಗೆ ಬೇಲ್ತೆಶಚ್ಚರನೆಂದು ಹೆಸರಿಟ್ಟಿದ್ದನು. ಬೇಲ್ತೆಶಚ್ಚರನು ಬಹಳ ಚಾಣಾಕ್ಷ ಮತ್ತು ಅನೇಕ ವಿಷಯಗಳನ್ನು ಬಲ್ಲವನು, ಅವನು ಕನಸುಗಳ ಅರ್ಥವನ್ನು ಹೇಳಬಲ್ಲನು, ರಹಸ್ಯಗಳನ್ನು ವಿವರಿಸಬಲ್ಲನು; ಕಠಿಣವಾದ ಎಲ್ಲ ಸಮಸ್ಯೆಗಳನ್ನು ಪರಿಹರಿಸಬಲ್ಲನು. ದಾನಿಯೇಲನನ್ನು ಕರೆಯಿಸು. ಅವನು ಗೋಡೆಯ ಮೇಲಿನ ಬರಹದ ಅರ್ಥವನ್ನು ನಿನಗೆ ಹೇಳುತ್ತಾನೆ” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಹೌದು, ಬೇಲ್ತೆಶಚ್ಚರನೆಂಬ ಅಡ್ಡ ಹೆಸರನ್ನು ರಾಜನಿಂದ ಹೊಂದಿದ ಈ ದಾನಿಯೇಲನಲ್ಲಿ ಪರಮಬುದ್ಧಿಯೂ, ಜ್ಞಾನವೂ, ವಿವೇಕವೂ, ಕನಸುಗಳ ಅರ್ಥವನ್ನು ತಿಳಿಸುವ ಜಾಣತನವೂ, ಒಗಟುಬಿಡಿಸುವ ಚಮತ್ಕಾರವೂ, ಕಠಿಣವಾದ ಸಂಗತಿಗಳನ್ನು ತಿಳಿಸುವ ಚಾತುರ್ಯವೂ ತೋರಿಬಂದವು. ಆದುದರಿಂದಲೇ ಆತನನ್ನು ಹಾಗೆ ನೇಮಿಸಿದನು. ಈಗ ಆ ದಾನಿಯೇಲನನ್ನು ಕರೆಯಿಸಿದರೆ ಅವನು ಬರಹದ ಅರ್ಥವನ್ನು ವಿವರಿಸುವನು” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಹೌದು, ‘ಬೇಲ್ತೆಶಚ್ಚರ’ನೆಂಬ ಹೆಸರನ್ನು ರಾಜನಿಂದ ಹೊಂದಿದ ಆ ದಾನಿಯೇಲನು ಪರಮ ಬುದ್ಧಿವಂತ, ಜ್ಞಾನಿ, ವಿವೇಕಿ, ಕನಸುಗಳ ಅರ್ಥವನ್ನು ತಿಳಿಸುವ ಜಾಣತನ, ಒಗಟು ಬಿಡಿಸುವ ಚಮತ್ಕಾರ, ಗುಂಜುಗಂಟು ಬಿಚ್ಚುವ ಚಾತುರ್ಯ ಅವನಲ್ಲಿ ತೋರಿಬಂದವು. ಆದ್ದರಿಂದಲೇ ಅವನನ್ನು ಅಧ್ಯಕ್ಷನನ್ನಾಗಿ ನೇಮಿಸಲಾಯಿತು. ದಾನಿಯೇಲನನ್ನು ಈಗಲೇ ಕರೆಯಿಸಿರಿ. ಆತ ಬರಹದ ಅರ್ಥವನ್ನು ವಿವರಿಸುವನು,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಹೌದು, ಬೇಲ್ತೆಶಚ್ಚರನೆಂಬ ಅಡ್ಡಹೆಸರನ್ನು ರಾಜನಿಂದ ಹೊಂದಿದ ಈ ದಾನಿಯೇಲನಲ್ಲಿ ಪರಮಬುದ್ಧಿಯೂ ಜ್ಞಾನವೂ ವಿವೇಕವೂ ಕನಸುಗಳ ಅರ್ಥವನ್ನು ತಿಳಿಸುವ ಜಾಣತನವೂ ಒಗಟುಬಿಡಿಸುವ ಚಮತ್ಕಾರವೂ ಗುಂಜುಗಂಟುಬಿಚ್ಚುವ ಚಾತುರ್ಯವೂ ತೋರಿಬಂದದರಿಂದಲೇ ಹಾಗೆ ನೇವಿುಸಿದನು. ಈಗ ಈ ದಾನಿಯೇಲನನ್ನು ಕರೆಯಿಸಿದರೆ ಅವನು ಬರಹದ ಅರ್ಥವನ್ನು ವಿವರಿಸುವನು ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಏಕೆಂದರೆ ಬೇಲ್ತೆಶಚ್ಚರನೆಂಬ ಹೆಸರನ್ನು ಅರಸನಿಂದ ಪಡೆದ ಆ ದಾನಿಯೇಲನಲ್ಲಿ ಕನಸುಗಳ ಅರ್ಥವನ್ನು ಹೇಳುವುದಕ್ಕೂ, ಕಠಿಣವಾದ ಸಂಗತಿಗಳನ್ನು ತಿಳಿಸುವುದಕ್ಕೂ, ಒಗಟುಗಳನ್ನು ವಿವರಿಸುವುದಕ್ಕೂ ಕಷ್ಟಕರವಾದ ಸಮಸ್ಯೆಗಳನ್ನು ಪರಿಹರಿಸುವುದಕ್ಕೂ ಉತ್ತಮ ಆತ್ಮವೂ, ಜ್ಞಾನವೂ, ವಿವೇಕವೂ ಸಿಕ್ಕಿದವು. ಈಗ ಆ ದಾನಿಯೇಲನನ್ನು ಕರೆಯಿಸಿದರೆ, ಅವನು ಈ ಬರಹದ ಅರ್ಥವನ್ನು ವಿವರಿಸುವನು,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 5:12
16 ತಿಳಿವುಗಳ ಹೋಲಿಕೆ  

ದಾನಿಯೇಲನು ಬೇರೆ ಮುಖ್ಯಾಧಿಕಾರಿಗಳಿಗಿಂತ ಸಮರ್ಥನೆಂದು ತೋರಿಸಿಕೊಟ್ಟನು. ದಾನಿಯೇಲನು ತನ್ನ ಒಳ್ಳೆಯ ಗುಣ ಮತ್ತು ಮಹಾ ಸಾಮರ್ಥ್ಯಗಳ ಮೂಲಕ ಈ ಒಳ್ಳೆಯ ಹೆಸರನ್ನು ಪಡೆದನು. ದಾನಿಯೇಲನಿಂದ ಅರಸನು ತುಂಬ ಪ್ರಭಾವಿತನಾಗಿ ಅವನನ್ನು ಇಡೀ ರಾಜ್ಯದ ಅಧಿಕಾರಿಯನ್ನಾಗಿ ನೇಮಿಸಲು ಯೋಜನೆ ಮಾಡಿದನು.


ಪರಿಶುದ್ಧ ದೇವರುಗಳ ಆತ್ಮವು ನಿನ್ನಲ್ಲಿದೆ ಎಂದು ನಾನು ಕೇಳಿದ್ದೇನೆ. ನೀನು ರಹಸ್ಯವನ್ನು ತಿಳಿದುಕೊಳ್ಳಬಲ್ಲವನು, ಬಹಳ ಚಾಣಾಕ್ಷನು ಮತ್ತು ಬುದ್ಧಿವಂತನೆಂದು ನಾನು ಕೇಳಿದ್ದೇನೆ.


ಅಶ್ಪೆನಜನು ಆ ಯೆಹೂದ್ಯ ತರುಣರಿಗೆ ಬಾಬಿಲೋನಿನ ಹೆಸರುಗಳನ್ನಿಟ್ಟನು. ದಾನಿಯೇಲನ ಹೊಸ ಹೆಸರು ಬೇಲ್ತೆಶಚ್ಚರ್, ಹನನ್ಯನ ಹೊಸ ಹೆಸರು ಶದ್ರಕ್, ಮೀಶಾಯೇಲನ ಹೊಸ ಹೆಸರು ಮೇಶಕ್ ಮತ್ತು ಅಜರ್ಯನ ಹೊಸ ಹೆಸರು ಅಬೇದ್‌ನೆಗೋ.


ನಾನು ನಿನ್ನ ಬಗ್ಗೆ ಕೇಳಿದ್ದೇನೆ. ನೀನು ಗೂಢಾರ್ಥವನ್ನು ತಿಳಿದುಕೊಳ್ಳಬಲ್ಲೆ ಮತ್ತು ಕಠಿಣವಾದ ಸಮಸ್ಯೆಗಳಿಗೆ ಪರಿಹಾರ ಹೇಳಬಲ್ಲೆ ಎಂದು ನಾನು ಕೇಳಿದ್ದೇನೆ. ನೀನು ಗೋಡೆಯ ಮೇಲಿನ ಈ ಬರಹವನ್ನು ಓದಿ ಅದರ ಅರ್ಥವನ್ನು ನನಗೆ ವಿವರಿಸಿದರೆ, ನಾನು ನಿನಗೆ ಕಂದುಬಣ್ಣದ ಬಟ್ಟೆಗಳನ್ನು ಕೊಡುತ್ತೇನೆ. ನಿನ್ನ ಕತ್ತಿಗೆ ಚಿನ್ನದ ಹಾರವನ್ನು ಹಾಕುತ್ತೇನೆ; ನಿನ್ನನ್ನು ನನ್ನ ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನನ್ನಾಗಿ ನೇಮಿಸುತ್ತೇನೆ” ಎಂದು ಹೇಳಿದನು.


ಸನ್ಮಾರ್ಗಿಯು ತನ್ನ ನೆರೆಯವನಿಗೆ ಒಳ್ಳೆಯ ಮಾರ್ಗವನ್ನು ತೋರಿಸುತ್ತಾನೆ; ದುರ್ಮಾರ್ಗಿಯು ಬೇರೆಯವರನ್ನು ದಾರಿ ತಪ್ಪಿಸುವನು.


ಕೊನೆಗೆ ದಾನಿಯೇಲನು ಬಂದನು. (ನಾನು ದಾನಿಯೇಲನಿಗೆ ನನ್ನ ದೇವರ ಸ್ಮರಣಾರ್ಥವಾಗಿ ಬೇಲ್ತೆಶಚ್ಚರನೆಂಬ ಹೆಸರನ್ನು ಇಟ್ಟಿದ್ದೆ. ಪರಿಶುದ್ಧ ದೇವರುಗಳ ಆತ್ಮವು ಅವನಲ್ಲಿದೆ.) ನಾನು ದಾನಿಯೇಲನಿಗೆ ನನ್ನ ಕನಸಿನ ಬಗ್ಗೆ ಹೇಳಿದೆ.


ಯೆಹೋವನು ಭೂಲೋಕದಲ್ಲಿರುವ ತನ್ನ ಭಕ್ತರಿಗೆ ಅತಿಶಯವಾದವುಗಳನ್ನು ಮಾಡುವನು; ಅವರ ಮೇಲೆ ತನಗಿರುವ ನಿಜವಾದ ಪ್ರೀತಿಯನ್ನು ತೋರ್ಪಡಿಸುವನು.


ಜ್ಞಾನಿಯು ಎಚ್ಚರಿಕೆಯಿಂದ ಮಾತಾಡುವನು. ವಿವೇಕಿಯು ಬೇಗನೆ ಕೋಪಗೊಳ್ಳುವುದಿಲ್ಲ.


ಕ್ರಿಸ್ತನು ನನಗೆ ನೀಡಿರುವ ಬಲದಿಂದ ಇದಕ್ಕೋಸ್ಕರವೇ ಕೆಲಸ ಮಾಡುತ್ತೇನೆ ಮತ್ತು ಹೋರಾಡುತ್ತೇನೆ. ಆ ಬಲವೇ ನನ್ನ ಜೀವನದಲ್ಲಿ ಕಾರ್ಯಮಾಡುತ್ತಿದೆ.


ಆಗ ದಾನಿಯೇಲನು (ಬೇಲ್ತೆಶಚ್ಚರನು) ಸುಮಾರು ಒಂದು ಗಂಟೆಯವರೆಗೆ ಮೌನವಾಗಿದ್ದನು. ಅವನ ಬುದ್ಧಿಗೆ ತೋರಿದ ವಿಷಯಗಳು ಅವನನ್ನು ಗಾಬರಿಪಡಿಸಿದವು. ಆಗ ರಾಜನು, “ಬೇಲ್ತೆಶಚ್ಚರನೇ, ಕನಸು ಅಥವಾ ಕನಸಿನ ಅರ್ಥವು ನಿನ್ನನ್ನು ಭಯಗೊಳಿಸದಿರಲಿ” ಎಂದು ಧೈರ್ಯ ಹೇಳಿದನು. ಆಗ ಬೇಲ್ತೆಶಚ್ಚರನು ಅರಸನಿಗೆ, “ನನ್ನ ಒಡೆಯನೇ, ಈ ಕನಸು ನಿನ್ನ ವಿರೋಧಿಗಳಿಗೆ ಫಲಿಸಲಿ. ಇದರ ಅರ್ಥವು ನಿನ್ನ ವಿರೋಧಿಗಳ ಅನುಭವಕ್ಕೆ ಬರಲಿ ಎಂದು ನಾನು ಹಾರೈಸುತ್ತೇನೆ.


ನೀನು ದಾನಿಯೇಲನಿಗಿಂತ ಜಾಣನು ಎಂಬುದಾಗಿ ಭಾವಿಸುತ್ತಿ. ಎಲ್ಲಾ ರಹಸ್ಯಗಳು ನನಗೆ ಗೊತ್ತು ಎಂದು ನೀನು ನೆನಸುವೆ.


ಅರಸನು ದಾನಿಯೇಲನಿಗೆ (ಬೇಲ್ತೆಶಚ್ಚರನಿಗೆ), “ನೀನು ನನ್ನ ಕನಸನ್ನೂ ಅದರ ಅರ್ಥವನ್ನೂ ಹೇಳಬಲ್ಲೆಯಾ?” ಎಂದು ಕೇಳಿದನು.


ದೇವರು ದಾನಿಯೇಲ, ಹನನ್ಯ, ಮೀಶಾಯೇಲ, ಅಜರ್ಯ ಇವರುಗಳಿಗೆ ಅನೇಕ ಶಾಸ್ತ್ರಗಳನ್ನೂ ವಿಜ್ಞಾನವನ್ನೂ ಕಲಿಯುವ ಬುದ್ಧಿಸಾಮರ್ಥ್ಯಗಳನ್ನು ದಯಪಾಲಿಸಿದನು. ದಾನಿಯೇಲನು ಸಮಸ್ತ ಸ್ವಪ್ನಗಳನ್ನೂ ದಿವ್ಯದರ್ಶನಗಳನ್ನೂ ಗ್ರಹಿಸಬಲ್ಲವನಾಗಿದ್ದನು.


ಆದರೆ ಬೇರೆ ಮುಖ್ಯಾಧಿಕಾರಿಗಳು ಮತ್ತು ದೇಶಾಧಿಪತಿಗಳು ಈ ಸಮಾಚಾರವನ್ನು ತಿಳಿದು ಹೊಟ್ಟೆಕಿಚ್ಚುಪಟ್ಟರು. ಅವರು ದಾನಿಯೇಲನ ಮೇಲೆ ದೋಷಾರೋಪಣೆ ಮಾಡಲು ಕಾರಣಗಳನ್ನು ಹುಡುಕಲಾರಂಭಿಸಿದರು. ದಾನಿಯೇಲನು ಮಾಡುವ ರಾಜ್ಯದ ಎಲ್ಲ ಕೆಲಸಗಳ ಮೇಲೆ ಅವರು ಕಣ್ಣಿಟ್ಟರು. ಆದರೆ ದಾನಿಯೇಲನಲ್ಲಿ ಯಾವ ತಪ್ಪೂ ಅವರಿಗೆ ಸಿಕ್ಕಲಿಲ್ಲ. ಆದ್ದರಿಂದ ಅವರು ಅವನ ಮೇಲೆ ಯಾವ ದೋಷಾರೋಪಣೆಯನ್ನೂ ಮಾಡಲಾಗಲಿಲ್ಲ. ದಾನಿಯೇಲನು ಪ್ರಾಮಾಣಿಕನೂ ವಿಶ್ವಾಸಪಾತ್ರನೂ ಆಗಿದ್ದನು. ಅವನು ಬಹಳ ಕಷ್ಟಪಟ್ಟು ಕೆಲಸ ಮಾಡುತ್ತಿದ್ದನು; ಅರಸನಿಗೆ ಯಾವ ರೀತಿಯಲ್ಲೂ ವಂಚನೆ ಮಾಡುತ್ತಿರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು