ದಾನಿಯೇಲ 5:13 - ಪರಿಶುದ್ದ ಬೈಬಲ್13 ದಾನಿಯೇಲನನ್ನು ಅರಸನಲ್ಲಿಗೆ ಕರೆದು ತರಲಾಯಿತು. ಆಗ ರಾಜನು, “ರಾಜನಾಗಿದ್ದ ನನ್ನ ತಂದೆಯು ಯೆಹೂದದಿಂದ ಸೆರೆಹಿಡಿದು ತಂದವರಲ್ಲಿ ಒಬ್ಬನಾದ ದಾನಿಯೇಲನು ನೀನೋ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಆಗ ದಾನಿಯೇಲನನ್ನು ರಾಜನ ಬಳಿ ಬರಮಾಡಲು ರಾಜನು ಅವನಿಗೆ, “ರಾಜನಾದ ನನ್ನ ತಂದೆಯು ಯೆಹೂದದಿಂದ ಕೈದಿಗಳಾಗಿ ತಂದು ಸೆರೆಮಾಡಿದ ಯೆಹೂದ್ಯರ ದಾನಿಯೇಲ್ ಎಂಬುವನು ನೀನೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಅಂತೆಯೇ, ದಾನಿಯೇಲನನ್ನು ರಾಜ ಸನ್ನಿಧಿಗೆ ಬರಮಾಡಲಾಯಿತು. ರಾಜನು ಅವನಿಗೆ: “ರಾಜನಾದ ನನ್ನ ತಂದೆ ಜುದೇಯದಿಂದ ಖೈದಿಯಾಗಿ ತಂದು ಸೆರೆಮಾಡಿದ ಯೆಹೂದ್ಯರಲ್ಲಿ ದಾನಿಯೇಲ್ ಎಂಬುವನು ನೀನೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಆಗ ದಾನಿಯೇಲನನ್ನು ಸನ್ನಿಧಿಗೆ ಬರಮಾಡಲು ರಾಜನು ಅವನಿಗೆ - ರಾಜನಾದ ನನ್ನ ತಂದೆಯು ಯೆಹೂದದಿಂದ ಕೈದಿಗಳಾಗಿ ತಂದು ಸೆರೆಮಾಡಿದ ಯೆಹೂದ್ಯರ ದಾನಿಯೇಲೆಂಬವನು ನೀನೋ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಆಗ ದಾನಿಯೇಲನನ್ನು ಅರಸನ ಮುಂದೆ ತಂದರು. ಅರಸನು ದಾನಿಯೇಲನಿಗೆ, “ಅರಸನಾದ ನನ್ನ ತಂದೆಯು ಯೆಹೂದದಿಂದ ತಂದ ಯೆಹೂದದ ಸೆರೆಯವರಲ್ಲಿ ಒಬ್ಬನಾದ ದಾನಿಯೇಲನು ನೀನೋ? ಅಧ್ಯಾಯವನ್ನು ನೋಡಿ |
ಪರಿಶುದ್ಧ ದೇವರುಗಳ ಆತ್ಮವು ನೆಲೆಸಿರುವ ಒಬ್ಬನು ನಿನ್ನ ರಾಜ್ಯದಲ್ಲಿ ಇದ್ದಾನೆ. ದೇವರ ಜ್ಞಾನಕ್ಕೆ ಸಮಾನವಾದ ಜ್ಞಾನವೂ ಬುದ್ಧಿಯೂ ರಹಸ್ಯವನ್ನು ತಿಳಿದುಕೊಳ್ಳುವ ಶಕ್ತಿಯೂ ತನಗಿರುವುದಾಗಿ ಅವನು ನಿನ್ನ ತಂದೆಯ ಕಾಲದಲ್ಲಿಯೇ ತೋರಿಸಿಕೊಟ್ಟಿದ್ದಾನೆ. ನಿನ್ನ ತಂದೆಯಾದ ನೆಬೂಕದ್ನೆಚ್ಚರನು ಈ ಮನುಷ್ಯನನ್ನು ಎಲ್ಲ ವಿದ್ವಾಂಸರ ಅಧ್ಯಕ್ಷನನ್ನಾಗಿ ನೇಮಿಸಿದ್ದನು. ಎಲ್ಲ ಜೋಯಿಸರಿಗೆ, ಮಂತ್ರವಾದಿಗಳಿಗೆ, ಶಾಕುನಿಕರಿಗೆ ಮತ್ತು ಪಂಡಿತರಿಗೆ ಇವನು ಮುಖ್ಯಸ್ಥನಾಗಿದ್ದನು.
ಆ ಪ್ರಾಂತ್ಯದಲ್ಲಿ ವಾಸಿಸುತ್ತಿದ್ದ ಬೇರೆ ಜನರು ಯೆಹೂದ ಮತ್ತು ಬೆನ್ಯಾಮೀನ್ ಕುಲಗಳ ಜನರಿಗೆ ವಿರುದ್ಧವಾಗಿದ್ದರು. ಸೆರೆಯಿಂದ ಬಂದ ಜನರು ಇಸ್ರೇಲರ ದೇವರಾದ ಯೆಹೋವನ ದೇವಾಲಯವನ್ನು ಕಟ್ಟುತ್ತಿದ್ದಾರೆಂಬ ವರ್ತಮಾನವನ್ನು ವೈರಿಗಳು ಕೇಳಿ ಜೆರುಬ್ಬಾಬೆಲನ ಬಳಿಗೂ ಮತ್ತು ಕುಲಪ್ರಧಾನರ ಬಳಿಗೂ ಬಂದು, “ಕಟ್ಟುವ ಕಾರ್ಯದಲ್ಲಿ ನಿಮಗೆ ಸಹಾಯ ಮಾಡಲು ಬಂದಿದ್ದೇವೆ. ನಾವು ಸಹ ನಿಮ್ಮಂತೆಯೇ ದೇವರನ್ನು ಪ್ರಾರ್ಥಿಸುತ್ತೇವೆ. ಅಶ್ಶೂರದ ರಾಜನಾದ ಏಸರ್ಹದ್ದೋನನು ನಮ್ಮನ್ನು ಇಲ್ಲಿಗೆ ತಂದು ಬಿಟ್ಟಂದಿನಿಂದ ನಾವು ನಿಮ್ಮ ದೇವರನ್ನೇ ಆರಾಧಿಸುತ್ತೇವೆ” ಅಂದರು.