Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 5:16 - ಪರಿಶುದ್ದ ಬೈಬಲ್‌

16 ನಾನು ನಿನ್ನ ಬಗ್ಗೆ ಕೇಳಿದ್ದೇನೆ. ನೀನು ಗೂಢಾರ್ಥವನ್ನು ತಿಳಿದುಕೊಳ್ಳಬಲ್ಲೆ ಮತ್ತು ಕಠಿಣವಾದ ಸಮಸ್ಯೆಗಳಿಗೆ ಪರಿಹಾರ ಹೇಳಬಲ್ಲೆ ಎಂದು ನಾನು ಕೇಳಿದ್ದೇನೆ. ನೀನು ಗೋಡೆಯ ಮೇಲಿನ ಈ ಬರಹವನ್ನು ಓದಿ ಅದರ ಅರ್ಥವನ್ನು ನನಗೆ ವಿವರಿಸಿದರೆ, ನಾನು ನಿನಗೆ ಕಂದುಬಣ್ಣದ ಬಟ್ಟೆಗಳನ್ನು ಕೊಡುತ್ತೇನೆ. ನಿನ್ನ ಕತ್ತಿಗೆ ಚಿನ್ನದ ಹಾರವನ್ನು ಹಾಕುತ್ತೇನೆ; ನಿನ್ನನ್ನು ನನ್ನ ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನನ್ನಾಗಿ ನೇಮಿಸುತ್ತೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನೀನು, ಗೂಢಾರ್ಥಗಳನ್ನು ವಿವರಿಸಿ ಕಠಿಣವಾದ ಸಂಗತಿಗಳನ್ನು ಬಿಡಿಸಿ ತಿಳಿಸುವವನಾಗಿದ್ದೀ ಎಂಬ ಸಮಾಚಾರವು ನನಗೆ ಮುಟ್ಟಿದೆ; ಈ ಬರಹವನ್ನು ಓದಿ ಇದರ ಅಭಿಪ್ರಾಯವನ್ನು ನನಗೆ ತಿಳಿಸಲು ನಿನ್ನಿಂದಾದರೆ ನಾನೀಗ ನಿನಗೆ ಧೂಮ್ರವಸ್ತ್ರವನ್ನು ಹೊದಿಸಿ, ನಿನ್ನ ಕೊರಳಿಗೆ ಚಿನ್ನದ ಹಾರವನ್ನು ಹಾಕಿಸಿ, ನಿನ್ನನ್ನು ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನನ್ನಾಗಿ ನೇಮಿಸುವೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ನೀನು ಗೂಡಾರ್ಥಗಳನ್ನು ವಿವರಿಸಬಲ್ಲವನೂ ಗುಂಜುಗಂಟುಗಳನ್ನು ಬಿಚ್ಚಬಲ್ಲವನೂ ಎಂಬ ಸಮಾಚಾರ ನನಗೆ ಮುಟ್ಟಿದೆ. ಈ ಬರಹವನ್ನು ಓದಿ, ಇದರ ಅಭಿಪ್ರಾಯವನ್ನು ನನಗೆ ತಿಳಿಸಿದೆಯಾದರೆ ನಿನಗೆ ಕೆನ್ನೀಲಿ ರಾಜವಸ್ತ್ರವನ್ನು ಹೊದಿಸಿ, ಕೊರಳಿಗೆ ಚಿನ್ನದ ಹಾರವನ್ನು ಹಾಕಿಸಿ, ನಿನ್ನನ್ನು ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನನ್ನಾಗಿ ನೇಮಿಸುವೆನು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ನೀನೋ ಗೂಢಾರ್ಥಗಳನ್ನು ವಿವರಿಸಿ ಗುಂಜುಗಂಟುಗಳನ್ನು ಬಿಚ್ಚಬಲ್ಲವನಾಗಿದ್ದೀ ಎಂಬ ಸಮಾಚಾರವು ನನಗೆ ಮುಟ್ಟಿದೆ; ಈ ಬರಹವನ್ನು ಓದಿ ಇದರ ಅಭಿಪ್ರಾಯವನ್ನು ನನಗೆ ತಿಳಿಸಲು ನಿನ್ನಿಂದಾದರೆ ನಾನೀಗ ನಿನಗೆ ಧೂಮ್ರವಸ್ತ್ರವನ್ನು ಹೊದಿಸಿ ನಿನ್ನ ಕೊರಳಿಗೆ ಚಿನ್ನದ ಹಾರವನ್ನು ಹಾಕಿಸಿ ನಿನ್ನನ್ನು ರಾಜ್ಯದ - ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನನ್ನಾಗಿ ನೇವಿುಸುವೆನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಈಗ ನೀನು ಅರ್ಥಗಳನ್ನು ವಿವರಿಸಿ, ಕಷ್ಟಕರವಾದ ಸಮಸ್ಯೆಗಳನ್ನು ಬಗೆಹರಿಸಲು ಸಮರ್ಥನೆಂದು ನಾನು ನಿನ್ನ ವಿಷಯವಾಗಿ ಕೇಳಿದ್ದೇನೆ. ಹೀಗಾದರೆ ಈ ಬರಹವನ್ನು ಓದುವುದಕ್ಕೂ, ಅದರ ಅರ್ಥವನ್ನು ತಿಳಿಸುವುದಕ್ಕೂ ನಿನ್ನಿಂದ ಸಾಧ್ಯವಾದರೆ, ನಿನಗೆ ಧೂಮ್ರವಸ್ತ್ರವನ್ನು ಹೊದಿಸಿ, ಕೊರಳಿಗೆ ಚಿನ್ನದ ಹಾರವನ್ನು ಹಾಕಿಸಿ, ರಾಜ್ಯದ ಮೂರನೆಯ ಅಧಿಕಾರಿಯನ್ನಾಗಿ ನೇಮಿಸುವೆನು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 5:16
9 ತಿಳಿವುಗಳ ಹೋಲಿಕೆ  

ಆಗ ರಾಜನು ಗಟ್ಟಿಯಾಗಿ ಕೂಗಿಕೊಂಡು ಮಂತ್ರವಾದಿ, ಪಂಡಿತ, ಶಾಕುನಿಕರನ್ನು ತನ್ನಲ್ಲಿಗೆ ಕರೆಸಿದನು. ಅವನು ಆ ವಿದ್ವಾಂಸರಿಗೆ, “ಈ ಬರವಣಿಗೆಯನ್ನು ಓದಿ ನನಗೆ ಅದರ ಅರ್ಥವನ್ನು ಹೇಳಬಲ್ಲ ಮನುಷ್ಯನಿಗೆ ನಾನು ಬಹುಮಾನವನ್ನು ಕೊಡುತ್ತೇನೆ. ಆ ಮನುಷ್ಯನಿಗೆ ನಾನು ಕಂದು ಬಣ್ಣದ ವಸ್ತ್ರಗಳನ್ನು ಕೊಡುತ್ತೇನೆ. ಅವನ ಕೊರಳಿಗೆ ಚಿನ್ನದ ಹಾರವನ್ನು ಹಾಕಿಸಿ ಅವನನ್ನು ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನನ್ನಾಗಿ ನೇಮಿಸುವೆನು” ಎಂದು ಹೇಳಿದನು.


ದಾನಿಯೇಲನಿಗೆ ಬೇಲ್ಶಚ್ಚರನ ಆಜ್ಞೆಯಂತೆ ಕಂದು ಬಣ್ಣದ ವಸ್ತ್ರಗಳನ್ನು ಕೊಡಲಾಯಿತು. ಚಿನ್ನದ ಸರವನ್ನು ಅವನ ಕೊರಳಿಗೆ ಹಾಕಲಾಯಿತು; ಅವನು ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನಾದನು.


ಆ ಇಬ್ಬರು, “ನಾವು ಕಳೆದ ರಾತ್ರಿ ಕನಸನ್ನು ಕಂಡೆವು; ಆದರೆ ನಾವು ಕಂಡ ಕನಸು ನಮಗೆ ಅರ್ಥವಾಗುತ್ತಿಲ್ಲ. ನಮಗೆ ಕನಸುಗಳ ಅರ್ಥವನ್ನು ತಿಳಿಸುವವರಾಗಲಿ ವಿವರಿಸುವವರಾಗಲಿ ಯಾರೂ ಇಲ್ಲ” ಎಂದು ಹೇಳಿದರು. ಯೋಸೇಫನು ಅವರಿಗೆ, “ದೇವರೊಬ್ಬನು ಮಾತ್ರ ಕನಸುಗಳನ್ನು ಅರ್ಥಮಾಡಿಕೊಳ್ಳಬಲ್ಲನು ಮತ್ತು ಕನಸುಗಳ ಅರ್ಥವನ್ನು ಹೇಳಬಲ್ಲನು. ಆದ್ದರಿಂದ ದಯಮಾಡಿ ನಿಮ್ಮ ಕನಸುಗಳನ್ನು ನನಗೆ ತಿಳಿಸಿರಿ” ಎಂದು ಹೇಳಿದನು.


ಅಪೊಸ್ತಲರು ಜನರ ಮೇಲೆ ತಮ್ಮ ಕೈಗಳನ್ನಿಟ್ಟಾಗ ಜನರಿಗೆ ಪವಿತ್ರಾತ್ಮನು ದೊರೆತ್ತಿದ್ದನ್ನು ಸಿಮೋನನು ಕಂಡನು. ಆದ್ದರಿಂದ ಸಿಮೋನನು ಅಪೊಸ್ತಲರಿಗೆ ಹಣವನ್ನು ನೀಡುತ್ತಾ,


ಫರೋಹನು ಯೋಸೇಫನಿಗೆ, “ನನಗೆ ಒಂದು ಕನಸಾಯಿತು. ಆದರೆ ಅದರ ಅರ್ಥವನ್ನು ತಿಳಿಸಬಲ್ಲವರು ಇಲ್ಲಿ ಯಾರೂ ಇಲ್ಲ. ನೀನು ಕನಸುಗಳ ಅರ್ಥವನ್ನು ಹೇಳಬಲ್ಲೆ ಎಂಬುದಾಗಿ ನಿನ್ನ ಬಗ್ಗೆ ಕೇಳಿದೆ” ಎಂದು ಹೇಳಿದನು.


ರಾಜಮುದ್ರೆಯನ್ನು ಹೊಂದಿದ್ದ ತನ್ನ ಉಂಗುರವನ್ನು ಕೊಟ್ಟನು; ಧರಿಸಿಕೊಳ್ಳಲು ಒಳ್ಳೆಯ ನಾರುಬಟ್ಟೆಯ ನಿಲುವಂಗಿಯನ್ನು ಕೊಟ್ಟನು; ಕೊರಳಿಗೆ ಚಿನ್ನದ ಸರವನ್ನು ಹಾಕಿದನು.


ಆದರೆ ನೀವು ನನಗೆ ನನ್ನ ಕನಸನ್ನೂ ಅದರ ಅರ್ಥವನ್ನೂ ಹೇಳಿದರೆ ಕಾಣಿಕೆಗಳನ್ನೂ ಬಹುಮಾನಗಳನ್ನೂ ಕೊಡುತ್ತೇನೆ ಮತ್ತು ಮಹಾಸನ್ಮಾನವನ್ನು ಮಾಡುತ್ತೇನೆ. ಆದ್ದರಿಂದ ನೀವು ನನಗೆ ಕನಸನ್ನೂ ಅದರ ಅರ್ಥವನ್ನೂ ಹೇಳಿರಿ” ಎಂದನು.


ತರುವಾಯ ಅರಸನು ದಾನಿಯೇಲನಿಗೆ ತನ್ನ ರಾಜ್ಯದಲ್ಲಿ ಬಹುಮುಖ್ಯವಾದ ಉದ್ಯೋಗವನ್ನು ಕೊಟ್ಟನು. ಅಮೂಲ್ಯವಾದ ಕಾಣಿಕೆಗಳನ್ನೂ ಕೊಟ್ಟನು. ನೆಬೂಕದ್ನೆಚ್ಚರನು ದಾನಿಯೇಲನನ್ನು ಬಾಬಿಲೋನ್ ಸಂಸ್ಥಾನದ ಅಧಿಪತಿಯನ್ನಾಗಿ ಮಾಡಿದನು. ಬಾಬಿಲೋನಿನ ಎಲ್ಲಾ ವಿದ್ವಾಂಸರ ಮುಖ್ಯಸ್ಥನನ್ನಾಗಿ ಮಾಡಿದನು.


ಆ ನೂರಿಪ್ಪತ್ತು ಜನರ ಮೇಲೆ ಮೂರು ಜನ ಮುಖ್ಯಾಧಿಕಾರಿಗಳನ್ನು ನೇಮಿಸಿದನು. ದಾನಿಯೇಲನು ಈ ಮೂರು ಜನ ಮುಖ್ಯಾಧಿಕಾರಿಗಳಲ್ಲೊಬ್ಬನಾಗಿದ್ದನು. ಯಾರೊಬ್ಬರೂ ತನಗೆ ಮೋಸ ಮಾಡದಂತೆ ಮತ್ತು ತನ್ನ ರಾಜ್ಯಕ್ಕೆ ನಷ್ಟವಾಗದಂತೆ ನೋಡಿಕೊಳ್ಳಲು ರಾಜನು ಈ ಮೂವರನ್ನು ನೇಮಿಸಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು