ದಾನಿಯೇಲ 5:18 - ಪರಿಶುದ್ದ ಬೈಬಲ್18 “ರಾಜನೇ, ಮಹೋನ್ನತನಾದ ದೇವರು ನಿನ್ನ ತಂದೆಯಾದ ನೆಬೂಕದ್ನೆಚ್ಚರನನ್ನು ಮಹಾ ದೊಡ್ಡ ರಾಜನನ್ನಾಗಿಯೂ ಬಲಿಷ್ಠನಾದ ರಾಜನನ್ನಾಗಿಯೂ ಪ್ರಮುಖನಾದ ರಾಜನನ್ನಾಗಿಯೂ ಮಾಡಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಅರಸನೇ, ಪರಾತ್ಪರನಾದ ದೇವರು ನಿನ್ನ ತಂದೆಯಾದ ನೆಬೂಕದ್ನೆಚ್ಚರನಿಗೆ ರಾಜ್ಯಮಹತ್ವ, ಮಾನಸನ್ಮಾನಗಳನ್ನು ದಯಪಾಲಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಪರಾತ್ಪರ ದೇವರು ನಿಮ್ಮ ತಂದೆಯಾದ ನೆಬೂಕದ್ನೆಚ್ಚರ್ ಅವರಿಗೆ ರಾಜ್ಯ ಮಹತ್ವವನ್ನು ಹಾಗೂ ಮಾನ ಸನ್ಮಾನಗಳನ್ನು ದಯಪಾಲಿಸಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಅರಸೇ, ಪರಾತ್ಪರನಾದ ದೇವರು ನಿನ್ನ ತಂದೆಯಾದ ನೆಬೂಕದ್ನೆಚ್ಚರನಿಗೆ ಈ ರಾಜ್ಯಮಹತ್ವಮಾನ ಸನ್ಮಾನಗಳನ್ನು ದಯಪಾಲಿಸಿದನು; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 “ಅರಸನೇ, ಮಹೋನ್ನತರಾದ ದೇವರು ನಿನ್ನ ತಂದೆಯಾದ ನೆಬೂಕದ್ನೆಚ್ಚರನಿಗೆ ಸಾರ್ವಭೌಮತ್ವವನ್ನೂ, ಮಹತ್ತನ್ನೂ, ಕೀರ್ತಿಯನ್ನೂ, ಘನವನ್ನೂ ಕೊಟ್ಟರು. ಅಧ್ಯಾಯವನ್ನು ನೋಡಿ |
ಜನರನ್ನು ಬಿಟ್ಟುಹೋಗುವಂತೆ ನಿನ್ನನ್ನು ಒತ್ತಾಯಿಸಲಾಗುವುದು. ನೀನು ಕಾಡುಪ್ರಾಣಿಗಳೊಂದಿಗೆ ವಾಸಿಸುವೆ. ಹಸುಗಳಂತೆ ಹುಲ್ಲು ತಿನ್ನುವೆ; ನೀನು ಪಾಠ ಕಲಿಯುವದಕ್ಕೆ ಏಳು ವರ್ಷ ಬೇಕಾಗುವುದು. ಆಗ ಮಹೋನ್ನತನಾದ ದೇವರು ಮಾನವನ ಸಾಮ್ರಾಜ್ಯಗಳ ಮೇಲೆ ಆಳ್ವಿಕೆ ಮಾಡುತ್ತಾನೆ ಮತ್ತು ತನಗೆ ಬೇಕಾದವರಿಗೆ ಸಾಮ್ರಾಜ್ಯವನ್ನು ಕೊಡುತ್ತಾನೆ ಎಂಬ ಸತ್ಯವನ್ನು ನೀನು ತಿಳಿದುಕೊಳ್ಳುವೆ” ಎಂದು ನುಡಿಯಿತು.
ಆದ್ದರಿಂದ ನಾನು ಉತ್ತರದ ಎಲ್ಲಾ ಜನಾಂಗಗಳನ್ನು ಕರೆಸುತ್ತೇನೆ.” ಇದು ಯೆಹೋವನ ಸಂದೇಶ. “ನಾನು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನನ್ನು ಕೂಡಲೇ ಕರೆಸುವೆನು. ಅವನು ನನ್ನ ಸೇವಕ. ನಾನು ಆ ಜನರನ್ನು ಯೆಹೂದ ದೇಶದ ವಿರುದ್ಧವಾಗಿಯೂ ಯೆಹೂದ್ಯರ ವಿರುದ್ಧವಾಗಿಯೂ ತರುತ್ತೇನೆ. ನಾನು ನಿಮ್ಮ ಸುತ್ತಮುತ್ತಲಿನಲ್ಲಿದ್ದ ಜನಾಂಗಗಳ ವಿರುದ್ಧವಾಗಿಯೂ ಅವರನ್ನು ಕರೆತರುವೆನು. ನಾನು ಆ ದೇಶಗಳನ್ನೆಲ್ಲ ನಾಶಮಾಡುವೆನು. ನಾನು ಆ ಭೂಮಿಗಳನ್ನು ಶಾಶ್ವತವಾಗಿ ಬರಿದಾದ ಮರುಭೂಮಿಗಳನ್ನಾಗಿ ಮಾಡುವೆನು. ಜನರು ಆ ದೇಶಗಳನ್ನು ನೋಡಿ ಅವು ಹಾಳಾಗಿರುವುದನ್ನು ಕಂಡು ಬೆರಗಾಗಿ ಸಿಳ್ಳುಹಾಕುವರು.
ಅನಂತರ ನೆಬೂಕದ್ನೆಚ್ಚರನನ್ನು ಜನರ ಮಧ್ಯದಿಂದ ಓಡಿಸಲಾಯಿತು. ಅವನ ಬುದ್ಧಿಯು ಮೃಗಬುದ್ಧಿಯಂತಾಯಿತು. ಅವನು ಕಾಡುಕತ್ತೆಗಳ ಜೊತೆ ವಾಸಿಸಿದನು; ಹಸುಗಳಂತೆ ಹುಲ್ಲು ತಿಂದನು; ಮಂಜಿನಲ್ಲಿ ನೆನೆದನು. ಅವನಿಗೆ ಸರಿಯಾದ ಬುದ್ಧಿ ಬರುವತನಕ ಅವನು ಆ ಸ್ಥಿತಿಯಲ್ಲಿದ್ದನು. ಆಗ ಅವನು ಮಹೋನ್ನತನಾದ ದೇವರೇ ಮಾನವರ ಸಾಮ್ರಾಜ್ಯವನ್ನು ಆಳುತ್ತಾನೆ ಮತ್ತು ಆ ಸಾಮ್ರಾಜ್ಯಕ್ಕೆ ತನಗೆ ಬೇಕಾದವರನ್ನು ಅರಸರನ್ನಾಗಿ ನೇಮಿಸುತ್ತಾನೆ ಎಂಬುದನ್ನು ತಿಳಿದುಕೊಂಡನು.
ಆಗ ದಾನಿಯೇಲನು (ಬೇಲ್ತೆಶಚ್ಚರನು) ಸುಮಾರು ಒಂದು ಗಂಟೆಯವರೆಗೆ ಮೌನವಾಗಿದ್ದನು. ಅವನ ಬುದ್ಧಿಗೆ ತೋರಿದ ವಿಷಯಗಳು ಅವನನ್ನು ಗಾಬರಿಪಡಿಸಿದವು. ಆಗ ರಾಜನು, “ಬೇಲ್ತೆಶಚ್ಚರನೇ, ಕನಸು ಅಥವಾ ಕನಸಿನ ಅರ್ಥವು ನಿನ್ನನ್ನು ಭಯಗೊಳಿಸದಿರಲಿ” ಎಂದು ಧೈರ್ಯ ಹೇಳಿದನು. ಆಗ ಬೇಲ್ತೆಶಚ್ಚರನು ಅರಸನಿಗೆ, “ನನ್ನ ಒಡೆಯನೇ, ಈ ಕನಸು ನಿನ್ನ ವಿರೋಧಿಗಳಿಗೆ ಫಲಿಸಲಿ. ಇದರ ಅರ್ಥವು ನಿನ್ನ ವಿರೋಧಿಗಳ ಅನುಭವಕ್ಕೆ ಬರಲಿ ಎಂದು ನಾನು ಹಾರೈಸುತ್ತೇನೆ.