ದಾನಿಯೇಲ 5:19 - ಪರಿಶುದ್ದ ಬೈಬಲ್19 ಹಲವಾರು ಜನಾಂಗದ ಮತ್ತು ಭಾಷೆಯ ಜನರು ಅವನಿಗೆ ತುಂಬ ಹೆದರುತ್ತಿದ್ದರು. ಏಕೆಂದರೆ ಮಹೋನ್ನತನಾದ ದೇವರು ಅವನನ್ನು ಬಹುದೊಡ್ಡ ರಾಜನನ್ನಾಗಿ ಮಾಡಿದ್ದನು. ನೆಬೂಕದ್ನೆಚ್ಚರನು ಯಾರನ್ನಾದರೂ ಕೊಲ್ಲಬೇಕೆಂದು ಇಚ್ಛಿಸಿದರೆ ಅವನನ್ನು ಕೊಲ್ಲಿಸಿಬಿಡುತ್ತಿದ್ದನು; ತನಗೆ ಬೇಕಾದವರನ್ನು ಉಳಿಸುತ್ತಿದ್ದನು; ತನ್ನ ಮನಸ್ಸಿಗೆ ಬಂದವರನ್ನು ಏರಿಸುತ್ತಿದ್ದನು; ತನ್ನ ಮನಸ್ಸಿಗೆ ಬಂದವರನ್ನು ಇಳಿಸುತ್ತಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಈ ಮಹತ್ವದ ನಿಮಿತ್ತ ಸಕಲ ಜನಾಂಗ, ಕುಲ, ಭಾಷೆಗಳವರು ಅವನ ಮುಂದೆ ಬೆಚ್ಚಿಬೆದರಿದರು; ತನಗೆ ಬೇಕಾದವರನ್ನು ಕೊಲ್ಲಿಸಿದನು, ತನಗೆ ಬೇಕಾದವರನ್ನು ಉಳಿಸಿದನು, ಮನಸ್ಸು ಬಂದವರನ್ನು ಅಭಿವೃದ್ಧಿಮಾಡಿದನು, ಮನಸ್ಸು ಬಂದವರನ್ನು ಇಳಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಇಂಥ ಮಹತ್ವ ವರದ ನಿಮಿತ್ತ ಸಕಲ ದೇಶ-ಕುಲ-ಭಾಷೆಗಳವರು ಅವರ ಮುಂದೆ ಭಯದಿಂದ ನಡುಗುತ್ತಿದ್ದರು. ತಮಗೆ ಇಷ್ಟಬಂದ ಹಾಗೆ ಒಬ್ಬನನ್ನು ಬದುಕಿಸಿದರು, ಇನ್ನೊಬ್ಬನನ್ನು ಕೊಲ್ಲಿಸಿದರು. ಮನಸ್ಸಿಗೆ ಬಂದಹಾಗೆ ಒಬ್ಬನನ್ನು ಮೇಲೇರಿಸಿದರು, ಇನ್ನೊಬ್ಬನನ್ನು ಕೆಳಕ್ಕಿಳಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಈ ಮಹತ್ವ ವರದ ನಿವಿುತ್ತ ಸಕಲ ಜನಾಂಗಕುಲಭಾಷೆಗಳವರು ಅವನ ಮುಂದೆ ಬೆಚ್ಚಿಬೆದರಿದರು; ಬೇಕುಬೇಕಾದವರನ್ನು ಕೊಲ್ಲಿಸಿದನು, ಬೇಕುಬೇಕಾದವರನ್ನು ಉಳಿಸಿದನು, ಮನಸ್ಸುಬಂದವರನ್ನು ಏರಿಸಿದನು, ಮನಸ್ಸುಬಂದವರನ್ನು ಇಳಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಅವರು ಅವನಿಗೆ ಕೊಟ್ಟ ಮಹತ್ತಿನ ನಿಮಿತ್ತ ಸಕಲ ಪ್ರಜೆಗಳೂ, ಜನಾಂಗಗಳೂ, ಭಾಷೆಯವರೂ ಅವನ ಮುಂದೆ ಹೆದರಿ ನಡುಗಿದರು. ತನಗೆ ಬೇಕಾದವರನ್ನು ಬದುಕಿಸಿ ಬೇಡವಾದವರನ್ನು ಕೊಂದನು. ಇಷ್ಟವಿದ್ದವರನ್ನು ಸುಸ್ಥಿತಿಗೆ ಏರಿಸಿ, ಇಷ್ಟವಿಲ್ಲದವರನ್ನು ಕೆಳಕ್ಕಿಳಿಸಿದನು. ಅಧ್ಯಾಯವನ್ನು ನೋಡಿ |
ಯೆಹೋವನು ಹೇಳಿದ್ದು: “ಒಬ್ಬನನ್ನು ದ್ರಾಕ್ಷಾರಸವು ಮೋಸಪಡಿಸಬಹುದು. ಅದೇ ರೀತಿಯಲ್ಲಿ ಬಲಿಷ್ಠನ ಗರ್ವವು ಅವನನ್ನು ಮೋಸಪಡಿಸಬಹುದು. ಆದರೆ ಅವನಿಗೆ ಸಮಾಧಾನ ಸಿಕ್ಕುವುದಿಲ್ಲ. ಅವನು ಮರಣದಂತಿರುವನು. ಅವನಿಗೆ ಯಾವಾಗಲೂ ಹೆಚ್ಚೆಚ್ಚು ಬೇಕು. ಮರಣದಂತೆ ಅವನಿಗೆ ತೃಪ್ತಿಯೇ ಇರದು. ಅವನು ಜನಾಂಗಗಳನ್ನು ಸೋಲಿಸುತ್ತಲೇ ಇರುವನು. ಆ ಜನರನ್ನು ತನ್ನ ಕೈದಿಗಳನ್ನಾಗಿ ಮಾಡುತ್ತಲೇ ಇರುವನು.
“ಉತ್ತರದ ರಾಜನು ತನ್ನ ಮನಸ್ಸಿಗೆ ಬಂದದ್ದನ್ನು ಮಾಡುವನು; ಬಡಾಯಿ ಕೊಚ್ಚಿಕೊಳ್ಳುವನು. ಅವನು ತನ್ನನ್ನು ತಾನು ಹೊಗಳಿಕೊಳ್ಳುವನು ಮತ್ತು ದೇವರಿಗಿಂತ ತಾನು ಹೆಚ್ಚಿನವನೆಂದು ಭಾವಿಸುವನು. ಅವನು ಯಾರೂ ಎಂದೂ ಕೇಳದ ಸಂಗತಿಗಳನ್ನು ಹೇಳುವನು. ಅವನು ಮಹೋನ್ನತನಾದ ದೇವರ ವಿರುದ್ಧವಾಗಿ ಅಂತಹ ಸಂಗತಿಗಳನ್ನು ಹೇಳುವನು. ಎಲ್ಲ ಕೆಟ್ಟ ಸಂಗತಿಗಳು ಜರಗುವವರೆಗೂ ಅವನು ಜಯ ಪಡೆಯುವನು. ಏನು ನಡೆಯಬೇಕೆಂದು ದೇವರು ನಿಶ್ಚಯ ಮಾಡಿರುವನೋ ಅದು ನಡೆಯುವದು.
ಆಗ ದಾನಿಯೇಲನು (ಬೇಲ್ತೆಶಚ್ಚರನು) ಸುಮಾರು ಒಂದು ಗಂಟೆಯವರೆಗೆ ಮೌನವಾಗಿದ್ದನು. ಅವನ ಬುದ್ಧಿಗೆ ತೋರಿದ ವಿಷಯಗಳು ಅವನನ್ನು ಗಾಬರಿಪಡಿಸಿದವು. ಆಗ ರಾಜನು, “ಬೇಲ್ತೆಶಚ್ಚರನೇ, ಕನಸು ಅಥವಾ ಕನಸಿನ ಅರ್ಥವು ನಿನ್ನನ್ನು ಭಯಗೊಳಿಸದಿರಲಿ” ಎಂದು ಧೈರ್ಯ ಹೇಳಿದನು. ಆಗ ಬೇಲ್ತೆಶಚ್ಚರನು ಅರಸನಿಗೆ, “ನನ್ನ ಒಡೆಯನೇ, ಈ ಕನಸು ನಿನ್ನ ವಿರೋಧಿಗಳಿಗೆ ಫಲಿಸಲಿ. ಇದರ ಅರ್ಥವು ನಿನ್ನ ವಿರೋಧಿಗಳ ಅನುಭವಕ್ಕೆ ಬರಲಿ ಎಂದು ನಾನು ಹಾರೈಸುತ್ತೇನೆ.