21 ಅನಂತರ ನೆಬೂಕದ್ನೆಚ್ಚರನನ್ನು ಜನರ ಮಧ್ಯದಿಂದ ಓಡಿಸಲಾಯಿತು. ಅವನ ಬುದ್ಧಿಯು ಮೃಗಬುದ್ಧಿಯಂತಾಯಿತು. ಅವನು ಕಾಡುಕತ್ತೆಗಳ ಜೊತೆ ವಾಸಿಸಿದನು; ಹಸುಗಳಂತೆ ಹುಲ್ಲು ತಿಂದನು; ಮಂಜಿನಲ್ಲಿ ನೆನೆದನು. ಅವನಿಗೆ ಸರಿಯಾದ ಬುದ್ಧಿ ಬರುವತನಕ ಅವನು ಆ ಸ್ಥಿತಿಯಲ್ಲಿದ್ದನು. ಆಗ ಅವನು ಮಹೋನ್ನತನಾದ ದೇವರೇ ಮಾನವರ ಸಾಮ್ರಾಜ್ಯವನ್ನು ಆಳುತ್ತಾನೆ ಮತ್ತು ಆ ಸಾಮ್ರಾಜ್ಯಕ್ಕೆ ತನಗೆ ಬೇಕಾದವರನ್ನು ಅರಸರನ್ನಾಗಿ ನೇಮಿಸುತ್ತಾನೆ ಎಂಬುದನ್ನು ತಿಳಿದುಕೊಂಡನು.
21 ಅವನು ನರಜಾತಿಯವರೊಳಗಿಂದ ನೂಕಲ್ಪಟ್ಟನು, ಅವನ ಬುದ್ಧಿಯು ಮೃಗದ ಬುದ್ಧಿಯಂತಾಯಿತು, ಕಾಡು ಕತ್ತೆಗಳೊಂದಿಗೆ ವಾಸಿಸಿದನು. ಪರಾತ್ಪರನಾದ ದೇವರು ಮನುಷ್ಯರ ರಾಜ್ಯದಲ್ಲಿ ರಾಜನಾಗಿ ಅದರ ಮೇಲೆ ತನಗೆ ಬೇಕಾದವರನ್ನು ನೇಮಿಸುತ್ತಾನೆ ಎಂಬುದು ಅವನಿಗೆ ತಿಳಿದುಬರುವ ತನಕ ದನಗಳಂತೆ ಹುಲ್ಲು ಮೇಯುವುದೇ ಅವನ ಗತಿಯಾಯಿತು, ಆಕಾಶದ ಇಬ್ಬನಿಯು ಅವನ ಮೈಯನ್ನು ತೋಯಿಸುತ್ತಿತ್ತು.
21 ಸಮಾಜದಿಂದ ಬಹಿಷ್ಕೃತರಾಗಿ, ಮೃಗಬುದ್ಧಿಯುಳ್ಳವರಾಗಿ, ಕಾಡುಕತ್ತೆಗಳ ನಡುವೆ ವಾಸಮಾಡಬೇಕಾಯಿತು. ಪರಾತ್ಪರ ದೇವರಿಗೆ ನರಮಾನವರ ರಾಜ್ಯದ ಮೇಲೆ ಅಧಿಕಾರವಿದೆ. ಅದನ್ನು ತಮಗೆ ಇಷ್ಟಬಂದವರಿಗೆ ಒಪ್ಪಿಸುತ್ತಾರೆ ಎಂಬುದನ್ನು ಅವರು ಗ್ರಹಿಸುವ ತನಕ ದನಗಳಂತೆ ಹುಲ್ಲುಮೇಯುವ ಗತಿ ಅವರದಾಯಿತು. ಆಕಾಶದ ಇಬ್ಬನಿ ಅವರ ಮೈಯನ್ನು ತೋಯಿಸುತ್ತಿತ್ತು.”
21 ಅವನು ನರಜಾತಿಯವರೊಳಗಿಂದ ನೂಕಲ್ಪಟ್ಟನು, ಅವನ ಬುದ್ಧಿಯು ಮೃಗಬುದ್ಧಿಯಂತಾಯಿತು, ಕಾಡುಕತ್ತೆಗಳೊಂದಿಗೆ ವಾಸಿಸಿದನು; ಪರಾತ್ಪರನಾದ ದೇವರು ಮನುಷ್ಯರ ರಾಜ್ಯದಲ್ಲಿ ರಾಜನಾಗಿ ಅವರ ಮೇಲೆ ತನಗೆ ಬೇಕಾದವರನ್ನು ನೇವಿುಸುತ್ತಾನೆ ಎಂಬುದು ಅವನಿಗೆ ತಿಳಿದುಬರುವ ತನಕ ದನಗಳಂತೆ ಹುಲ್ಲು ಮೇಯುವದೇ ಅವನ ಗತಿಯಾಯಿತು, ಆಕಾಶದ ಇಬ್ಬನಿಯು ಅವನ ಮೈಯನ್ನು ತೋಯಿಸುತ್ತಿತ್ತು.
21 ಅವನು ಮಾನವ ಸಮಾಜದಿಂದ ಬಹಿಷ್ಕೃತನಾದನು. ಮಹೋನ್ನತರಾದ ದೇವರು ಮನುಷ್ಯರ ರಾಜ್ಯವನ್ನು ಆಳುತ್ತಾರೆಂದೂ, ಅವರು ತಮಗೆ ಬೇಕಾದವರನ್ನು ಅದಕ್ಕೆ ನೇಮಿಸುತ್ತಾರೆಂದೂ ತಿಳಿಯುವ ತನಕ ಅವನು ಮೃಗಬುದ್ಧಿಯುಳ್ಳವನಾಗಿದ್ದನು. ಅವನ ನಿವಾಸವು ಕಾಡುಕತ್ತೆಗಳ ಸಂಗಡ ಇತ್ತು. ಅವನು ದನಗಳಂತೆ ಹುಲ್ಲನ್ನು ಮೇಯುತ್ತಿದ್ದನು. ಅವನ ಶರೀರ ಆಕಾಶದ ಮಂಜಿನಿಂದ ತೇವವಾಯಿತು.
ರಾಜನಾದ ನೆಬೂಕದ್ನೆಚ್ಚರನೇ, ನಿನ್ನನ್ನು ಬಲವಂತದಿಂದ ಜನರಿಂದ ದೂರಮಾಡುವರು. ನೀನು ಕಾಡುಪ್ರಾಣಿಗಳೊಂದಿಗೆ ವಾಸಮಾಡುವೆ; ಹಸುಗಳಂತೆ ಹುಲ್ಲು ತಿನ್ನುವೆ; ಇಬ್ಬನಿಯಿಂದ ತೋಯಿಸಿಕೊಳ್ಳುವೆ. ಏಳು ವರ್ಷಗಳು ಕಳೆಯುವವು. ಆಗ ನೀನು ಮಹೋನ್ನತನಾದ ದೇವರು ಮಾನವರ ಸಾಮ್ರಾಜ್ಯದ ಮೇಲೆ ಆಳ್ವಿಕೆ ಮಾಡುತ್ತಾನೆ ಮತ್ತು ತನಗೆ ಬೇಕಾದವರಿಗೆ ರಾಜ್ಯವನ್ನು ಕೊಡುತ್ತಾನೆ ಎಂಬ ಪಾಠವನ್ನು ಕಲಿಯುವೆ.
“ಆಗ ಬೇರೆ ಮರಗಳಿಗೆ, ನಾನು ದೊಡ್ಡ ಮರಗಳನ್ನು ನೆಲಕ್ಕೆ ಬೀಳಿಸುವೆನೆಂತಲೂ, ಚಿಕ್ಕ ಮರಗಳನ್ನು ಉದ್ದವಾಗಿ ಬೆಳೆಯುವಂತೆ ಮಾಡುತ್ತೇನೆಂತಲೂ ಗೊತ್ತಾಗುವದು. ಹಸಿರು ಮರಗಳು ಒಣಗಿಹೋಗುವಂತೆಯೂ ಒಣಗಿಹೋದ ಮರಗಳು ಹಸಿರಾಗಿ ಬೆಳೆಯುವಂತೆಯೂ ನಾನು ಮಾಡುತ್ತೇನೆ. ನಾನೇ ಯೆಹೋವನು. ಇದನ್ನು ನಾನೇ ಹೇಳಿದ್ದೇನೆ; ಮತ್ತು ನಾನೇ ಇದನ್ನು ನೆರವೇರಿಸುವೆನು.”
“ಈ ಶಿಕ್ಷೆಯನ್ನು ದೇವದೂತನು ಸಾರಿದನು. ಮಾನವ ಸಾಮ್ರಾಜ್ಯಗಳ ಮೇಲೆ ಮಹೋನ್ನತನಾದ ದೇವರು ಆಳುವನು. ಅವನು ಆ ಸಾಮ್ರಾಜ್ಯಗಳನ್ನು ತನಗೆ ಬೇಕಾದವರಿಗೆ ಒಪ್ಪಿಸುವನು, ಕನಿಷ್ಠರನ್ನು ನೇಮಿಸುವನು ಎಂಬುದು ಲೋಕದ ಜನರಿಗೆಲ್ಲ ತಿಳಿದುಬರಲಿ ಎಂದೇ ಅವನು ಸಾರಿದನು.
ಅರಸ ನೆಬೂಕದ್ನೆಚ್ಚರನಾದ ನಾನು ಈಗ ಪರಲೋಕದ ರಾಜನನ್ನು ಘನಪಡಿಸುತ್ತೇನೆ, ಮಹಿಮೆಪಡಿಸುತ್ತೇನೆ. ಆತನು ಮಾಡುವದೆಲ್ಲ ಸರಿ. ಆತನು ಯಾವಾಗಲೂ ನ್ಯಾಯವಂತನಾಗಿದ್ದಾನೆ. ಆತನು ಗರ್ವಿಷ್ಠರನ್ನು ದೀನರನ್ನಾಗಿ ಮಾಡಬಲ್ಲನು.
ಆ ಕಾಲವು ಕಳೆದ ಮೇಲೆ ನೆಬೂಕದ್ನೆಚ್ಚರನಾದ ನಾನು ಆಕಾಶದ ಕಡೆಗೆ ನೋಡಿದೆ. ಆಗ ನಾನು ಸ್ವಸ್ಥ ಬುದ್ಧಿಯುಳ್ಳವನಾಗಿದ್ದೆ. ಬಳಿಕ ನಾನು ಮಹೋನ್ನತನಾದ ದೇವರನ್ನು ಸ್ತುತಿಸಿದೆ. ನಿತ್ಯನಾದ ಆ ದೇವರನ್ನು ಕೊಂಡಾಡಿದೆ. ಸ್ತೋತ್ರಮಾಡಿದೆ. ದೇವರ ಆಳ್ವಿಕೆಯು ಶಾಶ್ವತವಾದದ್ದು! ಆತನ ಸಾಮ್ರಾಜ್ಯವು ಎಲ್ಲಾ ತಲೆಮಾರುಗಳಲ್ಲಿಯೂ ಇರುವುದು.
ಅವನು ಮಹಾ ಧ್ವನಿಯಿಂದ, ‘ಮರವನ್ನು ಕಡಿದುಹಾಕಿರಿ; ಅದರ ಕೊಂಬೆಗಳನ್ನು ಕಡಿದುಹಾಕಿರಿ; ಅದರ ಎಲೆಗಳನ್ನು ಕಿತ್ತುಹಾಕಿರಿ; ಹಣ್ಣುಗಳನ್ನು ಸುತ್ತಲೂ ಉದುರಿಸಿಬಿಡಿ. ಮರದ ಕೆಳಗೆ ಇದ್ದ ಪ್ರಾಣಿಗಳು ಓಡಿಹೋಗುವವು. ಅದರ ಕೊಂಬೆಗಳಲ್ಲಿ ವಾಸವಾಗಿದ್ದ ಪಕ್ಷಿಗಳು ಹಾರಿಹೋಗುವವು.
“ಮರದ ಬುಡದ ಮೋಟನ್ನು ಮತ್ತು ಅದರ ಬೇರುಗಳನ್ನು ಭೂಮಿಯಲ್ಲಿಯೇ ಬಿಟ್ಟುಬಿಡಿ ಎಂಬುದರ ಅರ್ಥವೇನೆಂದರೆ, ನಿನ್ನ ರಾಜ್ಯವನ್ನು ನಿನಗೆ ಹಿಂತಿರುಗಿಸಲಾಗುವುದು. ಮಹೋನ್ನತನಾದ ದೇವರು ನಿನ್ನ ಸಾಮ್ರಾಜ್ಯದ ಮೇಲೆ ಆಳ್ವಿಕೆ ಮಾಡುತ್ತಾನೆ ಎಂಬುದನ್ನು ನೀನು ತಿಳಿದುಕೊಂಡ ಬಳಿಕ ಹೀಗಾಗುವುದು.