Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 5:27 - ಪರಿಶುದ್ದ ಬೈಬಲ್‌

27 ತೆಕೇಲ್ ಎಂದರೆ: ನೀನು ತಕ್ಕಡಿಯಲ್ಲಿ ತೂಗಲ್ಪಟ್ಟು ಕಡಿಮೆಯಾಗಿ ಕಂಡುಬಂದಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ತೆಕೇಲ್ ಎಂದರೆ, ನೀನು ತಕ್ಕಡಿಯಲ್ಲಿ ತೂಗಲ್ಪಟ್ಟು ನಿನ್ನ ಯೋಗ್ಯತೆ ಕಡಿಮೆಯಾಗಿ ಕಂಡು ಬಂದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 'ತೆಕೇಲ್’ ಎಂದರೆ ನಿನ್ನನ್ನು ತಕ್ಕಡಿಯಲ್ಲಿ ಹಾಕಿ ನೋಡಲು ನಿನ್ನ ತೂಕ ಕಡಿಮೆಯಾಗಿ ಕಂಡುಬಂದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ತೆಕೇಲ್ ಅಂದರೆ ನೀನು ತಕ್ಕಡಿಯಲ್ಲಿ ತೂಗಲ್ಪಟ್ಟು ಕಡಿಮೆಯಾಗಿ ಕಂಡು ಬಂದಿದ್ದೀ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 “ತೆಕೇಲ್ ಎಂದರೆ ನಿನ್ನನ್ನು ತಕ್ಕಡಿಯಲ್ಲಿ ಹಾಕಿ ನೋಡಲು ನೀನು ಕೊರತೆಯುಳ್ಳವನಾಗಿ ಕಂಡುಬಂದಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 5:27
10 ತಿಳಿವುಗಳ ಹೋಲಿಕೆ  

ದೇವರು ನ್ಯಾಯವಾದ ಅಳತೆಮಾನಗಳಿಂದ ನನ್ನನ್ನು ತೂಗಿದರೆ, ನಾನು ನಿರಪರಾಧಿಯೆಂದು ಆತನಿಗೆ ಗೊತ್ತಾಗುವುದು.


ಆದರೆ ಪ್ರತಿಯೊಬ್ಬನ ಕೆಲಸವು ಸ್ಪಷ್ಟವಾಗಿ ಕಾಣುವುದು; ಏಕೆಂದರೆ, ಕ್ರಿಸ್ತನು ಬರುವ ದಿನವು ಅದನ್ನು ಸ್ಪಷ್ಟಪಡಿಸುವುದು. ಆ ದಿನವು ಬೆಂಕಿಯೊಂದಿಗೆ ಉದಯಿಸುವುದು. ಆ ಬೆಂಕಿಯು ಪ್ರತಿಯೊಬ್ಬ ವ್ಯಕ್ತಿಯ ಕೆಲಸವನ್ನು ಪರೀಕ್ಷಿಸುವುದು.


ಸಾಮಾನ್ಯ ಜನರು ಕೇವಲ ಉಸಿರಷ್ಟೇ. ಶ್ರೇಷ್ಠರು ಕೇವಲ ಕ್ಷಣಕಾಲವಷ್ಟೇ. ತೂಗಿನೋಡಿದರೆ ಅವರು ಕೇವಲ ಶೂನ್ಯ; ಉಸಿರಿಗಿಂತಲೂ ಹಗುರ.


ನನ್ನ ಜನರನ್ನು ‘ತಿರಸ್ಕರಿಸಲಾದ ಬೆಳ್ಳಿ’ ಎಂದು ಕರೆಯಲಾಗುವದು. ಏಕೆಂದರೆ ಯೆಹೋವನು ಅವರನ್ನು ಸ್ವಿಕರಿಸಲಿಲ್ಲ.”


ಜನರು ತಮ್ಮ ಕಾರ್ಯಗಳೆಲ್ಲಾ ಸರಿಯೆಂದು ಆಲೋಚಿಸಿಕೊಂಡರೂ ಅವುಗಳ ಉದ್ದೇಶಕ್ಕನುಸಾರವಾಗಿ ತೀರ್ಪು ಕೊಡುವವನು ಯೆಹೋವನೇ.


“ನರಪುತ್ರನೇ, ಈ ಕಾರ್ಯಗಳನ್ನು ಮುತ್ತಿಗೆಯ ಕಾಲ ಮುಗಿಯಿತೆಂದು ಸೂಚಿಸುವ ಅವಧಿಯ ನಂತರ ಮಾಡಬೇಕು. ನೀನು ಕ್ಷೌರಕನ ಹರಿತವಾದ ಕ್ಷೌರಕತ್ತಿಯನ್ನು ತೆಗೆದುಕೊಳ್ಳಬೇಕು. ನಿನ್ನ ತಲೆಯ ಕೂದಲನ್ನೂ ಗಡ್ಡವನ್ನೂ ಬೋಳಿಸು. ಕೂದಲನ್ನು ತ್ರಾಸಿನಲ್ಲಿ ಹಾಕಿ ಅದನ್ನು ತೂಕ ಮಾಡು. ಆ ಕೂದಲುಗಳನ್ನು ಮೂರು ಪಾಲಾಗಿ ಮಾಡು. ಅದರ ಒಂದು ಪಾಲನ್ನು ನೀನು ಚಿತ್ರಿಸಿದ್ದ ಇಟ್ಟಿಗೆಯ ಮೇಲೆ ಹಾಕು. ಆ ನಗರದ ಮೇಲೆ ಕೂದಲನ್ನು ಸುಟ್ಟುಬಿಡು. ಇದು, ಜನರಲ್ಲಿ ಕೆಲವು ಮಂದಿ ನಗರದಲ್ಲಿ ಸಾಯುವರು ಎಂಬುದಕ್ಕೆ ಗುರುತಾಗಿದೆ. ನೀನು ಕೂದಲಲ್ಲಿ ಮೂರನೆ ಒಂದು ಭಾಗವನ್ನು ತೆಗೆದುಕೊಂಡು ಅದನ್ನು ಪಟ್ಟಣದ ಹೊರಗೆ ಸುತ್ತಲೆಲ್ಲಾ ನಿನ್ನ ಕ್ಷೌರಕತ್ತಿಯಿಂದ ಕತ್ತರಿಸು. ಕೆಲವು ಜನರು ಪಟ್ಟಣದ ಹೊರಗೆ ಸಾಯುತ್ತಾರೆ ಎಂಬುದನ್ನು ಇದು ಸೂಚಿಸುತ್ತದೆ. ಬಳಿಕ ನಿನ್ನ ಕೂದಲಿನ ಉಳಿದ ಮೂರನೆಯ ಒಂದು ಭಾಗವನ್ನು ಗಾಳಿಯಲ್ಲಿ ತೂರಿಬಿಡು. ಗಾಳಿಯು ಅದನ್ನು ಬಹುದೂರದವರೆಗೆ ಬಡಿದುಕೊಂಡು ಹೋಗಲಿ. ಇದೇ ರೀತಿಯಲ್ಲಿ ನಾನು ಖಡ್ಗವನ್ನು ಇರಿದು ಅವರನ್ನು ಬಹುದೂರದ ದೇಶಗಳಿಗೆ ಅಟ್ಟಿಸಿ ಬಿಡುವೆನು.


ತನ್ನ ನಡತೆ ಸರಿಯೆಂದು ಒಬ್ಬನು ಭಾವಿಸಿಕೊಳ್ಳಬಹುದು; ಆದರೆ ಉದ್ದೇಶಗಳಿಗನುಸಾರವಾಗಿ ತೀರ್ಪು ನೀಡುವವನು ಯೆಹೋವನೇ.


ಅಶ್ಶೂರದ ಅರಸನೇ, ನಿನ್ನ ವಿಷಯವಾಗಿ ಯೆಹೋವನು ಕೊಟ್ಟ ಆಜ್ಞೆ ಏನೆಂದರೆ, “ನಿನ್ನ ಹೆಸರನ್ನು ಧರಿಸುವ ಸಂತತಿಯವರು ಯಾರೂ ಇರುವುದಿಲ್ಲ. ನಿನ್ನ ಕೆತ್ತನೆಯ ವಿಗ್ರಹಗಳನ್ನು ನಾನು ನಾಶಮಾಡುವೆನು. ನಿನ್ನ ದೇವರುಗಳ ಆಲಯದಲ್ಲಿರುವ ಲೋಹದ ಬೊಂಬೆಗಳನ್ನು ಕೆಡವಿಬಿಡುವೆನು. ನಿನ್ನ ಅಂತ್ಯವು ಬೇಗನೆ ಬರಲಿರುವುದರಿಂದ ನಿನಗೆ ಸಮಾಧಿಯನ್ನು ತಯಾರುಮಾಡುತ್ತಿದ್ದೇನೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು