29 ದಾನಿಯೇಲನಿಗೆ ಬೇಲ್ಶಚ್ಚರನ ಆಜ್ಞೆಯಂತೆ ಕಂದು ಬಣ್ಣದ ವಸ್ತ್ರಗಳನ್ನು ಕೊಡಲಾಯಿತು. ಚಿನ್ನದ ಸರವನ್ನು ಅವನ ಕೊರಳಿಗೆ ಹಾಕಲಾಯಿತು; ಅವನು ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನಾದನು.
29 ಆಗ ಬೇಲ್ಶಚ್ಚರನು ಆಜ್ಞಾಪಿಸಲು ದಾನಿಯೇಲನಿಗೆ ಧೂಮ್ರವಸ್ತ್ರವನ್ನು ಹೊದಿಸಿ, ಅವನ ಕೊರಳಿಗೆ ಚಿನ್ನದ ಹಾರವನ್ನು ಹಾಕಿ, ಈತನು ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನಾದನು ಎಂದು ಪ್ರಕಟಿಸಿದರು.
29 ತಕ್ಷಣವೇ ಬೇಲ್ಶಚ್ಚರನ ಆಜ್ಞೆಯ ಮೇರೆಗೆ ದಾನಿಯೇಲನಿಗೆ ಕೆನ್ನೀಲಿ ರಾಜವಸ್ತ್ರವನ್ನು ಹೊದಿಸಿದರು. ಅವನ ಕೊರಳಿಗೆ ಚಿನ್ನದ ಹಾರವನ್ನು ಹಾಕಿದರು. ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ದಾನಿಯೇಲನು ಒಬ್ಬನಾದನು ಎಂದು ಪ್ರಕಟಿಸಿದರು.
29 ಆಗ ಬೇಲ್ಶಚ್ಚರನು ಆಜ್ಞಾಪಿಸಲು ದಾನಿಯೇಲನಿಗೆ ಧೂಮ್ರವಸ್ತ್ರವನ್ನು ಹೊದಿಸಿ ಅವನ ಕೊರಳಿಗೆ ಚಿನ್ನದ ಹಾರವನ್ನು ಹಾಕಿ ಈತನು ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನಾದನು ಎಂದು ಪ್ರಕಟಿಸಿದರು.
29 ಆಗ ಬೇಲ್ಯಚ್ಚರನು ಆಜ್ಞಾಪಿಸಲು ದಾನಿಯೇಲನಿಗೆ ಧೂಮ್ರವಸ್ತ್ರವನ್ನು ಹೊದಿಸಿ, ಅವನ ಕೊರಳಿಗೆ ಚಿನ್ನದ ಹಾರವನ್ನು ಹಾಕಿ, ಇವನು ರಾಜ್ಯದ ಮೂರನೇ ಉನ್ನತ ಅಧಿಕಾರಿಗಳಲ್ಲಿ ಒಬ್ಬನೆಂದು ಸಾರಿದನು.
ನಾನು ನಿನ್ನ ಬಗ್ಗೆ ಕೇಳಿದ್ದೇನೆ. ನೀನು ಗೂಢಾರ್ಥವನ್ನು ತಿಳಿದುಕೊಳ್ಳಬಲ್ಲೆ ಮತ್ತು ಕಠಿಣವಾದ ಸಮಸ್ಯೆಗಳಿಗೆ ಪರಿಹಾರ ಹೇಳಬಲ್ಲೆ ಎಂದು ನಾನು ಕೇಳಿದ್ದೇನೆ. ನೀನು ಗೋಡೆಯ ಮೇಲಿನ ಈ ಬರಹವನ್ನು ಓದಿ ಅದರ ಅರ್ಥವನ್ನು ನನಗೆ ವಿವರಿಸಿದರೆ, ನಾನು ನಿನಗೆ ಕಂದುಬಣ್ಣದ ಬಟ್ಟೆಗಳನ್ನು ಕೊಡುತ್ತೇನೆ. ನಿನ್ನ ಕತ್ತಿಗೆ ಚಿನ್ನದ ಹಾರವನ್ನು ಹಾಕುತ್ತೇನೆ; ನಿನ್ನನ್ನು ನನ್ನ ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನನ್ನಾಗಿ ನೇಮಿಸುತ್ತೇನೆ” ಎಂದು ಹೇಳಿದನು.
ಆಗ ರಾಜನು ಗಟ್ಟಿಯಾಗಿ ಕೂಗಿಕೊಂಡು ಮಂತ್ರವಾದಿ, ಪಂಡಿತ, ಶಾಕುನಿಕರನ್ನು ತನ್ನಲ್ಲಿಗೆ ಕರೆಸಿದನು. ಅವನು ಆ ವಿದ್ವಾಂಸರಿಗೆ, “ಈ ಬರವಣಿಗೆಯನ್ನು ಓದಿ ನನಗೆ ಅದರ ಅರ್ಥವನ್ನು ಹೇಳಬಲ್ಲ ಮನುಷ್ಯನಿಗೆ ನಾನು ಬಹುಮಾನವನ್ನು ಕೊಡುತ್ತೇನೆ. ಆ ಮನುಷ್ಯನಿಗೆ ನಾನು ಕಂದು ಬಣ್ಣದ ವಸ್ತ್ರಗಳನ್ನು ಕೊಡುತ್ತೇನೆ. ಅವನ ಕೊರಳಿಗೆ ಚಿನ್ನದ ಹಾರವನ್ನು ಹಾಕಿಸಿ ಅವನನ್ನು ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನನ್ನಾಗಿ ನೇಮಿಸುವೆನು” ಎಂದು ಹೇಳಿದನು.
ತರುವಾಯ ಅರಸನು ದಾನಿಯೇಲನಿಗೆ ತನ್ನ ರಾಜ್ಯದಲ್ಲಿ ಬಹುಮುಖ್ಯವಾದ ಉದ್ಯೋಗವನ್ನು ಕೊಟ್ಟನು. ಅಮೂಲ್ಯವಾದ ಕಾಣಿಕೆಗಳನ್ನೂ ಕೊಟ್ಟನು. ನೆಬೂಕದ್ನೆಚ್ಚರನು ದಾನಿಯೇಲನನ್ನು ಬಾಬಿಲೋನ್ ಸಂಸ್ಥಾನದ ಅಧಿಪತಿಯನ್ನಾಗಿ ಮಾಡಿದನು. ಬಾಬಿಲೋನಿನ ಎಲ್ಲಾ ವಿದ್ವಾಂಸರ ಮುಖ್ಯಸ್ಥನನ್ನಾಗಿ ಮಾಡಿದನು.
ಆ ನೂರಿಪ್ಪತ್ತು ಜನರ ಮೇಲೆ ಮೂರು ಜನ ಮುಖ್ಯಾಧಿಕಾರಿಗಳನ್ನು ನೇಮಿಸಿದನು. ದಾನಿಯೇಲನು ಈ ಮೂರು ಜನ ಮುಖ್ಯಾಧಿಕಾರಿಗಳಲ್ಲೊಬ್ಬನಾಗಿದ್ದನು. ಯಾರೊಬ್ಬರೂ ತನಗೆ ಮೋಸ ಮಾಡದಂತೆ ಮತ್ತು ತನ್ನ ರಾಜ್ಯಕ್ಕೆ ನಷ್ಟವಾಗದಂತೆ ನೋಡಿಕೊಳ್ಳಲು ರಾಜನು ಈ ಮೂವರನ್ನು ನೇಮಿಸಿದ್ದನು.
ಅರಸನ ನಂತರ ರಾಜ್ಯದಲ್ಲಿ ಯೆಹೂದಿಯಾದ ಮೊರ್ದೆಕೈಯೇ ಮುಖ್ಯ ವ್ಯಕ್ತಿಯಾಗಿದ್ದನು. ರಾಜ್ಯದಲ್ಲಿ ಅವನಿಗೆ ಎರಡನೇ ಸ್ಥಾನವಿತ್ತು. ಯೆಹೂದ್ಯರೊಳಗೆ ಅವನು ಪ್ರಮುಖ ವ್ಯಕ್ತಿಯಾಗಿದ್ದನು. ಯೆಹೂದ್ಯರೆಲ್ಲರೂ ಅವನನ್ನು ಬಹಳವಾಗಿ ಗೌರವಿಸುತ್ತಿದ್ದರು. ತನ್ನ ಜನರ ಒಳಿತಿಗಾಗಿ (ಜನರಿಗೋಸ್ಕರವಾಗಿ) ಮೊರ್ದೆಕೈ ಬಹಳವಾಗಿ ಪ್ರಯಾಸಪಟ್ಟಿದ್ದರಿಂದ ಜನರು ಅವನನ್ನು ಸನ್ಮಾನಿಸಿದರು; ಮೊರ್ದೆಕೈ ಯೆಹೂದ್ಯರೆಲ್ಲರಿಗೆ ಸಮಾಧಾನವನ್ನು ತಂದನು.